ಕಾಸರಗೋಡು: ಅಪರಿಚಿತ ಯುವಕನ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಜ. 11. ಮಂಜೇಶ್ವರ ಹೊಸಂಗಡಿ ಬಳಿಯ ಕೊಪ್ಪಳ ಕಜೆಯಲ್ಲಿರುವ ನದಿಯಲ್ಲಿ ಅಪರಿಚಿತ ಯುವಕನೋರ್ವನ ಮೃತದೇಹ ಪತ್ತೆಯಾಗಿರುವ ಕುರಿತು ವರದಿಯಾಗಿದೆ. ಮೃತದೇಹವನ್ನು ಗಮನಿಸಿದ ಪರಿಸರ ವಾಸಿಗಳು ಗಮನಿಸಿ ಮಂಜೇಶ್ವರ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಮಹಜರು ನಡೆಸಿದ್ದಾರೆ. ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ವಾರಿಸುದಾರರು ಇದ್ದಲ್ಲಿ. ಮಂಜೇಶ್ವರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.

ಕಾಸರಗೋಡು: ಅಪರಿಚಿತ ಯುವಕನ ಮೃತದೇಹ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್