karnataka

ಜಿಲ್ಲಾ ಅಭಿವೃದ್ಧಿ ಸಮನ್ವಯ ಸಮಿತಿ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.9.ಜಿಲ್ಲಾ ಅಭಿವೃದ್ಧಿ ಸಮನ್ವಯ ಸಮಿತಿ ಮತ್ತು ಉಸ್ತುವಾರಿ ಸಮಿತಿ ಸಭೆಯು ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆಯಲ್ಲಿ ಸಭೆಯನ್ನು ಆಯೋಜಿಸಲಾಗಿದೆ. ಸೆಪ್ಟಂಬರ್ 12 ರಂದು ಬೆಳಿಗ್ಗೆ 10;30 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿದೆ.

ಜಿಲ್ಲಾ ಅಭಿವೃದ್ಧಿ ಸಮನ್ವಯ ಸಮಿತಿ ಸಭೆ Read More »

ಕರಾವಳಿ

ನೂಜಿಬಾಳ್ತಿಲ ಬೆಥನಿ ವಿದ್ಯಾಸಂಸ್ಥೆಯ ಇರ್ವರು ವಿದ್ಯಾರ್ಥಿಗಳು ಜಿಲ್ಲಾಮಟ್ಟದ ಗುಡ್ಡಗಾಡು ಓಟದಲ್ಲಿ ವಿಜೇತರಾಗಿ ರಾಜ್ಯಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ನೂಜಿಬಾಳ್ತಿಲ,ಸಪ್ಟೆಂಬರ್.7.ನೂಜಿಬಾಳ್ತಿಲ ಬೆಥನಿ ವಿದ್ಯಾಸಂಸ್ಥೆಯ ಇರ್ವರು ವಿದ್ಯಾರ್ಥಿಗಳು ಜಿಲ್ಲಾಮಟ್ಟದ ಗುಡ್ಡಗಾಡು ಓಟದಲ್ಲಿ ವಿಜೇತರಾಗಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪದವಿ ಪೂರ್ವ ಶಿಕ್ಷಣ ಇಲಾಖೆ ಮಂಗಳೂರು ಹಾಗೂ ವಿಟ್ಲ ವಿಠಲ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ ಶುಕ್ರವಾರ ನಡೆದ ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳ ಗುಡ್ಡಗಾಡು ಓಟ 2019ರಲ್ಲಿ ನೂಜಿಬಾಳ್ತಿಲ ಬೆಥನಿ ಪ.ಪೂ. ಕಾಲೇಜಿನಿಂದ 11 ವಿದ್ಯಾರ್ಥಿಗಳು ಭಾಗವಹಿಸಿದ್ದು, ಮಹಿಳೆಯರ ತಂಡ ಪ್ರಶಸ್ತಿಯಲ್ಲಿ ಪ್ರಜ್ಞಾ ಡಿ.ಎಚ್. ದ್ವಿತೀಯ ಸ್ಥಾನವನ್ನು ಹಾಗೂ ಪ್ರಿನ್ಸ್ ಕೆ. 5ನೇ

ನೂಜಿಬಾಳ್ತಿಲ ಬೆಥನಿ ವಿದ್ಯಾಸಂಸ್ಥೆಯ ಇರ್ವರು ವಿದ್ಯಾರ್ಥಿಗಳು ಜಿಲ್ಲಾಮಟ್ಟದ ಗುಡ್ಡಗಾಡು ಓಟದಲ್ಲಿ ವಿಜೇತರಾಗಿ ರಾಜ್ಯಮಟ್ಟಕ್ಕೆ ಆಯ್ಕೆ Read More »

ಕರಾವಳಿ

ಸೆ.12 ಇಂದ್ರಧನುಷ್ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.7.ಮಂಗಳೂರು ನಗರ ಅಧಿಕೃತ ಭಾಷಾ ಅನುಷ್ಠಾನ ಸಮಿತಿ ಹಾಗೂ ಆಕಾಶವಾಣಿ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಹಿಂದಿ ದಿನದ ಅಂಗವಾಗಿ ಇಂದ್ರಧನುಷ್ ವಿಶೇಷ ಕಾರ್ಯಕ್ರಮವು ಸೆಪ್ಟಂಬರ್ 12 ರಂದು ಸಂಜೆ 4.30 ಗಂಟೆಗೆ ಮಂಗಳೂರು ಪುರಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ನ.ರಾ.ಕಾ.ಸ ಮಂಗಳೂರಿನ ಅಧ್ಯಕ್ಷೆ ಮತ್ತು ಕಾರ್ಪೊರೇಶನ್ ಬ್ಯಾಂಕ್‍ನ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಪಿ.ವಿ. ಭಾರತಿ ಭಾಗವಹಿಸಲಿದ್ದಾರೆ. ಆಕಾಶವಾಣಿ ಹಾಗೂ ದೂರದರ್ಶನ, ಬೆಂಗಳೂರು ದಕ್ಷಿಣ ವಲಯದ ಹೆಚ್ಚುವರಿ ಮಹಾನಿರ್ದೇಶಕರಾದ

ಸೆ.12 ಇಂದ್ರಧನುಷ್ ಕಾರ್ಯಕ್ರಮ Read More »

ಕರಾವಳಿ

ಅರಿವು ಶೈಕ್ಷಣಿಕ ಸಾಲ ಯೋಜನೆಯಡಿಯಲ್ಲಿ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.7.ಅರಿವು ಶೈಕ್ಷಣಿಕ ಸಾಲ ಯೋಜನೆಯಡಿಯಲ್ಲಿ ಸಿ.ಇ.ಟಿ ಮೂಲಕ ಪ್ರವೇಶಾತಿ ಪಡೆಯುವ ವೃತ್ತಿಪರ ಕೋರ್ಸ್‍ಗಳಲ್ಲಿ ವ್ಯಾಸಾಂಗ ಮಾಡುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಾರ್ಷಿಕ ಶೇ.2 ರ ಬಡ್ಡಿದರದಲ್ಲಿ ವಾರ್ಷಿಕವಾಗಿ ಗರಿಷ್ಟ ರೂ.1 ಲಕ್ಷಗಳವರೆಗೆ ಸಾಲ ಮಂಜೂರು ಮಾಡಲಾಗುತ್ತದೆ. 2019-20ನೇ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ/ಸಿ.ಇ.ಟಿ ಮೂಲಕ ಸೀಟು ಪಡೆದು ವೃತ್ತಿಪರ ಕೋರ್ಸ್‍ಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಹಾಗೂ ಸಿ.ಇಟಿ ಪರೀಕ್ಷೆ ಹೊರತುಪಡಿಸಿದ ಕೋರ್ಸ್‍ಗಳಲ್ಲಿ ವ್ಯಾಸಾಂಗ ಮಾಡುವ ಅರ್ಹ ವಿದ್ಯಾರ್ಥಿಗಳಿಂದ ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಸಾಲ

ಅರಿವು ಶೈಕ್ಷಣಿಕ ಸಾಲ ಯೋಜನೆಯಡಿಯಲ್ಲಿ ಅರ್ಜಿ ಆಹ್ವಾನ Read More »

ಕರಾವಳಿ

ದಕ್ಷಿಣ ಕನ್ನಡ ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘದ ವತಿಯಿಂದ ಮುಖ್ಯಮಂತ್ರಿ ನೆರೆ ಪರಿಹಾರ ನಿಧಿಗೆ ಸಹಾಯ ಹಸ್ತ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.7.ದಕ್ಷಿಣ ಕನ್ನಡ ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘದ ವತಿಯಿಂದಮುಖ್ಯಮಂತ್ರಿ ನೆರೆ ಪರಿಹಾರ ನಿಧಿಗೆ ಸಹಾಯ ಧನ ಹಸ್ತಾಂತರಿಸಲಾಯಿತು. ಸೆಪ್ಟಂಬರ್ 3 ರಂದು ಮುಖ್ಯಮಂತ್ರಿಗಳ ನೆರೆ ಪರಿಹಾರ ನಿಧಿಗೆ ರೂ 50,000/- ಡಿ.ಡಿಯನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರ ಮುಖಾಂತರ ಅಧ್ಯಕ್ಷರು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಿಂದ ಸಲ್ಲಿಸಲಾಯಿತು.

ದಕ್ಷಿಣ ಕನ್ನಡ ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘದ ವತಿಯಿಂದ ಮುಖ್ಯಮಂತ್ರಿ ನೆರೆ ಪರಿಹಾರ ನಿಧಿಗೆ ಸಹಾಯ ಹಸ್ತ Read More »

ಕರಾವಳಿ

“ಆಯುಷ್ ಪೌಷ್ಟಿಕ ಆಹಾರ ಸಪ್ತಾಹ” ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.7.ದಕ್ಷಿಣ ಕನ್ನಡ ಜಿಲ್ಲಾ ಆಯುಷ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಂಗಳೂರು ನಗರ, ಆಯುಷ್ ಫೌಂಡೇಶನ್ ದಕ್ಷಿಣ ಕನ್ನಡ ಹಾಗೂ ಬೋಳೂರು ಯುನೈಟೆಡ್ ಸ್ಪೋಟ್ರ್ಸ್ ಕ್ಲಬ್ ಇವರ ಸಹಭಾಗಿತ್ವದಲ್ಲಿ ಪೌಷ್ಟಿಕ ಆಹಾರ ಸಪ್ತಾಹ ಕಾರ್ಯಕ್ರಮ ಮಂಗಳೂರಿನ ಬೋಳೂರು ಸುಲ್ತಾನ್ ಬತ್ತೇರಿ ಅಂಗನವಾಡಿ ಕೇಂದ್ರದಲ್ಲಿ ಸೆಪ್ಟಂಬರ್ 4 ರಂದು ನಡೆಯಿತು. ಜಿಲ್ಲಾ ಆಯುಷ್ ಅಧಿಕಾರಿ ಡಾ.ಮೊಹಮ್ಮದ್ ಇಕ್ಬಾಲ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಯುಷ್ ಇಲಾಖೆಯು

“ಆಯುಷ್ ಪೌಷ್ಟಿಕ ಆಹಾರ ಸಪ್ತಾಹ” ಕಾರ್ಯಕ್ರಮ Read More »

ಕರಾವಳಿ

ಶಿಶು ಅಭಿವೃದ್ಧಿ ಯೋಜನಾಧಿಕಾರಿ, ವಿಟ್ಲ ➤ ಮಾಸಿಕ ಬಾಡಿಗೆ ಆಧಾರದಲ್ಲಿ 1ವರ್ಷದ ಅವಧಿಗೆ ವಾಹನವನ್ನು ಒದಗಿಸುವ ಬಗ್ಗೆ ಟೆಂಡರ್ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.7.ಶಿಶು ಅಭಿವೃದ್ಧಿ ಯೋಜನಾಧಿಕಾರಿ, ವಿಟ್ಲ ಇವರಿಗೆ ಅಕ್ಟೋಬರ್ 1 ರಿಂದ ಒಂದು ವರ್ಷದ ಅವಧಿಗೆ ಮಾಸಿಕ ಬಾಡಿಗೆ ಆಧಾರದಲ್ಲಿ ವಾಹನವನ್ನು ಒದಗಿಸುವ ಬಗ್ಗೆ ಟೆಂಡರ್ ಆಹ್ವಾನಿಸಲಾಗಿದೆ. ಟೆಂಡರ್ ಸಲ್ಲಿಸಲು ಸೆಪ್ಟೆಂಬರ್ 23 ಕೊನೆಯ ದಿನ.ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ, ವಿಟ್ಲ ದೂರವಾಣಿ ಸಂಖ್ಯೆ 08255-238080 ಇವರನ್ನು ಸಂಪರ್ಕಿಸಬೇಕು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ವಿಟ್ಲ ಇವರ ಪ್ರಕಟಣೆ ತಿಳಿಸಿದೆ.

ಶಿಶು ಅಭಿವೃದ್ಧಿ ಯೋಜನಾಧಿಕಾರಿ, ವಿಟ್ಲ ➤ ಮಾಸಿಕ ಬಾಡಿಗೆ ಆಧಾರದಲ್ಲಿ 1ವರ್ಷದ ಅವಧಿಗೆ ವಾಹನವನ್ನು ಒದಗಿಸುವ ಬಗ್ಗೆ ಟೆಂಡರ್ ಆಹ್ವಾನ Read More »

ಕರಾವಳಿ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು ➤ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.7.ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ 2019-20ನೇ ಸಾಲಿನ ಮಂಗಳೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಸೆಪ್ಟಂಬರ್ 14 ರಂದು ಮಂಗಳೂರು ನಗರದ ಮಂಗಳ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಹಾಗೂ ಮಹಾನಗರಪಾಲಿಕೆ, ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಸಂಘಟಿಸಲಾಗಿದೆ. ಮಂಗಳೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಿ ವೈಯಕ್ತಿಕ ಸ್ಪರ್ಧೆಗಳಲ್ಲಿ ವಿಜೇತರಾಗಿ ಪ್ರಥಮ, ಹಾಗೂ ಗುಂಪು ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು ➤ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ Read More »

ಕರಾವಳಿ

ಮಂಗಳೂರು-ಉಡುಪಿ ಹಾಗೂ ಉಡುಪಿ-ಕುಂದಾಪುರ ➤ ಕೆಎಸ್ಆರ್ಟಿಸಿ ಬಸ್ ಪಾಸು ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.7.ಕರಾರಸಾನಿಗಮವು ಪ್ರತಿದಿನ ಪ್ರಯಾಣಿಸುವ ಪ್ರಯಾಣಿಕರ ಅನುಕೂಲಕ್ಕಾಗಿ ಅತೀ ಕಡಿಮೆ ಪ್ರಯಾಣ ದರದಲ್ಲಿ ಮಂಗಳೂರು-ಉಡುಪಿ ಹಾಗೂ ಉಡುಪಿ-ಕುಂದಾಪುರ ಮಾರ್ಗಗಳಲ್ಲಿ ಕಾರ್ಯಚರಿಸುತ್ತಿರುವ ವೇಗದೂತ ಸಾರಿಗೆಗಳಲ್ಲಿ (ಪ್ರತಿದಿನ ಎರಡು ಟ್ರಿಪ್, ಹೋಗುವ ಹಾಗೂ ಬರುವ) ದೈನಂದಿನ ಮತ್ತು ಮಾಸಿಕ ಬಸ್ಸು ಪಾಸುಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಸದರಿ ದೈನಂದಿನ ಹಾಗೂ ಮಾಸಿಕ ಬಸ್ಸು ಪಾಸುಗಳ ದರಗಳು ಇಂತಿವೆ : ಮಾರ್ಗ ಮಂಗಳೂರು- ಉಡುಪಿ ದೈನಂದಿನ ಪಾಸು ರೂ.100/-, ಮಾಸಿಕ ಪಾಸು ರೂ. 2000/-, ಮಾರ್ಗ ಉಡುಪಿ-ಕುಂದಾಪುರ ದೈನಂದಿನ

ಮಂಗಳೂರು-ಉಡುಪಿ ಹಾಗೂ ಉಡುಪಿ-ಕುಂದಾಪುರ ➤ ಕೆಎಸ್ಆರ್ಟಿಸಿ ಬಸ್ ಪಾಸು ಆರಂಭ Read More »

ಕರಾವಳಿ

ಸರಸ್ವತೀ ವಿದ್ಯಾಲಯದಲ್ಲಿ ಗುರುವಂದನಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ,ಸಪ್ಟೆಂಬರ್.6.ಡಾ/ ಸರ್ವಪಲ್ಲಿ ರಾಧಾಕೃಷ್ಣ ಅವರ 131 ನೇ ಜನ್ಮ ದಿನದ ಅಂಗವಾಗಿ ಕಡಬ ತಾಲೂಕಿನ,ಶಿಕ್ಷಕ ಸೇವೆಯಿಂದ ವಿಶ್ರಾಂತಿಯಲ್ಲಿ ರುವ ಶ್ರೀಮತಿ ಸುಶೀಲ ಪಿ ಇವರನ್ನು ಸನ್ಮಾನಿಸುವ ಮೂಲಕ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ದೇಶದೆಲ್ಲಾ ವಿಜೃಂಭಣೆಯಿಂದ ಆಚರಿಸುವ ಹಬ್ಬ ಯಾವ ವ್ಯಕ್ತಿಯೇ ಆಗಲಿ ಯಾವುದೇ ಹುದ್ದೆಗೆ ಹೋದರೂ ಕೂಡ ತಮ್ಮ ಗುರುವನ್ನು ಮರೆಯಾಬಾರದು ಮತ್ತು ನಮ್ಮ ದೇಶದ ಉನ್ನತಿಗೆ ಗುರುವೇ ಸಾಕ್ಷಿ, ಶಿಕ್ಷಕರ ವೃತ್ತಿಯೇ ಶೇಷ್ಠ ವೃತ್ತಿ ಎಂದು ಶ್ರೀಮತಿ ಸುಶೀಲ

ಸರಸ್ವತೀ ವಿದ್ಯಾಲಯದಲ್ಲಿ ಗುರುವಂದನಾ ಕಾರ್ಯಕ್ರಮ Read More »

ಕರಾವಳಿ
Scroll to Top