karnataka

ವಲಯ ಮಟ್ಟದ ಪ್ರಾಥಮಿಕ ಶಾಲಾ ಬಾಲಕ/ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಕೂಟ: ಕೆಮ್ಮಾರ ಶಾಲೆಯ ಬಾಲಕಿಯರ ತಂಡ ತಾಲೂಕು ಮಟ್ಟಕ್ಕೆ

(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ,ಆ.06. ಮಠ (ಪುಳಿತ್ತಡಿ) ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ವಲಯ ಮಟ್ಟದ ಬಾಲಕ/ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಕೂಟದಲ್ಲಿ ಕೆಮ್ಮಾರ ಸರಕಾರಿ ಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದೆ. ಉಪ್ಪಿನಂಗಡಿ ವಲಯ ಮಟ್ಟದ ಎಲ್ಲಾ ಶಾಲೆಗಳ ವಿದ್ಯಾರ್ಥಿಗಳು ಪಂದ್ಯಾಕೂಟದಲ್ಲಿ ಪಾಲ್ಗೊಂಡಿದ್ದರು. ಪಂದ್ಯಾಕೂಟದುದ್ದಕ್ಕೂ ಉತ್ತಮ ಪ್ರದರ್ಶನ ತೋರಿದ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಕೆಮ್ಮಾರ ಇಲ್ಲಿನ ವಿದ್ಯಾರ್ಥಿನಿಯರಾದ ಜಮೀಲತ್ ನೌಶೀನ, ಜೈನಬ ವಫಿಯ್ಯ, ಜೈನಬ ವಸೀಯ್ಯ ರವರಿಗೆ ಅರ್ಹವಾಗಿಯೇ […]

ವಲಯ ಮಟ್ಟದ ಪ್ರಾಥಮಿಕ ಶಾಲಾ ಬಾಲಕ/ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಕೂಟ: ಕೆಮ್ಮಾರ ಶಾಲೆಯ ಬಾಲಕಿಯರ ತಂಡ ತಾಲೂಕು ಮಟ್ಟಕ್ಕೆ Read More »

ಕರಾವಳಿ

‘ರಾಜ್ಯ ಸರ್ಕಾರ ಪೊಲೀಸರನ್ನೇ ಭಕ್ಷಕರನ್ನಾಗಿ ಮಾಡಿದೆ’                ಭಾಸ್ಕರ್ ರಾವ್ ಆರೋಪ

(ನ್ಯೂಸ್ ಕಡಬ)newskadaba.com ಚಿತ್ರದುರ್ಗ,ಆ.06. ರಾಜ್ಯ ಸರ್ಕಾರ ಪೊಲೀಸರನ್ನೇ ಭಕ್ಷಕರನ್ನಾಗಿ ಮಾಡಿದೆ. ಲಕ್ಷಾಂತರ ರೂ. ಹಣ ನೀಡುವ ತನಕ ಪೋಸ್ಟಿಂಗ್ ಕೊಡುವುದಿಲ್ಲ. ಸಮವಸ್ತ್ರಧಾರಿಗಳು ಭಕ್ಷಕರು ಮಾತ್ರವಲ್ಲ ಭಿಕಾರಿಗಳಾಗಿದ್ದಾರೆ. ಇದು ನೇರವಾಗಿ ಜನರ ಮೇಲೆ ಪರಿಣಾಮ ಬೀರುತ್ತಿದೆ ಎಂದು ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಆರೋಪಿಸಿದ್ದಾರೆ. ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ಬೇರೆ ಇಲಾಖೆಗಳಲ್ಲಿ ಗುತ್ತಿಗೆ, ಟೆಂಡರ್, ಪರ್ಸೆಂಟೇಜ್ ನಡೆಯುತ್ತದೆ. ಆದರೆ, ಪೊಲೀಸರು ಜನಸಾಮಾನ್ಯರಿಂದ ವಸೂಲಿ ಮಾಡಬೇಕಾಗುತ್ತದೆ. ಲೂಟಿ ಹೊಡೆಯಿರಿ ಎಂದು ಸರ್ಕಾರವೇ ಒತ್ತಡ ಹೇರುತ್ತಿದೆ. ಇದರಿಂದಾಗಿ ಪೊಲೀಸ್ ಇಲಾಖೆ

‘ರಾಜ್ಯ ಸರ್ಕಾರ ಪೊಲೀಸರನ್ನೇ ಭಕ್ಷಕರನ್ನಾಗಿ ಮಾಡಿದೆ’                ಭಾಸ್ಕರ್ ರಾವ್ ಆರೋಪ Read More »

ಕರ್ನಾಟಕ

ಶಾಲಾ ಬಸ್ ಹರಿದು ಬಾಲಕನೋರ್ವ ಮೃತ್ಯು

(ನ್ಯೂಸ್ ಕಡಬ)newskadaba.com ವಿಜಯಪುರ, ಆ.06. ಶಾಲಾ ಬಸ್ ಹರಿದು 5 ವರ್ಷದ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದ ದಾರುಣ ಘಟನೆ ನಡೆದಿದೆ ಎನ್ನಲಾಗಿದೆ. ಮನೆಯಿಂದ ಅಂಗನವಾಡಿಗೆ ಹೋಗುತ್ತಿದ್ದ ವೇಳೆ ಶಾಲಾ ಬಸ್ ಹರಿದು ಗ್ರಾಮದ 5 ವರ್ಷದ ಬಾಲಕ ಬಸವರಾಜ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಅಪಘಾತದ ಬಳಿಕ ಶಾಲಾ ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.    

ಶಾಲಾ ಬಸ್ ಹರಿದು ಬಾಲಕನೋರ್ವ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಂಗಳೂರಿಗೆ 2 ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ              ಪಟ್ಟಿಯಲ್ಲಿವೆ 7 ಸ್ಥಳಗಳು                     

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.06. ರಾಜ್ಯ ರಾಜಧಾನಿಗೆ ಮತ್ತೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 7 ಸ್ಥಳಗಳನ್ನು ಗುರುತಿಸಲಾಗಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆ ಇನ್ನೆರಡು ದಿನಗಳಲ್ಲಿ ಚರ್ಚಿಸಿ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರಕ್ಕೆ ಕ್ಷಿಪ್ರಗತಿಯಲ್ಲಿ ಪ್ರಸ್ತಾವನೆ ಸಲ್ಲಿಸಲು ನಿರ್ಣಾಯಕ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಪ್ರಸ್ತಾವನೆ ಸಂಬಂಧ ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಐಡೆಕ್ ಮತ್ತು ಬೋಸ್ಟನ್ ಕನ್ಸಲ್ಟೆನ್ಸಿ ಗ್ರೂಪ್ ಸಂಸ್ಥೆಗಳು ಸಿದ್ಧಪಡಿಸಿರುವ ಪ್ರಾತ್ಯಕ್ಷಿಕೆಯನ್ನು ಅವರು ವೀಕ್ಷಿಸಿದರು.

ಬೆಂಗಳೂರಿಗೆ 2 ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ              ಪಟ್ಟಿಯಲ್ಲಿವೆ 7 ಸ್ಥಳಗಳು                      Read More »

ಕರ್ನಾಟಕ

ನಿಂತಿದ್ದ ಬಸ್ ಗೆ ಢಿಕ್ಕಿ ಹೊಡೆದ ಸ್ಕೂಟರ್ ಸವಾರರು ಗಂಭೀರ

(ನ್ಯೂಸ್ ಕಡಬ)newskadaba.com ಉಡುಪಿ, ಆ.06. ನಿಂತಿದ್ದ ಬಸ್‌ಗೆ ಸ್ಕೂಟರ್ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಹಳೆ ತಾಲೂಕು ಕಛೇರಿ ಕಿನ್ನಿಮುಲ್ಕಿ ರಸ್ತೆಯಲ್ಲಿ ಘಟನೆ ನಡೆದಿದ್ದು ಸ್ಕೂಟರ್ ಸವಾರರು ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಬಸ್‌ ಗೆ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ಸ್ಕೂಟರ್ ಸವಾರ ಮತ್ತು ಸಹ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಿಂತಿದ್ದ ಬಸ್ ಗೆ ಢಿಕ್ಕಿ ಹೊಡೆದ ಸ್ಕೂಟರ್ ಸವಾರರು ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾಂಗ್ರೆಸ್ ಸರ್ಕಾರ ಪತನಗೊಳಿಸುವಷ್ಟು ಬಲ ಬಿಜೆಪಿಗೆ ಇಲ್ಲ               ಕೆ.ಸಿ ವೇಣುಗೋಪಾಲ್                    

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.05. ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರವನ್ನು ಪತನಗೊಳಿಸಲು ಬಿಜೆಪಿ-ಜೆಡಿಎಸ್ ನಡೆಸುತ್ತಿರುವ ಷಡ್ಯಂತ್ರಕ್ಕೆ ನಾವು ಮಣಿಯುವುದಿಲ್ಲ. ಜನರ ಬಳಿಗೆ ಹೋಗಿ ವಾಸ್ತವವನ್ನು ವಿವರಿಸುತ್ತೇವೆ. ಒಗ್ಗಟ್ಟಿನಿಂದ ಹೋರಾಡುತ್ತೇವೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಸಚಿವರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ಗಂಭೀರ ಬೆಳವಣಿಗೆಗಳ ಕುರಿತು ರಾಜ್ಯದ ಸಚಿವರೊಂದಿಗೆ ಚರ್ಚಿಸಲಾಯಿತು. ಕರ್ನಾಟಕ ರಾಜ್ಯ ಬಿಜೆಪಿಯು ಸರ್ಕಾರಗಳನ್ನು ಉರುಳಿಸುವ

ಕಾಂಗ್ರೆಸ್ ಸರ್ಕಾರ ಪತನಗೊಳಿಸುವಷ್ಟು ಬಲ ಬಿಜೆಪಿಗೆ ಇಲ್ಲ               ಕೆ.ಸಿ ವೇಣುಗೋಪಾಲ್                     Read More »

ಕರ್ನಾಟಕ

3 ಸಾವಿರ ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ SIT

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.05. ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ (Valmiki Corporation scam) ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT) ಇಂದು ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದೆ.ಎಸ್‌ಐಟಿ ತಂಡದಿಂದ ಕೋರ್ಟ್‌ಗೆ ಸುಮಾರು 3 ಸಾವಿರ ಪುಟಗಳ ಪ್ರಾಥಮಿಕ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಲಾಗಿದ್ದು, 12 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಅನ್ನು ನಗರದ ಎಸಿಎಂಎಂ ಕೋರ್ಟ್ ಸಲ್ಲಿಸಲಾಗಿದೆ. ಆರೋಪಿಗಳಾದ ಸತ್ಯನಾರಾಯಣ ವರ್ಮ, ಸತ್ಯನಾರಾಯಣ ಇಟ್ಕಾರಿ, ವಾಲ್ಮೀಕಿ ನಿಗಮ ಎಂಡಿ

3 ಸಾವಿರ ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ SIT Read More »

ಕರ್ನಾಟಕ

ಬೆಂಗಳೂರು: ಸಿಸಿಬಿ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.05. ಯಾದಗಿರಿ ಪಿಎಸ್ಐ ಪರಶುರಾಮ ಸಾವು ಪ್ರಕರಣದ ಬಹಳ ಸುದ್ದಿ ಮಾಡಿ ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದ ಬೆನ್ನಲ್ಲೇ ಮತ್ತೊಂದು ಘಟನೆ ನಡೆದಿದೆ ಎನ್ನಲಾಗಿದೆ. ಬೆಂಗಳೂರು ಸಿಸಿಬಿ ಪೊಲೀಸ್ ಇನ್ಸ್ಪೆಕ್ಟರ್ ತಿಮ್ಮೇಗೌಡ ಆತ್ಮಹತ್ಯೆಗೆ ಶರಣಾಗಿದ್ದಾರೆ. ರಾಮನಗರ ಜಿಲ್ಲೆಯ ಬಿಡದಿ ಬಳಿ ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಿಮ್ಮೇಗೌಡ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಬೆಂಗಳೂರು ಸಿಸಿಬಿ ಆರ್ಥಿಕ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಬೆಂಗಳೂರು: ಸಿಸಿಬಿ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸಾಧಕ ಕ್ರೀಡಾಪಟುಗಳಿಗೆ ಶೀಘ್ರದಲ್ಲೇ ಸರ್ಕಾರಿ ಉದ್ಯೋಗ ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.05. ಒಲಿಂಪಿಕ್ಸ್, ಪ್ಯಾರಾಲಿಂಪಿಕ್ಸ್, ಏಷ್ಯನ್ ಗೇಮ್ಸ್, ಪ್ಯಾರಾ ಏಷ್ಯನ್ ಗೇಮ್ಸ್ ಮತ್ತು ಕಾಮನ್‌ ವೆಲ್ತ್ ಗೇಮ್ಸ್‌ ನಲ್ಲಿ ಪದಕ ಗೆದ್ದ ರಾಜ್ಯದ 12 ಕ್ರೀಡಾಪಟುಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಇಲಾಖೆಗಳಲ್ಲಿ ಗ್ರೂಪ್ ಎ, ಬಿ ಮತ್ತು ಇತರ ಹುದ್ದೆಗಳಿಗೆ ನೇಮಕಾತಿಗೆ ಆಫರ್ ಲೆಟರ್ ವಿತರಿಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ 12 ಮಂದಿ ಕ್ರೀಡಾ ಪಟುಗಳಿಗೆ ಅವಕಾಶ ಪತ್ರ (ಆಫರ್ ಲೆಟರ್) ವಿತರಿಸಿದರು.

ಸಾಧಕ ಕ್ರೀಡಾಪಟುಗಳಿಗೆ ಶೀಘ್ರದಲ್ಲೇ ಸರ್ಕಾರಿ ಉದ್ಯೋಗ ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ

ಶಿಕ್ಷಣ ಇಲಾಖೆಯಲ್ಲಿ ಮಿತಿಮೀರಿದ ಭ್ರಷ್ಟಾಚಾರ      ಪ್ರತಿಭಟನೆಗೆ ಖಾಸಗಿ ಶಾಲೆಗಳ ಸಮಿತಿ ಸಜ್ಜು              

(ನ್ಯೂಸ್ ಕಡಬ) newskadaba.com ಕಲಬುರಗಿ, ಆ.05. ಶಿಕ್ಷಣ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ವಿರುದ್ಧ ಕರ್ನಾಟಕ ಖಾಸಗಿ ಶಾಲಾ ಆಡಳಿತ ಮಂಡಳಿ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಸಮನ್ವಯ ಸಮಿತಿ (KPMTCC) ಸಿಎಂ ಸಿದ್ದರಾಮಯ್ಯ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (DSEL) ವಿರುದ್ಧ ಪ್ರತಿಭಟನೆ ನಡೆಸಲು ಮುಂದಾಗಿದೆ. ಇಲಾಖೆ ಅಧಿಕಾರಿಗಳು ಬೇರೆ ಬೇರೆ ಆಧಾರದಲ್ಲಿ ಶಾಲೆಗಳಿಂದ ಹಣ ವಸೂಲಿ ಮಾಡುತ್ತಿದ್ದು, ನಾನಾ ಕಡೆಗಳಲ್ಲಿ ಭ್ರಷ್ಟಾಚಾರ ಹೆಚ್ಚುತ್ತಿದೆ ಎಂದು ಆರೋಪಿಸಿದ್ದಾರೆ ಎನ್ನಲಾಗಿದೆ.  

ಶಿಕ್ಷಣ ಇಲಾಖೆಯಲ್ಲಿ ಮಿತಿಮೀರಿದ ಭ್ರಷ್ಟಾಚಾರ      ಪ್ರತಿಭಟನೆಗೆ ಖಾಸಗಿ ಶಾಲೆಗಳ ಸಮಿತಿ ಸಜ್ಜು               Read More »

ಕರ್ನಾಟಕ
Scroll to Top