karnataka

ರಸ್ತೆ ಅಪಘಾತ- ಮೇಲ್ಸೇತುವೆಯಿಂದ ಬಿದ್ದ ಕಾರು ಓರ್ವ ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 03. ಕಾರು ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿ ನಂತರ ಕಾರು ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಮೇಲ್ಸೇತುವೆಯಿಂದ ಉರುಳಿಬಿದ್ದ ಪರಿಣಾಮ ಓರ್ವ ಮೃತಪಟ್ಟು ನಾಲ್ವರು ಗಾಯಗೊಂಡ ಘಟನೆ ಯಶವಂತಪುರದಲ್ಲಿ ಮಂಗಳವಾರದಂದು ನಸುಕಿನ ವೇಳೆ ನಡೆದಿದೆ. ಮೃತರನ್ನು ತಮಿಳುನಾಡು ಸೇಲಂ ಮೂಲದ ಶಬರೀಶ್(29) ಎಂದು ಗುರುತಿಸಲಾಗಿದೆ. ಗಾಯಗೊಂಡ ಶಂಕರ್ ರಾಮ್, ಅನುಶ್ರೀ, ಮಿಥುನ್ ಹಾಗೂ ಬೈಕ್ ಸವಾರ ಮಂಜುನಾಥ್ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೆ ಮುಂದುವರಿಸಲಾಗಿದೆ ಎಂದು ಸಂಚಾರ ಪೊಲೀಸರು […]

ರಸ್ತೆ ಅಪಘಾತ- ಮೇಲ್ಸೇತುವೆಯಿಂದ ಬಿದ್ದ ಕಾರು ಓರ್ವ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

310 ಅರಣ್ಯ ವೀಕ್ಷಕ ಹುದ್ದೆಗೆ 1,94,007 ಅರ್ಜಿ ಆಕಾಂಕ್ಷಿಗಳು

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 03.  ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 310 ಅರಣ್ಯ ವೀಕ್ಷಕರ ಹುದ್ದೆಗಳಿಗೆ 1,94,007 ಅರ್ಜಿಗಳು ಬಂದಿವೆ ಎಂದು ತಿಳಿದುಬಂದಿದೆ. 10ನೇ ತರಗತಿ ಉತ್ತೀರ್ಣರಾದ ಎಲ್ಲರೂ ಹುದ್ದೆಗೆ ಅರ್ಜಿ ಸಲ್ಲಿಸಬಹುದು ನಂತರ ದೈಹಿಕ ಮತ್ತು ವೈದ್ಯಕೀಯ ಪರೀಕ್ಷೆಗೆ ಒಳಗಾಗಬೇಕಾಗುತ್ತದೆ ಎಂದು ಹಿರಿಯ ಅರಣ್ಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆದಿವಾಸಿಗಳು ಮತ್ತು ಅರಣ್ಯವಾಸಿಗಳನ್ನು ನೇಮಿಸಿಕೊಳ್ಳಲು ರಚಿಸಲಾದ ಹುದ್ದೆಗಳ ಸಂಖ್ಯೆ ಕಡಿಮೆಯಿದ್ದು, ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದೆ. ಆಯ್ಕೆಯಾದ 267 ಅಭ್ಯರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ

310 ಅರಣ್ಯ ವೀಕ್ಷಕ ಹುದ್ದೆಗೆ 1,94,007 ಅರ್ಜಿ ಆಕಾಂಕ್ಷಿಗಳು Read More »

ಕರ್ನಾಟಕ

ಗ್ರಾಮ ಪಂಚಾಯಿತಿ ಪ್ರತಿನಿಧಿಗಳಿಗಾಗಿ ರಾಜ್ಯದಲ್ಲಿ ‘ಸಾಕ್ಷರ ಸನ್ಮಾನ’ ಕಾರ್ಯಕ್ರಮ ಆರಂಭ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 03.  ಔಪಚಾರಿಕ ಶಿಕ್ಷಣದ ಕೊರತೆಯಿರುವ ಗ್ರಾಮ ಪಂಚಾಯಿತಿ ಪ್ರತಿನಿಧಿಗಳಿಗೆ ಮೂಲ ಸಾಕ್ಷರತಾ ಕೌಶಲ್ಯವನ್ನು ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಸಾಕ್ಷರ ಸನ್ಮಾನ’ (ಸಾಕ್ಷರತೆ ಗೌರವ) ಕಾರ್ಯಕ್ರಮವನ್ನು ಸೆಪ್ಟೆಂಬರ್ 1 ರಿಂದ ಆರಂಭಿಸಲಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಈ ಯೋಜನೆಯಲ್ಲಿ 6,346 ಜನರಿಗೆ ತರಬೇತಿ ನೀಡಲಾಗುತ್ತದೆ. ಅದರಲ್ಲಿ ಮುಖ್ಯವಾಗಿ 5,234 ಚುನಾಯಿತ ಪ್ರತಿನಿಧಿಗಳಿದ್ದಾರೆ. ಈ ಕಾರ್ಯಕ್ರಮವನ್ನು ಕೌಶಲ್ಯಗಳನ್ನು ಒದಗಿಸಲು ಮಾತ್ರವಲ್ಲದೆ ಕರ್ನಾಟಕದ ಮೇಲೆ ಗಣನೀಯವಾಗಿ ಪರಿಣಾಮ ಬೀರುವ

ಗ್ರಾಮ ಪಂಚಾಯಿತಿ ಪ್ರತಿನಿಧಿಗಳಿಗಾಗಿ ರಾಜ್ಯದಲ್ಲಿ ‘ಸಾಕ್ಷರ ಸನ್ಮಾನ’ ಕಾರ್ಯಕ್ರಮ ಆರಂಭ Read More »

ಕರ್ನಾಟಕ

ನರ್ಸಿಂಗ್ ಕಾಲೇಜುಗಳಲ್ಲಿ ಶುಲ್ಕ ನಿಯಂತ್ರಣಕ್ಕೆ ಸರ್ಕಾರ ಪ್ರಾಧಿಕಾರ ರಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು , ಸೆ. 03. ರಾಜ್ಯದಲ್ಲಿ ನರ್ಸಿಂಗ್ ಕಾಲೇಜುಗಳಲ್ಲಿ ಹೆಚ್ಚಿನ ಶುಲ್ಕ ವಸೂಲಿ ಹಾಗೂ ಅಸಮರ್ಪಕ ಸೌಲಭ್ಯಗಳ ಕುರಿತು ಕಳವಳ ವ್ಯಕ್ತಪಡಿಸಿರುವ ರಾಜ್ಯ ಸರ್ಕಾರ ಈ ಸಂಸ್ಥೆಗಳ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾಗಿದೆ. ಶುಲ್ಕ ನಿಯಂತ್ರಣಕ್ಕೆ ಪ್ರಾಧಿಕಾರ ರಚಿಸಲು ಮುಂದಾಗಿದೆ. ವಿಕಾಸಸೌಧದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಅವರು, ಶುಲ್ಕ ನಿಯಂತ್ರಣಕ್ಕೆ ಪ್ರಾಧಿಕಾರ ರಚಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ, ಇದೇ

ನರ್ಸಿಂಗ್ ಕಾಲೇಜುಗಳಲ್ಲಿ ಶುಲ್ಕ ನಿಯಂತ್ರಣಕ್ಕೆ ಸರ್ಕಾರ ಪ್ರಾಧಿಕಾರ ರಚನೆ Read More »

ಕರ್ನಾಟಕ

ರಸ್ತೆ ಅಪಘಾತ- 5ಮಂದಿಗೆ ಗಂಭೀರ ಗಾಯ..!

(ನ್ಯೂಸ್ ಕಡಬ) newskadaba.com ಬೆಂಗಳೂರು , ಸೆ. 03. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಐವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಯಶವಂತಪುರ ಸರ್ಕಲ್​ ಬಳಿ ಸಂಭವಿಸಿದೆ. ಇಂದು ಮುಂಜಾನೆ 3.45ರ ಸುಮಾರಿಗೆ ಅಪಘಾತ ಸಂಭವಿಸಿದೆ. ಬೈಕ್ ಗೆ ಗುದ್ದಿದ ಕಾರು ಫ್ಲೈಓವರ್​ನಿಂದ ಕೆಳಗೆ ಬಿದ್ದಿದ್ದು, ಪರಿಣಾಮ ಕಾರಿನಲ್ಲಿದ್ದ ಮೂವರು, ಬೈಕ್​ನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಪೊಲೀಸರು ಹಾಗೂ ಸ್ಥಳೀಯರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಕೊಡಿಸುತ್ತಿದ್ದಾರೆ. ಇಬ್ಬರು ಪ್ರಾಣಾಪಾಯದಿಂದ

ರಸ್ತೆ ಅಪಘಾತ- 5ಮಂದಿಗೆ ಗಂಭೀರ ಗಾಯ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪ್ರಿಯಾಂಕ್ ಖರ್ಗೆ ಕುಟುಂಬದ ಸಿದ್ದಾರ್ಥ ಟ್ರಸ್ಟ್ ​​ಗೆ ಕೆಐಎಡಿಬಿಯಿಂದ ಜಮೀನು  ಸರ್ಕಾರದಿಂದ ವಿವರ ಕೋರಿದ ರಾಜ್ಯಪಾಲ

(ನ್ಯೂಸ್ ಕಡಬ) newskadaba.com ಬೆಂಗಳೂರು , ಸೆ. 02. ಪ್ರಭಾವ ಬಳಸಿ ಕೆಐಎಡಿಬಿಯಿಂದ (KIADB) ಸಿದ್ದಾರ್ಥ ಟ್ರಸ್ಟ್​​ಗೆ ಸಿಎ ನಿವೇಶನ ಪಡೆದಿದ್ದಾರೆಂಬ ಆರೋಪ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕೇಳಿ ಬಂದಿದ್ದು, ಈ ಬಗ್ಗೆ ವಿವರ ನೀಡುವಂತೆ ರಾಜ್ಯ ಸರ್ಕಾರಕ್ಕೆ ರಾಜ್ಯುಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ. ಬೆಂಗಳೂರಿನ ಏರೋಸ್ಪೇಸ್ ಪಾರ್ಕ್‌ನಲ್ಲಿ 5 ಎಕರೆ ನಾಗರಿಕ ಸೌಕರ್ಯಗಳ ನಿವೇಶನವನ್ನು ಕೆಐಎಡಿಬಿ ಖರ್ಗೆ ಕುಟುಂಬದ ಒಡೆತನದಲ್ಲಿರುವ ಸಿದ್ಧವಿಹಾರ ಟ್ರಸ್ಟ್‌ಗೆ ಮಂಜೂರು ಮಾಡಿದೆ. ಈ ಕುರಿತು

ಪ್ರಿಯಾಂಕ್ ಖರ್ಗೆ ಕುಟುಂಬದ ಸಿದ್ದಾರ್ಥ ಟ್ರಸ್ಟ್ ​​ಗೆ ಕೆಐಎಡಿಬಿಯಿಂದ ಜಮೀನು  ಸರ್ಕಾರದಿಂದ ವಿವರ ಕೋರಿದ ರಾಜ್ಯಪಾಲ Read More »

ಕರ್ನಾಟಕ

ಗೌರಿ- ಗಣೇಶ ಹಬ್ಬ; ಪ್ರಯಾಣಿಕರ ಅನುಕೂಲಕ್ಕೆ ವಿಶೇಷ ಬಸ್ ವ್ಯವಸ್ಥೆ

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಸೆ. 02. ಪ್ರಯಾಣಿಕರ ಅನುಕೂಲಕ್ಕಾಗಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವತಿಯಿಂದ ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಸೆ. 05 ರಿಂದ 10ರ ವರೆಗೆ ಹೆಚ್ಚುವರಿ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ. ಈ ವರ್ಷ ಗೌರಿ-ಗಣೇಶ ಹಬ್ಬವು ವೀಕೆಂಡ್ ನಲ್ಲಿ ಬಂದಿದ್ದು, ಸೆಪ್ಟೆಂಬರ್‌ 6ರಂದು ಶುಕ್ರವಾರ ಗೌರಿ ಹಬ್ಬ, ಸೆ. 07ರಂದು ಗಣೇಶ ಚತುರ್ಥಿ ಹಾಗೂ 8ರಂದು ಭಾನುವಾರ ಸಾರ್ವಜನಿಕ ರಜೆ ಇರುತ್ತದೆ. ಹಬ್ಬದ

ಗೌರಿ- ಗಣೇಶ ಹಬ್ಬ; ಪ್ರಯಾಣಿಕರ ಅನುಕೂಲಕ್ಕೆ ವಿಶೇಷ ಬಸ್ ವ್ಯವಸ್ಥೆ Read More »

ಕರ್ನಾಟಕ

ಗಣೇಶ ಚತುರ್ಥಿ- ಪಿಓಪಿ ಗಣೇಶ ಕಂಡುಬಂದಲ್ಲಿ ಕ್ರಿಮಿನಲ್ ಕೇಸ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 02. ಮುಂಬರುವ ಗಣೇಶ್ ಚತುರ್ಥಿ ಪ್ರಯುಕ್ತ ಪ್ಲಾಸ್ಟರ್ ಆಫ್ ಪ್ಯಾರೀಸ್ ನಿಷೇಧ ಮಾಡಲಾಗಿರುವುದರಿಂದ ಯಾರಾದರೂ ಪಿಓಪಿ ಗಣೇಶ ಮಾರಾಟ ಮಾಡಿದ್ರೆ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮತ್ತೊಮೆ ಎಚ್ಚರಿಸಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಸಾಯನಿಕ ಹಾಗೂ ಥರ್ಮಾಕೋಲ್ ನಿಂದ ಪ್ರಕೃತಿಗೆ ಹಾನಿಯುಂಟಾಗುವ ಹಿನ್ನೆಲೆ ನಗರದಲ್ಲಿ ಪ್ಲಾಸ್ಟರ್ ಆಫ್ ಪ್ಯಾರೀಸ್ ಬಳಕೆ ನಿಷೇಧಿಸಲಾಗಿದೆ. ಹೀಗಾಗಿ ಯಾರು ಕೂಡಾ ಪಿಒಪಿ ಗಣೇಶ ಮೂರ್ತಿಗಳನ್ನು

ಗಣೇಶ ಚತುರ್ಥಿ- ಪಿಓಪಿ ಗಣೇಶ ಕಂಡುಬಂದಲ್ಲಿ ಕ್ರಿಮಿನಲ್ ಕೇಸ್..! Read More »

ಕರ್ನಾಟಕ

ಗೃಹಲಕ್ಷ್ಮೀ ಯೋಜನೆ ಬಗ್ಗೆ ರೀಲ್ಸ್ ಮಾಡಿ ಬಹುಮಾನ ಗೆಲ್ಲಿ  ರಾಜ್ಯದ ಮಹಿಳೆಯರಿಗೆ ಹೊಸ ಆಫರ್ ನೀಡಿದ ಲಕ್ಷ್ಮೀ ಹೆಬ್ಬಾಳ್ಕರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 02.  ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಉಚಿತ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ, ಪ್ರತಿ ಮನೆಯ ಯಜಮಾನಿ ಖಾತೆಗೆ ತಿಂಗಳಿಗೆ 2000 ರೂ. ವರ್ಗಾವಣೆ ಮಾಡುವ ‘ಗೃಹಲಕ್ಷ್ಮಿ’ ಯೋಜನೆ ಒಂದು ವರ್ಷ ಪೂರೈಸಿದೆ. ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೃಹಲಕ್ಷ್ಮೀ ಯೋಜನೆ ಬಗ್ಗೆ ರೀಲ್ಸ್ ಮಾಡಿ ಬಹುಮಾನ ಗೆಲ್ಲಿ ಎಂದು ರಾಜ್ಯದ ಮಹಿಳೆಯರಿಗೆ ಹೊಸದೊಂದು ಆಫರ್ ನೀಡಿದ್ದಾರೆ. ಅವರು ಸಾಮಾಜಿಕ ಮಾಧ್ಯಮಗಳ ಮೂಲಕ

ಗೃಹಲಕ್ಷ್ಮೀ ಯೋಜನೆ ಬಗ್ಗೆ ರೀಲ್ಸ್ ಮಾಡಿ ಬಹುಮಾನ ಗೆಲ್ಲಿ  ರಾಜ್ಯದ ಮಹಿಳೆಯರಿಗೆ ಹೊಸ ಆಫರ್ ನೀಡಿದ ಲಕ್ಷ್ಮೀ ಹೆಬ್ಬಾಳ್ಕರ್ Read More »

ಕರ್ನಾಟಕ

2 ತಿಂಗಳ ಒಳಗಡೆ ಕೆಪಿಎಸ್‌ಸಿ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ಮರು ಪರೀಕ್ಷೆ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ       

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 02.  ಮುಂದಿನ 2 ತಿಂಗಳ ಒಳಗಡೆ ಕೆಪಿಎಸ್‌ಸಿ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳಿಗೆ ಮರು ಪರೀಕ್ಷೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಮರು ಪರೀಕ್ಷೆಯ ನಿರ್ಧಾರವನ್ನು ಪ್ರಕಟಿಸಿದ್ದು, ಕನ್ನಡ ಭಾಷಾಂತರದಲ್ಲಿ ಹಲವು ಲೋಪಗಳು ಕಂಡು ಬಂದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಮರು ಪರೀಕ್ಷೆ ನಡೆಸಬೇಕೆಂದು ಕೋರಿ ಆಗ್ರಹಿಸಿ ಪ್ರತಿಭಟಿಸಿದ್ದರು. ಕರ್ತವ್ಯ ಲೋಪವೆಸಗಿದ ಅಧಿಕಾರಿಗಳನ್ನು ಸೇವೆಯನ್ನು ಅಮಾನತು ಮಾಡಲಾಗಿದೆ. ಮುಂಬರುವ ಪರೀಕ್ಷೆಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ, ಸಮರ್ಪಕವಾಗಿ ನಡೆಸಲು ಎಲ್ಲಾ ಅಗತ್ಯ ಕ್ರಮಗಳನ್ನು

2 ತಿಂಗಳ ಒಳಗಡೆ ಕೆಪಿಎಸ್‌ಸಿ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ಮರು ಪರೀಕ್ಷೆ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ        Read More »

ಕರ್ನಾಟಕ
Scroll to Top