kerala

ಎಕ್ಸ್‌ಪ್ರೆಸ್‌ ರೈಲಿನಲ್ಲಿ ಮತ್ತೆ ಬೆಂಕಿ!

(ನ್ಯೂಸ್ ಕಡಬ)newskawaba @gmail.com ಕಣ್ಣೂರು (ಕೇರಳ)  ಜೂನ್, 1 . ಕಣ್ಣೂರು ರೈಲು ನಿಲ್ದಾಣದಲ್ಲಿ ನಿಂತಿದ್ದ ರೈಲಿಗೆ ಬೆಂಕಿ ಹೊತ್ತಿಕೊಂಡಿದೆ. ನಿನ್ನೆ ರಾತ್ರಿ 11:45 ಕ್ಕೆ ಪ್ರಯಾಣ ಮುಗಿಸಿದ ಅಲಪ್ಪುಳ- ಕಣ್ಣೂರು ಎಕ್ಸಿಕ್ಯೂಟಿವ್ ಎಕ್ಸ್‌ಪ್ರೆಸ್‌ನ ಬೋಗಿಯಲ್ಲಿ ರಾತ್ರಿ 1.25ಕ್ಕೆ ಬೆಂಕಿ ಕಾಣಿಸಿಕೊಂಡಿದೆ. ರೈಲಿನ ಕೊನೆಯ ಮೂರು ಬೋಗಿಗಳಿಗೆ ಬೆಂಕಿ ವ್ಯಾಪಿಸಿ, ಸಂಪೂರ್ಣ ಸುಟ್ಟು ಕರಕಲಾಗಿದೆ. ಈ ಘಟನೆಯ ಕುರಿತು ಕೇರಳ ಪೊಲೀಸರು ಮತ್ತು ರೈಲ್ವೆ ಪೊಲೀಸರು ತನಿಖೆ ಆರಂಭಿಸಲಾಗಿದೆ ಎಂದು ವರದಿಯಾಗಿದೆ .  

ಎಕ್ಸ್‌ಪ್ರೆಸ್‌ ರೈಲಿನಲ್ಲಿ ಮತ್ತೆ ಬೆಂಕಿ! Read More »

ಬ್ರೇಕಿಂಗ್ ನ್ಯೂಸ್

ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಗರ್ಭಿಣಿ ಸೇರಿ ಇಬ್ಬರು ಸಜೀವ ದಹನ   

(ನ್ಯೂಸ್ ಕಡಬ)newskadaba.com ಕಣ್ಣೂರ್, ಫೆ.02. ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಇಡೀ ಕಾರನ್ನು ವ್ಯಾಪಿಸಿದ ಪರಿಣಾಮ ಗರ್ಭಿಣಿ ಸೇರಿದಂತೆ ಇಬ್ಬರೂ ಸಜೀವ ದಹನಗೊಂಡ ಘಟನೆ ದೇವರನಾಡು ಕೇರಳದ ಕಣ್ಣೂರಿನಲ್ಲಿ ನಡೆದಿದೆ.   ಕಣ್ಣೂರು ಜಿಲ್ಲಾಸ್ಪತ್ರೆಯ ಮುಂಭಾಗವೇ ಈ ದುರಂತ ನಡೆದಿದೆ.  ಹೀಗೆ ಕಾರಿನಲ್ಲಿ ಸಿಲುಕಿ ಸಜೀವ ದಹನಗೊಂಡವರನ್ನು ಪ್ರಜೀತ್ ಹಾಗೂ ಆತನ ಪತ್ನಿ ರೀಷಾ ಎಂದು ಗುರುತಿಸಲಾಗಿದೆ. ಘಟನೆ ಸಂಭವಿಸುವ ವೇಳೆ  ಕಾರಿನಲ್ಲಿ  ಒಟ್ಟು ಆರು ಜನ ಪ್ರಯಾಣಿಸುತ್ತಿದ್ದರು. ಕಾರಿನ ಮುಂಭಾಗದ ಸೀಟಿನಲ್ಲಿ ಗರ್ಭಿಣಿ  ರೀಷಾ ಹಾಗೂ

ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಗರ್ಭಿಣಿ ಸೇರಿ ಇಬ್ಬರು ಸಜೀವ ದಹನ    Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪೊಲೀಸ್ ಸಮವಸ್ತ್ರ ಧರಿಸಿ ವೃದ್ಧೆಯ ಚಿನ್ನ ಎಗರಿಸಿದ ಕಳ್ಳರು ! ➤ ನಾಲ್ವರು ಅರೆಸ್ಟ್…

(ನ್ಯೂಸ್ ಕಡಬ)newskadaba.com ಕೊಚ್ಚಿ, ಫೆ.01. ಪೊಲೀಸರ ಸಮವಸ್ತ್ರ ಧರಿಸಿ ವೃದ್ಧೆಯ 7 ಪವನ್ ಚಿನ್ನ ದೋಚಿದ್ದ ಭಟ್ಕಳ ಮೂಲದ ನಾಲ್ವರು ದುಷ್ಕರ್ಮಿಗಳನ್ನು ರಾಜ್ಯ ಪೊಲೀಸರು ಬಂಧಿಸಿದ್ದಾರೆ. ಇನ್ನೂ ಕೆಲವು ಮಂದಿ ಕೃತ್ಯದಲ್ಲಿ ಭಾಗಿಯಾಗಿರುವ ಶಂಕೆ ಇದ್ದು, ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಕರಾವಳಿ ಮೂಲದ ಗ್ಯಾಂಗ್ ಕೇರಳವನ್ನೇ ಹೆಚ್ಚು ಕೇಂದ್ರೀಕೃತವಾಗಿಸಿಕೊಂಡಿತ್ತು. ಇಂತಹ ಅನೇಕ ಅಪರಾಧಗಳನ್ನು ಎಸಗಿರುವ ಹಿನ್ನೆಲೆಯನ್ನು ಈ ಗ್ಯಾಂಗ್ ಹೊಂದಿದ್ದು, ತ್ರಿಶೂರ್ ಪೊಲೀಸ್ ತಂಡ ಕೊಚ್ಚಿಯನ್ನು ತಲುಪಿ, ವಿಚಾರಣೆ ನಡೆಸಿ, ಓರ್ವ ಆರೋಪಿಯನ್ನು ಬಂಧಿಸಿದೆ. ಎಸಿಪಿ

ಪೊಲೀಸ್ ಸಮವಸ್ತ್ರ ಧರಿಸಿ ವೃದ್ಧೆಯ ಚಿನ್ನ ಎಗರಿಸಿದ ಕಳ್ಳರು ! ➤ ನಾಲ್ವರು ಅರೆಸ್ಟ್… Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಕ್ಕಿ ಸಾಗಿಸುತ್ತಿದ್ದ ಲಾರಿಗೆ ಢಿಕ್ಕಿ ಹೊಡೆದ ಕಾರು ➤ ಐವರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಕೇರಳ, ಜ.24. ಕಾರು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮೃತಪಟ್ಟಿರುವ ಘಟನೆ ಕೇರಳದ ಅಲಪ್ಪುಳ ಜಿಲ್ಲೆಯ ಅಂಬಲಪುಳ ಬಳಿ ನಸುಕಿನ ವೇಳೆ ನಡೆದಿದೆ. ಇವರಲ್ಲಿ ನಾಲ್ವರು ತಿರುವನಂತಪುರಂ ಮೂಲದವರಾಗಿದ್ದು, ನಗರದ ಇಸ್ರೋ ಕ್ಯಾಂಟೀನ್‌ನಲ್ಲಿ ಕೆಲಸ ಮಾಡುತ್ತಿದ್ದರು. ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಆಂಧ್ರಪ್ರದೇಶದಿಂದ ಅಕ್ಕಿ ಸಾಗಿಸುತ್ತಿದ್ದ ಲಾರಿ ಹಾಗೂ ಐವರು ಪ್ರಯಾಣಿಸುತ್ತಿದ್ದ ಕಾರು ಪರಸ್ಪರ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಗಾಯಗೊಂಡಿದ್ದ ಮತ್ತೊಬ್ಬರು ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಅಕ್ಕಿ ಸಾಗಿಸುತ್ತಿದ್ದ ಲಾರಿಗೆ ಢಿಕ್ಕಿ ಹೊಡೆದ ಕಾರು ➤ ಐವರು ಸ್ಥಳದಲ್ಲೇ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅನ್ಯಕೋಮಿನ ಜೋಡಿ ಲಾಡ್ಜ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ)newskadaba.com  ಕಾಸರಗೋಡು, ಜ.21. ನಾಪತ್ತೆಯಾಗಿದ್ದ ಅನ್ಯಕೋಮಿನ ಜೋಡಿ ಲಾಡ್ಜ್ ವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ರಾಜಾಪುರ ಕಲ್ಲಾರು ಒಕ್ಲಾವು ನಿವಾಸಿ ಮಹಮ್ಮದ್ ಶರೀಫ್ (40) ಮತ್ತು ಕಲ್ಲಾರು ಅಡಕಂ ಪುಲಿಕುಳಿಯ ಸಿಂಧು (36)ಮೃತರು ಎಂದು ಗುರುತಿಸಲಾಗಿದೆ. ಜನವರಿ 7ರಂದು ಇಬ್ಬರೂ ನಾಪತ್ತೆಯಾಗಿದ್ದರು. ಈ ಕುರಿತು ನಾಪತ್ತೆ ಪ್ರಕರಣ ದಾಖಲಿಸಿ ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಇದೀಗ ಗುರುವಾಯೂರು ಪಡಿಯಾರ ನಾಡೆಯ  ಕೊಠಡಿಯೊಳಗೆ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರೂ ಪತ್ತೆಯಾಗಿದ್ದಾರೆ ಎಂದು ವರದಿ ತಿಳಿಸಿದೆ.  

ಅನ್ಯಕೋಮಿನ ಜೋಡಿ ಲಾಡ್ಜ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Theft, crime, Robbery

ಕಾಸರಗೋಡು: ಒಂದೇ ದಿನ ಎರಡು ಮನೆಗೆ ಕನ್ನ ➤ 40 ಪವನ್ ಚಿನ್ನಾಭರಣ ಸಹಿತ ನಗದು ಕಳವು.!

(ನ್ಯೂಸ್ ಕಡಬ) newskadaba.com  ಕಾಸರಗೋಡು, ಜ.14. ಎರಡು ಮನೆಗಳಿಗೆ ನುಗ್ಗಿದ ಕಳ್ಳರು ಸುಮಾರು 40 ಪವನ್ ಚಿನ್ನಾಭರಣ ಮತ್ತು 40 ಸಾವಿರ ರೂ. ನಗದು ಕಳವು ಗೈದ ಘಟನೆ ಕುಂಬಳೆ ಸಮೀಪದ ನಾಯ್ಕಾಪು ವಿನಲ್ಲಿ ನಡೆದಿದೆ. ಬ್ಯಾಂಕ್ ಸಿಬ್ಬಂದಿ ವಾಸುದೇವ ರಾವ್ ಮನೆಗೆ ನುಗ್ಗಿ 35 ಪವನ್ ಚಿನ್ನಾಭರಣ ಮತ್ತು 15 ಸಾವಿರ ರೂ. ನಗದು ಹಾಗೂ ಮೋಹನ್ ದಾಸ್ ಎಂಬವರ ಮನೆಯಿಂದ ಮೂರೂವರೆ ಪವನ್ ಚಿನ್ನಾಭರಣ ಮತ್ತು 25 ಸಾವಿರ ರೂ. ನಗದು ಕಳವು ಮಾಡಲಾಗಿದೆ.

ಕಾಸರಗೋಡು: ಒಂದೇ ದಿನ ಎರಡು ಮನೆಗೆ ಕನ್ನ ➤ 40 ಪವನ್ ಚಿನ್ನಾಭರಣ ಸಹಿತ ನಗದು ಕಳವು.! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೊಟ್ಟೆ ಬಳಸಿ ತಯಾರಿಸುವ ‘ಮಯೋನೆಸ್’ ನ್ನು ನಿಷೇಧಿಸಿದ ಕೇರಳ ಸರ್ಕಾರ…!!                 

(ನ್ಯೂಸ್ ಕಡಬ) newskadaba.com  ತಿರುವನಂತಪುರಂ, ಜ.14. ಕೇರಳ ಸರ್ಕಾರವು ಮೊಟ್ಟೆ ಬಳಸಿ ಮಾಡುವ ‘ಮಯೋನೆಸ್’ ನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ರಾಜ್ಯಾದ್ಯಂತ ಆಹಾರ ವಿಷಪೂರಿತಗೊಂಡ ಪ್ರಕರಣಗಳ ಹೆಚ್ಚಳದ ಹಿನ್ನೆಲೆ ಕೇರಳ ಸರ್ಕಾರ ಎಲ್ಲಾ ಹೋಟೆಲ್‌ಗಳಲ್ಲಿ ಮೊಟ್ಟೆಯಿಂದ ತಯಾರಿಸಿದ ಮಯೋನೆಸ್ ನ್ನು ನಿಷೇಧಿಸಲಾಗಿದೆ ಎಂದು ರಾಜ್ಯ ಆರೋಗ್ಯ ಸಚಿವ ವೀಣಾ ಜಾರ್ಜ್ ಹೇಳಿದ್ದಾರೆ. ಕಳೆದ ಎರಡು ವಾರಗಳಲ್ಲಿ ರಾಜ್ಯಾದ್ಯಂತ ಕನಿಷ್ಠ ಎರಡು ಡಜನ್ ಶಂಕಿತ ಪುಡ್ ಪಾಯಿಸನಿಂಗ್ ಪ್ರಕರಣಗಳು ವರದಿಯಾಗಿವೆ, ಕೆಲವು ಮಯೋನೆಸ್ ಸೇವನೆಯಿಂದಾಗಿ ಉಂಟಾಗಿದೆ. ಸರಿಯಾಗಿ ಸಂಗ್ರಹಿಸದ

ಮೊಟ್ಟೆ ಬಳಸಿ ತಯಾರಿಸುವ ‘ಮಯೋನೆಸ್’ ನ್ನು ನಿಷೇಧಿಸಿದ ಕೇರಳ ಸರ್ಕಾರ…!!                  Read More »

ರಾಷ್ಟ್ರೀಯ ನ್ಯೂಸ್

 ಕಾಸರಗೋಡು: ಆಫ್ರಿಕನ್‌ ಹಂದಿ ಜ್ವರ ಪತ್ತೆ ಪ್ರಕರಣ.!! ➤  500 ಕ್ಕೂ ಹೆಚ್ಚು ಹಂದಿಗಳನ್ನು ಕೊಲ್ಲಲು ಆದೇಶ           

(ನ್ಯೂಸ್ ಕಡಬ) newskadaba.com ಕಾಸರಗೋಡು, ಜ.13. ಕರ್ನಾಟಕದ ಗಡಿಯಿಂದ ಸುಮಾರು ಐದು ಕಿ.ಮೀ. ದೂರದಲ್ಲಿರುವ ಕೇರಳದ ಕಾಸರಗೋಡು ಜಿಲ್ಲೆ ಮಂಜೇಶ್ವರ ತಾಲೂಕಿನ ಕಾಟು ಕುಕ್ಕೆಯಲ್ಲಿ ಆಫ್ರಿಕನ್‌ ಹಂದಿ ಜ್ವರ ಕಾಣಿಸಿಕೊಂಡಿದೆ. ಇಲ್ಲಿರುವ ಫಾರ್ಮ್‌ಗಳಲ್ಲಿ 200ಕ್ಕೂ ಅಧಿಕ ಸೋಂಕು ಬಾಧಿತ ಹಂದಿಗಳು ಸಾವಿಗೀಡಾಗಿರುವುದಾಗಿ ವರದಿ ತಿಳಿಸಿದೆ. ಇದರ ಬೆನ್ನಲ್ಲೇ ಸುಮಾರು 500 ಕ್ಕೂ ಹೆಚ್ಚು  ಹಂದಿಗಳ ಮಾರಾಣ ಹೋಮ ಮಾಡಲಾಗುತ್ತಿದೆ. ಇದೀಗ ಸೋಂಕು ಪತ್ತೆಯಾದ ಕೇಂದ್ರದಿಂದ 10 ಕಿ.ಮೀ. ವ್ಯಾಪ್ತಿಯಲ್ಲಿ ಮೂರು ತಿಂಗಳಿಗೆ ಹಂದಿ ಮಾಂಸಕ್ಕೆ ನಿಷೇಧ ಹೇರಲಾಗಿದೆ.

 ಕಾಸರಗೋಡು: ಆಫ್ರಿಕನ್‌ ಹಂದಿ ಜ್ವರ ಪತ್ತೆ ಪ್ರಕರಣ.!! ➤  500 ಕ್ಕೂ ಹೆಚ್ಚು ಹಂದಿಗಳನ್ನು ಕೊಲ್ಲಲು ಆದೇಶ            Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಾಂಬ್ ಸ್ಫೋಟ ➤ ಓರ್ವನಿಗೆ ಗಾಯ

(ನ್ಯೂಸ್ ಕಡಬ) newskadaba.com ಕೇರಳ, ಜ. 13.   ಮನೆಯೊಂದರಲ್ಲಿ ಬಾಂಬ್ ಸ್ಫೋಟಗೊಂಡ ಪರಿಣಾಮ ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೇರಳದ ಕಣ್ಣೂರು ಜಿಲ್ಲೆಯಲ್ಲಿ ಶುಕ್ರವಾರದಂದು  ವರದಿಯಾಗಿದೆ. ಗಾಯಗೊಂಡ ವ್ಯಕ್ತಿಯನ್ನು ಜಿತಿನ್ ನಾಡಮ್ಮಾಲ್ ಎಂದು ಗುರುತಿಸಲಾಗಿದೆ. ಇವರಿಗೆ ಸ್ಥಳೀಯ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಇದೀಗ ಅವರನ್ನು ಕಣ್ಣೂರು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದ್ದಾರೆ. ಮನೆಯಲ್ಲಿ ಒಂದಕ್ಕಿಂತ ಹೆಚ್ಚು ಬಾಂಬ್‌ಗಳು ಪತ್ತೆಯಾಗಿದೆ ಎಂದು ಹೇಳಲಾಗುತ್ತಿದೆ. ಈ ಸಂಬಂಧ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು,

ಬಾಂಬ್ ಸ್ಫೋಟ ➤ ಓರ್ವನಿಗೆ ಗಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಸರಗೋಡು: ಬೈಕ್ ಗೆ ಶಾಲಾ ಬಸ್ ಢಿಕ್ಕಿ..! ➤  ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು           

(ನ್ಯೂಸ್ ಕಡಬ) newskadaba.com  ಮಂಜೇಶ್ವರ, ಜ.13. ಶಾಲಾ ವಿದ್ಯಾರ್ಥಿಗಳು ತೆರಳುತ್ತಿದ್ದ ಬೈಕ್‌ ಗೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೀಯಪದವಿನ ಪ್ರೀತೇಶ್ ಮತ್ತು ಅಭಿ ಮೃತ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ. ಶಾಲಾ ಬಸ್, ವಿದ್ಯಾರ್ಥಿಗಳು ಹೋಗುತ್ತಿದ್ದ ಬೈಕ್ ಗೆ ಢಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ ಎಂದು ವರದಿಯಾಗಿದೆ.  

ಕಾಸರಗೋಡು: ಬೈಕ್ ಗೆ ಶಾಲಾ ಬಸ್ ಢಿಕ್ಕಿ..! ➤  ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು            Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top