karnataka

HSRP ನಂಬರ್ ಪ್ಲೇಟ್ ಅಳವಡಿಸದವರ ವಿರುದ್ದ ಸದ್ಯ ಕ್ರಮವಿಲ್ಲ- ರಾಜ್ಯ ಸರಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 17. ರಾಜ್ಯದಲ್ಲಿ ಹೆಚ್ಎಸ್ಆರ್.ಪಿ ನಂಬರ್‌ ಪ್ಲೇಟ್‌ ಅಳವಡಿಕೆಗೆ ಸಂಬಂಧಿಸಿ ಹೈಕೋರ್ಟ್‌ನಲ್ಲಿ ದಾಖಲಾಗಿರುವ ಪ್ರಕರಣದ ವಿಚಾರಣೆಯು ಸೆ.18ರಂದು ನಡೆಯಲಿದ್ದು, ಈ ಹಿನ್ನೆಲೆ ಕೋರ್ಟ್‌ ನಿರ್ದೇಶನ ನೀಡುವವರೆಗೆ HSRP ನೋಂದಣಿ ಫಲಕ ಹಾಕದವರ ವಿರುದ್ಧ ಕ್ರಮ ಕೈಗೊಳ್ಳದಿರಲು ಸಾರಿಗೆ ಇಲಾಖೆ ನಿರ್ಧರಿಸಿರುವುದಾಗಿ ತಿಳಿದುಬಂದಿದೆ. ಈಗಾಗಲೇ ರಾಜ್ಯ ಸರಕಾರ HSRP ನಂಬರ್‌ ಪ್ಲೇಟ್‌ ಅಳವಡಿಕೆಗೆ ನೀಡಲಾಗಿರುವ ಗಡುವನ್ನು 4 ಬಾರಿ ವಿಸ್ತರಿಸಿದೆ. ಹೆಚ್ಚಿನ ವಾಹನಗಳು ಇನ್ನು ಈ ನಂಬರ್‌ ಪ್ಲೇಟ್‌ ಅಳವಡಿಸದ ಕಾರಣ ಸೆ.16ರಿಂದ […]

HSRP ನಂಬರ್ ಪ್ಲೇಟ್ ಅಳವಡಿಸದವರ ವಿರುದ್ದ ಸದ್ಯ ಕ್ರಮವಿಲ್ಲ- ರಾಜ್ಯ ಸರಕಾರ Read More »

ಕರ್ನಾಟಕ

ಕರ್ನಾಟಕದಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ 2,000 ವೈದ್ಯರ ಕೊರತೆ: ಖಾಲಿ ಹುದ್ದೆಗಳ ಭರ್ತಿ ತುರ್ತು ಅಗತ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 17.  ಕರ್ನಾಟಕದಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ ಸುಮಾರು 2,000 ವೈದ್ಯರ ಕೊರತೆ ಇದ್ದು, ತೀವ್ರ ಬಿಕ್ಕಟ್ಟು ಸೃಷ್ಟಿಯಾಗಿದೆ. ಖಾಲಿ ಇರುವ ಹುದ್ದೆಗಳನ್ನು ತುರ್ತು ಭರ್ತಿ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ. ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಖಾಲಿ ಹುದ್ದೆಗಳ ಭರ್ತಿ ತುರ್ತು ಅಗತ್ಯವಾಗಿದೆ. ಖಾಲಿ ಇರುವ 1,940 ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಸರ್ಕಾರಿ ಆಸ್ಪತ್ರೆಯ ವೈದ್ಯರ ಪಾತ್ರಗಳು, ಜವಾಬ್ದಾರಿಗಳು ಮತ್ತು ಕೆಲಸದ ವ್ಯಾಪ್ತಿಯನ್ನು ವ್ಯಾಖ್ಯಾನಿಸುವ ಸ್ಪಷ್ಟವಾದ ನೀತಿಗಳ ಕೊರತೆ ಕೂಡ ನೇಮಕಾತಿ

ಕರ್ನಾಟಕದಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ 2,000 ವೈದ್ಯರ ಕೊರತೆ: ಖಾಲಿ ಹುದ್ದೆಗಳ ಭರ್ತಿ ತುರ್ತು ಅಗತ್ಯ Read More »

ಕರ್ನಾಟಕ

ಹುಚ್ಚುನಾಯಿ ದಾಳಿ: ಮಗುವಿಗೆ ಗಂಭೀರ ಗಾಯ..!

(ನ್ಯೂಸ್ ಕಡಬ) newskadaba.com ವಿಜಯನಗರ, ಸೆ. 17.  ಹುಚ್ಚುನಾಯಿಯೊಂದು 3 ವರ್ಷದ ಮಗುವಿಗೆ ಕಚ್ಚಿದ್ದರಿಂದ ಮಗುವಿಗೆ ಗಂಭೀರ ಗಾಯವಾದಂತಹ ಘಟನೆ ಹೊಸಪೇಟೆ ತಾಲೂಕಿನ ಧರ್ಮಸಾಗರ ಗ್ರಾಮದಲ್ಲಿ ನಡೆದಿದೆ. ರಾಮ ಹಾಗೂ ಲೋಕಮ್ಮ ಅವರ ಮಗಳು ಜನನಿ(3) ಮೇಲೆ ಹುಚ್ಚುನಾಯಿ ದಾಳಿ ನಡೆಸಿದ್ದು, ಮುಖದ ಭಾಗದಲ್ಲಿ ತೀವ್ರ ಗಾಯವಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಮಗುವನ್ನು ಬಳ್ಳಾರಿಯ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ವರದಿ ತಿಳಿದು ಬಂದಿದೆ.    

ಹುಚ್ಚುನಾಯಿ ದಾಳಿ: ಮಗುವಿಗೆ ಗಂಭೀರ ಗಾಯ..! Read More »

ಕರ್ನಾಟಕ

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ: 4 ಆರೋಪಿಗಳಿಗೆ ಹೈಕೋರ್ಟ್‌ ಜಾಮೀನು ಮಂಜೂರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 17.  ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳಿಗೆ ಹೈಕೋರ್ಟ್‌ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಗಳನ್ನು ನ್ಯಾಯಮೂರ್ತಿ ಎಸ್‌.ವಿಶ್ವಜಿತ್‌ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಪುರಸ್ಕರಿಸಿದೆ. ಆರೋಪಿಗಳಾದ ಹುಕ್ಕೇರಿಯ ಭರತ್ ಜಯವಂತ ಕುರಾನೆ (42), ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದ (ಈ ಹಿಂದಿನ ಹೆಸರು ಔರಂಗಾಬಾದ್) ಶ್ರೀಕಾಂತ್ ಪಂಗಾರ್ಕರ್ (48), ಶಿಕಾರಿಪುರದ ಸುನಿತ್ ಕುಮಾರ್ (42) ಮತ್ತು ಮಹಾರಾಷ್ಟ್ರ ಸತಾರದ ಸುಧನ್ವ ಗೋಂದಲೇಕರ್ (43)ಗೆ

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ: 4 ಆರೋಪಿಗಳಿಗೆ ಹೈಕೋರ್ಟ್‌ ಜಾಮೀನು ಮಂಜೂರು Read More »

ಕರ್ನಾಟಕ

ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಸ್ಫೋಟ: ಮಗು ಸೇರಿ ನಾಲ್ವರಿಗೆ ಗಾಯ  12 ಮನೆಗಳಿಗೆ ಹಾನಿ  

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 17.  ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮಹಿಳೆ, ಮಗು ಸೇರಿ ನಾಲ್ವರು ಗಾಯಗೊಂಡು, 12 ಮನೆಗಳಿಗೆ ಹಾನಿಯಾಗಿರುವ ಘಟನೆ ಹಳೇ ಬೈಯಪ್ಪನಹಳ್ಳಿ ರಸ್ತೆಯ ಸಂಜಯ್ ಗಾಂಧಿ ನಗರದ 2ನೇ ಕ್ರಾಸ್‌ನಲ್ಲಿ ಸೋಮವಾರ ನಡೆದಿದೆ. ಘಟನೆಯಲ್ಲಿ ಅಣ್ಣಾದೊರೈ (40) ಬಿಂದರ್ಶ್ (40), ಅವರ ಪತ್ನಿ ರೇಖಾ (30) ಮತ್ತು 10 ವರ್ಷದ ಮಗುವಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯಲ್ಲಿ ಪ್ರಾಣಹಾನಿ ಸಂಭವಿಸಿಲ್ಲ. ಅಣ್ಣಾದೊರೈ ಅವರ ಮನೆಯಲ್ಲಿ ಬೆಳಗ್ಗೆ 6.50ಕ್ಕೆ

ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಸ್ಫೋಟ: ಮಗು ಸೇರಿ ನಾಲ್ವರಿಗೆ ಗಾಯ  12 ಮನೆಗಳಿಗೆ ಹಾನಿ   Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕರ್ನಾಟಕ ಕಲ್ಯಾಣ ಉತ್ಸವದ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಸಿಎಂ

(ನ್ಯೂಸ್ ಕಡಬ) newskadaba.com ಕಲಬುರಗಿ, ಸೆ. 17.  ಹೈದರಾಬಾದ್ ನಿಜಾಮರ ಆಳ್ವಿಕೆಯಿಂದ ವಿಮೋಚನೆಗೊಂಡ ಸ್ಮರಣಾರ್ಥ ಆಚರಿಸಲಾಗುವ ಕರ್ನಾಟಕ ಕಲ್ಯಾಣ ಉತ್ಸವದ ಅಂಗವಾಗಿ ಪೊಲೀಸ್‌ ಪರೇಡ್ ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಕಲ್ಯಾಣ ಕರ್ನಾಟಕ 371J ಅನುಷ್ಠಾನಗೊಂಡ ದಶಮಾನೋತ್ಸವ ಸಂಭ್ರಮ ಉದ್ಘಾಟನೆಗೆ ತೆರಳುವ ಮುನ್ನ ಕಲ್ಯಾಣ ಕರ್ನಾಟಕದ ಹರಿಕಾರ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮುನ್ನಡೆದರು.ನಂತರ ಪೊಲೀಸ್, ಅಗ್ನಿಶಾಮಕ ದಳ, ಅರಣ್ಯ ಇಲಾಖೆ, ಸೇವಾದಳ ಸೇರಿದಂತೆ 24 ವಿವಿಧ

ಕರ್ನಾಟಕ ಕಲ್ಯಾಣ ಉತ್ಸವದ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಸಿಎಂ Read More »

ಕರ್ನಾಟಕ

ಹೆಚ್‌ಎಸ್‌ಆರ್‌ಪಿ ಅಳವಡಿಕೆಗೆ ಸೆ.15 ಕೊನೆಯ ದಿನ- ಸಾರಿಗೆ ಇಲಾಖೆ ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 14.  ರಾಜ್ಯದಲ್ಲಿ ವಾಹನಗಳಿಗೆ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ (ಹೆಚ್‌ಎಸ್‌ಆರ್‌ಪಿ) ಅಳವಡಿಕೆಗೆ ಸೆಪ್ಟೆಂಬರ್ 15 ಕೊನೆಯ ದಿನವಾಗಿದ್ದು, ಆ ಬಳಿಕ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸದ ವಾಹನ ಮಾಲೀಕರಿಗೆ ದಂಡ ವಿಧಿಸಲಾಗುತ್ತದೆ ಎಂದು ಸಾರಿಗೆ ಇಲಾಖೆ ಸೂಚನೆ ನೀಡಿದೆ. ಸೆಪ್ಟೆಂಬರ್ 18 ರಂದು ಕರ್ನಾಟಕ ಹೈಕೋರ್ಟ್‌ನಲ್ಲಿ ಹೆಚ್‌ಎಸ್‌ಆರ್‌ಪಿ ಅಳವಡಿಕೆ ಸಂಬಂಧಿಸಿದ ಅರ್ಜಿ ವಿಚಾರಣೆಗೆ ನಡೆಯಲಿದೆ. ಹೀಗಾಗಿ ಅಲ್ಲಿಯವರೆಗೆ ವಾಹನ ಮಾಲೀಕರ ವಿರುದ್ಧ ಬಲವಂತದ ಕ್ರಮ ತೆಗೆದುಕೊಳ್ಳುವುದಿಲ್ಲ. ಗಡುವನ್ನು ಮತ್ತೊಮ್ಮೆ ವಿಸ್ತರಿಸುವ ಅಥವಾ

ಹೆಚ್‌ಎಸ್‌ಆರ್‌ಪಿ ಅಳವಡಿಕೆಗೆ ಸೆ.15 ಕೊನೆಯ ದಿನ- ಸಾರಿಗೆ ಇಲಾಖೆ ಸೂಚನೆ Read More »

ಕರ್ನಾಟಕ

ಶೀಘ್ರವೇ ಎಪಿಎಲ್-ಬಿಪಿಎಲ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 14. ಆಹಾರ ಇಲಾಖೆಯು ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆಗೆ ಹಾಗೂ ತಿದ್ದುಪಡಿಗೆ ಮತ್ತೊಮ್ಮೆ ಅವಕಾಶ ನೀಡಲಿದ್ದು, ಸೆಪ್ಟೆಂಬರ್ 15 ರಿಂದ 30ರ ಒಳಗೆ ಯಾವುದಾದರೂ ಒಂದು ಅಥವಾ ಎರಡು ದಿನ ಅವಕಾಶ ನೀಡುವ ಸಾಧ್ಯತೆಯಿದೆ. ಪಡಿತರ ಚೀಟಿದಾರರು ಅಗತ್ಯ ದಾಖಲೆಗಳೊಂದಿಗೆ ಹೆಸರು ಸೇರ್ಪಡೆ ಮಾಡಬಹುದಾಗಿದೆ. ಹೊಸದಾಗಿ ಮದುವೆಯಾದ ದಂಪತಿಗಳ ಕೂಡಾ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೆ ಬೇಕಾದ ದಾಖಲೆಗಳು- ಎಲ್ಲಾ ಸದಸ್ಯರ ಆಧಾರ್ ಕಾರ್ಡ್ ಆದಾಯ ಪ್ರಮಾಣ ಪತ್ರ ಜಾತಿ

ಶೀಘ್ರವೇ ಎಪಿಎಲ್-ಬಿಪಿಎಲ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭ..! Read More »

ಕರ್ನಾಟಕ

ಫೋನ್ ಕಾಲ್ ರೆಕಾರ್ಡ್ ಬಹಿರಂಗ: ಪೋಲಿಸ್ ಕಾನ್ಸ್ ಟೇಬಲ್ ವಿರುದ್ಧ ಎಫ್ ಐಆರ್

(ನ್ಯೂಸ್ ಕಡಬ) newskadaba.com ಕೊಪ್ಪಳ, ಸೆ. 14.  ಹಣಕ್ಕಾಗಿ ಬೇರೆಯವರಿಗೆ ನೂರಾರು ಫೋನ್ ಕಾಲ್ ರೆಕಾರ್ಡ್ ಬಹಿರಂಗಪಡಿಸಿದ ಸೈಬರ್, ಆರ್ಥಿಕ ಮತ್ತು ನಾರ್ಕೋಟಿಕ್ಸ್ ಅಪರಾಧ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಕೊಪ್ಪಳ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ. ಹೆಡ್ ಕಾನ್ಸ್ ಟೇಬಲ್ ಸಿಹೆಚ್ ಕೊಟೆಪ್ಪ (44)ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಎಫ್‌ಐಆರ್ ವರದಿಯ ಪ್ರಕಾರ, ಆರೋಪಿ ಕಾನ್ಸ್ ಟೇಬಲ್ 145 ಜನರ ಮೊಬೈಲ್ ಕಾಲ್ ರೆಕಾರ್ಡ್ ಬಹಿರಂಗಪಡಿಸಿದ್ದಾರೆ. ಅಲ್ಲದೇ, ಒಂಬತ್ತು ಮೊಬೈಲ್

ಫೋನ್ ಕಾಲ್ ರೆಕಾರ್ಡ್ ಬಹಿರಂಗ: ಪೋಲಿಸ್ ಕಾನ್ಸ್ ಟೇಬಲ್ ವಿರುದ್ಧ ಎಫ್ ಐಆರ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಕ್ಕಳಲ್ಲಿ ವೈರಾಣು ಜ್ವರ ಪ್ರಕರಣ ಶೇ 25 – 30 ರಷ್ಟು ಏರಿಕೆ ಎಚ್ಚರಿಕೆ ವಹಿಸುವಂತೆ ವೈದ್ಯರ ಸೂಚನೆ    

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 14.  ಬೆಂಗಳೂರಿನ ಮಕ್ಕಳಲ್ಲಿ ಕಳೆದ ಕೆಲವು ದಿನಗಳಿಂದ ವೈರಾಣು ಜ್ವರ ಹೆಚ್ಚಾಗಿದೆ. ಆಸ್ಪತ್ರೆಗಳ ಹೊರ ರೋಗಿಗಳ ವಿಭಾಗದಲ್ಲಿ ಶೇ 30 ರಷ್ಟು ಮಕ್ಕಳಲ್ಲಿ ಜ್ವರದ ಪ್ರಕರಣ ಏರಿಕೆ ಕಂಡ ಬಂದಿದೆ. ಇದಕ್ಕೆಲ್ಲ ಕ್ಷಣ ಕ್ಷಣಕ್ಕೂ ಬದಲಾಗುತ್ತಿರುವ ಹವಾಮಾನ ಕಾರಣ ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ. ಗಾಳಿ ಸಹಿತ ಮಳೆ, ಬಿಸಿಲು, ಚಳಿಯಿಂದಾಗಿ ಮಕ್ಕಳಲ್ಲಿ ಹೆಚ್ಚಾಗಿ ವೈರಾಣು ಜ್ವರ ಕಂಡು ಬರುತ್ತಿದೆ ಎಂದು ವರದಿಯಾಗಿದೆ. ರೋಗ ನಿರೋಧಕ ಶಕ್ತಿ ಕಡಿಮೆ ಇರುವ ಮಕ್ಕಳಲ್ಲಿಯೇ

ಮಕ್ಕಳಲ್ಲಿ ವೈರಾಣು ಜ್ವರ ಪ್ರಕರಣ ಶೇ 25 – 30 ರಷ್ಟು ಏರಿಕೆ ಎಚ್ಚರಿಕೆ ವಹಿಸುವಂತೆ ವೈದ್ಯರ ಸೂಚನೆ     Read More »

ಆರೋಗ್ಯ ಮಾಹಿತಿ, ಕರ್ನಾಟಕ
Scroll to Top