ಡೆಂಗ್ಯು ನಿಯಂತ್ರಣಕ್ಕೆ ಕಾರ್ಯಾಚರಣೆ ತೀವ್ರಗೊಳಿಸಲು ಸೂಚನೆ ➤ ಉಸ್ತುವಾರಿ ಕಾರ್ಯದರ್ಶಿ: ಬಿ.ಎಚ್. ಅನಿಲ್ ಕುಮಾರ್
(ನ್ಯೂಸ್ ಕಡಬ) newskadaba.com ಮಂಗಳೂರು, ಜು.24.ಜಿಲ್ಲೆಯಲ್ಲಿ ಕಂಡು ಬಂದಿರುವ ಡೆಂಗ್ಯು ರೋಗ ನಿಯಂತ್ರಣಕ್ಕೆ ಅಗತ್ಯ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಬಿ.ಎಚ್. ಅನಿಲ್ ಕುಮಾರ್ ಸೂಚಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಈಗಾಗಲೇ ನಡೆಸುತ್ತಿರುವ ಚಟುವಟಿಕೆಗಳನ್ನು ತೀವ್ರಗೊಳಿಸಬೇಕು. ಇದರಲ್ಲಿ ಯಾವುದೇ ಲೋಪವನ್ನು ಸಹಿಸಲಾಗದು. ಆರೋಗ್ಯ ಇಲಾಖೆಯು […]



