karnataka

ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ‘ಹೃದಯ ತಪಾಸಣೆ’ ಯೋಜನೆ ರೂಪಿಸಲು ನಿರ್ಧಾರ..!

(ನ್ಯೂಸ್ ಕಡಬ) newskadaba.com ಜು. 07.  ಇತ್ತಿಚಿನ ದಿನಗಳಲ್ಲಿ ಯುವ ವಯಸ್ಸಿನವರು ಹೆಚ್ಚಾಗಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಹಿನ್ನೆಲೆ ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ಹೃದಯ ತಪಾಸಣೆ ನಡೆಸಲು ಯೋಜನೆ ರೂಪಿಸಲಾಗಿದೆ ಎಂದು ಸಚಿವ ಕೆಎನ್ ರಾಜಣ್ಣ ತಿಳಿಸಿದ್ದಾರೆ. ಪ್ರತೀ ವರ್ಷ ರಾಜ್ಯಾದ್ಯಂತ ಶಾಲಾ ಹಂತದಲ್ಲೇ ಮಕ್ಕಳ ಹೃದಯದ ಆರೋಗ್ಯ ತಪಾಸಣೆಗೆ ಯೋಜನೆ ರೂಪಿಸಲಾಗಿದ್ದು, ಮುಂದಿನ ದಿನಗಳಲ್ಲಿ ಕಾಲೇಜು ಹಂತಕ್ಕೂ ವಿಸ್ತರಿಸಲಾಗುವುದು ಎಂದು ಅವರು ಹೇಳಿದರು. ಇದೀಗ ಹೃದಯಾಘಾತ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರಕಾರ, ಎಲ್ಲಾ ಆಸ್ಪತ್ರೆಗಳಲ್ಲಿ ಹೃದಯಾಘಾತಕ್ಕೆ […]

ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ‘ಹೃದಯ ತಪಾಸಣೆ’ ಯೋಜನೆ ರೂಪಿಸಲು ನಿರ್ಧಾರ..! Read More »

ಕರ್ನಾಟಕ

ಪ್ರೀತಿಸಲು ನಿರಾಕರಿಸಿದ್ದಕ್ಕೆ ಚಾಕುವಿನಿಂದ ಇರಿದ ಪ್ರೇಮಿ 

(ನ್ಯೂಸ್ ಕಡಬ) newskadaba.com ಮೈಸೂರು, ಜು. 05. ಯುವಕನೊಬ್ಬ ತನ್ನನ್ನು ಪ್ರೀತಿಸಲು ನಿರಾಕರಿಸಿದ ಯುವತಿಗೆ ಚಾಕುವಿನಿಂದ ಇರಿದಿದ್ದು, ಆಕೆ ಸ್ಥಿತಿ ಗಂಭೀರವಾಗಿತ್ತು. ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ ಎಂದು ವರದಿ ತಿಳಿಸಿದೆ.   ಪಾರ್ಕ್ ಮುಂಭಾಗದಲ್ಲಿಇವರಿಬ್ಬರೂ ಮಾತನಾಡುತ್ತಿದ್ದ ಸಂದರ್ಭ ಪ್ರೀತಿಸುವಂತೆ ಒತ್ತಡ ಹೇರಿದ್ದಾನೆ. ಆದರೆ, ಆಕೆ ನಿರಾಕರಿಸಿದ ಹಿನ್ನೆಲೆಯಲ್ಲಿ ಆಕೆಗೆ ಚಾಕುವಿನಿಂದ ಇರಿದಿದ್ದಾನೆ. ಆಕೆಯ ತಲೆ, ಕುತ್ತಿಗೆ, ಹೊಟ್ಟೆ ಭಾಗಕ್ಕೆ ಗಂಭೀರ ಗಾಯವಾಗಿದ್ದು, ಆತನೇ ಆಸ್ಪತ್ರೆಗೆ ದಾಖಲಿಸಿ ಪರಾರಿಯಾಗಿದ್ದಾನೆ. ಈ ಸಂಬಂಧ

ಪ್ರೀತಿಸಲು ನಿರಾಕರಿಸಿದ್ದಕ್ಕೆ ಚಾಕುವಿನಿಂದ ಇರಿದ ಪ್ರೇಮಿ  Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ರೂ ಮೌಲ್ಯದ ಆಸ್ತಿ ED ಜಪ್ತಿ

(ನ್ಯೂಸ್ ಕಡಬ) newskadaba.com ಜು. 05. ಚಿನ್ನ ಕಳ್ಳಸಾಗಣೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರನ್ಯಾ ರಾವ್ ಅವರಿಗೆ ಸೇರಿದ ರೂ. 34.12 ಕೋಟಿ ಮೌಲ್ಯದ ಸ್ಥಿರಾಸ್ತಿಗಳನ್ನು ಜಾರಿ ನಿರ್ದೇಶನಾಲಯ (ಇಡಿ) ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ. 2002ರ ಅಕ್ರಮ ಹಣ ವರ್ಗಾವಣೆ ತಡೆ (PMLA)ಕಾಯ್ದೆಯಡಿ ಕೇಸ್ ಮಾಡಿ ತನಿಖೆ ನಡೆಸಿದ್ದ ಇಡಿ, ಬೆಂಗಳೂರು ಮತ್ತು ತುಮಕೂರು ಜಿಲ್ಲೆಗಳಲ್ಲಿರುವ ಆಸ್ತಿಗಳನ್ನು ಜಪ್ತಿ ಮಾಡಿದೆ.   ರನ್ಯಾ ರಾವ್‌ ಅವರನ್ನು ಮಾರ್ಚ್ 3ರಂದು ದುಬೈನಿಂದ ಬೆಂಗಳೂರಿಗೆ

ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ರೂ ಮೌಲ್ಯದ ಆಸ್ತಿ ED ಜಪ್ತಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋ ಪತ್ತೆ- ಎಫ್ ಐ ಆರ್ ದಾಖಲು

(ನ್ಯೂಸ್ ಕಡಬ) newskadaba.com ಜು.05. ಹಿಂದೂ ಜಾಗರಣಾ ವೇದಿಕೆಯ ಮುಖಂಡನ ಮೊಬೈಲ್​ ನಲ್ಲಿ ಅಶ್ಲೀಲ ವಿಡಿಯೋ ಪತ್ತೆಯಾಗಿರುವ ಕುರಿತು ವರದಿಯಾಗಿದೆ.   ಹಿಂದೂ ಜಾಗರಣಾ ವೇದಿಕೆಯ ದಕ್ಷಿಣ ಕನ್ನಡ ಜಿಲ್ಲಾ ಸಹ ಸಂಯೋಜಕ ಸಮಿತ್ ರಾಜ್ ಎಂಬವರ ಮೊಬೈಲ್ ​​​ನಲ್ಲಿ ಐವತ್ತಕ್ಕೂ ಅಧಿಕ ಅಶ್ಲೀಲ ವಿಡಿಯೋಗಳು ಪತ್ತೆಯಾಗಿದ್ದು, ಇದರಲ್ಲಿ ಕರಾವಳಿ ರಾಜಕಾರಣಿಯೊಬ್ಬರ ವಿಡಿಯೋ ಕೂಡ ಇದೆ ಎನ್ನಲಾಗುತ್ತಿದೆ. ಸದ್ಯ ಈ ಕುರಿತಾಗಿ ಮೂಡಬಿದಿರೆ ಠಾಣೆಯಲ್ಲಿ ಎಫ್​​ಐಆರ್​ ದಾಖಲಾಗಿದೆ.          

ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋ ಪತ್ತೆ- ಎಫ್ ಐ ಆರ್ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ಅಪಘಾತ ಪ್ರಕರಣ..! ಗಂಭೀರ ಗಾಯಗೊಂಡಿದ್ದ ವೈದ್ಯ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಜು. 05. ಕೆಲ ದಿನಗಳ ಹಿಂದೆ ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ್ದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ವೈದ್ಯರೋರ್ವರು ಮೃತಪಟ್ಟ ಘಟನೆ ಸುಳ್ಯದಲ್ಲಿ ವರದಿಯಾಗಿದೆ. ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಆಸ್ಪತ್ರೆಯಿಂದ ಮನೆಗೆ ಹೋಗುವ ಸಂಧರ್ಭದಲ್ಲಿ ಘಟನೆ ಸಂಭವಿಸಿದೆ ಎನ್ನಲಾಗಿದೆ.

ಸುಳ್ಯ: ಅಪಘಾತ ಪ್ರಕರಣ..! ಗಂಭೀರ ಗಾಯಗೊಂಡಿದ್ದ ವೈದ್ಯ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ರಾಜ್ಯದಲ್ಲಿ ಜು.3ರವರೆಗೂ ಮಳೆ; 6 ಜಿಲ್ಲೆಗಳಿಗೆ ಆರೆಂಜ್​ ಅಲರ್ಟ್ ಘೋಷಣೆ !

(ನ್ಯೂಸ್‌ ಕಡಬ) newskadaba.com ಜೂ.28: ರಾಜ್ಯಾದ್ಯಂತ ಮಳೆ ಮುಂದುವರೆದಿದ್ದು, ಜುಲೈ 3ರ ವರೆಗೂ ವರುಣನ ಆರ್ಭಟ ಮುಂದುವರೆಯಲಿದೆ. ರಾಜ್ಯ ಹವಾಮಾನ ಇಲಾಖೆಯು ಕೊಡಗು ಜಿಲ್ಲೆಗೆ ರೆಡ್ ಅಲರ್ಟ್​ ಘೋಷಣೆ ಮಾಡಿದೆ. ಇನ್ನುಳಿದಂತೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಮತ್ತು ಬೆಳಗಾವಿ, ಬೀದರ್ ಹಾಗೂ ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ,

ರಾಜ್ಯದಲ್ಲಿ ಜು.3ರವರೆಗೂ ಮಳೆ; 6 ಜಿಲ್ಲೆಗಳಿಗೆ ಆರೆಂಜ್​ ಅಲರ್ಟ್ ಘೋಷಣೆ ! Read More »

ಕರಾವಳಿ, ಕರ್ನಾಟಕ

ಮನೆ ಕಟ್ಟುವವರಿಗೆ ಹೊಸ ರೂಲ್ಸ್..!

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 26. ಕಟ್ಟಡ ನಕ್ಷೆ ಅನುಮತಿ, ಸ್ವಾಧೀನ ಪ್ರಮಾಣ ಪತ್ರವಿಲ್ಲದೇ ನೀರು ಹಾಗೂ ವಿದ್ಯುತ್ ಸಂಪರ್ಕ ನೀಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಇತ್ತೀಚೆಗೆ ತೀರ್ಪು ನೀಡಿದ್ದು, ಹೀಗಾಗಿ ಜನರು ಈ ಅನುಮತಿಗಳು ಇಲ್ಲದೆ ಮನೆ ಕಟ್ಟಬೇಡಿ ಎಂದು ಡಿಸಿಎಂ ಡಿಕೆಶಿವಕುಮಾರ್ ಮತ್ತೊಮ್ಮೆ ಎಚ್ಚರಿಸಿದ್ದಾರೆ.   ಈ ಸಂಬಂಧ ವಿಧಾನಸೌಧದಲ್ಲಿ ಬುಧವಾರದಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಡೀ ದೇಶಕ್ಕೆ ಈ ತೀರ್ಪು ಆನ್ವಯವಾಗಲಿದ್ದು, ಇದರಿಂದ ಸಾರ್ವಜನಿಕರಿಗೆ ಸಾಕಷ್ಟು ಸಮಸ್ಯೆ ಎದುರಾಗಲಿದೆ. ಇದುವರೆಗೂ 2.50

ಮನೆ ಕಟ್ಟುವವರಿಗೆ ಹೊಸ ರೂಲ್ಸ್..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪ್ಯಾರಾಸಿಟಮೋಲ್ ಸೇರಿದಂತೆ 15 ಔಷಧಿಗಳಿಗೆ ನಿರ್ಬಂಧ ಹೇರಿದ ಆರೋಗ್ಯ ಇಲಾಖೆ..!

(ನ್ಯೂಸ್ ಕಡಬ) newskadaba.com ಜೂ. 26. ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತವು ಅಸುರಕ್ಷಿತ ಕಾಂತಿವರ್ಧಕ ಔಷಧ ಹಾಗೂ ಔಷಧಿಗಳ ಪಟ್ಟಿ ಬಿಡುಗಡೆ ಮಾಡಿದೆ. ಆರೋಗ್ಯ ಇಲಾಖೆಯು ಮೇ ತಿಂಗಳಲ್ಲಿ ಕಾಂತಿವರ್ಧಕ ಔಷಧ ಹಾಗೂ ಔಷಧಗಳ ಸ್ಯಾಂಪಲ್ಸ್ ಪಡೆದು, ತಪಾಸಣೆಗೆ ಒಳಪಡಿಸಿದ್ದು, ಈ ತಪಾಸಣೆಯಲ್ಲಿ 15 ಕಾಂತಿವರ್ಧಕ ಔಷಧ ಹಾಗೂ ಔಷಧಿಗಳು ಅಸುರಕ್ಷಿತ ಎಂದು ವರದಿ ಬಂದಿದೆ. ಕರ್ನಾಟಕ ರಾಜ್ಯಹಾಗೂ ಹೊರ ರಾಜ್ಯದ ಔಷಧ ತಯಾರಿಕಾ ಕಂಪನಿಗಳು ಈ ಪಟ್ಟಿಯಲ್ಲಿದ್ದು, ಅಸುರಕ್ಷಿತ ಔಷಧಿ ಮತ್ತು ಕಾಂತಿವರ್ಧಕಗಳ

ಪ್ಯಾರಾಸಿಟಮೋಲ್ ಸೇರಿದಂತೆ 15 ಔಷಧಿಗಳಿಗೆ ನಿರ್ಬಂಧ ಹೇರಿದ ಆರೋಗ್ಯ ಇಲಾಖೆ..! Read More »

ಕರ್ನಾಟಕ

ಕರ್ನಾಟಕದಲ್ಲಿ ಕಮಲ್‌ ಹಾಸನ್‌ ಚಿತ್ರ ರಿಲೀಸ್‌ ಇಲ್ಲ

(ನ್ಯೂಸ್ ಕಡಬ) newskadaba.com, ಜೂ.03. ಬೆಂಗಳೂರು: ಕರ್ನಾಟಕದಲ್ಲಿ ಕಮಲ್ ಹಾಸನ್ ಅವರ ಹೊಸ ಸಿನಿಮಾ ʼಥಗ್‌ ಲೈಫ್‌ʼ ಬಿಡುಗಡೆಗೆ ತಾತ್ಕಾಲಿಕ ತಡೆ ಬಿದ್ದಿದೆ. ʼಥಗ್‌ ಲೈಫ್‌ʼ ಬಿಡುಗಡೆಗೆ ಭದ್ರತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಹೈಕೋರ್ಟ್‌ನಲ್ಲಿ ಮಂಗಳವಾರ ನಡೆದಿದ್ದು, ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು ಅರ್ಜಿಯ ಮುಂದಿನ ವಿಚಾರಣೆಯನ್ನು ಜೂನ್‌ 10ಕ್ಕೆ ಮುಂದೂಡಿದ್ದಾರೆ. ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆ ಕುರಿತು ಕ್ಷಮೆಯಾಚಿಸದೆ ಮೊಂಡಾಟ ಪ್ರದರ್ಶಿಸುತ್ತಿದ್ದ ಕಮಲ್‌ ಹಾಸನ್‌ಗೆ ಆಘಾತ ಎದುರಾಗಿದೆ. ಸದ್ಯ ಕರ್ನಾಟಕದಲ್ಲಿ ಚಿತ್ರ ಬಿಡುಗಡೆ ಮಾಡುವುದಿಲ್ಲ. ವಾಣಿಜ್ಯ

ಕರ್ನಾಟಕದಲ್ಲಿ ಕಮಲ್‌ ಹಾಸನ್‌ ಚಿತ್ರ ರಿಲೀಸ್‌ ಇಲ್ಲ Read More »

ಬ್ರೇಕಿಂಗ್ ನ್ಯೂಸ್, ಸಿನಿಮಾ

ಎಸೆಸೆಲ್ಸಿಯಲ್ಲಿ‌ ಶೇ.60ಕ್ಕಿಂತ ಕಡಿಮೆ ಫಲಿತಾಂಶ ಬಂದ ಜಿಲ್ಲೆಗಳ ಡಿಡಿಪಿಐಗಳಿಗೆ ನೋಟಿಸ್ : ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಕಡಬ, ಮೇ. 31. ಈ ವರ್ಷದ ಎಸ್​ಎಸ್​ಎಲ್​​ಸಿ ಪರೀಕ್ಷೆಯಲ್ಲಿ 5 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಸಾಗುವ ಮೂಲಕ ಶೇ.62.34ರಷ್ಟು ಫಲಿತಾಂಶ ಬಂದಿದೆ. ಕಳೆದ ವರ್ಷಕ್ಕಿಂತ ಈ ವರ್ಷ ಫಲಿತಾಂಶ ಕಡಿಮೆ ಬಂದಿದೆ. ಈ ನಿಟ್ಟಿನಲ್ಲಿ ಇಂದು ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನೆ ಸಭೆ ಮಾಡಿದ ಸಿಎಂ ಸಿದ್ದರಾಮಯ್ಯ ಎಸ್​ಎಸ್​ಎಲ್​​ಸಿ ಫಲಿತಾಂಶ ವಿಚಾರವಾಗಿ ಮಹತ್ವದ ಚರ್ಚೆ ಮಾಡಿದ್ದಾರೆ. DDPI ಗಳಿಗೆ ನೋಟಿಸ್ ನೀಡಿ, ಕ್ರಮ ಕೈಗೊಳ್ಳಿ: ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಿಎಂ ಸೂಚನೆ SSLC

ಎಸೆಸೆಲ್ಸಿಯಲ್ಲಿ‌ ಶೇ.60ಕ್ಕಿಂತ ಕಡಿಮೆ ಫಲಿತಾಂಶ ಬಂದ ಜಿಲ್ಲೆಗಳ ಡಿಡಿಪಿಐಗಳಿಗೆ ನೋಟಿಸ್ : ಸಿದ್ದರಾಮಯ್ಯ Read More »

ಕರ್ನಾಟಕ
Scroll to Top