ಸರ್ಕಾರ ಸುಭದ್ರವಾಗಿದೆ, ಮುಂದಿನ ಮೂರು ವರ್ಷವೂ ಯಡಿಯೂರಪ್ಪನವರೇ ಸಿಎಂ ➤ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್
(ನ್ಯೂಸ್ ಕಡಬ) newskadaba.com ಚಾಮರಾಜನಗರ, ಜು.30: ಮುಂದಿನ ಮೂರು ವರ್ಷಕ್ಕೂ ಬಿ.ಎಸ್. ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿರಲಿದ್ದಾರೆ. ಅಲ್ಲದೆ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸುಭದ್ರವಾಗಿರಲಿದೆ ಈ ಕುರಿತು ಯಾರಿಗೂ ಸಂಶಯ ಬೇಡ ಎಂದು ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತು ಸುದ್ದಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಈ ಊಹಾಪೋಹಗಳಿಗೆ ಇಂದು ಚಾಮರಾಜನಗರದ ಕೊಳ್ಳೆಗಾಲದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತೆರೆ ಎಳೆಯಲು ಮುಂದಾಗಿದ್ದಾರೆ. […]










