ಅಪಹರಣಗೈದು ಅತ್ಯಾಚಾರ – ವಿದ್ಯಾರ್ಥಿನಿ ಮೃತ್ಯು

(ನ್ಯೂಸ್ ಕಡಬ)newskadaba.com ಕೊಲ್ಕತ್ತಾ, ಜು.27. ಶಾಲೆಯಿಂದ ಮನೆಗೆ ವಾಪಸ್ಸಾಗುತ್ತಿದ್ದಾಗ ಅಪಹರಣ- ಅತ್ಯಾಚಾರಕ್ಕೆ ಒಳಗಾಗಿದ್ದ ಒಂಭತ್ತನೇ ತರಗತಿ ವಿದ್ಯಾರ್ಥಿನಿ ಉತ್ತರ ಬಂಗಾಳ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಈ ಪ್ರಕರಣ ಸಂಬಂಧ ಪೊಲೀಸರು ಐದು ಮಂದಿ ಶಂಕಿತರನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವಿದ್ಯಾರ್ಥಿನಿಯನ್ನು ಖಾಸಗಿ ಆಸ್ಪತ್ರೆಯಿಂದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಲೈಂಗಿಕ ಕಿರುಕುಳದ ವೇಳೆ ಬಾಲಕಿಯ ಮೆದುಳಿಗೆ ಸಾಕಷ್ಟು ಆಮ್ಲಜನಕ ಪೂರೈಕೆಯಾಗದೇ ಆಕೆ ಪ್ರಜ್ಞಾಹೀನ ಸ್ಥಿತಿ ತಲುಪಿದ್ದಾಗಿ ವೈದ್ಯಕೀಯ ಪರೀಕ್ಷೆಯಿಂದ ದೃಢಪಟ್ಟಿತ್ತು.

ಅಪಹರಣಗೈದು ಅತ್ಯಾಚಾರ – ವಿದ್ಯಾರ್ಥಿನಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್