ಇಂದು 10ನೇ ವರ್ಷದ ಪ್ರತಿಷ್ಠಾ ವರ್ಧಂತ್ಯತ್ಸವ ➤ ನೂಜಿ ಶ್ರೀ ಉಳ್ಳಾಲ್ತಿ ದೈವಸ್ಥಾನ; ಹಸಿರು ಕಾಣಿಕೆ ಸಮರ್ಪಣೆ
(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಡಿ.21:ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ನೂಜಿಬೈಲ್ ನೂಜಿಶ್ರೀ ಉಳ್ಳಾಲ್ತಿ ಅಮ್ಮನವರ ದೈವಸ್ಥಾನದ 10ನೇ ವರ್ಷದ ವರ್ಧಂತ್ಯುತ್ಸವ ಡಿ.22ರಂದು ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಜರುಗಲಿದೆ. ಆ ಪ್ರಯುಕ್ತ ಸೋಮವಾರ ಉಳ್ಳಾಲ್ತಿ ಅಮ್ಮನವರ ಸನ್ನಿಧಿಗೆ ಹಸಿರು ಕಾಣಿಕೆ ಸಮರ್ಪಿಸಲಾಯಿತು. ಮದ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಬಳಿಕ ಅನ್ನಪ್ರಸಾದ ವಿತರಿಸಲಾಯಿತು. ಅರ್ಚಕ ಕೃಷ್ಣ ಹೆಬ್ಬಾರ್ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು. ಆಡಳಿತ ಮಂಡಳಿ ಅಧ್ಯಕ್ಷ ಮೃತ್ಯುಂಜಯ ಬೀಡೆ ಕೆರೆತೋಟ, ಉತ್ಸವ ಸಮಿತಿ ಅಧ್ಯಕ್ಷ […]










