karnataka

ಸ್ವಿಮ್ಮಿಂಗ್ ಫೆಡರೇಶನ್ ಆಫ್ ಇಂಡಿಯಾ ➤ ಈಜು ಸ್ಪರ್ಧೆಯಲ್ಲಿ ಉತ್ತಮ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಶುಭಹಾರೈಕೆ.

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.8.ಸ್ವಿಮ್ಮಿಂಗ್ ಫೆಡರೇಶನ್ ಆಫ್ ಇಂಡಿಯಾ (SFI) ಸಂಸ್ಥೆ ಆಶ್ರಯದಲ್ಲಿ ಜೂನ್  2019ರಂದು ಸರ್ದಾರ್ ವಲ್ಲಭಬಾಯಿ ಪಟೇಲ್ ಈಜು ಸಂಕೀರ್ಣ, ಇದರ ವತಿಯಿಂದ ಈಜು ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ರಾಜ್‍ಕೋಟ್, ಗುಜರಾತ್ ಇಲ್ಲಿ ನಡೆದ 46ನೇ ರಾಷ್ಟ್ರೀಯ ಜೂನಿಯರ್ ಹಾಗೂ 36ನೇ ಸಬ್ ಜೂನಿಯರ್ ಈಜು ಚಾಂಪಿಯನ್‍ಶಿಪ್-2019ನ ಬಾಲಕರ ಹಾಗೂ ಬಾಲಕಿಯರ ವಿಭಾಗದಲ್ಲಿ 4 x 50 ಮೀಟರ್ ಫ್ರೀ ಸ್ಟ್ರೈಲ್ ರೀಲೆಯಲ್ಲಿ ಮಂಗಳೂರಿನ ಶ್ರೀ ವಫೀ ಅಬ್ದುಲ್ ಹಕೀಂ ಚಿನ್ನದ ಪದಕ ಹಾಗೂ […]

ಸ್ವಿಮ್ಮಿಂಗ್ ಫೆಡರೇಶನ್ ಆಫ್ ಇಂಡಿಯಾ ➤ ಈಜು ಸ್ಪರ್ಧೆಯಲ್ಲಿ ಉತ್ತಮ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಶುಭಹಾರೈಕೆ. Read More »

ಕರಾವಳಿ

ಕಾಣೆಯಾಗಿದ್ದಾರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.8.ಬೈಕಂಪಾಡಿಯ ಗ್ರೂಪ್ ಓವರ್ ಕಂಪೆನಿಯಲ್ಲಿ ಎಲೆಕ್ಟ್ರೀಕಲ್ ಕೆಲಸ ಮಾಡಿಕೊಂಡಿದ್ದ, ಬೆಳಗಾವಿ ಜಿಲ್ಲೆಯ ಬಸವರಾಜ್(32) ಎಂಬಾತನು ಜುಲೈ 4 ರಿಂದ ಕಾಣೆಯಾಗಿದು,್ದ ಪ್ರಕರಣ ಪಣಂಬೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಮೂಲತ: ಸವದತ್ತಿ ತಾಲೂಕಿನ ಮೂರುಗೋಡು ಹೋಬಳಿಯ ಬಸವರಾಜ್, ಜೀನ್ಸ್ ಪ್ಯಾಂಟ್ ಮತ್ತು ಸಾಧಾರಣ ಶರ್ಟ್ ಧರಿಸಿರುತ್ತಾರೆ. ಎತ್ತರ 150 ಸೆಂ.ಮಿ, ಮಾತನಾಡುವ ಭಾಷೆ ಕನ್ನಡ ಬಿಳಿ ಮೈಬಣ್ಣ, ಕಪ್ಪು ಕೂದಲು. ಈ ಚಹರೆಯುಳ್ಳ ವ್ಯಕ್ತಿಯ ಬಗ್ಗೆ ಪತ್ತೆಯಾದಲ್ಲಿ ಪಣಂಬೂರು ಪೊಲೀಸ್ ಠಾಣಾ ದೂರವಾಣಿ

ಕಾಣೆಯಾಗಿದ್ದಾರೆ Read More »

ಕರಾವಳಿ

ವಿಶ್ವವಿದ್ಯಾನಿಲಯ ಮಟ್ಟದ ಆಯ್ಕೆ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.8.ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾನಿಲಯ ಇವರ ಸಂಯುಕ್ತ ಆಶ್ರಯದೊಂದಿಗೆ ವಿಶ್ವವಿದ್ಯಾನಿಲಯ ಮಟ್ಟದ ಆಯ್ಕೆ ಶಿಬಿರ ಹಾಗೂ ನಾಯಕತ್ವ ಶಿಬಿರ ನಡೆಯಲಿದೆ. ಜುಲೈ 10 ರಿಂದ ಜುಲೈ 16 ರವರೆಗೆ ಪುರುಷರ ವಸತಿನಿಲಯ, ಮಂಗಳೂರು ವಿಶ್ವವಿದ್ಯಾನಿಲಯ ಆವರಣ ಮಂಗಳಗಂಗೋತ್ರಿ ಇಲ್ಲಿ ನಡೆಯಲಿದೆ.ಶಿಬಿರದ ಉದ್ಘಾಟನೆ ಜುಲೈ 10 ರಂದು ಸಂಜೆ 3.30 ಗಂಟೆಗೆ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳಾ ಪ್ರೊ ಪಿ.ಎಸ್ ಯಡಪಡಿತ್ತಾಯ ನೆರವೇರಿಸಲಿದ್ದಾರೆ.ಸಮಾರೋಪ ಕಾರ್ಯಕ್ರಮ ಜುಲೈ 16

ವಿಶ್ವವಿದ್ಯಾನಿಲಯ ಮಟ್ಟದ ಆಯ್ಕೆ ಶಿಬಿರ Read More »

ಕರಾವಳಿ

ರಾಜ್ಯಶಾಸ್ತ್ರ ಉಪನ್ಯಾಸಕರ ಕಾರ್ಯಾಗಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.8.ಮಂಗಳೂರು ವಿಶ್ವವಿದ್ಯಾನಿಲಯ ರಾಜಕೀಯ ಶಾಸ್ತ್ರ ಶಿಕ್ಷಕರ ಸಂಘ ಹಾಗೂ ರಾಜಕೀಯ ಶಾಸ್ತ್ರ ವಿಭಾಗ ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಇವರ ಸಂಯುಕ್ತ ಆಶ್ರಯದೊಂದಿಗೆ  ರಾಜ್ಯಶಾಸ್ತ್ರ ಉಪನ್ಯಾಸಕರ ಒಂದು ದಿನದ ಕಾರ್ಯಾಗಾರ ನಡೆಯಲಿದೆ. ಸಿಬಿಸಿಎಸ್ ಮತ್ತು ರಾಜಕೀಯ ಶಾಸ್ತ್ರದ ಹೊಸ ಪಠ್ಯಕ್ರಮಗಳ ಕುರಿತು ರಾಜ್ಯಶಾಸ್ತ್ರ ಉಪನ್ಯಾಸಕರ ಒಂದು ದಿನದ ಕಾರ್ಯಾಗಾರ ಜುಲೈ 13 ರಂದು ಬೆಳಿಗ್ಗೆ 10 ಗಂಟೆಗೆ ನಗರದ ವಿಶ್ವವಿದ್ಯಾನಿಲಯ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ ಎಚಿದು ಸಂಘದ ಅಧ್ಯಕ್ಷ ತೋಮಸ್ ಜಿ.ಎಂ. ಪ್ರಕಟಣೆಯಲ್ಲಿ

ರಾಜ್ಯಶಾಸ್ತ್ರ ಉಪನ್ಯಾಸಕರ ಕಾರ್ಯಾಗಾರ Read More »

ಕರಾವಳಿ

ಕಾಲೇಜು ವಿದ್ಯಾರ್ಥಿಗಳ ಮೇಲೆ ನಡೆಯುವ ದೌರ್ಜನ್ಯವನ್ನು ತಡೆಯಲು ಕ್ರಮ ➤ ಜು. 18 ರಂದು ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.8.ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದಿರುವ ಶಾಲಾ / ಕಾಲೇಜು ವಿದ್ಯಾರ್ಥಿಯರ ದೌರ್ಜನ್ಯ ಪ್ರಕರಣಗಳು ಅಲ್ಲಲ್ಲಿ ವರದಿಯಾಗುತ್ತಿದ್ದು, ಅದನ್ನು ತಡೆಗಟ್ಟಲು ಸುರಕ್ಷತೆಯ ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲು ಸಭೆಯನ್ನು ಆಯೋಜಿಸಲಾಗಿದೆ. ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಲ್ಲಿ ಮಹಿಳೆಯರ ಬಗ್ಗೆ ಗೌರವ ಮತ್ತು ಉತ್ತಮ ಪ್ರಜ್ಞೆ ಬೆಳೆಸುವ ವಿಚಾರದಲ್ಲಿ ಶಾಲಾ ಮುಖ್ಯಸ್ಥರು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಹಾಗೂ ಶಾಲಾ ಕಾಲೇಜುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ / ಶಾಲಾ ಕಾಲೇಜು

ಕಾಲೇಜು ವಿದ್ಯಾರ್ಥಿಗಳ ಮೇಲೆ ನಡೆಯುವ ದೌರ್ಜನ್ಯವನ್ನು ತಡೆಯಲು ಕ್ರಮ ➤ ಜು. 18 ರಂದು ಸಭೆ Read More »

ಕರಾವಳಿ

ಕುಪ್ಪೆಪದವು ಗ್ರಾಮ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.8.ಮಂಗಳೂರು ತಾಲೂಕಿನ ಕುಪ್ಪೆಪದವು ಗ್ರಾಮ ಪಂಚಾಯತ್ ವ್ಯಾಪ್ತಿಯ 2019-20ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯನ್ನು ಆಯೋಜಿಸಲಾಗಿದೆ. ಆದ್ಜುದರಿಂದ ಈ ಸಭೆಯನ್ನು ಜುಲೈ  9 ರಂದು ಬೆಳಿಗ್ಗೆ 11 ಗಂಟೆಗೆ ರಾಜೀವ ಗಾಂಧಿ ಸೇವಾ ಕೇಂದ್ರ ಕುಪ್ಪೆಪದವು ಇಲ್ಲಿ ನಡೆಯಲಿದೆ.

ಕುಪ್ಪೆಪದವು ಗ್ರಾಮ ಸಭೆ Read More »

ಕರಾವಳಿ

ತ್ರೈಮಾಸಿಕ ಕೆಡಿಪಿ ಸಭೆ 11ರಂದು

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.8.2019-20 ನೇ ಸಾಲಿನ ಪ್ರಥಮ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಶ ಕಾರ್ಯಕ್ರಮಗಳು ಸೇರಿದಂತೆ) ಸಮೀಕ್ಷಾ ಸಭೆಯನ್ನು ಆಯೋಜಿಸಲಾಗಿದೆ. ಈ ಸಭೆಯು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಜುಲೈ 11 ರಂದು ಬೆಳಗ್ಗೆ 11 ಗಂಟೆಗೆ ನಡೆಯಲಿದೆ.

ತ್ರೈಮಾಸಿಕ ಕೆಡಿಪಿ ಸಭೆ 11ರಂದು Read More »

ಕರಾವಳಿ

ಉದ್ಯೋಗಸ್ಥ ಮಹಿಳೆಯರ ಹಾಸ್ಟೆಲ್‍ಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.8.ಮಂಗಳೂರು ವಿಶ್ವವಿದ್ಯಾನಿಲಯದ ಆವರಣ ಮಂಗಳಗಂಗೋತ್ರಿಯಲ್ಲಿರುವ ಉದ್ಯೋಗಸ್ಥ ಮಹಿಳೆಯರ ವಸತಿನಿಲಯಕ್ಕೆ ಪ್ರವೇಶ ಪಡೆಯಲು ಉದ್ಯೋಗಸ್ಥ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರವೇಶ ಪಡೆಯಲು ಹೊಂದಿರಬೇಕಾದ ಅರ್ಹತೆ ಹಾಗೂ ಪ್ರವೇಶ ಶುಲ್ಕಕ್ಕೆ ಸಂಬಂಧಿಸಿದ ಮಾಹಿತಿಯನ್ನು ವಸತಿನಿಲಯದ ಕಚೇರಿ ದೂರವಾಣಿ ಸಂಖ್ಯೆ: 0824-2287642 ಇಲ್ಲಿಂದ ಪೂರ್ವಾಹ್ನ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಪಡೆಯಬಹುದು ಎಂದು ನಿಲಯಪಾಲಕರು ಉದ್ಯೋಗಸ್ಥ ಮಹಿಳೆಯರ ವಸತಿನಿಲಯ ಮಂಗಳಗಂಗೋತ್ರಿ ಇವರ ಪ್ರಕಟಣೆ ತಿಳಿಸಿದೆ.

ಉದ್ಯೋಗಸ್ಥ ಮಹಿಳೆಯರ ಹಾಸ್ಟೆಲ್‍ಗೆ ಅರ್ಜಿ ಆಹ್ವಾನ Read More »

ಕರಾವಳಿ

ತಾಲೂಕು ಮಟ್ಟದ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತೆಯರ ➤ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.8.ಮಂಗಳೂರು ಗ್ರಾಮಾಂತರ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ತಾಲೂಕು ಮಟ್ಟದ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತೆಯರ (ಎಂ.ಆರ್.ಡಬ್ಲ್ಯೂ) ಹುದ್ದೆಗೆ ಅರ್ಜಿ ಆಹ್ವಾನಿಸಲಾದೆ. ಅರ್ಜಿದಾರರು ಪದವೀಧರರಾಗಿದು, ವಿಕಲಚೇತನ ವ್ಯಕ್ತಿಯಾಗಿರಬೇಕು. ಸ್ಥಳೀಯ ತಾಲೂಕು ಪಂಚಾಯತ್ ವ್ಯಾಪ್ತಿಯಲ್ಲಿ ವಾಸಿಸುತ್ತಿರಬೇಕು. ವಯೋಮಿತಿ 18-45 ವರ್ಷದ ಒಳಗಿನ ಅರ್ಹ ಅಭ್ಯರ್ಥಿಗಳು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಮಂಗಳೂರು (ಗ್ರಾ), ಮೂಡುಶೆಡ್ಡೆ, ವಾಮಂಜೂರು ಮಂಗಳೂರು-575028 ಈ ಕಚೇರಿಯಿಂದ ಅರ್ಜಿ ನಮೂನೆಯನ್ನು ಪಡೆದು ಜುಲೈ 31 ರೊಳಗೆ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ

ತಾಲೂಕು ಮಟ್ಟದ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತೆಯರ ➤ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ➤ ಆಕ್ಷೇಪಣೆಗೆ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.8.ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಮೊದಲ ಹಂತದ ಫಲಾನುಭವಿಗಳ ಪಟ್ಟಿ ಆಯಾ ಗ್ರಾಮ ಪಂಚಾಯತ್, ರೈತ ಸಂಪರ್ಕ ಕೇಂದ್ರಗಳಲ್ಲಿ ಪ್ರಕಟಿಸಲಾಗಿದೆ. ಪಟ್ಟಿಯಲ್ಲಿ ಆಕ್ಷೇಪಣೆಗಳಿದ್ದರೆ ಅಥವಾ ಯಾವುದಾದರೂ ಷರತ್ತು, ನಿಬಂಧನೆಗಳ ಉಲ್ಲಂಘನೆ ಕಂಡು ಬಂದಲ್ಲಿ ಜುಲೈ 8 ರೊಳಗೆ ರೈತರು ಆಯಾ ರೈತ ಸಂಪರ್ಕ ಕೇಂದ್ರದಲ್ಲಿ ಅಥವಾ ಇ-ಮೇಲ್  karhelp-deskpmk@gmail.com ಮೂಲಕವೂ ಸಲ್ಲಿಸಬಹುದು ಎಂದು ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ➤ ಆಕ್ಷೇಪಣೆಗೆ ಆಹ್ವಾನ Read More »

ಕರಾವಳಿ
Scroll to Top