karnataka

ಮಂಗಳೂರು: ಮಾನಸ ಅಮ್ಯೂಸ್‌ಮೆಂಟ್ ವಾಟರ್ ಪಾರ್ಕ್‌ ನ ನಿದೇರ್ಶಕ ವಿಲ್ಫ್ರೆಡ್ ಪಿಂಟೋ ವಿಧಿವಶ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.25. ಪಿಲಿಕುಳದಲ್ಲಿರುವ ಮಾನಸ ಅಮ್ಯೂಸ್‌ಮೆಂಟ್ ವಾಟರ್ ಪಾರ್ಕ್‌ ನ ನಿದೇರ್ಶಕರಾದ ಯುಜಿನ್ ವಿಲ್ಫ್ರೆಡ್ ಪಿಂಟೋ ವಿಧಿವಶರಾಗಿದ್ದಾರೆ ಎಂದು ತಿಳಿದುಬಂದಿದೆ. ಕೆಲ ದಿನಗಳ ಹಿಂದೆ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದರು. 2020 ರಲ್ಲಿ ಮಾನಸ ಅಮ್ಯೂಸ್‌ಮೆಂಟ್ ವಾಟರ್ ಪಾರ್ಕ್‌ ನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುವ ಮೊದಲು GM ಅಮ್ಯೂಸ್‌ಮೆಂಟ್ ಪಾರ್ಕ್ ಸೇರಿದಂತೆ ಹಲವಾರು ರೀತಿಯ ಕಂಪನಿಗಳಲ್ಲಿ ಉನ್ನತ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ ಪಿಂಟೊ ಅವರು ಮನೋರಂಜನಾ ಉದ್ಯಮದಲ್ಲಿ ವಿಶಿಷ್ಟವಾದ ವೃತ್ತಿಜೀವನವನ್ನು ಹೊಂದಿದ್ದರು ಎನ್ನಲಾಗಿದೆ. ಮಂಗಳೂರಿನ […]

ಮಂಗಳೂರು: ಮಾನಸ ಅಮ್ಯೂಸ್‌ಮೆಂಟ್ ವಾಟರ್ ಪಾರ್ಕ್‌ ನ ನಿದೇರ್ಶಕ ವಿಲ್ಫ್ರೆಡ್ ಪಿಂಟೋ ವಿಧಿವಶ Read More »

ಕರಾವಳಿ

ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ      

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.25. ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣನವರ ಜಾಮೀನು ಅರ್ಜಿ ವಜಾಗೊಂಡಿದೆ ಎನ್ನಲಾಗಿದೆ. ಎರಡನೇ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಜನ ಪ್ರತಿನಿಧಿಗಳ ವಿಶೇಷ ಕೋರ್ಟ್ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ವಜಾ ಮಾಡಿ ಆದೇಶ ಹೊರಡಿಸಿದ್ದಾರೆ. ಸೂರಜ್ ರೇವಣ್ಣ ಅವರು ಜಾಮೀನಿನ ಮೇಲೆ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದರು. ಪ್ರಜ್ವಲ್​ ಗೂ ಜಾಮೀನು ಸಿಗಲಿದೆ ಎನ್ನುವ ನಿರೀಕ್ಷೆಯಲ್ಲಿದ್ದರು. ಆದ್ರೆ,

ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ       Read More »

ಕರ್ನಾಟಕ

ಕೆಆರ್‌ಎಸ್ ಜಲಾಶಯ ಭರ್ತಿ ಜನರಲ್ಲಿ ಪ್ರವಾಹದ ಆತಂಕ

(ನ್ಯೂಸ್ ಕಡಬ)newskadaba.com ಮಂಡ್ಯ, ಜು.25. 2 ದಿನಗಳ ಬಳಿಕ ವರುಣದೇವ ಮತ್ತೆ ಅಬ್ಬರಿಸಲು ಶುರು ಮಾಡಿದ್ದು, ಕಾವೇರಿ ಒಡಲಾದ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಅಣೆಕಟ್ಟೆ ಸಂಪೂರ್ಣ ಭರ್ತಿಯಾಗಿದೆ. 124.80 ಗರಿಷ್ಠ ಸಾಮರ್ಥ್ಯದ ಕೆಆರ್‌ಎಸ್ ಜಲಾಶಯ ಎರಡು ವರ್ಷಗಳ ಬಳಿಕ ಸಂಪೂರ್ಣವಾಗಿ ಭರ್ತಿಯಾಗಿದೆ. ಹೀಗಾಗಿ ಕಾವೇರಿ ಕೊಳ್ಳದ ಜನರಿಗೆ ಸಂತೋಷದ ಜೊತೆಗೆ ಪ್ರವಾಹದ ಭೀತಿ ಎದುರಾಗಿದೆ ಎನ್ನಲಾಗಿದೆ. ಕೆಆರ್‌ಎಸ್ ಡ್ಯಾಂಗೆ 41,099 ಕ್ಯುಸೆಟ್ ಒಳ ಹರಿವು ಬರುತ್ತಿದ್ದು, ಅಷ್ಟೇ ಪ್ರಮಾಣದ ನೀರನ್ನು ನದಿಗೆ ಹರಿಸಲಾಗುತ್ತಿದೆ. ಇನ್ನೂ

ಕೆಆರ್‌ಎಸ್ ಜಲಾಶಯ ಭರ್ತಿ ಜನರಲ್ಲಿ ಪ್ರವಾಹದ ಆತಂಕ Read More »

ಕರ್ನಾಟಕ

ಬೆಂಗಳೂರು-ಕಾರವಾರ ವಿಶೇಷ ಎಕ್ಸ್‌ ಪ್ರೆಸ್ ರೈಲು !  

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.24. ಪ್ರಯಾಣಿಕರ ಬೇಡಿಕೆಯ ಮೇರೆಗೆ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಕಾರವಾರ ನಿಲ್ದಾಣಗಳ ನಡುವೆ ಎರಡು ಟ್ರಿಪ್ ವಿಶೇಷ ರೈಲು ಸಂಚಾರ ಮಾಡಲಿದೆ. ಜುಲೈ 26 ಮತ್ತು 28ರಂದು ಎಸ್ಎಂವಿಟಿ ಬೆಂಗಳೂರು-ಕಾರವಾರ ವಿಶೇಷ ಎಕ್ಸ್‌ ಪ್ರೆಸ್ ರೈಲು (06567) ಎಸ್ಎಂವಿಟಿ ಬೆಂಗಳೂರಿನಿಂದ ಮಧ್ಯರಾತ್ರಿ 12.30 ಗಂಟೆಗೆ ಹೊರಟು, ಸಂಜೆ 4 ಗಂಟೆಗೆ ಕಾರವಾರ ನಿಲ್ದಾಣ ತಲುಪಲಿದೆ. ಪುನಃ ಇದೇ ರೈಲು (06568) ಜುಲೈ 26 ಮತ್ತು 28 ರಂದು ಕಾರವಾರ

ಬೆಂಗಳೂರು-ಕಾರವಾರ ವಿಶೇಷ ಎಕ್ಸ್‌ ಪ್ರೆಸ್ ರೈಲು !   Read More »

ಕರಾವಳಿ, ಕರ್ನಾಟಕ

ಭಾರೀ ಅನಾಹುತ ತಪ್ಪಿಸಿದ ರೈಲ್ವೇ ಸಿಬ್ಬಂದಿಗೆ ಮೆಚ್ಚುಗೆ ನಗದು ಬಹುಮಾನ ಘೋಷಣೆ

(ನ್ಯೂಸ್ ಕಡಬ)newskadaba.com. ಉಡುಪಿ, ಜು.24. ಮತ್ಸ್ಯಗಂಧ ಎಕ್ಸ್ ಪ್ರೆಸ್ ನ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಸಂಭವನೀಯ ಭಾರೀ ಅನಾಹುತ ತಪ್ಪಿದ್ದು, ಪ್ರತಿ ಸಿಬ್ಬಂದಿ ಸದಸ್ಯರಿಗೆ 15,000 ರೂ. ನಗದು ಬಹುಮಾನ ನೀಡಿ ಪ್ರಶಂಸೆ ವ್ಯಕ್ತಪಡಿಸಲಾಯಿತು. ದೊಡ್ಡ ಅನಾಹುತವನ್ನು ತಪ್ಪಿಸಿ, ಸಮಯಪ್ರಜ್ಞೆಯಿಂದ ನಿರ್ಣಾಯಕ ಕ್ರಮವನ್ನು ಕೈಗೊಂಡಿರುವ ಸಿಬ್ಬಂದಿಯನ್ನು ಗುರುತಿಸಿ, ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (ಕೆಆರ್‌ಸಿಎಲ್) ನ ಸಿಎಂಡಿ ಸಂತೋಷ್ ಕುಮಾರ್ ಝಾ ಅವರು ಪ್ರತಿ ಸಿಬ್ಬಂದಿ ಸದಸ್ಯರಿಗೆ 15,000 ರೂ. ನೀಡಿದರು. ಬಾರ್ಕೂರು-ಉಡುಪಿ ವಿಭಾಗದ ನಡುವೆ ಬರುತ್ತಿದ್ದಾಗ ಲೊಕೊ

ಭಾರೀ ಅನಾಹುತ ತಪ್ಪಿಸಿದ ರೈಲ್ವೇ ಸಿಬ್ಬಂದಿಗೆ ಮೆಚ್ಚುಗೆ ನಗದು ಬಹುಮಾನ ಘೋಷಣೆ Read More »

ಕರಾವಳಿ, ಕರ್ನಾಟಕ

ತುಳು ಭಾಷೆಯ ಅಧಿಕೃತ ಸ್ಥಾನಮಾನಕ್ಕಾಗಿ ಬೇಡಿಕೆ ಶಾಸಕ ವೇದವ್ಯಾಸ ಕಾಮತ್

(ನ್ಯೂಸ್ ಕಡಬ)newskadaba.com. ಬೆಂಗಳೂರು, ಜು.24. ರಾಜ್ಯದಲ್ಲಿ ತುಳು ಭಾಷೆಯನ್ನು ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯನ್ನಾಗಿ ಘೋಷಿಸುವ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ಅವರು ವಿಧಾನಸಭೆಯ ಅಧಿವೇಶನದಲ್ಲಿ ಸ್ಪೀಕರ್ ಅವರಲ್ಲಿ ಮನವಿ ಮಾಡಿದರು ಎಂದು ತಿಳಿದುಬಂದಿದೆ. ಗಮನ ಸೆಳೆಯುವ ಸೂಚನಾ ಕಲಾಪದ ಸಂದರ್ಭದಲ್ಲಿ ಪ್ರಸ್ತಾವವಾದ ವಿಷಯಕ್ಕೆ ದನಿಗೂಡಿಸಿದ ಶಾಸಕರು, ಕಳೆದ ಒಂದೂವರೆ ವರ್ಷದಲ್ಲಿ ತುಳು ಭಾಷೆಯ ಅಧಿಕೃತ ಮಾನ್ಯತೆ ಬಗ್ಗೆ ಎರಡು ಬಾರಿ ಮನವಿ ಮಾಡಿದ್ದೇನೆ. ದೇಶದ ಹಲವು ರಾಜ್ಯಗಳಲ್ಲಿ ಅಧಿಕೃತವಾಗಿ ಎರಡನೇ ಭಾಷೆಯನ್ನಾಗಿ ಪ್ರಾದೇಶಿಕ ಭಾಷೆಗಳಿಗೆ ಮಾನ್ಯತೆ

ತುಳು ಭಾಷೆಯ ಅಧಿಕೃತ ಸ್ಥಾನಮಾನಕ್ಕಾಗಿ ಬೇಡಿಕೆ ಶಾಸಕ ವೇದವ್ಯಾಸ ಕಾಮತ್ Read More »

ಕರಾವಳಿ, ಕರ್ನಾಟಕ

 ಬಿಟ್ ಕಾಯಿನ್ ಕಳವು ಆರೋಪ ಪ್ರಕರಣ  ಆರೋಪಿಗಳಿಗೆ ಜಾಮೀನು ಮಂಜೂರು

(ನ್ಯೂಸ್ ಕಡಬ)newskadaba.com. ತುಮಕೂರು, ಜು.24. ಬಿಟ್ ಕಾಯಿನ್ ಕಳವು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶ್ರೀಕಿ ಸೇರಿದಂತೆ ಮೂವರಿಗೆ ತುಮಕೂರು ನ್ಯಾಯಾಲಯ ಜಾಮೀನು ಮಂಜೂರು ಮಾಡಿದ್ದು, ಆರೋಪಿ ಶ್ರೀಕಿಯೊಂದಿಗೆ ರಮೇಶ್, ರಬೀನ್ ಖಂಡೇಲ್ ವಾಲಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ ಎನ್ನಲಾಗಿದೆ. ಪ್ರಕರಣದ ಈ ಮೂವರು ಆರೋಪಿಗಳು ಜಾಮೀನು ಕೋರಿ ನಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ 1ನೇ ಹೆಚ್ಚುವರಿ ಹಿರಿಯ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯ ಜಾಮೀನು ನೀಡಿ ಆದೇಶ ಹೊರಡಿಸಿದೆ. ಉದ್ಯಮಿಯೊಬ್ಬರಿಗೆ ಆನ್‌ಲೈನ್ ವಂಚಿಸಿದ

 ಬಿಟ್ ಕಾಯಿನ್ ಕಳವು ಆರೋಪ ಪ್ರಕರಣ  ಆರೋಪಿಗಳಿಗೆ ಜಾಮೀನು ಮಂಜೂರು Read More »

ಕರ್ನಾಟಕ

ಬಂಟ್ವಾಳ: ವಿವಾಹಿತ ವ್ಯಕ್ತಿಯಿಂದ ಲೈಂಗಿಕ ದೌರ್ಜನ್ಯ   ಯುವತಿಯಿಂದ ಪ್ರಕರಣ ದಾಖಲು

(ನ್ಯೂಸ್ ಕಡಬ)newskadaba.com. ಬಂಟ್ವಾಳ, ಜು.24. ವಿವಾಹಿತ ವ್ಯಕ್ತಿಯೋರ್ವ ಸಂಬಂಧಿ ಯುವತಿಯನ್ನು ಅಕ್ರಮವಾಗಿ, ಬಲವಂತವಾಗಿ ಲೈಂಗಿಕವಾಗಿ ಬಳಸಿಕೊಂಡು ಗರ್ಭವತಿ ಮಾಡಿದ ಬಗ್ಗೆ ಬಂಟ್ವಾಳ ನಗರ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ವರದಿ ಪ್ರಕಟಣೆ ತಿಳಿಸಿದೆ. ಗುರುಪ್ರಸಾದ್ ಎಂಬಾತ ಸಂಬಂಧಿ ಯುವತಿಗೆ ಕಳೆದ ಒಂದು ವರ್ಷಗಳಿಂದ ಎರಡು ಬಾರಿ ಇಚ್ಚೆಗೆ ವಿರುದ್ದವಾಗಿ ಬಲವಂತವಾಗಿ ಲೈಂಗಿಕ ಕ್ರಿಯೆ ನಡೆಸಿರುವುದಾಗಿ ಸಂತ್ರಸ್ತ ಯುವತಿ ಠಾಣೆಗೆ ದೂರು‌ ನೀಡಿದ್ದಾರೆ. ಆರೋಪಿಗೆ ಈಗಾಗಲೇ ‌ಮದುವೆಯಾಗಿದ್ದು, ಸಂತ್ರಸ್ತ ಯುವತಿಗೆ ಅನ್ಯಾಯ ಎಸಗಿರುವ ಬಗ್ಗೆ ದೂರಿನಲ್ಲಿ ತಿಳಿಸಿದ್ದಲ್ಲದೆ

ಬಂಟ್ವಾಳ: ವಿವಾಹಿತ ವ್ಯಕ್ತಿಯಿಂದ ಲೈಂಗಿಕ ದೌರ್ಜನ್ಯ   ಯುವತಿಯಿಂದ ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಪಾರಿವಾಳದ ಪ್ರಾಣ ಉಳಿಸಲು ವಿದ್ಯುತ್ ಕಂಬವೇರಿದ ಬಾಲಕ ಮೃತ್ಯು

(ನ್ಯೂಸ್ ಕಡಬ)newskadaba.com ಚಿತ್ರದುರ್ಗ, ಜು.24. ಪಾರಿವಾಳದ ಜೀವ ಉಳಿಸಲು ಹೋಗಿ ಬಾಲಕನೋರ್ವ ಪ್ರಾಣ ಕಳೆದುಕೊಂಡಿರುವ ಹೃದಯ ವಿದ್ರಾವಕ ಘಟನೆ ವರದಿಯಾಗಿದೆ. ಮೃತ ಬಾಲಕನನ್ನು ರಾಮಚಂದ್ರ (12) ಎಂದು ಗುರುತಿಸಲಾಗಿದೆ. ವಿದ್ಯುತ್ ಕಂಬದಲ್ಲಿ ಸಿಲುಕಿದ್ದ ಪಾರಿವಾಳ ಕಂಡು ಜೀವ ಉಳಿಸಲು ಕಂಬ ಏರಿದ್ದ ಬಾಲಕ ವಿದ್ಯುತ್ ಹರಿದು ಮೃತಪಟ್ಟಿದ್ದಾನೆ ಎನ್ನಲಾಗಿದೆ.   ವಿದ್ಯುತ್ ಶಾಕ್‌ ನಿಂದಾಗಿ ಬಾಲಕನ ಶವ ವಿದ್ಯುತ್ ಕಂಬದಲ್ಲಿನ ತಂತಿಗೆ ಸಿಲುಕಿ ನೇತಾಡುತ್ತಿದ್ದು, ಮಾನವೀಯತೆಯಿಂದ ಪಾರಿವಾಳದ ಜೀವ ಉಳಿಸಲು ಮುಂದಾಗಿದ್ದ ಬಾಲಕ ತನ್ನ ಜೀವವನ್ನೇ ಬಲಿ

ಪಾರಿವಾಳದ ಪ್ರಾಣ ಉಳಿಸಲು ವಿದ್ಯುತ್ ಕಂಬವೇರಿದ ಬಾಲಕ ಮೃತ್ಯು Read More »

ಕರ್ನಾಟಕ

ಪುತ್ತೂರು: ಸ್ಕೂಟರ್‌ ಗೆ ಲಾರಿ ಢಿಕ್ಕಿ   ವಿಕಲಚೇತನ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ)newskadaba.com ಪುತ್ತೂರು, ಜು.24. ಲಾರಿಯೊಂದು ಸ್ಕೂಟರ್‌ ಗೆ ಢಿಕ್ಕಿಯಾಗಿ ಸ್ಕೂಟರ್ ಚಲಾಯಿಸುತ್ತಿದ್ದ ವಿಕಲಚೇತನ ವ್ಯಕ್ತಿ ಮೃತಪಟ್ಟ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮಂಜಲ್ಪಡ್ಪು ಎಂಬಲ್ಲಿ ಸಂಭವಿಸಿದೆ. ಮೃತರನ್ನು ಬಂಟ್ವಾಳ ತಾಲೂಕಿನ ಮಿತ್ತೂರು ಏಮಾಜೆ ಶಿವರಾಮ ನಾಯ್ಕ (50) ಎಂದು ಗುರುತಿಸಲಾಗಿದೆ. ಮಂಗಳೂರು ಕಡೆಗೆ ತೆರಳುತ್ತಿದ್ದ ಲಾರಿಯು ಮೂರು ಚಕ್ರದ ಸ್ಕೂಟರ್ ಗೆ ಢಿಕ್ಕಿಯಾಗಿತ್ತು. ಢಿಕ್ಕಿಯ ರಭಸಕ್ಕೆ ಶಿವರಾಮ ಅವರು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಪುತ್ತೂರು ಸಂಚಾರ ಠಾಣೆಯ

ಪುತ್ತೂರು: ಸ್ಕೂಟರ್‌ ಗೆ ಲಾರಿ ಢಿಕ್ಕಿ   ವಿಕಲಚೇತನ ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top