karwar

ಬೆಂಗಳೂರಿನಿಂದ ಮಂಗಳೂರು, ಉಡುಪಿ, ಕಾರವಾರಕ್ಕೆ ವಂದೇ ಭಾರತ್ ರೈಲು

(ನ್ಯೂಸ್‌ ಕಡಬ) newskadaba.com,  ಡಿ.13: ಕರಾವಳಿ ಕರ್ನಾಟಕದ ರೈಲ್ವೆ ಪ್ರಯಾಣಿಕರ ಹಿತದೃಷ್ಟಿಯಿಂದ, ಘಾಟ್ ವಿಭಾಗದಲ್ಲಿ ವಿದ್ಯುದ್ದೀಕರಣ ಕಾರ್ಯ ಪೂರ್ಣಗೊಂಡ ನಂತರ ಬೆಂಗಳೂರಿನಿಂದ ಮಂಗಳೂರು, ಉಡುಪಿ ಮತ್ತು ಕಾರವಾರಕ್ಕೆ ವಂದೇ ಭಾರತ್ ಎಕ್ಸ್‌ಪ್ರೆಸ್ ಅನ್ನು ಓಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಅವರು ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವರನ್ನು ಭೇಟಿಯಾಗಿ ಈ ಸಂಬಂಧ ಒಂದು ಮನವಿ ಪತ್ರವನ್ನು ಸಲ್ಲಿಸಿ, ಈ ರೈಲು ಮಾರ್ಗದಲ್ಲಿ ವಂದೇ […]

ಬೆಂಗಳೂರಿನಿಂದ ಮಂಗಳೂರು, ಉಡುಪಿ, ಕಾರವಾರಕ್ಕೆ ವಂದೇ ಭಾರತ್ ರೈಲು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಖಾಸಗಿ ವೈದ್ಯರ ಮುಷ್ಕರ – ಸರಕಾರಿ ವೈದ್ಯರ ನಿರ್ಲಕ್ಷ್ಯ► ಬಲಿಯಾಯಿತು ಬಡಜೀವ

(ನ್ಯೂಸ್ ಕಡಬ) newskadaba.com ಕಾರವಾರ, ನ.04. ಖಾಸಗಿ ಆಸ್ಪತ್ರೆಯ ವೈದ್ಯರು ಸರ್ಕಾರದ ವಿರುದ್ಧ ಶುಕ್ರವಾರ ಮುಷ್ಕರ ನಡೆಸಿದ ಪರಿಣಾಮ ಸೂಕ್ತ ಚಿಕಿತ್ಸೆ ದೊರೆಯದೆ ವಿದ್ಯಾರ್ಥಿನಿಯೊಬ್ಬಳು ಬಲಿಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಗೋರ್ಸಗದ್ದೆ ನಿವಾಸಿ ರಾಜೇಶ್ವರಿ(21) ಎಂದು ಗುರುತಿಸಲಾಗಿದೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಈಕೆಯನ್ನು ಖಾಸಗಿ ಆಸ್ಪತ್ರೆ ವೈದ್ಯರ ಮುಷ್ಕರ ಹಿನ್ನೆಲೆಯಲ್ಲಿ ಮಂಚಿಕೇರಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅಲ್ಲಿ ವೈದ್ಯರು ಮತ್ತು ಸಿಬ್ಬಂದಿ ಯಾರೂ ಇಲ್ಲದ ಕಾರಣ ವಿದ್ಯಾರ್ಥಿನಿಗೆ ಸಕಾಲಕ್ಕೆ

ಖಾಸಗಿ ವೈದ್ಯರ ಮುಷ್ಕರ – ಸರಕಾರಿ ವೈದ್ಯರ ನಿರ್ಲಕ್ಷ್ಯ► ಬಲಿಯಾಯಿತು ಬಡಜೀವ Read More »

ಕರ್ನಾಟಕ

ಅಂಗಡಿಯನ್ನು ತೆರವು ವಿಚಾರಕ್ಕೆ ಮನಃನೊಂದ ವ್ಯಾಪಾರಿ ► ಸೀಮೆ ಎಣ್ಣೆ ಸುರಿದು ಆತ್ಮಹತ್ಯೆಗೆ ಯತ್ನ

(ನ್ಯೂಸ್ ಕಡಬ) newskadaba.com ಕಾರವಾರ,ಸೆ.14, ಅಂಗಡಿ ತೆರವು ಮಾಡುವ ವಿಚಾರವಾಗಿ ವ್ಯಾಪಾರಿಯೊಬ್ಬರು ಮನಃನೊಂದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕು ಪುರಸಭೆ ವ್ಯಾಪ್ತಿಯಲ್ಲಿ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ವ್ಯಾಪಾರಿಯನ್ನು ರಾಮಚಂದ್ರ ನಾಗಪ್ಪ ನಾಯ್ಕ್ ಎಂದು ಗುರುತಿಸಲಾಗಿದೆ. ರಾಮಚಂದ್ರ ನಾಯ್ಕ್ ಅವರು ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕು ಪುರಸಭೆ ವ್ಯಾಪ್ತಿಯ ಕಟ್ಟಡವೊಂದರಲ್ಲಿ ಅಂಗಡಿಯನ್ನು ಹೊಂದಿದ್ದರು. ಈ ಅಂಗಡಿಯನ್ನು ತೆರವುಗೊಳಿಸುವಂತೆ ಜಿಲ್ಲಾಧಿಕಾರಿಗಳಿಂದ ಆಡಳಿತ ಮಂಡಳಿಗೆ ಆದೇಶವನ್ನು ನೀಡಲಾಗಿತ್ತು. ಈ ಆದೇಶದಂತೆ ಅಂಗಡಿಯನ್ನು ತೆರವುಗೊಳಿಸಲು ಮುಂದಾಗಿದ್ದ ವೇಳೆ ರಾಮಚಂದ್ರ

ಅಂಗಡಿಯನ್ನು ತೆರವು ವಿಚಾರಕ್ಕೆ ಮನಃನೊಂದ ವ್ಯಾಪಾರಿ ► ಸೀಮೆ ಎಣ್ಣೆ ಸುರಿದು ಆತ್ಮಹತ್ಯೆಗೆ ಯತ್ನ Read More »

ಕರಾವಳಿ

ಮೀನಿನ ಲಾರಿ-ಖಾಸಗಿ ಬಸ್ ಮುಖಾಮುಖಿ ಡಿಕ್ಕಿ ► ಓರ್ವ ಮೃತ್ಯು, 15 ಮಂದಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಕಾರವಾರ,ಸೆ.13, ಮೀನಿನ ಲಾರಿ ಹಾಗೂ ಗಣೇಶ್ ಖಾಸಗಿ ಬಸ್ಸು ಮುಖಾಮುಖಿ ಡಿಕ್ಕಿಯಾಗಿ, ನಂತರ ಹಿಂದಿನಿಂದ ವೇಗವಾಗಿ ಬಂದ ಮತ್ತೊಂದು ಬಸ್ ಗಣೇಶ್ ಬಸ್ಸಿಗೆ ಡಿಕ್ಕಿ ಹೊಡೆದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಸೋಡಿಗದ್ದೆ ಕ್ರಾಸ್ ಬಳಿ ಬುಧವಾರ ನಡೆದಿದೆ. ಭೀಕರ ಅಪಘಾತದಲ್ಲಿ ಲಾರಿ ಚಾಲಕ ಅಬ್ದುಲ್ಲಾ (25 ವರ್ಷ) ಸ್ಥಳದಲ್ಲೇ ಸಾವನ್ನಪ್ಪಿದ್ದು, ಬಸ್‍ನಲ್ಲಿದ್ದ 15 ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಭಟ್ಕಳ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗೋವಾದಿಂದ ಕೇರಳ ಕಡೆಗೆ

ಮೀನಿನ ಲಾರಿ-ಖಾಸಗಿ ಬಸ್ ಮುಖಾಮುಖಿ ಡಿಕ್ಕಿ ► ಓರ್ವ ಮೃತ್ಯು, 15 ಮಂದಿಗೆ ಗಂಭೀರ ಗಾಯ Read More »

ಕರ್ನಾಟಕ

ಕಾರವಾರ: ಬೆಂಕಿಗಾಹುತಿಯಾದ ಟವೇರಾ ► ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾದ ಚಾಲಕ

(ನ್ಯೂಸ್ ಕಡಬ) newskadaba.com ಕಾರವಾರ, ಆ.01. ಶಾರ್ಟ್ ಸರ್ಕ್ಯೂಟ್ ಉಂಟಾದ ಪರಿಣಾಮ ಟವೇರಾ ಕಾರೊಂದು ಬೆಂಕಿಗಾಹುತಿಯಾಗಿ ಸಂಪೂರ್ಣ ಭಸ್ಮವಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಉಮ್ಮಚಗಿ ಎಂಬಲ್ಲಿ ಮಂಗಳವಾರ ಬೆಳಗ್ಗಿನ ಜಾವ ನಡೆದಿದೆ. ಘಟನೆಯಿಂದ ಮುಂಡಗೋಡು ನಿವಾಸಿ ಕಾರು ಚಾಲಕ ಪ್ರಭು  ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅವರು ಕಾರಿನಲ್ಲಿ ಯಲ್ಲಾಪುರದ ಉಮ್ಮಚಗಿಯಿಂದ  ತನ್ನ ಊರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಯಲ್ಲಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ

ಕಾರವಾರ: ಬೆಂಕಿಗಾಹುತಿಯಾದ ಟವೇರಾ ► ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾದ ಚಾಲಕ Read More »

ಕರ್ನಾಟಕ
Scroll to Top