karnataka

ಏಣಿತಡ್ಕ: ಶಾಸಕರಿಂದ ರಸ್ತೆ ಕಾಮಗಾರಿ ವೀಕ್ಷಣೆ ► ಕಿಂಡಿ ಅಣೆಕಟ್ಟು ನಿರ್ಮಾಣ ಶೀಘ್ರದಲ್ಲಿ ಪ್ರಾರಂಭ-ಎಸ್.ಅಂಗಾರ

(ನ್ಯೂಸ್ ಕಡಬ) newskadaba.com ಪುತ್ತೂರು, ನ.11. ಇಲ್ಲಿನ ಕೊಯಿಲ ಗ್ರಾಮದ ಏಣಿತಡ್ಕದಲ್ಲಿ ಶಾಸಕರ ಅನುದಾನದಿಂದ ನಡೆಯುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಶನಿವಾರ ಸುಳ್ಯ ಶಾಸಕ ಎಸ್.ಅಂಗಾರ ವೀಕ್ಷಣೆ ಮಾಡಿ ಕಾಮಗಾರಿಯ ಗುಣಮಟ್ಟವನ್ನು ಕಾಪಾಡಿಕೊಳ್ಳುವಂತೆ ಸೂಚನೆ ನೀಡಿದರು. ಏಣಿತಡ್ಕದ ನೂತನ ಸೇತುವೆ ಬಳಿಯಿಂದ ಸಬಳೂರು ಅಯೋಧ್ಯಾನಗರದ ಶ್ರೀರಾಮ ಭಜನಾ ಮಂದಿರದ ತನಕ ಸುಮಾರು 97 ಲಕ್ಷ ರೂ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿಯಾಗುತ್ತಿದ್ದು, ಡಾಮಾರೀಕರಣ ನಡೆಯುತ್ತಿದೆ. ಇತ್ತೀಚೆಗೆ ಇದರ ಗುದ್ದಲಿ ಪೂಜೆ ನೇರವೇರಿ ತ್ವರಿತಗತಿಯಲ್ಲಿ ಕಾಮಗಾರಿ ನಡೆಯುತ್ತಿರುವ ಹಿನ್ನೆಯಲ್ಲಿ ಶಾಸಕರು ಕಾಮಗಾರಿ […]

ಏಣಿತಡ್ಕ: ಶಾಸಕರಿಂದ ರಸ್ತೆ ಕಾಮಗಾರಿ ವೀಕ್ಷಣೆ ► ಕಿಂಡಿ ಅಣೆಕಟ್ಟು ನಿರ್ಮಾಣ ಶೀಘ್ರದಲ್ಲಿ ಪ್ರಾರಂಭ-ಎಸ್.ಅಂಗಾರ Read More »

ಕರಾವಳಿ

ಏಣಿತಡ್ಕ-2 ಅಂಗನವಾಡಿ ಕಟ್ಟಡ ಉದ್ಘಾಟನೆ ►ಮಕ್ಕಳನ್ನು ದೇಶದ ಆಸ್ತಿಯನ್ನಾಗಿಸಬೇಕು- ಎಸ್.ಅಂಗಾರ

(ನ್ಯೂಸ್ ಕಡಬ) newskadaba.com ಕಡಬ, ನ.11. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಪುತ್ತೂರು. ಗ್ರಾಮ ಪಂಚಾಯಿತಿ ಕೊಯಿಲ ಇವುಗಳ ಸಂಯುಕ್ತ ಆಶ್ರಯದಲ್ಲಿ ಏಣಿತಡ್ಕ-2 ಅಂಗನವಾಡಿ ಕೇಂದ್ರದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಶನಿವಾರ ನಡೆಯಿತು. ಸುಳ್ಯ ಶಾಸಕ ಎಸ್.ಅಂಗಾರ ಅವರು ಉದ್ಘಾಟನೆ ನೆರವೇರಿಸಿದ ಮಾತನಾಡಿ ದೇಶದ ಆಸ್ತಿಗಳಾದ ಮುದ್ದುಮಕ್ಕಳಲ್ಲಿ ಉತ್ತಮ ಸಂಸ್ಕಾರ ನೀಡಿ ಅವರನ್ನು ದೇಶಪ್ರೇಮಿಗಳನ್ನಾಗಿ ರೂಪಿಸುವ ಮಹತ್ತರ ಕಾರ್ಯವನ್ನು ಶಿಕ್ಷಕರು ಹಾಗೂ ಪೋಷಕರು ಮಾಡಬೇಕಾಗಿದೆ ಎಂದರು. ವಿದ್ಯೆ ಎನ್ನುವುದು ಕೇವಲ

ಏಣಿತಡ್ಕ-2 ಅಂಗನವಾಡಿ ಕಟ್ಟಡ ಉದ್ಘಾಟನೆ ►ಮಕ್ಕಳನ್ನು ದೇಶದ ಆಸ್ತಿಯನ್ನಾಗಿಸಬೇಕು- ಎಸ್.ಅಂಗಾರ Read More »

ಕರಾವಳಿ

ಗೌರಿ ಲಂಕೇಶ್ ಹತ್ಯೆ ಪ್ರಕರಣ ►ಎಸ್ಐಟಿ ಬಲೆಗೆ ಸಿಕ್ಕಿಬಿದ್ದ ಮೂವರು ಹಂತಕರು, ಅಜ್ಞಾತ ಸ್ಥಳದಲ್ಲಿ ವಿಚಾರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.11. ಪತ್ರಕರ್ತೆ ಗೌರಿ ಲಂಕೆಶ್​​ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್’ಐಟಿ ಬಲೆಗೆ ಶಂಕಿತ ಮೂವರು ಹಂತಕರು ಸಿಕ್ಕಿದ್ದಾರೆ ಎನ್ನಲಾಗಿದ್ದು, ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಯುತ್ತಿದೆ. ರೇಖಾಚಿತ್ರದ ಆಧಾರದ ಮೇಲೆ ಶಂಕಿತ ಹಂತಕರನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದು ಗೋಪ್ಯ ಸ್ಥಳದಲ್ಲಿ ಕಳೆದ ಒಂದು ವಾರದಿಂದ ನಿರಂತರ ವಿಚಾರಣೆಗೆ ಒಳಪಡಿಸುತ್ತಿದ್ದಾರೆ. ರೇಖಾಚಿತ್ರ ಹೋಲಿಕೆಯ ಮೇಲೆ ಶಂಕಿತರ ಮೂವರನ್ನು ವಿಚಾರಣೆ ನಡೆಸಲಾಗುತ್ತಿದ್ದು, ಕಳೆದ ವಾರ ಉತ್ತರ ಕರ್ನಾಟಕದಿಂದ ಬೆಂಗಳೂರಿಗೆ ಕರೆತರಲಾಗಿದೆ ಎನ್ನಲಾಗಿದೆ. ಭಾವಚಿತ್ರ ಹೋಲಿಕೆಯಿದ್ದ ಈ

ಗೌರಿ ಲಂಕೇಶ್ ಹತ್ಯೆ ಪ್ರಕರಣ ►ಎಸ್ಐಟಿ ಬಲೆಗೆ ಸಿಕ್ಕಿಬಿದ್ದ ಮೂವರು ಹಂತಕರು, ಅಜ್ಞಾತ ಸ್ಥಳದಲ್ಲಿ ವಿಚಾರಣೆ Read More »

ಕರ್ನಾಟಕ

ಆಂಬುಲೆನ್ಸ್ ನ ಟೈರ್ ಸ್ಪೋಟ ►ತಪ್ಪಿದ ಭಾರೀ ಅನಾಹುತ

(ನ್ಯೂಸ್ ಕಡಬ) newskadaba.com ಬೆಳಗಾವಿ, ನ.11. ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಲೆಂದು ಬರುತ್ತಿದ್ದ 108 ಆಂಬುಲೆನ್ಸ್ ಪಲ್ಟಿಯಾದ ಘಟನೆ  ಅರಟಾಳ ಮತ್ತು ಹಾಲಳ್ಳಿ ಗ್ರಾಮದ ಚಿಕ್ಕೋಡಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತೆಲಸಂಗ ಮತ್ತು ಅರಟಾಳ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸೇರಿದ ಆಂಬುಲೆನ್ಸ್ ಅರಟಾಳ ಗ್ರಾಮದ ಗರ್ಭಿಣಿ ಮಹಿಳೆಯನ್ನು ಕರೆತರಲು ಬರುತ್ತಿದ್ದ ಸಂದರ್ಭದಲ್ಲಿ ಅರಟಾಳ ಮತ್ತು ಹಾಲಳ್ಳಿ ಗ್ರಾಮದ ಮಧ್ಯೆ ಆಂಬುಲೆನ್ಸ್ ಪಲ್ಟಿಯಾಗಿದೆ. ಗರ್ಭಿಣಿಯನ್ನು ಕರೆತರಲು ಬರುತ್ತಿದ್ದಾಗ ಈ ಘಟನೆ ನಡೆದದ್ದರಿಂದ ಭಾರೀ ಅನಾಹುತವೊಂದು ತಪ್ಪಿದೆ. ಆಂಬುಲೆನ್ಸ್

ಆಂಬುಲೆನ್ಸ್ ನ ಟೈರ್ ಸ್ಪೋಟ ►ತಪ್ಪಿದ ಭಾರೀ ಅನಾಹುತ Read More »

ಕರಾವಳಿ

ಕಡಬ: ವರ್ಣ ಚಿತ್ರಕಲಾ ಸ್ಪರ್ಧೆ ►ಸರಸ್ವತೀ ವಿದ್ಯಾಲಯದ ದೀಪಕ್.ಕೆ ಪ್ರಥಮ

(ನ್ಯೂಸ್ ಕಡಬ) newskadaba.com ಕಡಬ, ನ.11. ವಿವೇಕಾನಂದ ಪದವಿ ಪೂರ್ವ ಕಾಲೇಜು ನೆಹರುನಗರದಲ್ಲಿ ಇತ್ತೀಚೆಗೆ ನಡೆದ ಕನಸುಗಳು ಎಂಬ ಕಾರ್ಯಕ್ರಮದಲ್ಲಿ ಸರಸ್ವತೀ ವಿದ್ಯಾಲಯದ 10ನೇ ತರಗತಿಯ ವಿದ್ಯಾರ್ಥಿ ದೀಪಕ್.ಕೆ ಇವರು ಭಾಗವಹಿಸಿ ವರ್ಣ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾನೆ. ಇವರು ಕಲ್ಲುಗುಡ್ಡೆ ನಿವಾಸಿ ಕಿಟ್ಟು ಅಜಿಲ ಮತ್ತು ವೆಂಕಮ್ಮ ದಂಪತಿಯ ಸುಪುತ್ರ.

ಕಡಬ: ವರ್ಣ ಚಿತ್ರಕಲಾ ಸ್ಪರ್ಧೆ ►ಸರಸ್ವತೀ ವಿದ್ಯಾಲಯದ ದೀಪಕ್.ಕೆ ಪ್ರಥಮ Read More »

ಕರಾವಳಿ

ಬಲ್ಯ:”ಮನೆ ಮನೆಗೆ ಕಾಂಗ್ರೆಸ್” ಕಾರ್ಯಕ್ರಮ ► ಕಾಂಗ್ರೆಸ್ ಸರಕಾರದ ಸಾಧನೆ, ಬಿಜೆಪಿಯ ವೈಪಲ್ಯವನ್ನು ಜನರಿಗೆ ತಿಳಿಸಿ-ಸವಿತಾ ರಮೇಶ್

(ನ್ಯೂಸ್ ಕಡಬ) newskadaba.com ಕಡಬ, ನ.11. ಕಾಂಗ್ರೆಸ್ ಸರಕಾರದ ಸಾಧನೆ ಮತ್ತು ಬಿಜೆಪಿ ಸರಕಾರದ ವೈಪಲ್ಯವನ್ನು ಮನೆ ಮನೆ ಭೇಟಿ ವೇಳೆ ಜನರಿಗೆ ತಿಳಿಸಿ ಮನದಟ್ಟು ಮಾಡಬೇಕು ಎಂದು ಪುತ್ತೂರು, ಸುಳ್ಯ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಸವಿತಾ ರಮೇಶ್ ಹೇಳಿದರು. ಬಲ್ಯ ಗ್ರಾಮದ ದೇರಾಜೆ ಬೂತ್‍ನ ವತಿಯಿಂದ ನಡೆದ ಮನೆ ಮನೆಗೆ ಕಾಂಗ್ರೆಸ್ ನಡಿಗೆ ಕಾರ್ಯಕ್ರಮದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿ, ಅಧಿಕಾರ ಇರುವುದು ಜನರ ಸೇವೆ ಮಾಡಲು ಆದರೆ ಇದನ್ನು ದುರುಪಯೋಗ ಮಾಡಬಾರದು, ಪಕ್ಷದ ಪದಾಧಿಕಾರಿಗಳಿಗೆ ದೊಡ್ಡ ಜವಾಬ್ದಾರಿ

ಬಲ್ಯ:”ಮನೆ ಮನೆಗೆ ಕಾಂಗ್ರೆಸ್” ಕಾರ್ಯಕ್ರಮ ► ಕಾಂಗ್ರೆಸ್ ಸರಕಾರದ ಸಾಧನೆ, ಬಿಜೆಪಿಯ ವೈಪಲ್ಯವನ್ನು ಜನರಿಗೆ ತಿಳಿಸಿ-ಸವಿತಾ ರಮೇಶ್ Read More »

ಕರಾವಳಿ

ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ ►ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ದ್ವಿತೀಯ

(ನ್ಯೂಸ್ ಕಡಬ) newskadaba.com ಕಡಬ, ನ.11. ನೆಲ್ಯಾಡಿ ಸಂತ ಜಾರ್ಜ್ ಪದವಿ ಪೂರ್ವ ಶಿಕ್ಷಣ ಸಂಸ್ಥೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖಾ ವತಿಯಿಂದ ನಡೆದ ಪುತ್ತೂರು ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದುಕೊಂಡಿತ್ತು. ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕರಾದ ರಾಧಕೃಷ್ಣ ಎಂ ತರಭೇತಿ ನೀಡಿರುತ್ತಾರೆ.

ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ ►ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ದ್ವಿತೀಯ Read More »

ಕರಾವಳಿ

ಬೈಕ್ ಡಿಕ್ಕಿ ► ಯುವಕರಿಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಮಂಡ್ಯ, ನ.11. ಅತಿವೇಗದಿಂದ ಬಂದ ಬೈಕೊಂದು ಬ್ರಿಡ್ಜ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಮಂಡ್ಯದ ಮಳವಳ್ಳಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 209ರ ಚಿಲ್ಲಾಪುರ ಗೇಟ್ ಬಳಿ ಶುಕ್ರವಾರ ತಡರಾತ್ರಿ  ನಡೆದಿದೆ. ಹಲಗೂರಿನ ಪ್ರತಾಪ್(23) ಬಾಣಸಮುದ್ರದ ಶಶಿ(24) ಮೃತ ದುರ್ದೈವಿಗಳು. ಘಟನೆಯಿಂದ ಪ್ರತಾಪ್ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಶಶಿ ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಅತಿವೇಗವೇ ಈ ಘಟನೆಗೆ ಕಾರಣ ಎಂದು ತಿಳಿದುಬಂದಿದೆ. ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್ ಡಿಕ್ಕಿ ► ಯುವಕರಿಬ್ಬರು ಮೃತ್ಯು Read More »

ಕರಾವಳಿ

ಮಂಗಳೂರು: ಪರಾರಿಯಾಗಲು ಯತ್ನಿಸಿದ ವಿಚಾರಣಾದೀನ ಖೈದಿ ► ಸಾರ್ವಜನಿಕರ ಸಹಾಯದಿಂದ ಆರೋಪಿಯ ಸೆರೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ 8, ಕರ್ತವ್ಯದಲ್ಲಿದ್ದ ಪೊಲೀಸರಿಗೆ ವಿಚಾರಣಾದೀನ ಖೈದಿಯೊಬ್ಬ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಘಟನೆ ಪಿವಿಎಸ್ ವೃತ್ತದ ಬಳಿ ಬುಧವಾರ ಮದ್ಯಾಹ್ನ ನಡೆದಿದೆ. ಕಳ್ಳತನ ಮತ್ತು ಗಾಂಜಾ ಪ್ರಕರಣದ ಆರೋಪಿಯಾಗಿರುವ ಪುಂಜಾಲಕಟ್ಟೆಯ ಖೈದಿಯನ್ನು ವಿಚಾರಣೆಗಾಗಿ ನ್ಯಾಯಲಯಕ್ಕೆ ಕರೆತಂದು, ಜೈಲಿಗೆ ಹಿಂತಿರುಗುತ್ತಿರುವಾಗ ಕೈಗೆ ಹಾಕಿದ ಸರಪಳಿಯಿಂದ ಪೊಲೀಸರ ಮೇಲೆ ದಾಳಿ ಮಾಡಿ, ಎಸ್ಕೇಪ್ ಆಗಲು ಪ್ರಯತ್ನಿಸಿದ್ದಾನೆ. ಆದರೆ ತಕ್ಷಣ ಎಚ್ಚೆತ್ತ ಪೊಲೀಸರು ವೃತ್ತದಲ್ಲಿ ಕರ್ತವ್ಯ ನಿರ್ವಹಿಸುತ್ತಿದ ಟ್ರಾಫಿಕ್ ಪೊಲೀಸ್ ಹಾಗೂ ಸಾರ್ವಜನಿಕರ ಸಹಾಯದಿಂದ ಆತನನ್ನು ಸೆರೆಹಿಡಿಯುವಲ್ಲಿ

ಮಂಗಳೂರು: ಪರಾರಿಯಾಗಲು ಯತ್ನಿಸಿದ ವಿಚಾರಣಾದೀನ ಖೈದಿ ► ಸಾರ್ವಜನಿಕರ ಸಹಾಯದಿಂದ ಆರೋಪಿಯ ಸೆರೆ Read More »

ಕರಾವಳಿ

ಏರ್ ಟೆಲ್ ಬ್ರಾಡ್ ಬ್ಯಾಂಡ್ ಗ್ರಾಹಕರಿಗೆ ಗುಡ್ ನ್ಯೂಸ್ ► ಬಳಕೆಯಾಗದೇ ಉಳಿದ ಡಾಟಾವನ್ನು ಮುಂದಿನ ತಿಂಗಳು  ಬಳಕೆ ಮಾಡಬಹುದು

(ನ್ಯೂಸ್ ಕಡಬ) newskadaba.com ನವದೆಹಲಿ, ನ.8. ಏರ್ ಟೆಲ್ ಗ್ರಾಹಕರು ಬಳಕೆ ಮಾಡದೇ ಇರುವ ಬ್ರಾಡ್ ಬ್ಯಾಂಡ್ ಡಾಟಾ ವ್ಯರ್ಥವಾಗದಂತೆ ತಡೆಗಟ್ಟಲು ಏರ್ ಟೆಲ್ ಕ್ರಮ ಕೈಗೊಂಡಿದ್ದು, ತಿಂಗಳಾಂತ್ಯಕ್ಕೆ ಬಳಕೆಯಾಗದ ಡಾಟಾವನ್ನು ಮುಂದಿನ ತಿಂಗಳು ಬಳಕೆ ಮಾಡಬಹುದಾದ ಸೌಲಭ್ಯವನ್ನು ಘೋಷಿಸಿದೆ. ರೋಲ್‍ಓವರ್ ಸೌಲಭ್ಯ ಎಂಬ ಹೊಸ ಸೌಲಭ್ಯವನ್ನು ಗ್ರಾಹಕರು ಪಡೆದುಕೊಳ್ಳುವ ಮೂಲಕ ತಾವು ಬಳಕೆ ಮಾಡದೇ ಇರುವ ಡೇಟಾವನ್ನು ಮುಂದಿನ ತಿಂಗಳಿಗೆ ಕ್ಯಾರಿ ಮಾಡುವ ಅವಕಾಶವನ್ನು ನೀಡಿದೆ. ಈ ಹೊಸ ಸೌಲಭ್ಯ ಮನೆಯಲ್ಲಿ ಬ್ರಾಡ್ ಬ್ಯಾಂಡ್ ಸೇವೆಯನ್ನು

ಏರ್ ಟೆಲ್ ಬ್ರಾಡ್ ಬ್ಯಾಂಡ್ ಗ್ರಾಹಕರಿಗೆ ಗುಡ್ ನ್ಯೂಸ್ ► ಬಳಕೆಯಾಗದೇ ಉಳಿದ ಡಾಟಾವನ್ನು ಮುಂದಿನ ತಿಂಗಳು  ಬಳಕೆ ಮಾಡಬಹುದು Read More »

ತಂತ್ರಜ್ಞಾನ
Scroll to Top