kocchi

ಭಾರತೀಯ ನೌಕಾಪಡೆಯ ನಾವಿಕನ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ)newskadaba.com ಕೊಚ್ಚಿ, ಜು.28. ಭಾರತೀಯ ನೌಕಾಪಡೆಯ 19 ವರ್ಷದ ನಾವಿಕನೊಬ್ಬನ ಮೃತದೇಹ INS ವಿಕ್ರಾಂತ್ ಹಡಗಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕೊಚ್ಚಿಯಲ್ಲಿ ನಡೆದಿದೆ. ಪ್ರಸ್ತುತ ನೌಕೆಯನ್ನು ಕೊಚ್ಚಿ ಕರಾವಳಿಯಲ್ಲಿ ನಿಲ್ಲಿಸಲಾಗಿದೆ. ಘಟನೆಯ ಕುರಿತು ತನಿಖಾ ಮಂಡಳಿಗೆ ಆದೇಶಿಸಲಾಗಿದೆ ಎಂದು ರಕ್ಷಣಾ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ಹೇಳಿದ್ದು, ನಾವಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ನಾವಿಕ ಬಿಹಾರದ ಮುಜಾಫರ್ ಪುರದ ಮೂಲದವರಾಗಿದ್ದು, ಸಾಮಾನ್ಯ ಕೇಡರ್ ಆಗಿದ್ದು, ಕೇಂದ್ರದ ಅಗ್ನಿವೀರ್ ಯೋಜನೆಯ ಮೂಲಕ ನೇಮಕಗೊಂಡಿಲ್ಲ ಎಂದು ವರದಿಯಾಗಿದೆ.

ಭಾರತೀಯ ನೌಕಾಪಡೆಯ ನಾವಿಕನ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಖ್ಯಾತ ಮಲಯಾಳಂ ನಟ ಬಾಬುರಾಜ್ ಅರೆಸ್ಟ್

(ನ್ಯೂಸ್ ಕಡಬ)newskadaba.com ಕೊಚ್ಚಿ, ಫೆ.06. ಭೂ ವಂಚನೆ ಪ್ರಕರಣದಲ್ಲಿ ಮಲಯಾಳಂ ನಟ ಬಾಬುರಾಜ್ ಅವರನ್ನು ಬಂಧಿಸಲಾಗಿದೆ ಎಂದು ವರದಿ ತಿಳಿಸಿದೆ.  ಕೇರಳ ಹೈಕೋರ್ಟ್ ನೀಡಿದ ಆದೇಶದ ಮೇರೆಗೆ ಆದಿಮಾಲಿ ಪೊಲೀಸ್ ಠಾಣೆಯಲ್ಲಿ ಬಾಬುರಾಜ್ ಶರಣಾಗಿದ್ದಾರೆ. ಕಂದಾಯ ಇಲಾಖೆಯ ಕ್ರಮ ಎದುರಿಸುತ್ತಿದ್ದ ಇಡುಕ್ಕಿಯ ಕಲ್ಲಾರ್‌ನಲ್ಲಿರುವ ತಮ್ಮ ರೆಸಾರ್ಟ್ ನ್ನು ಬಾಬುರಾಜ್ ಗುತ್ತಿಗೆಗೆ ನೀಡಿದ್ದರು. ಹೈಕೋರ್ಟ್ ನಿರ್ದೇಶನದನ್ವಯ ಅವರನ್ನು ಬಂಧಿಸಲಾಗಿತ್ತು. ಇಡುಕ್ಕಿಯ ಸ್ಥಳೀಯ ನ್ಯಾಯಾಲಯದಲ್ಲಿ ಅವರನ್ನು ಹಾಜರುಪಡಿಸಿದ ನಂತರ ಜಾಮೀನಿನ ಮೇಲೆ ಅವರು ಬಿಡುಗಡೆಯಾದರು ಎನ್ನಲಾಗಿದೆ.  

ಖ್ಯಾತ ಮಲಯಾಳಂ ನಟ ಬಾಬುರಾಜ್ ಅರೆಸ್ಟ್ Read More »

ರಾಷ್ಟ್ರೀಯ ನ್ಯೂಸ್

ಪೊಲೀಸ್ ಸಮವಸ್ತ್ರ ಧರಿಸಿ ವೃದ್ಧೆಯ ಚಿನ್ನ ಎಗರಿಸಿದ ಕಳ್ಳರು ! ➤ ನಾಲ್ವರು ಅರೆಸ್ಟ್…

(ನ್ಯೂಸ್ ಕಡಬ)newskadaba.com ಕೊಚ್ಚಿ, ಫೆ.01. ಪೊಲೀಸರ ಸಮವಸ್ತ್ರ ಧರಿಸಿ ವೃದ್ಧೆಯ 7 ಪವನ್ ಚಿನ್ನ ದೋಚಿದ್ದ ಭಟ್ಕಳ ಮೂಲದ ನಾಲ್ವರು ದುಷ್ಕರ್ಮಿಗಳನ್ನು ರಾಜ್ಯ ಪೊಲೀಸರು ಬಂಧಿಸಿದ್ದಾರೆ. ಇನ್ನೂ ಕೆಲವು ಮಂದಿ ಕೃತ್ಯದಲ್ಲಿ ಭಾಗಿಯಾಗಿರುವ ಶಂಕೆ ಇದ್ದು, ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಕರಾವಳಿ ಮೂಲದ ಗ್ಯಾಂಗ್ ಕೇರಳವನ್ನೇ ಹೆಚ್ಚು ಕೇಂದ್ರೀಕೃತವಾಗಿಸಿಕೊಂಡಿತ್ತು. ಇಂತಹ ಅನೇಕ ಅಪರಾಧಗಳನ್ನು ಎಸಗಿರುವ ಹಿನ್ನೆಲೆಯನ್ನು ಈ ಗ್ಯಾಂಗ್ ಹೊಂದಿದ್ದು, ತ್ರಿಶೂರ್ ಪೊಲೀಸ್ ತಂಡ ಕೊಚ್ಚಿಯನ್ನು ತಲುಪಿ, ವಿಚಾರಣೆ ನಡೆಸಿ, ಓರ್ವ ಆರೋಪಿಯನ್ನು ಬಂಧಿಸಿದೆ. ಎಸಿಪಿ

ಪೊಲೀಸ್ ಸಮವಸ್ತ್ರ ಧರಿಸಿ ವೃದ್ಧೆಯ ಚಿನ್ನ ಎಗರಿಸಿದ ಕಳ್ಳರು ! ➤ ನಾಲ್ವರು ಅರೆಸ್ಟ್… Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶಬರಿಮಲೆ ಕಾಣಿಕೆ ಎಣಿಕೆಯಲ್ಲಿ ಲೋಪ ! ➤  ವರದಿಗೆ ಹೈಕೋರ್ಟ್ ಸೂಚನೆ

(ನ್ಯೂಸ್ ಕಡಬ)newskadaba.com ಕೊಚ್ಚಿ, ಜ.20. ಶಬರಿಮಲೆಯ ಅಯ್ಯಪ್ಪಸ್ವಾಮಿ ದೇವಸ್ಥಾನಕ್ಕೆ ಭಕ್ತರು ನೀಡಿರುವ ಕಾಣಿಕೆ ಮತ್ತು ಇತರೆ ದೇಣಿಗೆ ಪೊಟ್ಟಣ ಎಣಿಕೆಯಲ್ಲಿ ಏನಾದರೂ ಲೋಪವಾಗಿದೆಯೇ ಎಂಬುದನ್ನು ತನಿಖೆ ನಡೆಸಿ ವರದಿ ನೀಡುವಂತೆ ತಿರುವಾಂಕೂರು ದೇವಸ್ವಂ ಮಂಡಳಿಯ ಗುಪ್ತಚರ ವಿಭಾಗಕ್ಕೆ ಹೈಕೋರ್ಟ್‌ ಸೂಚಿಸಿದೆ. ಕಾಣಿಕೆಯನ್ನು ಎಣಿಸುವಲ್ಲಿ ಆದ ಲೋಪದ ಕಾರಣ, ಕಾಣಿಕೆ ಹಾಕಿದ ನೋಟುಗಳು ಬಳಸಲಾಗದ ಸ್ಥಿತಿ ತಲುಪಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಹೈಕೋರ್ಟ್‌ ಈ ಸೂಚನೆ ನೀಡಿದೆ. 2 ತಿಂಗಳ ಯಾತ್ರೆಯ ಅವಧಿಯಲ್ಲಿ ದೇಗುಲಕ್ಕೆ 310 ಕೋಟಿ ರು.

ಶಬರಿಮಲೆ ಕಾಣಿಕೆ ಎಣಿಕೆಯಲ್ಲಿ ಲೋಪ ! ➤  ವರದಿಗೆ ಹೈಕೋರ್ಟ್ ಸೂಚನೆ Read More »

ರಾಷ್ಟ್ರೀಯ ನ್ಯೂಸ್
Scroll to Top