ಮಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿಬಾಂಬ್ ಕರೆ ಮಾಡಿದ್ದ ಆರೋಪ ➤ ಪ್ರಚಾರಗಿಟ್ಟಿಸಲು ಹೋಗಿ ಜೈಲು ಸೇರಿದ ಭೂಪ
(ನ್ಯೂಸ್ ಕಡಬ) newskadaba.com ಮಂಗಳೂರು. ಆ,21: ಕಳೆದ ಬುಧವಾರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ ಮಾಡಿದ್ದ ಆರೋಪಿ ವಸಂತ ಕೃಷ್ಣ ಶೇರಿಗಾರ್ (33) ಎಂಬಾತನನ್ನು ಬಂಧಿಸಲಾಗಿದ್ದು, ಪ್ರಚಾರ ಪಡೆಯುವ ಉದ್ದೇಶದಿಂದ ಆತ ಈ ಕೃತ್ಯ ಎಸಗಿರುವುದಾಗಿ ತನಿಖೆಯ ವೇಳೆ ತಿಳಿದು ಬಂದಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ತಿಳಿಸಿದ್ದಾರೆ. ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ ಮಾಡಿದ ವ್ಯಕ್ತಿ ಕೇವಲ ಪ್ರಚಾರಕ್ಕಾಗಿ ತಾನು ಈ ಕೃತ್ಯ ಎಸಗಿರುವುದಾಗಿ […]










