karnataka

ವಯನಾಡು: ವಿದ್ಯಾರ್ಥಿಗಳಿಗೆ 175 ಸ್ಮಾರ್ಟ್ ಟಿವಿ ನೀಡಿದ ರಾಹುಲ್‌ ಗಾಂಧಿ

(ನ್ಯೂಸ್ ಕಡಬ) newskadaba.com ವಯನಾಡು ,ಜು.02:ಕೊರೊನಾ ವೈರಸ್‌ ಕಾರಣದಿಂದ ಕೇರಳದಲ್ಲಿ ಆನ್‌ಲೈನ್‌ ಶಿಕ್ಷಣವನ್ನು ಆರಂಭ ಮಾಡಲಾಗಿದ್ದು ಈ ನಿಟ್ಟಿನಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಯನಾಡು ಜಿಲ್ಲೆಯ ಕಲ್ಪೆಟ್ಟ ಪಟ್ಟಣದ ಬುಡಕಟ್ಟು ವಿದ್ಯಾರ್ಥಿಗಳಿಗೆ 175 ಸ್ಮಾರ್ಟ್ ಟಿವಿಗಳನ್ನು ನೀಡಿದ್ದಾರೆ.   ಕೇರಳದಲ್ಲಿ ಫಸ್ಟ್‌ ಬೆಲ್‌ ಆನ್‌ಲೈನ್‌ ತರಗತಿಗಳನ್ನು ನಡೆಸುತ್ತಿದ್ದು ಬುಡಕಟ್ಟು ಜನಾಂಗದ ವಿದ್ಯಾರ್ಥಿಗಳು ಈ ಶಿಕ್ಷಣದಿಂದ ವಂಚಿತರಾಗಬಾರದು ಎಂದು ವಯನಾಡು ಸಂಸದರಾಗಿರುವ ರಾಹುಲ್‌ ಗಾಂಧಿ ಬುಡಕಟ್ಟು ವಿದ್ಯಾರ್ಥಿಗಳಿಗೆ 175 ಸ್ಮಾರ್ಟ್ ಟಿವಿಗಳನ್ನು ಒದಗಿಸಿದ್ದಾರೆ.  

ವಯನಾಡು: ವಿದ್ಯಾರ್ಥಿಗಳಿಗೆ 175 ಸ್ಮಾರ್ಟ್ ಟಿವಿ ನೀಡಿದ ರಾಹುಲ್‌ ಗಾಂಧಿ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಕರಾವಳಿಯಲ್ಲಿ ಆರೆಂಜ್ ಅಲರ್ಟ್ ➤ ಹೆಚ್ಚಿನ ಮಳೆಯಾಗುವ ನಿರೀಕ್ಷೆ

(ನ್ಯೂಸ್ ಕಡಬ) newskadaba.com ಕರಾವಳಿ ,ಜು.02: ರಾಜ್ಯದ ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜುಲೈ 2 ಹಾಗೂ 3ರಂದು ಗುಡುಗು ಸಹಿತ ಧಾರಾಕಾರ ಮಳೆಯಾಗುವ ನಿರೀಕ್ಷೆಯಿದ್ದು ಹವಾಮಾನ ಇಲಾಖೆ ” ಆರೆಂಜ್ ಅಲರ್ಟ್” ಘೋಷಿಸಿದೆ.   ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವುದರಿಂದ ರಾಜ್ಯದ ಕರಾವಳಿ ಹಾಗೂ ಪಶ್ಚಿಮ ಘಟ್ಟಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಮೀನುಗಾರರು

ಕರಾವಳಿಯಲ್ಲಿ ಆರೆಂಜ್ ಅಲರ್ಟ್ ➤ ಹೆಚ್ಚಿನ ಮಳೆಯಾಗುವ ನಿರೀಕ್ಷೆ Read More »

ಕರಾವಳಿ, ಕರ್ನಾಟಕ

ತಡೆಗೋಡೆಗೆ ಗುದ್ದಿದ ಲಾರಿ ➤ ತಪ್ಪಿದ ಅನಾಹುತ

(ನ್ಯೂಸ್ ಕಡಬ) newskadaba.com ಅರಂತೋಡು,ಜು.02: ಮಡಿಕೇರಿ ಕಡೆಗೆ ಸಮಚರಿಸುತ್ತಿದ್ದ ಲಾರಿಯೊಂದು ಅರಂತೋಡು ತೆಕ್ಕಿಲ್ ಬಳಿ ರಸ್ತೆ ಬದಿಯ ತಡೆಗೋಡೆಗೆ ಗುದ್ದಿದೆ. ಸದ್ಯ ಯಾವುದೇ ಪ್ರಾಣಾಪಯಾವಿಲ್ಲದೆ ಚಾಲಕ ಪಾರಾಗಿದ್ದಾರೆ. ಇನ್ನು ರಸ್ತೆ ಬದಿಯಲ್ಲಿ ತಡೆಗೋಡೆ ಇದ್ದ ಕಾರಣ ಯಾವುದೇ ಹಾನಿಯಾಗಿಲ್ಲ. ಇಲ್ಲದಿದ್ದರೆ ಲಾರಿ ಅಲ್ಲಿರುವ ಮನೆ ಮೆಲೆ ಬೀಳುತ್ತಿತ್ತು ಎನ್ನಲಾಗಿದೆ.    

ತಡೆಗೋಡೆಗೆ ಗುದ್ದಿದ ಲಾರಿ ➤ ತಪ್ಪಿದ ಅನಾಹುತ Read More »

ಕರಾವಳಿ, ಕರ್ನಾಟಕ

ಜೈಲಿಗೂ ವಕ್ಕರಿಸಿದ ಸೋಂಕು ➤ 20 ಕೈದಿಗಳು, 6 ಮಂದಿ ಜೈಲು ಸಿಬ್ಬಂದಿಗೆ ಕೊರೊನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.02. ಕೊರೊನಾ ಮಹಾಮಾರಿ ದಿನೇ ದಿನೇ ತನ್ನ ಆರ್ಭಟವನ್ನು ಜಾಸ್ತಿ ಮಾಡುತ್ತಿದ್ದು, ಈಗ ಪರಪ್ಪನ ಅಗ್ರಹಾರಕ್ಕೂ ವಕ್ಕರಿಸಿದೆ. ಸಿಲಿಕಾನ್ ಸಿಟಿಯ ಸೆಂಟ್ರಲ್ ಜೈಲಿನಲಿದ್ದ 20 ಕೈದಿಗಳು ಮತ್ತು ಆರು ಮಂದಿ ಜೈಲು ಸಿಬ್ಬಂದಿಗೂ ಕೊರೊನಾ ಪಾಸಿಟಿವ್ ಬಂದಿದೆ. ಹೊಸದಾಗಿ ಅರೆಸ್ಟ್ ಆಗಿ ಜೈಲಿಗೆ ತೆರಳಿದ್ದ ಅರೋಪಿಗಳಲ್ಲೂ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಮೂರು ದಿನಗಳ ಹಿಂದೆ ಜೈಲಿನಲ್ಲಿದ್ದ ಸುಮಾರು 150 ಜನರ ಸ್ಯಾಂಪಲ್ ಪಡೆಯಲಾಗಿತ್ತು. ಈಗ ಇದರ ವರದಿ ಬಂದಿದ್ದು, 150 ಜನರ

ಜೈಲಿಗೂ ವಕ್ಕರಿಸಿದ ಸೋಂಕು ➤ 20 ಕೈದಿಗಳು, 6 ಮಂದಿ ಜೈಲು ಸಿಬ್ಬಂದಿಗೆ ಕೊರೊನಾ ಪಾಸಿಟಿವ್ Read More »

ಕರ್ನಾಟಕ

ಮಾಸ್ಕ್ ಧರಿಸದೆ ಓಡಾಟ ನಡೆಸಿದರೆ ಹುಷಾರ್! ➤ ಕಟ್ಟಬೇಕಾದಿತು ದಂಡ

(ನ್ಯೂಸ್ ಕಡಬ) newskadaba.com.ಉಡುಪಿ,ಜು.2:ಕೊರೊನಾ ತಡೆಗಾಗಿ, ಸಾರ್ವಜನಿಕ ಸ್ಥಳಗಳಲ್ಲಿ ನಿಯಮ ಪಾಲನೆಗೆ ಸಂಬಂಧಿಸಿ ಮಾಸ್ಕ್ ಧರಿಸದೆ ನಿರ್ಲಕ್ಷ್ಯ ವಹಿಸುವವರಿಗೆ ಮಾಸ್ಕ್ ಧರಿಸುವಂತೆ, ಸಾಮಾಜಿಕ ಅಂತರ ಕಾಪಾಡು ವಂತೆ ಅಧಿಕಾರಿ ಗಳು, ಕೊರೊನಾ ವಾರಿಯರ್ಸ್‌ ತಂಡ, ಆರೋಗ್ಯ ಇಲಾಖೆ, ಪೊಲೀಸರು ಜಾಗೃತಿ ಮೂಡಿಸಿದರೂ. ನಗರದಲ್ಲಿ ಮಾಸ್ಕ್ ಸಹಿತ ಸಾಮಾಜಿಕ ಅಂತರ ನಿಯಮ ಉಲ್ಲಂಘಿಸಿರುವುದಕ್ಕೆ ಸಂಬಂಧಿಸಿ ನಗರಸಭೆ ಅಧಿಕಾರಿಗಳು ಮುಖ್ಯ ಪೇಟೆಯಲ್ಲಿ ಬುಧವಾರ ದಾಳಿ ನಡೆಸಿದರು. ನಿಟ್ಟೂರು, ನಗರ ಬಸ್‌ ಸ್ಟಾಂಡ್‌ ಮುಂತಾದ ಕಡೆ ಬೆಳಗ್ಗೆ ವಲಸೆ ಕಾರ್ಮಿಕರು ಮಾಸ್ಕ್ ಧರಿಸದೆ

ಮಾಸ್ಕ್ ಧರಿಸದೆ ಓಡಾಟ ನಡೆಸಿದರೆ ಹುಷಾರ್! ➤ ಕಟ್ಟಬೇಕಾದಿತು ದಂಡ Read More »

ಕರ್ನಾಟಕ

ಮಂಗಳೂರು : 7 ದಿನದ ಕಂದಮ್ಮನಿಗೂ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಮಂಗಳೂರು ,ಜು.02: ದ.ಕ. ಜಿಲ್ಲೆಯಲ್ಲಿ 7 ದಿನದ ಕಂದಮ್ಮನಲ್ಲೂ ಕೊರೊನಾ ಸೋಂಕು ದೃಢಪಟ್ಟಿದೆ. ಏಳು ದಿನದ ಹಿಂದೆ ಜನಿಸಿದ ಹಸುಗೂಸಿನಲ್ಲೂ ಇದೀಗ ಸೋಂಕು ದೃಢಪಟ್ಟಿದೆ.   ಸೋಂಕಿತ ಸಂಪರ್ಕದಿಂದಲೇ 7 ದಿನದ ಕಂದಮ್ಮನಲ್ಲಿ ಕೊರೊನಾ ಪಾಸಿಟಿವ್ ಬಂದಿದೆ ಎನ್ನಲಾಗಿದೆ. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಗು ಜನಿಸಿತ್ತು. ಮಗುವನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಪರೀಕ್ಷಾ ವರದಿ ಪಾಸಿಟಿವ್ ಬಂದಿದೆ. ಇದೀಗ ಕಂದಮ್ಮನನ್ನು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಎಂಟು ಅಪ್ರಾಪ್ತ ವಯಸ್ಸಿನ ಮಕ್ಕಳಲ್ಲೂ ಕೊರೊನಾ

ಮಂಗಳೂರು : 7 ದಿನದ ಕಂದಮ್ಮನಿಗೂ ಕೊರೋನಾ ಪಾಸಿಟಿವ್ Read More »

ಕರಾವಳಿ, ಕರ್ನಾಟಕ

ಮಂಗಳೂರು: ಪೈಲೆಟ್ ತರಬೇತಿ ಪಡೆದಿದ್ದ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು,ಜು.02: ಪೈಲೆಟ್ ತರಬೇತಿ ಪಡೆದಿದ್ದ ಯುವಕನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ನಗರದ ಮರೋಳಿಯಲ್ಲಿ ಬುಧವಾರ ನಡೆದಿದೆ. ನೂರಾರು ಕನಸುಗಳನ್ನ ಕಟ್ಟಿಕೊಂಡು ಪೈಲೆಟ್ ತರಬೇತಿ ಪಡೆದಿದ್ದ ಯುವಕನೋರ್ವ ಬುಧವಾರದಂದು ನೇಣು ಬಿಗಿದುಕೊಂಡಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.   ಮೃತ ಯುವಕ 32 ವರುಷದ ಅದ್ವೈತ ಶೆಟ್ಟಿನಗರದ ಮರೋಳಿ ನಿವಾಸಿಯಾಗಿದ್ದು ಪೈಲೆಟ್‌ ತರಬೇತಿ ಮುಗಿಸಿ ಕೆಲಸ ಹುಡುಕುತ್ತಿದ್ದರು. ಮೂರು ದಿನಗಳ ಹಿಂದೆ ಊರಿಗೆ ಮರಳಿದ್ದು ಬುಧವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ

ಮಂಗಳೂರು: ಪೈಲೆಟ್ ತರಬೇತಿ ಪಡೆದಿದ್ದ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕೊರೊನಾ ಹಿನ್ನೆಲೆ ಜುಲೈ 3ರಿಂದ 5ರ ತನಕ ದ.ಕ. ಜಿಲ್ಲಾಧಿಕಾರಿ ಕಚೇರಿ ಬಂದ್ ➤ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು.02., ಕೊರೊನಾ ಮುನ್ನೆಚ್ಚರಿಕಾ ಕ್ರಮವಾಗಿ ಜುಲೈ 3ರಿಂದ 5ರ ತನಕ ದ.ಕ. ಜಿಲ್ಲಾಧಿಕಾರಿ ಕಚೇರಿಯನ್ನು ಬಂದ್ ಮಾಡುವಂತೆ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಆದೇಶ ನೀಡಿದ್ದಾರೆ. ದ.ಕ. ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೋಂಕು ಮತ್ತಷ್ಟು ಹರಡದಂತೆ ಜಿಲ್ಲಾಡಳಿತ ಆರೋಗ್ಯ ಇಲಾಖೆ ಹತ್ತು ಹಲವು ರೀತಿಯಲ್ಲಿ ಕ್ರಮ ಕೈಗೊಂಡಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಸಂಸದರು, ಸಚಿವರ ಕಚೇರಿ ಸೇರಿದಂತೆ ಸಂಪೂರ್ಣ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ಬಂದ್ ಮಾಡುವಂತೆ ಆದೇಶ

ಕೊರೊನಾ ಹಿನ್ನೆಲೆ ಜುಲೈ 3ರಿಂದ 5ರ ತನಕ ದ.ಕ. ಜಿಲ್ಲಾಧಿಕಾರಿ ಕಚೇರಿ ಬಂದ್ ➤ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ Read More »

ಕರಾವಳಿ

ಎಸ್‍ಎಸ್‍ಎಲ್‍ಸಿ ಹಲವು ಕಾರಣಗಳಿಂದ 285 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು

(ನ್ಯೂಸ್ ಕಡಬ) newskadaba.com.ಮಂಗಳೂರು.2: ಬುಧವಾರದ ಎಸ್ಸೆಸ್ಸೆಲ್ಸಿ ಸಮಾಜ ವಿಜ್ಞಾನ ಪರೀಕ್ಷೆಗೆ ದ.ಕ.ಜಿಲ್ಲೆಯಲ್ಲಿ 285 ವಿದ್ಯಾರ್ಥಿಗಳು ಹಲವು ಕಾರಣಗಳಿಂದ ಗೈರಾದರು. 28,161 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು ಅದರಲ್ಲಿ ,27,876 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಹಾಜರಾದವರಲ್ಲಿ ಅನಾರೋಗ್ಯ ಕಾರಣದಿಂದ ವಿಶೇಷ ಕೊಠಡಿಯಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿಗಳ ಸಂಖ್ಯೆ 46. ನೆರೆರಾಜ್ಯಗಳಿಂದ ಒಟ್ಟು 367 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು ಎಂದು ದ.ಕ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ. ಇನ್ನೂ ಉಡುಪಿ ಜಿಲ್ಲೆಯಲ್ಲಿ ಬುಧವಾರ ಎಸ್ಸೆಸ್ಸೆಲ್ಸಿ ಸಮಾಜ ವಿಜ್ಞಾನ

ಎಸ್‍ಎಸ್‍ಎಲ್‍ಸಿ ಹಲವು ಕಾರಣಗಳಿಂದ 285 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು Read More »

ಕರಾವಳಿ

 ಮೀನಿನ ಪರಿಮಳವನ್ನು ಹೀರುವವರ ಆರೋಗ್ಯ ಉತ್ತಮವಾಗಿರುತ್ತದೆ ➤ ಕೋಟ ಶ್ರೀನಿವಾಸ ಪೂಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.02. , ಮಂಗಳೂರಿನ ಮೀನುಗಾರಿಕಾ ಮಹಾವಿದ್ಯಾಲಯವು 50 ವರ್ಷಗಳನ್ನು ಪೂರೈಸಿದ ಸುಸಂದರ್ಭದಲ್ಲಿ ಮುದ್ರಿಸಲಾದ ಮೀನಿನ ಚಿತ್ರವಿರುವ ಭಾರತೀಯ ಅಂಚೆ ಚೀಟಿಯನ್ನು ಮೀನುಗಾರಿಕೆ, ಬಂದರು, ಒಳನಾಡು ಜಲ ಸಾರಿಗೆ ಮತ್ತು ದ.ಕ. ಜಿಲ್ಲೆಯ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಮಂಗಳವಾರ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಮೀನು ಉತ್ತಮ ಪೌಷ್ಟಿಕಾಂಶವನ್ನು ಹೊಂದಿರುವ ಅಹಾರವಾಗಿದೆ. ಮೀನನ್ನು ಸೇವಿಸುವವರು ಮತ್ತು ಅದರ ಪರಿಮಳವನ್ನು ಹೀರುವವರ ಆರೋಗ್ಯ ಉತ್ತಮವಾಗಿರುವುದಲ್ಲದೇ ಜ್ಞಾಪಕ ಶಕ್ತಿ ಹೆಚ್ಚಾಗುತ್ತದೆ

 ಮೀನಿನ ಪರಿಮಳವನ್ನು ಹೀರುವವರ ಆರೋಗ್ಯ ಉತ್ತಮವಾಗಿರುತ್ತದೆ ➤ ಕೋಟ ಶ್ರೀನಿವಾಸ ಪೂಜಾರಿ Read More »

ಕರಾವಳಿ
Scroll to Top