karnataka

ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ಕೇಂದ್ರ ಗೃಹಮಂತ್ರಿ ಷಾ ಪುತ್ರ ಭೇಟಿ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜು. 31. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಿಸಿಸಿಐ ಕಾರ್ಯದರ್ಶಿ ಮತ್ತು ಕೇಂದ್ರ ಗೃಹ ಮುಖ್ಯಮಂತ್ರಿ ಅಮಿತ್ ಷಾ ಪುತ್ರ ಜಯ್ ಷಾ ಭೇಟಿ ನೀಡಿದ್ದಾರೆ. ಶ್ರೀ ದೇವಳಕ್ಕೆ ಭೇಟಿ ನೀಡಿದ ಅವರು ದೇವರಿಗೆ ಆಶ್ಲೇಷ ಬಲಿ ಸೇವೆ ಸಮರ್ಪಿಸಿದರು. ಇವರ ಪತ್ನಿ ರಿಷಿತಾ ಷಾ ಮತ್ತು ಕುಟುಂಬಸ್ಥರು ಉಪಸ್ಥಿತರಿದ್ದರು ಎಂದು ವರದಿಯಾಗಿದೆ. ಆರಂಭದಲ್ಲಿ ಸಂಪರ್ಕ ನೆರವೇರಿಸಿ ಆಶ್ಲೇಷ ಬಲಿ ಸೇವೆ ಸಮರ್ಪಿಸಿದ್ದು, ಬಳಿಕ ಆಶ್ಲೇಷ ಬಲಿ ಪ್ರಸಾದ ಸ್ವೀಕರಿಸಿದರು. ದೇವಳದ ಅರ್ಚಕ […]

ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ಕೇಂದ್ರ ಗೃಹಮಂತ್ರಿ ಷಾ ಪುತ್ರ ಭೇಟಿ Read More »

ಕರಾವಳಿ, ಕರ್ನಾಟಕ

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ – ಮೂವರನ್ನು ಬಂಧಿಸಿದ ವಿಟ್ಲ ಪೊಲೀಸರು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಜು.31. ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಮೂವರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಬಂಧಿತ ಆರೋಪಿಗಳನ್ನು ಮೂಡಬಿದರೆ ಮೂಲದ ಪ್ರಸ್ತುತ ಬೆರಿಪದವಿನ ನಿವಾಸಿ ಅಕ್ಷಯ್ ದೇವಾಡಿಗ (24), ಬಾಯಾರು ಗ್ರಾಮದ ಕೊಜಪ್ಪ ನಿವಾಸಿ ಕಮಲಾಕ್ಷ ಬೆಳ್ಚಾಡ (30), ಬೆರಿಪದವು ನಿವಾಸಿ ಸುಕುಮಾರ ಬೆಳ್ಚಾಡ (28) ಎಂದು ಗುರುತಿಸಲಾಗಿದೆ. ಅಕ್ಷಯ್ ಪೈಟಿಂಗ್ ಕೆಲಸ ನಿರ್ವಹಿಸುತ್ತಿದ್ದು, ಕಮಲಾಕ್ಷ ಗಾರೆ ಕೆಲಸ ಹಾಗೂ ಸುಕುಮಾರ ಚಾಲಕ ವೃತ್ತಿಯನ್ನು ನಡೆಸಿಕೊಂಡಿದ್ದರು ಎಂದು ತಿಳಿದುಬಂದಿದೆ.

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ – ಮೂವರನ್ನು ಬಂಧಿಸಿದ ವಿಟ್ಲ ಪೊಲೀಸರು Read More »

ಕರಾವಳಿ, ಕ್ರೈಮ್ ನ್ಯೂಸ್

ದಲಿತರ ಬೇಡಿಕೆಗಳನ್ನು ಮುಖ್ಯಮಂತ್ರಿ ಗಮನಕ್ಕೆ ತರಲಾಗುವುದು – ಯು.ಟಿ ಖಾದರ್ ಆಶ್ವಾಸನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.31. ಡಿಸಿ ಮನ್ನಾ ಭೂಮಿ ಹಂಚಿಕೆ ಸೇರಿದಂತೆ ದಲಿತ ಸಂಘಟನೆಗಳ ಬೇಡಿಕೆಗಳನ್ನು ಮುಖ್ಯಮಂತ್ರಿ ಹಾಗೂ ಸಂಬಂಧಪಟ್ಟ ಸಚಿವರ ಗಮನಕ್ಕೆ ತಂದು ಈಡೇರಿಸಲು ಪ್ರಯತ್ನಿಸುವುದಾಗಿ ವಿಧಾನಸಭಾ ಸ್ಪೀಕರ್‌ ಯು.ಟಿ. ಖಾದರ್‌ ಆಶ್ವಾಸನೆ ನೀಡಿದ್ದಾರೆ. ನಗರದ ಡಾ.ಬಿ.ಆರ್‌.ಅಂಬೇಡ್ಕರ್‌ ಭವನದಲ್ಲಿ ದ.ಕ. ಮತ್ತು ಉಡುಪಿ ಜಿಲ್ಲೆಯ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟಪಂಗಡಗಳ ಮಹಾಸಂಗಮ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು, ದಲಿತ ಸಂಘಟನೆಗಳು ತಮ್ಮೆಲ್ಲ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಸೌಹಾರ್ದತೆಯಿಂದ ಒಂದಾಗಿ ಮಹಾಸಂಗಮ ಕಾರ್ಯಕ್ರಮ ಆಯೋಜಿಸಿರುವುದು ಸಂತಸದ

ದಲಿತರ ಬೇಡಿಕೆಗಳನ್ನು ಮುಖ್ಯಮಂತ್ರಿ ಗಮನಕ್ಕೆ ತರಲಾಗುವುದು – ಯು.ಟಿ ಖಾದರ್ ಆಶ್ವಾಸನೆ Read More »

ಕರಾವಳಿ, ಕರ್ನಾಟಕ

ಹಳ್ಳದಲ್ಲಿ ಮುಳುಗಿ ಇಬ್ಬರು ಯುವಕರು ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 31. ಹಳ್ಳವೊಂದಕ್ಕೆ ಬಿದ್ದು ಇಬ್ಬರು ಯುವಕರು ಮೃತಪಟ್ಟ ಘಟನೆ ನಡೆದಿದೆ ಎನ್ನಲಾಗಿದೆ. ಮೃತಪಟ್ಟವರನ್ನು ವರುಣ್‌ (27) ಮತ್ತು ವೀಕ್ಷಿತ್‌ (28) ಎಂದು ಗುರುತಿಸಲಾಗಿದೆ. ವರುಣ್‌ ಮತ್ತು ವೀಕ್ಷಿತ್‌ ಹಳ್ಳದ ದಡದಲ್ಲೇ ಕುಳಿತ್ತಿದ್ದರು. ಕೆಲವೇ ಹೊತ್ತಿನಲ್ಲಿ ದಡದಲ್ಲಿ ಕುಳಿತಿದ್ದ ವರುಣ್‌ ಆಯತಪ್ಪಿ ನೀರಿಗೆ ಬಿದ್ದಿದ್ದರು. ಇದನ್ನು ಗಮನಿಸಿದ ವೀಕ್ಷಿತ್‌ ಕೂಡಲೇ ಹಳ್ಳಕ್ಕೆ ದುಮುಕಿದರು. ಆದರೆ, ಹಳ್ಳದಲ್ಲಿ ಹೂಳು ತುಂಬಿದ್ದ ಕಾರಣ ಇಬ್ಬರೂ ನೀರಿನಲ್ಲಿ ಮುಳುಗಿದ್ದಾರೆ. ವಿಷಯ ತಿಳಿದ ಸ್ಥಳೀಯರು ಕೂಡಲೇ ಘಟನಾ

ಹಳ್ಳದಲ್ಲಿ ಮುಳುಗಿ ಇಬ್ಬರು ಯುವಕರು ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ನಾಪತ್ತೆಯಾಗಿದ್ದ ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ)newskadaba.com ಕುಂದಾಪುರ, ಜು.31. ನಾಪತ್ತೆಯಾಗಿದ್ದ ಜಡ್ಕಲ್ ಗ್ರಾಮದ ಕೊಳಕೆಹೊಳೆ ಮೆಕ್ಕೆ ನಿವಾಸಿ ಮಂಜ ಅವರ ಪುತ್ರ ಸುರೇಶ್ (28) ಅವರ ಮೃತದೇಹ 7 ದಿನಗಳ ಬಳಿಕ ಕೆರೆಯಲ್ಲಿ ಪತ್ತೆಯಾಗಿದೆ ಎನ್ನಲಾಗಿದೆ. ಜು. 23 ರ ರಾತ್ರಿ ತಮ್ಮ ಕುಟುಂಬ ಸದಸ್ಯರೊಂದಿಗೆ ರಾತ್ರಿ ಊಟದ ನಂತರ ಸುರೇಶ್ ರಾತ್ರಿ 8 ಗಂಟೆ ಸುಮಾರಿಗೆ ಮಲಗಿದ್ದರು. ಮರುದಿನ ಬೆಳಗ್ಗೆ ಎದ್ದಾಗ ಆತ ಕಾಣೆಯಾಗಿದ್ದ. ಕೆರೆಯದಡದಲ್ಲಿ ಕುಳಿತು ಗಂಟೆಗಟ್ಟಲೆ ಕೆರೆಯತ್ತ ಕಣ್ಣು ಹಾಯಿಸುವ ಅಭ್ಯಾಸವಿತ್ತು ಎಂದು ಸ್ಥಳೀಯರು ಹೇಳ್ತಾರೆ. ನಾಪತ್ತೆಯಾದ

ನಾಪತ್ತೆಯಾಗಿದ್ದ ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು ವಿಶ್ವ ವಿದ್ಯಾಲಯದ ಮಾಜಿ ಕುಲಪತಿ ಕೆ.ಬೈರಪ್ಪ ವಿಧಿವಶ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.31. ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಉಪ ಕುಲಪತಿ ಪ್ರೊ.ಕೆ.ಬೈರಪ್ಪ(69) ಅವರು ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಮಂಗಳೂರು ವಿಶ್ವ ವಿದ್ಯಾಲಯದಲ್ಲಿ 2014 ಜೂನ್ ನಿಂದ 2019 ಜೂನ್ ವರೆಗೆ ಕುಲಪತಿಗಳಾಗಿ ಕಾರ್ಯನಿರ್ವಹಿಸಿ ಬಳಿಕ ನಿವೃತ್ತಿ ಹೊಂದಿ ಆ ಬಳಿಕ ಆದಿ ಚುಂಚನ ಗಿರಿಯಲ್ಲಿ ಕುಲಪತಿಗಳಾಗಿ ಕಾರ್ಯ ನಿರ್ವ ಹಿಸುತಿದ್ದರು ಎನ್ನಲಾಗಿದೆ. ಇನ್ನು ಬೆಳಗಾವಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದಕ್ಕೆ ತೆರಳಲು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ ವೇಳೆ ತೀವ್ರ ಹೃದಯಾಘಾತಗೊಂಡು ವಿಧಿವಶರಾಗಿದ್ದಾರೆ ಎನ್ನಲಾಗಿದೆ.

ಮಂಗಳೂರು ವಿಶ್ವ ವಿದ್ಯಾಲಯದ ಮಾಜಿ ಕುಲಪತಿ ಕೆ.ಬೈರಪ್ಪ ವಿಧಿವಶ Read More »

ಕರಾವಳಿ

ನೀವು ಯಾವಾಗ ಚುನಾವಣೆಗೆ ನಿಲ್ಲುತ್ತೀರಿ ? – ಚಕ್ರವರ್ತಿ ಸೂಲಿಬೆಲೆಗೆ ಪ್ರಿಯಾಂಕ್ ಖರ್ಗೆ ತಿರುಗೇಟು

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.31.  ‘ನೀವು ಕರ್ನಾಟಕದ ಯುವಬಜನತೆಯೊಂದಿಗೆ ಸಾಕಷ್ಟು ತಮಾಷೆ, ಚೆಲ್ಲಾಟಗಳನ್ನು ಆಡಿದ್ದಾಗಿದೆ. ಒಂದಿಷ್ಟು ಪ್ರಾಮಾಣಿಕತೆಯಿಂದ ವರ್ತಿಸಿ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಚಕ್ರವರ್ತಿ ಸೂಲಿಬೆಲೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೂಲಿಬೆಲೆ ಟ್ವೀಟ್‍ಗೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿರುವ ಅವರು, ‘ಕೇಸರಿ ಶಾಲು ಧರಿಸಿ ಪ್ರತಿಭಟನೆ ಮಾಡುವ ನೀವು ಎಂದಿಗೂ ಮುಂಚೂಣಿಯಲ್ಲಿಲ್ಲ, ಯುವ ಅಮಾಯಕರಿಗೆ ಮಾತ್ರ ಮುನ್ನಡೆಸಲು ಅವಕಾಶ ನೀಡುತ್ತಿಲ್ಲವೇ ? ನೀವು ಯೂಟ್ಯೂಬರ್ ಮತ್ತು ಪ್ರೇರಕರಾಗಿ ನಿಮ್ಮನ್ನು ಏಕೆ ಸೀಮಿತಗೊಳಿಸುತ್ತಿದ್ದೀರಿ ? ನೀವು ಯಾವಾಗ

ನೀವು ಯಾವಾಗ ಚುನಾವಣೆಗೆ ನಿಲ್ಲುತ್ತೀರಿ ? – ಚಕ್ರವರ್ತಿ ಸೂಲಿಬೆಲೆಗೆ ಪ್ರಿಯಾಂಕ್ ಖರ್ಗೆ ತಿರುಗೇಟು Read More »

ಕರ್ನಾಟಕ

ಅರಶಿಣ ಗುಂಡಿ ಜಲಪಾತಕ್ಕೆ ಬಿದ್ದ ಯುವಕನ ಮೃತದೇಹ ವಾರದ ಬಳಿಕ ಪತ್ತೆ

(ನ್ಯೂಸ್ ಕಡಬ)newskadaba.com ಕುಂದಾಪುರ, ಜು.30. ವಾರದ ಹಿಂದೆ ಕೊಲ್ಲೂರಿನ ಅರಶಿನ ಗುಂಡಿ ಜಲಪಾತ ವೀಕ್ಷಣೆಗೆ ಹೋಗಿ ಕಾಲು ಜಾರಿ ಬಿದ್ದು ನೀರುಪಾಲಾಗಿದ್ದ ಯುವಕನ ಮೃತದೇಹ ಪತ್ತೆಯಾಗಿದೆ ಎಂದು ವರದಿಯಾಗಿದೆ. ಭದ್ರಾವತಿ ಮೂಲದ ಯುವಕ ಶರತ್ ಜು. 23ರಂದು ಕೊಲ್ಲೂರು ಸಮೀಪದ ಅರಶಿನ ಗುಂಡಿ ಜಲಪಾತ ನೋಡಲು ಸ್ನೇಹಿತನೊಂದಿಗೆ ಹೋಗಿದ್ದು, ಜಲಪಾತದ ಪಕ್ಕದ ಬಂಡೆ ಕಲ್ಲಿನ ಮೇಲೆ ನಿಂತಿದ್ದ ಅವರು ಜಾರಿ ನೀರಿಗೆ ಬಿದ್ದಿದ್ದರು. ಶರತ್ ಹುಡುಕಾಟಕ್ಕೆ ಹಲವು ತಂಡಗಳು ವಾರಗಳ ಕಾಲ ಶ್ರಮ ವಹಿಸುತ್ತಿದ್ದವು . ಆದರೆ

ಅರಶಿಣ ಗುಂಡಿ ಜಲಪಾತಕ್ಕೆ ಬಿದ್ದ ಯುವಕನ ಮೃತದೇಹ ವಾರದ ಬಳಿಕ ಪತ್ತೆ Read More »

ಕರ್ನಾಟಕ

ಆಟೋ ರಿಕ್ಷಾ ಮತ್ತು ಕಾರಿನ ನಡುವೆ ಅಪಘಾತ

(ನ್ಯೂಸ್ ಕಡಬ)newskadaba.com ವಿಟ್ಲ, ಜು.29. ಆಟೋ ರಿಕ್ಷಾ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ ಘಟನೆ ವಿಟ್ಲದಲ್ಲಿ ವರದಿಯಾಗಿದೆ. ಆಟೋ ಚಾಲಕ ಗಾಯಗೊಂಡಿದ್ದು, ಹನೀಪ್ ಎಂದು ಗುರುತಿಸಲಾಗಿದೆ. ಕಾರು ಮಂಗಳೂರು ಕಡೆಯಿಂದ ಪುತ್ತೂರಿಗೆ ಬರುವಾಗ ಈ ಅಪಘಾತ ಸಂಭವಿಸಿದೆ. ಅಪಘಾತವಾದ ಕಾರಿನಲ್ಲಿ ಮದ್ಯದ ಬಾಟಲಿಗಳು ಪತ್ತೆಯಾಗಿದೆ ಎಂದು ವರದಿಯಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಆಟೋ ರಿಕ್ಷಾ ಮತ್ತು ಕಾರಿನ ನಡುವೆ ಅಪಘಾತ Read More »

ಕರಾವಳಿ, ಕ್ರೈಮ್ ನ್ಯೂಸ್

ಸಂಚಾರಿ ನಿಯಮ ಉಲ್ಲಂಘನೆ 222 ಮಂದಿ ಡ್ರೈವಿಂಗ್ ಲೈಸೆನ್ಸ್ ರದ್ದು

(ನ್ಯೂಸ್ ಕಡಬ)newskadaba.com ಮಂಗಳೂರು, ಜು.29. ಸಂಚಾರಿ ನಿಯಮಗಳನ್ನು ಪಾಲಿಸದ ವಾಹನ ಚಾಲಕರಿಗೆ ತಿರುಗೇಟು ನೀಡಲು ಮುಂದಾಗಿದ್ದು, ದಂಡದ ಜೊತೆಗ ಇದೀಗ ಡ್ರೈವಿಂಗ್ ಲೈಸೆನ್ಸ್ ಕ್ಯಾನ್ಸಲ್ ಮಾಡಲು ಮುಂದಾಗಿದ್ದಾರೆ. ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಸಂಚಾರ ಪೊಲೀಸರು ಈಗಾಗಲೇ 222 ಮಂದಿ ವಾಹನ ಚಾಲಕರ ಡ್ರೈವಿಂಗ್ ಲೈಸೆನ್ಸ್ ಕ್ಯಾನ್ಸಲ್ ಮಾಡಲು ಆರ್ ಟಿಓಗೆ ಶಿಫಾರಸ್ಸು ಮಾಡಿದ್ದಾರೆ. ಸಂಚಾರಿ ನಿಯಮ ಪಾಲಿಸದೇ ಎಸ್ಕೇಪ್ ಆಗುತ್ತಿದ್ದವರಿಗೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 14 ದಿನದಲ್ಲಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಚಾಲನೆ

ಸಂಚಾರಿ ನಿಯಮ ಉಲ್ಲಂಘನೆ 222 ಮಂದಿ ಡ್ರೈವಿಂಗ್ ಲೈಸೆನ್ಸ್ ರದ್ದು Read More »

ಕರಾವಳಿ
Scroll to Top