ನೂಜಿಬಾಳ್ತಿಲ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಸಮಾರೋಪ ➤ ಉತ್ತಮ ಮಾರ್ಗದರ್ಶನದಿಂದ ಸಧೃಡ ಸಮಾಜ – ರಾಧಕೃಷ್ಣ ಬೋರ್ಕರ್
(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಆಗಸ್ಟ್.26. ನೂಜಿಬಾಳ್ತಿಲ ರೆಂಜಿಲಾಡಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ವತಿಯಿಂದ ನಡೆದ 35ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಉತ್ಸವದ ಸಮಾರೋಪ ಸಮಾರಂಭ ರವಿವಾರ ನೂಜಿಬಾಳ್ತಿಲ ಉ.ಹಿ.ಪ್ರಾ. ಶಾಲೆಯಲ್ಲಿ ನಡೆಯಿತು. ಪುತ್ತೂರು ತಾ.ಪಂ. ಅಧ್ಯಕ್ಷ ರಾಧಕೃಷ್ಣ ಬೋರ್ಕರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಯುವ ಜನತೆಯಿಂದ ಮಾಡಲಾಗದ ಕೆಲಸವಿಲ್ಲ, ಯುವ ಜನರು ಸಂಘಟನೆ ಜೊತೆಗೆ ಸಮಾಜಮುಖಿ ಕೆಲಸದಲ್ಲಿ ತೊಡಗಿಕೊಂಡು ಸಮಾಜದ, ಬಡಜನರ ಅಭಿವೃದ್ಧಿಗೆ ತೊಡಗಿಸಿಕೊಳ್ಳಬೇಕಾಗಿದೆ. ಮಕ್ಕಳಾಗಿರುವಾಗಲೇ ಅವರಿಗೆ ಸರಿಯಾದ ಮಾರ್ಗದರ್ಶನ ದೊರೆತಲ್ಲಿ ಯಾವುದೇ […]






