ಕೊಡಾಜೆ: ಖಾಸಗಿ ಬಸ್ ಪಲ್ಟಿ ► ಹಲವರಿಗೆ ಗಾಯ
(ನ್ಯೂಸ್ ಕಡಬ) newskadaba.com ವಿಟ್ಲ, ನ. 30. ಚಾಲಕನ ನಿಯಂತ್ರಣ ಕಳೆದುಕೊಂಡ ಖಾಸಗಿ ಬಸ್ಸೊಂದು ಪಲ್ಟಿಯಾದ ಘಟನೆ ಮಾಣಿ- ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆಯಲ್ಲಿ ಗುರುವಾರದಂದು ನಡೆದಿದೆ. ಮಡಿಕೇರಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಬಸ್ಸಿನಲ್ಲಿದ್ದ ಸುಮಾರು 20ಕ್ಕಿಂತಲೂ ಅಧಿಕ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಘಟನೆ ತೀವ್ರತೆಗೆ ಬಸ್ ರಸ್ತೆಯಿಂದ ಪೊದೆಯೊಂದಕ್ಕೆ ನುಗ್ಗಿ ಪಲ್ಟಿಯಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದಾರೆ.
ಕೊಡಾಜೆ: ಖಾಸಗಿ ಬಸ್ ಪಲ್ಟಿ ► ಹಲವರಿಗೆ ಗಾಯ Read More »
ಕರಾವಳಿ
