karnataka

ಕನ್ನಡ ಪುಸ್ತಕ ಪ್ರಾಧಿಕಾರ ➤ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನ

 (ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.17.ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2018 ನೇ ಸಾಲಿನ ಯುವಬರಹಗಾರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿದಾರರು 18 ರಿಂದ 35 ವರ್ಷದ ಒಳಗಿನವರಾಗಿರಬೇಕು. ಸ್ವ-ವಿವರದೊಂದಿಗೆ ಎಸ್.ಎಸ್.ಎಲ್.ಸಿ ಪ್ರಮಾಣ ಪತ್ರದ ಪ್ರತಿ, ಜನ್ಮದಾಖಲಾತಿ ಪ್ರತಿಯನ್ನು ಸಲ್ಲಿಸಬೇಕು. ಪ್ರಸ್ತುತ ಸಲ್ಲಿಸಲ್ಪಡುತ್ತಿರುವ ಕೃತಿಯು ತಮ್ಮ ಚೊಚ್ಚಲ ಕೃತಿಯಾಗಿದ್ದು ಎಲ್ಲಿಯೂ ಪ್ರಕಟವಾಗಿಲ್ಲವೆಂದು ದೃಢೀಕರಣ ಪತ್ರ ನೀಡಬೇಕು. ಅರ್ಜಿಯನ್ನು ಜುಲೈ 6 ರೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ […]

ಕನ್ನಡ ಪುಸ್ತಕ ಪ್ರಾಧಿಕಾರ ➤ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನ Read More »

ಕರಾವಳಿ

ಪುಸ್ತಕ ಬಹುಮಾನಕ್ಕೆ ಲೇಖಕರಿಂದ ಅರ್ಜಿ ಆಹ್ವಾನ

 (ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.17.ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2018ರಲ್ಲಿ ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ, ಅವಯಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿ, ಕಲಾವಿದರು/ಲೇಖಕರು/ಪ್ರಕಾಶಕರಿಗೆ ಕನ್ನಡ ಪುಸ್ತಕ ಸೊಗಸು 2018 (ಪ್ರಥಮ, ದ್ವಿತೀಯ, ತೃತೀಯ, ಮಕ್ಕಳ ಪುಸ್ತಕ, ಪುದ್ರಣ ಸೊಗಸು, ಮುಖಪುಟ ಚಿತ್ರ ವಿನ್ಯಾಸದ ಪ್ರಥಮ, ಮುಖಪುಟ ಚಿತ್ರ ಕಲೆಯ ದ್ವಿತೀಯ) ಬಹುಮಾನಗಳನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಸ್ವಯಂ ಅರ್ಜಿ ಸಲ್ಲಿಸಬಹುದು. ಪುಸ್ತಕದ ಹೆಸರು, ಲೇಖಕರ ಹೆಸರು, ಪ್ರಕಟವಾದ ವರ್ಷ, ಪ್ರಕಾಶಕರ ಹೆಸರು, ಮುದ್ರಣಾಲಯದ

ಪುಸ್ತಕ ಬಹುಮಾನಕ್ಕೆ ಲೇಖಕರಿಂದ ಅರ್ಜಿ ಆಹ್ವಾನ Read More »

ಕರಾವಳಿ

ಅಂಗನವಾಡಿ ನೇಮಕಾತಿಗೆ ಅರ್ಜಿ ಆಹ್ವಾನ

 (ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.17.ದಕ್ಷಿಣ ಕನ್ನಡ ಜಿಲ್ಲೆಯ 7 ಶಿಶು ಅಭಿವೃದ್ಧಿ ಯೋಜನೆಗಳಲ್ಲಿ ಖಾಲಿ ಇರುವ 25 ಅಂಗನವಾಡಿ ಕಾರ್ಯಕರ್ತೆ ಹಾಗೂ 66 ಅಂಗನವಾಡಿ ಸಹಾಯಕಿ ಹುದ್ದೆಗಳನ್ನು ಭರ್ತಿ ಮಾಡಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ( ವೆಬ್ ಸೈಟ್ ವಿಳಾಸ:www.anganwadirecruit.kar.nic.in )ಅರ್ಜಿ ಸಲ್ಲಿಸಲು ಜುಲೈ 15 ಕೊನೆಯ ದಿನ ಆಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ತಾಲೂಕು ಶಿಶು ಅಭಿವೃದ್ಧಿ ಯೋಜನಾ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಉಪನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ

ಅಂಗನವಾಡಿ ನೇಮಕಾತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಹಿಂದುಳಿದ ವರ್ಗಗಳ ಹಾಸ್ಟೆಲ್‍ಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.17.ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕ ಮತ್ತು ಬಾಲಕಿಯರ ಸಾಮಾನ್ಯ ಮತ್ತು ಮಾದರಿ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ./ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2019-20ನೇ ಸಾಲಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮಿತಿ – ಪ್ರವರ್ಗ-1, ಎಸ್.ಸಿ. & ಎಸ್.ಟಿ ರೂ. 2.50 ಲಕ್ಷ ಪ್ರವರ್ಗ-2ಎ, 2ಬಿ, 3ಎ, 3ಬಿ

ಹಿಂದುಳಿದ ವರ್ಗಗಳ ಹಾಸ್ಟೆಲ್‍ಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಜೂನ್ 21 ರಂದು ವಿಶ್ವಯೋಗ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.17.ಜಿಲ್ಲಾಡಳಿತ ವತಿಯಿಂದ ವಿಶ್ವಯೋಗ ದಿನಾಚರಣೆ ಕಾರ್ಯಕ್ರಮ ಜೂನ್ 21 ರಂದು ನಡೆಯಲಿದೆ.ಈ ಕುರಿತು ಪೂರ್ವಭಾವಿ ಸಭೆ ಶನಿವಾರ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಜಿಲ್ಲಾಧಿಕಾರಿಗಳು ಮಾತನಾಡಿ, ವಿಶ್ವಯೋಗ ದಿನಾಚರಣೆ ಕಾರ್ಯಕ್ರಮವನ್ನು ಯೋಜನಾಬದ್ಧವಾಗಿ ನಡೆಸಿ ಯಶಸ್ವಿಗೊಳಿಸಬೇಕು. ಎಲ್ಲಾ ಸಂಘ ಸಂಸ್ಥೆಗಳನ್ನು ಇದರಲ್ಲಿ ತೊಡಗಿಸಿಕೊಳ್ಳಲು ಕ್ರಮ ಕೈಗೊಳ್ಳಬೇಕು ಎಂದರು. ತಾಲೂಕು ಮಟ್ಟದಲ್ಲಿಯೂ ಆಯುಷ್ ಕಾಲೇಜುಗಳ ಸಹಕಾರದೊಂದಿಗೆ ಯೋಗ ದಿನಾಚರಣೆ ಕಾರ್ಯಕ್ರಮ ನಡೆಸಲು ಅವರು ಸೂಚಿಸಿದರು. ಎಲ್ಲಾ ಇಲಾಖಾಧಿಕಾರಿಗಳು ಯೋಗ ದಿನಾಚರಣೆಯಲ್ಲಿ ಕಡ್ಡಾಯವಾಗಿ

ಜೂನ್ 21 ರಂದು ವಿಶ್ವಯೋಗ ದಿನಾಚರಣೆ Read More »

ಕರಾವಳಿ

ಸಮುದ್ರ ತೀರದಲ್ಲಿ ಕರ್ತವ್ಯನರ್ವಹಿಸಲು ಸಜ್ಜಾಗಿರುವ ಗೃಹ ರಕ್ಷಕದಳ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.15.ಮಳೆಗಾಲದಲ್ಲಿ ಸಂಭವಿಸಬಹುದಾದ ಅನಾಹುತಗಳ ಬಗ್ಗೆ ಜನರಿಗೆ ಮುನ್ನೆಚ್ಚರಿಕೆ ನೀಡುವುದರೊಂದಿಗೆ ಜೀವರಕ್ಷಣೆಗಾಗಿ ಜಿಲ್ಲೆಯ 60 ಮಂದಿ ಗೃಹ ರಕ್ಷಕರು ಕಾರ್ಯೋನ್ಮುಖರಾಗಿದ್ದಾರೆ. ಪಣಂಬೂರು, ತಣ್ಣೀರು ಬಾವಿ, ಉಳ‍್ಳಾಲ ಬೀಚ್ಗಳಲ್ಲಿ ಈಜಾಡಲು ಇಳಿದು ಜೀವಕ್ಕೇ ಕುತ್ತು ತಂದುಕೊಳ್ಳುವಂತಹ ಸನ್ನಿವೇಶಗಳು ನಿರ್ಮಾಣವಾಗುತ್ತದೆ. ಈಗಾಗಲೇ ಕಡಲಬ್ಬರವೂ ಜಾಸ್ತಿಯಾಗಿದ್ದು, ಆಗಮಿಸುವ ಪ್ರವಾಸಿಗರಿಗೆ ಸಮುದ್ರದಲ್ಲಿನ ಅಪಾಯದ ಮುನ್ಸೂಚನೆ ಇರುವುದಿಲ್ಲ. ಜಿಲ್ಲಾಡಳಿತದಿಂದ ಟೆಂಟ್‌, ಮೈಕ್‌ ವ್ಯವಸ್ಥೆ, ರೈನ್‌ ಕೋಟ್‌, ಚಯರ್‌ ಮತ್ತು ಬೋಟ್‌ಗಳನ್ನು ಗೃಹರಕ್ಷಕರಿಗೆ ನೀಡಲಾಗುತ್ತದೆ. ಜಿಲ್ಲಾಧಿಕಾರಿ ಶಶಿಕಾಂತ್‌ ಸೆಂಥಿಲ್‌ ಅವರ ಸಲಹೆ ಮೇರೆಗೆ

ಸಮುದ್ರ ತೀರದಲ್ಲಿ ಕರ್ತವ್ಯನರ್ವಹಿಸಲು ಸಜ್ಜಾಗಿರುವ ಗೃಹ ರಕ್ಷಕದಳ Read More »

ಕರಾವಳಿ

ಕಲ್ಲುಗುಡ್ಡೆ-ಕಡಬ ಮಧ್ಯೆ ದಿನದ ಮೂರು ಹೊತ್ತು ಬಸ್ಸಿಗಾಗಿ ಸಾರ್ವಜನಿಕರ ಆಗ್ರಹ

(ನ್ಯೂಸ್ ಕಡಬ) newskadaba.com ಕಡಬ, ಜೂನ್.15.ನೂತನ ತಾಲೂಕು ಕೇಂದ್ರ ಕಡಬದಿಂದ ಕೇವಲ 10 ಕಿ.ಮೀ. ದೂರದಲ್ಲಿರುವ ಕಲ್ಲುಗುಡ್ಡೆಗೆ ಇಂದಿಗೂ ಸಾರಿಗೆ ವ್ಯವಸ್ಥೆಯಲ್ಲಿ ಹಿಂದುಳಿದಿದೆ. ಈ ಭಾಗದ ಜನತೆ ಇಂದಿಗೂ ಕಡಬ ಹಾಗೂ ಇತರ ಪ್ರದೇಶಗಳಿಗೆ ಪ್ರಯಾಣಿಸಲು ಖಾಸಗಿ ವಾಹನಗಳನ್ನೇ ಬಳಸುತ್ತಿದ್ದಾರೆ. ಸರಿಯಾದ ಸಾರಿಗೆ ವ್ಯವಸ್ಥೆ ಇಲ್ಲದೆ ಸಾರ್ವಜನಿಕರು, ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಲ್ಲಿಂದ ಕಡಬ ಹಾಗೂ ಇತರೆಡೆಗೆ ನಿತ್ಯ ಪ್ರಯಾ ಣಿಸುವವರು ಖಾಸಗಿ ವಾಹನವನ್ನೇ ಅವಲಂಭಿಸಬೇಕಾಗಿದ್ದು, ಕೆಲವೊಮ್ಮೆ ನಿಗದಿತ ಸಮಯಕ್ಕೆ ತಲುಪಲಾಗದೇ ತೊಂದರೆ ಅನು ಭವಿಸುತ್ತಿದ್ದಾರೆ. ಶಾಲಾ

ಕಲ್ಲುಗುಡ್ಡೆ-ಕಡಬ ಮಧ್ಯೆ ದಿನದ ಮೂರು ಹೊತ್ತು ಬಸ್ಸಿಗಾಗಿ ಸಾರ್ವಜನಿಕರ ಆಗ್ರಹ Read More »

ಕರಾವಳಿ

ದ.ಕ ಜಿಲ್ಲಾ ವಾರ್ತಾಧಿಕಾರಿ ರೋಹಿಣಿ ವರ್ಗಾವಣೆ ➤ಬಿ.ಎ. ಖಾದರ್ ಶಾ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.15.ದಕ್ಷಿಣ ಕನ್ನಡ ಜಿಲ್ಲಾ ವಾರ್ತಾಧಿಕಾರಿ ರೋಹಿಣಿ ಅವರನ್ನು ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಕಾರ್ಯದರ್ಶಿಯನ್ನಾಗಿ ಬೆಂಗಳೂರಿಗೆ ವಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಉಡುಪಿ ಜಿಲ್ಲಾ ವಾರ್ತಾಧಿಕಾರಿ ಬಿ.ಎ. ಖಾದರ್ ಶಾ ಅವರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾರವನ್ನು ಹೆಚ್ಚುವರಿಯಾಗಿ ವಹಿಸಲಾಗಿದ್ದು, ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು.

ದ.ಕ ಜಿಲ್ಲಾ ವಾರ್ತಾಧಿಕಾರಿ ರೋಹಿಣಿ ವರ್ಗಾವಣೆ ➤ಬಿ.ಎ. ಖಾದರ್ ಶಾ ಅಧಿಕಾರ ಸ್ವೀಕಾರ Read More »

ಕರಾವಳಿ

ಸಾರ್ವಜನಿಕ ಆಕ್ಷೇಪಣೆ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.15.ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ಉಪನೋಂದಣಾ ಕಚೇರಿ ನಡ್ಸಾಲು ಗ್ರಾಮದಲ್ಲಿ ಹೊಸದಾಗಿ ನಿರ್ಮಿತವಾಗಿರುವ ಸಾಚಿ ರಾಯಲ್ ಅಪಾರ್ಟ್‍ಮೆಂಟ್‍ಗೆ ಕೇಂದ್ರ ಸ್ಥಿರಾಸ್ತಿ ಮಾರುಕಟ್ಟೆ ದರ ನಿರ್ಧರಣಾ ಸಮಿತಿಯು ರೂ 22000/ ದರ ನಿಗದಿ ಪಡಿಸಲು ತಾತ್ವಿಕ ಅನುಮೋದನೆ ನೀಡಿದ್ದು ಇದಕ್ಕೆ ನಿಯಮಾವಳಿ ಅನ್ವಯ ಸಾರ್ವಜನಿಕರ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ. ಪರಿಶೀಲನೆಗಾಗಿ ತಾಲೂಕು ಕಚೇರಿ ಮಂಗಳೂರು, ಮಹಾನಗರ ಪಾಲಿಕೆ ಸುರತ್ಕಲ್, ವಿಶೇಷ ತಹಶೀಲ್ದಾರರ ಕಚೇರಿ ಕಾಪು ಇಲ್ಲಿ ಸಾರ್ವಜನಿಕರ ಅವಗಾಹನೆಗಾಗಿ ಜೂನ್ 13 ರಂದು ಪ್ರಕಟಿಸಲಾಗಿದೆ.

ಸಾರ್ವಜನಿಕ ಆಕ್ಷೇಪಣೆ ಆಹ್ವಾನ Read More »

ಕರಾವಳಿ

ಕೆ ಎಸ್‍ ಆರ್ ಟಿ ಸಿ ಹಳೇ ಬಸ್ ಪಾಸ್ ತೋರಿಸಿ ಪ್ರಯಾಣಕ್ಕೆ ಅವಕಾಶ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.15.2019-20ನೇ ಶೈಕ್ಷಣಿಕ ವರ್ಷದಲ್ಲಿ ತರಗತಿಗಳು ಪ್ರಾರಂಭವಾಗಿರುವುದರಿಂದ, ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗಲು ಅನುಕೂಲವಾಗುವಂತೆ, ಶಾಲೆ ಹಾಗೂ ಪಿಯುಸಿ ವಿದ್ಯಾರ್ಥಿಗಳು, 2018-19 ನೇ ಸಾಲಿನಲ್ಲಿ ವಿತರಣೆಯಾಗಿರುವ ವಿದ್ಯಾರ್ಥಿ ಪಾಸುಗಳನ್ನು ತೋರಿಸಿ, ಜೂನ್ 30 ರವರೆಗೆ ಪ್ರಯಾಣಿಸಲು ಅವಕಾಶ ನೀಡಲಾಗಿದೆ. ವಿದ್ಯಾರ್ಥಿಗಳು 2018-19 ನೇ ಸಾಲಿನ ವಿದ್ಯಾರ್ಥಿ ಪಾಸಿನ ಜೊತೆಗೆ ಪ್ರಸಕ್ತ ಸಾಲಿನ ಭೋಧನಾ ಶುಲ್ಕ ರಸೀದಿ ಅಥವಾ ಶಾಲಾ/ಕಾಲೇಜಿನ ಗುರುತಿನ ಚೀಟಿಯನ್ನು ತೋರಿಸಿ ಪಾಸಿನಲ್ಲಿ ನಮೂದಿಸಿರುವ ಮಾರ್ಗದಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿರುತ್ತದೆ.ವಿದ್ಯಾರ್ಥಿಗಳು ಮಾಧ್ಯಮಿಕ

ಕೆ ಎಸ್‍ ಆರ್ ಟಿ ಸಿ ಹಳೇ ಬಸ್ ಪಾಸ್ ತೋರಿಸಿ ಪ್ರಯಾಣಕ್ಕೆ ಅವಕಾಶ Read More »

ಕರಾವಳಿ
Scroll to Top