karnataka

ಕೃಷಿಗೆ ಸಂಬಂಧಿಸಿದ ಸರ್ಕಾರಿ ಯೋಜನೆಗಳ ಸದ್ಬಳಕೆಯಾಗಲಿ ➤ ಕೃಷ್ಣ ಕುಮಾರ್

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.14.ಗಂಗಾಕಲ್ಯಾಣ ಯೋಜನೆಯು ಸಾಕಷ್ಟು ರೈತಾಪಿ ಜನಗಳ ಆರ್ಥಿಕ ಅಭಿವೃದ್ದಿಗೆ ಮತ್ತು ಕೃಷಿ ಉತ್ಪನ್ನಗಳನ್ನು ಹೆಚ್ಚಾಗುವುದಕ್ಕೆ ಸಹಾಯಕಾರಿಯಾಗಿದೆ, ಆದ್ದರಿಂದ ಇಂತಹ ಯೋಜನೆಗಳನ್ನು ಸರಿಯಾಗಿ ಸದ್ಬಳಿಕೆ ಮಾಡಿಕೊಳ್ಳಬೇಕು ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಕುಮಾರ್ ಹೇಳಿದರು. ಶುಕ್ರವಾರ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಹಾಗೂ ಭಾರತೀಯ ಕೃಷಿ ಅನುಸಂದಾನ ಪರಿಷತ್‍ನ ಕೃಷಿ ವಿಜ್ಞಾನ ಕೇಂದ್ರ ಕಂಕನಾಡಿ […]

ಕೃಷಿಗೆ ಸಂಬಂಧಿಸಿದ ಸರ್ಕಾರಿ ಯೋಜನೆಗಳ ಸದ್ಬಳಕೆಯಾಗಲಿ ➤ ಕೃಷ್ಣ ಕುಮಾರ್ Read More »

ಕರಾವಳಿ

ದಾಸ್ತಾನು ಇರಿಸಿದ್ದ 29.51 ಕ್ವಿಂಟಾಲ್ ಅಕ್ಕಿ ಹರಾಜು

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.14.ಮಂಗಳೂರು ತಾಲೂಕು ಕಚೇರಿಯ ಆಹಾರ ನಿರೀಕ್ಷಕರು 2014ನೇ ಸಾಲಿನ ನವೆಂಬರ್ 5ರಂದು ಹಳೆಯಂಗಡಿ ಗ್ರಾಮದಲ್ಲಿರುವ ಬದ್ರುದಿನ್ ಎಂಬವರ ದಿನಸಿ ಅಂಗಡಿಯಲ್ಲಿ ಅಕ್ರಮವಾಗಿ ದಾಸ್ತಾನಿರಿಸಿದ್ದ 29.51 ಕ್ವಿಂಟಾಲ್ ಅಕ್ಕಿಯನ್ನು ಅಗತ್ಯ ವಸ್ತುಗಳ ಪರವಾನಿಗೆ ಆದೇಶ 1986ರ ನಿಯಮ 3,4,9 ಮತ್ತು 10ನ್ನು ಉಲ್ಲಂಘನೆ ಮಾಡಿದ ಹಿನ್ನಲೆಯಲ್ಲಿ ಸರಕಾರದ ಪರ ವಶಪಡಿಸಿಕೊಂಡು ಸಹಾಯಕ ಆಯುಕ್ತರ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿರುತ್ತಾರೆ. ಅಕ್ಕಿಯನ್ನು ಟಿ.ಎ.ಪಿ.ಸಿ.ಎಂ. ಗೋದಾಮಿನಲ್ಲಿ ದಾಸ್ತಾನಿರಿಸಲಾಗಿದೆ. ಪ್ರಕರಣವು ಸಹಾಯಕ ಆಯುಕ್ತರ ನ್ಯಾಯಾಲಯದಲ್ಲಿ ಬಾಕಿ ಇದ್ದು ಇದುವರೆಗೂ ಕ್ರಮ

ದಾಸ್ತಾನು ಇರಿಸಿದ್ದ 29.51 ಕ್ವಿಂಟಾಲ್ ಅಕ್ಕಿ ಹರಾಜು Read More »

ಕರಾವಳಿ

ಮಕ್ಕಳ ಮೇಲೆ ಶೋಷಣೆ ಮತ್ತು ದೌರ್ಜನ್ಯ ಕಂಡುಬಂದಲ್ಲಿ ಈ ದೂರವಾಣಿ 1098 ಸಂಖ್ಯೆ ಗೆ ಕರೆ ಮಾಡಿ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.14.ಮಕ್ಕಳ ಶೋಷಣೆ ಮತ್ತು ದೌರ್ಜನ್ಯ ತಡೆಯುವ ನಿಟ್ಟಿನಲ್ಲಿ ಮಕ್ಕಳ ಸಹಾಯವಾಣಿ (ಚೈಲ್ಡ್ ಲೈನ್) 1098 ಕಾರ್ಯ ನಿರ್ವಹಿಸುತ್ತಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯ ಮೂಲಕ ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ಈಗಾಗಲೇ ಈ ಬಗ್ಗೆ ಮಾಹಿತಿ ಫಲಕವನ್ನು ಅಳವಡಿಸಲಾಗಿದೆ. ಪೋಷಣೆ ಅಗತ್ಯವಿರುವ, ಬಾಲಕಾರ್ಮಿಕರು, ಬಾಲ್ಯ ವಿವಾಹಕ್ಕೆ ಒಳಗಾಗಬಹುದಾದ ಹಾಗೂ ಒಳಗಾದ, ಕಾಣೆಯಾದ, ಶಾಲೆಯಿಂದ ಹೊರಗುಳಿದ, ಮಾದಕ ವ್ಯಸನಕ್ಕೆ ಒಳಗಾದ, ಲೈಂಗಿಕ ಶೋಷಣೆಗೆ ಒಳಗಾದವರು ಇಂತಹ ಪ್ರಕರಣಗಳು ಕಂಡುಬಂದಲ್ಲಿ ಸಾರ್ವಜನಿಕರು ಸಹಾಯವಾಣಿಯನ್ನು ಸಂಪರ್ಕಿಸಿ ಸಹಾಯ ಪಡೆಯಬಹುದು. ಮಕ್ಕಳ

ಮಕ್ಕಳ ಮೇಲೆ ಶೋಷಣೆ ಮತ್ತು ದೌರ್ಜನ್ಯ ಕಂಡುಬಂದಲ್ಲಿ ಈ ದೂರವಾಣಿ 1098 ಸಂಖ್ಯೆ ಗೆ ಕರೆ ಮಾಡಿ Read More »

ಕರಾವಳಿ

ಭಾರತೀಯ ಅಂಚೆ ಇಲಾಖೆ ➤ ಅಂಚೆ ನೌಕರರ ಹುದ್ದೆಗೆ ಅರ್ಜಿ ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.14.ಭಾರತೀಯ ಅಂಚೆ ಇಲಾಖೆಯು ಗ್ರಾಮೀಣ ಅಂಚೆ ನೌಕರರ ಹುದ್ದೆಗಳನ್ನು ತುಂಬಲು ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ದಿನಾಂಕವನ್ನು ಸೆಪ್ಟೆಂಬರ್ 16 ರವರೆಗೆ ವಿಸ್ತರಿಸಿದೆ. ಸಂಬಂಧಪಟ್ಟ ದಾಖಲೆಗಳನ್ನು ಅಪ್‍ಲೋಡ್ ಮಾಡಲು ಕೊನೆಯ ದಿನ ಸೆಪ್ಟೆಂಬರ್ 22 ಆಗಿದೆ. ಈ ಅವಕಾಶವನ್ನು ಎಲ್ಲಾ ಅರ್ಹ ಅಭ್ಯರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮಂಗಳೂರು ವಿಭಾಗದ ಹಿರಿಯ ಅಂಚೆ ಅಧೀಕ್ಷಕರ ಪ್ರಕಟಣೆ ತಿಳಿಸಿದೆ.

ಭಾರತೀಯ ಅಂಚೆ ಇಲಾಖೆ ➤ ಅಂಚೆ ನೌಕರರ ಹುದ್ದೆಗೆ ಅರ್ಜಿ ಅವಧಿ ವಿಸ್ತರಣೆ Read More »

ಕರಾವಳಿ

ಬಸ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ

(ನ್ಯೂಸ್ ಕಡಬ) newskadaba.com ವಿಜಯಪುರ ,ಸಪ್ಟೆಂಬರ್.13.ತೊರವಿ ಬಳಿ ಲಾರಿ ಹಾಗೂ ಕೆಎಸ್‌ಆರ್‌ಟಿಸಿ ಬಸ್ ಮುಖಾಮುಖಿ‌ ಡಿಕ್ಕಿಯಾಗಿದ್ದು, ಇಬ್ಬರು ಚಾಲಕರು ಸೇರಿ ಮೂವರು ಮೃತಪಟ್ಟಿರುವ ಘಟನೆ ನಡೆದಿದೆ. ಬಸ್ ಹಾಗೂ ಲಾರಿ ಚಾಲಕರು ಕುಳಿತ ಸೀಟುಗಳಲ್ಲಿಯೇ ಸಿಲುಕಿ ಇಬ್ಬರ ದೇಹಗಳು ಸಂಪೂರ್ಣ ನುಜ್ಜುಗುಜ್ಜಾಗಿವೆ. ಓರ್ವ ಪ್ರಯಾಣಿಕ ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭಿರ ಗಾಯವಾಗಿದೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.ಸ್ಥಳಕ್ಕೆ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.  

ಬಸ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ Read More »

ಕರಾವಳಿ

ರಸ್ತೆ ಮಧ್ಯೆ ವಿದ್ಯುತ್ ಕಂಬಕ್ಕೆ ಕಟ್ಟಿದ್ದ ಫ್ಲೆಕ್ಸ್ ಬಿದ್ದು ಟೆಕ್ಕಿ ದುರಂತ ಅಂತ್ಯ

(ನ್ಯೂಸ್ ಕಡಬ) newskadaba.com ಚೆನ್ನೈ,ಸಪ್ಟೆಂಬರ್.13. ಚೆನ್ನೈನ ಐಟಿ ಕಂಪನಿಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಾಫ್ಟ್​ವೇರ್​ ಇಂಜಿನಿಯರ್​ ಶುಭಶ್ರೀ (23) ಕೆಲಸ ಮುಗಿಸಿ ದ್ವಿಚಕ್ರ ವಾಹನದಲ್ಲಿ ಮನೆಗೆ ಮರಳುತ್ತಿದ್ದರು. ಪಲ್ಲಾವರಂ-ತೋರಿಪಕ್ಕಂ ರಾಡಿಯಲ್​ ರಸ್ತೆಯಲ್ಲಿ ತೆರಳುತ್ತಿದ್ದಾಗ ಕಂಬಕ್ಕೆ ಕಟ್ಟಿದ್ದ ಫ್ಲೆಕ್ಸ್​ ಏಕಾಏಕಿ ಶುಭಶ್ರೀ ಅವರ ಮೇಲೆ ಬಿದ್ದಿದೆ. ಈ ವೇಳೆ ಅವರು ಆಯತಪ್ಪಿ ಕೆಳಗೆ ಬಿದ್ದ ಅವರ ಮೇಲೆ ಹಿಂದಿನಿಂದ ಬರುತ್ತಿದ್ದ ಲಾರಿ ಹರಿದಿದೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಆ ವೇಳೆಗಾಗಲೇ ಅವರು ಮೃತಪಟ್ಟಿದ್ದರು.ಇಲ್ಲಿನ ಸ್ಥಳೀಯ ಎಐಎಡಿಎಂಕೆ ಪಕ್ಷದ

ರಸ್ತೆ ಮಧ್ಯೆ ವಿದ್ಯುತ್ ಕಂಬಕ್ಕೆ ಕಟ್ಟಿದ್ದ ಫ್ಲೆಕ್ಸ್ ಬಿದ್ದು ಟೆಕ್ಕಿ ದುರಂತ ಅಂತ್ಯ Read More »

ಕರಾವಳಿ

ಮನೆಛಾವಣಿ ಕುಸಿದು ಮೂವರ ಸಾವು

(ನ್ಯೂಸ್ ಕಡಬ) newskadaba.com ನವದೆಹಲಿ,ಸಪ್ಟೆಂಬರ್.13.ಪಠಾಣ್‌ ಕೋಟ್‌ ನ ಕಲಿಹಾರಿ ಗ್ರಾಮದಲ್ಲಿ ಶುಕ್ರವಾರ ಬೆಳಿಗ್ಗೆ ಮನೆಯ ಛಾವಣಿ ಕುಸಿದು ಮೂವರು ಸಾವನ್ನಪ್ಪಿ ನಾಲ್ವರು ಗಾಯಗೊಂಡ ಘಟನೆ ನಡೆದಿದೆ. ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದ್ದು, ಮನೆಯೊಳಗೆ ಇದ್ದ ಉಳಿದವರನ್ನು ರಕ್ಷಿಸಲಾಗಿದೆ.ಗಾಯಾಳುಗಳನ್ನು ಸ್ಥಳಿಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮನೆಛಾವಣಿ ಕುಸಿದು ಮೂವರ ಸಾವು Read More »

ಕರಾವಳಿ

ದ.ಕ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾದ ಸಿಂಧೂ ಬಿ ರೂಪೇಶ್ ರವರರಿಗೆಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ವತಿಯಿಂದ ಅಭಿನಂದನೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.13. ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾದ ಸಿಂಧೂ ಬಿ ರೂಪೇಶ್ ರವರನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ವತಿಯಿಂದ  ಸಂಘದ ಅಧ್ಯಕ್ಷ ಪಿ.ಕೆ. ಕೃಷ್ಣ ಅವರ ನೇತೃತ್ವದಲ್ಲಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ದ.ಕ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾದ ಸಿಂಧೂ ಬಿ ರೂಪೇಶ್ ರವರರಿಗೆಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ವತಿಯಿಂದ ಅಭಿನಂದನೆ Read More »

ಕರಾವಳಿ

ಶಿಕ್ಷಣದಿಂದ ಜೀವನ ಮೌಲ್ಯಗಳನ್ನು ಕಲಿಯುವುದು ಅಗತ್ಯ ➤ ಪ್ರೊ. ಪಿ.ವಿ.ಕೃಷ್ಣ ಭಟ್

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.13.ದಕ್ಷಿಣ ಕನ್ನಡ ಜಿಲ್ಲೆಯು ಶಿಕ್ಷಣ ಕ್ಷೇತ್ರಕ್ಕೆ ನಾಡಿಗೆ ಮತ್ತು ದೇಶಕ್ಕೆ ಬಹುದೊಡ್ಡ ಕೊಡುಗೆ ನೀಡಿದೆ. ಅದರಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಬಹುಮುಖ್ಯ ಪಾತ್ರವಿದೆ ಎಂದು ಒರಿಸ್ಸಾ ಕೇಂದ್ರೀಯ ವಿಶ್ವವಿದ್ಯಾನಿಲಯ ಕುಲಾಧಿಪತಿಗಳಾದ ಪ್ರೊ. ಪಿ.ವಿ. ಕೃಷ್ಣ ಭಟ್ ಶ್ಲಾಘಿಸಿದರು. ಗುರುವಾರ ಮಂಗಳೂರು ವಿಶ್ವವಿದ್ಯಾನಿಲಯದ 40ನೇ ಯ ಸಂಸ್ಥಾಪನಾ ದಿನಾಚರಣೆಯನ್ನು ವಿಶ್ವವಿದ್ಯಾನಿಲಯದ ಮಂಗಳ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು ಈ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯು ದೇಶದ ಬ್ಯಾಂಕಿಂಗ್ ಉದ್ಯಮ, ಶಿಕ್ಷಣ ಕ್ಷೇತ್ರ, ಸಾಂಸ್ಕøತಿಕ

ಶಿಕ್ಷಣದಿಂದ ಜೀವನ ಮೌಲ್ಯಗಳನ್ನು ಕಲಿಯುವುದು ಅಗತ್ಯ ➤ ಪ್ರೊ. ಪಿ.ವಿ.ಕೃಷ್ಣ ಭಟ್ Read More »

ಕರಾವಳಿ

ಮಂಗಳೂರು ವಿಶ್ವ ವಿದ್ಯಾನಿಲಯ ➤ ಅತಿಥಿ ಉಪನ್ಯಾಸಕರ ಆಯ್ಕೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.13.ಮಂಗಳೂರು ವಿಶ್ವ ವಿದ್ಯಾನಿಲಯ 2019-20ನೇ ಸಾಲಿಗೆ ಎಂ.ಎಡ್.(ರೆಗ್ಯುಲರ್) ಕೋರ್ಸಿಗೆ ಅತಿಥಿ ಉಪನ್ಯಾಸಕರ ಅವಶ್ಯಕತೆ ಇದೆ. ಅಂಗೀಕೃತ ವಿಶ್ವವಿದ್ಯಾನಿಲಯದಿಂದ ವಿಜ್ಞಾನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಹಾಗೂ ಎಂ.ಎಡ್./ಎಂ.ಎ. ಎಜುಕೇಶನ್ ಪದವಿ ಹೊಂದಿರುವ )ಕನಿಷ್ಠ 55% ಅಂಕಗಳೊಂದಿಗೆ) ಅರ್ಹ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆ, ವರ್ಗ, ಸೇವಾನುಭವ, ದೂರವಾಣಿ ಸಂಖ್ಯೆ ಇತ್ಯಾದಿ ಸ್ವವಿವರವುಳ್ಳ ಅರ್ಜಿ ಮತ್ತು ಶೈಕ್ಷಣಿಕ ದಾಖಲೆಗಳ ಜೆರಾಕ್ಸ್ ಪ್ರತಿ ಹಾಗೂ ಮೂಲ ದಾಖಲೆಗಳೊಂದಿಗೆ ಸೆಪ್ಟೆಂಬರ್ 19 ರಂದು ಬೆಳಿಗ್ಗೆ 11 ಗಂಟೆಗೆ ಕುಚಿಸಚಿವರ ಕಚೇರಿ,

ಮಂಗಳೂರು ವಿಶ್ವ ವಿದ್ಯಾನಿಲಯ ➤ ಅತಿಥಿ ಉಪನ್ಯಾಸಕರ ಆಯ್ಕೆಗೆ ಅರ್ಜಿ ಆಹ್ವಾನ Read More »

ಕರಾವಳಿ
Scroll to Top