ನಿಮಿಷ ಪ್ರಿಯಾರನ್ನು ಕರೆತರಲು ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡಲಾಗುತ್ತಿದೆ: ಸುಪ್ರೀಂ ಕೋರ್ಟ್‌ಗೆ ಕೇಂದ್ರ
(ನ್ಯೂಸ್ ಕಡಬ) newskadaba.com,ಜು .18. ನವದೆಹಲಿ: ಯೆಮೆನ್‌ನಲ್ಲಿ ಸ್ಥಳೀಯ ಪ್ರಜೆಯನ್ನು ಕೊಲೆ ಮಾಡಿದ ಆರೋಪದಲ್ಲಿ ಶಿಕ್ಷೆಗೆ ಗುರಿಯಾಗಿರುವ ಕೇರಳದ ನರ್ಸ್ ನಿಮಿಷ ಪ್ರಿಯಾ ಅವರ ಮರಣದಂಡನೆಯನ್ನು ಮುಂದೂಡಲಾಗಿದೆ ಎಂದು ಶುಕ್ರವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಲಾಗಿದೆ. ಯೆಮನ್‌ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಕೇರಳ ಮೂಲದ 38 ವರ್ಷದ ನಿಮಿಷ ಪ್ರಿಯಾ ಅವರನ್ನು ರಕ್ಷಿಸಲು ಕೇಂದ್ರ ಸರ್ಕಾರವು ರಾಜತಾಂತ್ರಿಕ ಮಾರ್ಗಗಳನ್ನು ಬಳಸುವಂತೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತು. ಕೇಂದ್ರದ ಪರವಾಗಿ ಹಾಜರಾದ ಅಟಾರ್ನಿ ಜನರಲ್ […]






