koppala

ಬಸನಗೌಡ ಪಾಟೀಲ್‌ ಯತ್ನಾಳ್‌ ವಿರುದ್ದ FIR ದಾಖಲು

(ನ್ಯೂಸ್‌ ಕಡಬ) newskadaba.com, ಆ.21:‌‌ ಹಿಂದೂ–ಮುಸ್ಲಿಮರ ಮಧ್ಯೆ ಸೌಹಾರ್ದಕ್ಕೆ ಧಕ್ಕೆ ತರುವ ರೀತಿಯಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ವಿರುದ್ದ ಕೊಪ್ಪಳ ನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಆ.3ರಂದು ಅನ್ಯಕೋಮಿನ ಯುವಕನಿಂದ ಕೊಪ್ಪಳದ ಕುರುಬರ ಓಣಿಯ ಗವಿಸಿದ್ದಪ್ಪ ನಾಯಕನ ಕೊಲೆ ಆಗಿತ್ತು. ಆ.10ರಂದು ಸಂತ್ರಸ್ತ ಕುಟುಂಬದವರಿಗೆ ಸಾಂತ್ವಾನ ಹೇಳಲು ಕೊಪ್ಪಳಕ್ಕೆ ಬಂದಿದ್ದ ಯತ್ನಾಳ್, ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಮದುವೆಯಾದರೆ 5 ಲಕ್ಷ ರೂ. ಕೊಡುವ ಕಾರ್ಯಕ್ರಮ […]

ಬಸನಗೌಡ ಪಾಟೀಲ್‌ ಯತ್ನಾಳ್‌ ವಿರುದ್ದ FIR ದಾಖಲು Read More »

ಕರ್ನಾಟಕ

ರಸಗೊಬ್ಬರ ಕೊರತೆ: ಮಣ್ಣು ತಿಂದು ಸರ್ಕಾರದ ವಿರುದ್ಧ ರೈತರ ಆಕ್ರೋಶ..!

(ನ್ಯೂಸ್ ಕಡಬ) newskadaba.com, ಜು. 30. ಕೊಪ್ಪಳ: ರಸಗೊಬ್ಬರ ಪೂರೈಕೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದ್ದು, ಎಲ್ಲಿಯೂ ರಸಗೊಬ್ಬರ ಸಿಗದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ರೈತನೊಬ್ಬ ಮಣ್ಣು ತಿಂದು ಪ್ರತಿಭಟನೆ ನಡೆಸಿದ ಘಟನೆ ಕೊಪ್ಪಳದಲ್ಲಿ ನಡೆದಿದೆ. ಕುಣಿಕೇರಿ ತಾಂಡಾದ ಚಂದ್ರಪ್ಪ ಮತ್ತು ನೂರಾರು ರೈತರು ಯೂರಿಯಾ ಖರೀದಿಸಲು ಕೊಪ್ಪಳ ಎಪಿಎಂಸಿಯಲ್ಲಿ ಸಾಲುಗಟ್ಟಿ ನಿಂತಿದ್ದರು. ಶನಿವಾರ ಬೆಳಿಗ್ಗೆ 4 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ರಸಗೊಬ್ಬರಕ್ಕಾಗಿ ಸರತಿ ಸಾಲಿನಲ್ಲಿ ನಿಂತಿದ್ದರು. ಆದರೆ, ಹಲವು ಗಂಟೆಗಳ ಕಾಲ ನಿಂತರೂ ಗೊಬ್ಬರ ಸಿಗದ ಕಾರಣ

ರಸಗೊಬ್ಬರ ಕೊರತೆ: ಮಣ್ಣು ತಿಂದು ಸರ್ಕಾರದ ವಿರುದ್ಧ ರೈತರ ಆಕ್ರೋಶ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಒಳ ಮೀಸಲಾತಿ ಜಾರಿ: ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ)newskadaba.com, ಕೊಪ್ಪಳ(ಅ.04): ಒಳ ಮೀಸಲಾತಿ ಜಾರಿ ಸಂಬಂಧ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಈ ಬಗ್ಗೆ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಜಾತಿ ಗಣತಿ ಅನುಷ್ಠಾನ ಮಾಡಬೇಕು ಎಂದು ಆರ್ಥಿಕ ಸಲಹೆಗಾರ ಬಸವರಾಜ್ ರಾಯರೆಡ್ಡಿ ಅವರ ಅಭಿಪ್ರಾಯ ಹೇಳಿದ್ದಾರೆ. ಅದನ್ನು ಕ್ಯಾಬಿನೆಟ್ ನಲ್ಲಿ ತಂದು ಚರ್ಚೆ ಮಾಡಬೇಕು. ಹಿಂದುಳಿದ ವರ್ಗಗಳ ಆಯೋಗದ ಜೊತೆ ಚರ್ಚೆ ಮಾಡಬೇಕಿದೆ. ಅದಕ್ಕೆಲ್ಲಾ ಸಮಯ ತಗಲುತ್ತದೆ ಎಂದರು.

ಒಳ ಮೀಸಲಾತಿ ಜಾರಿ: ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ

ಸಾಮಾಜಿಕ, ಆರ್ಥಿಕ ವರದಿ ಬಿಡುಗಡೆ ಮಾಡಲಿ: ಬಸವರಾಜ್ ರಾಮರೆಡ್ಡಿ ಒತ್ತಾಯ

(ನ್ಯೂಸ್ ಕಡಬ)newskadaba.com, ಕೊಪ್ಪಳ(ಅ.04): ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದೆ ನಮ್ಮದೇ ಸರಕಾರದಲ್ಲಿ ಸಮೀಕ್ಷೆ ಮಾಡಿಸಿದ ಸಾಮಾಜಿಕ, ಆರ್ಥಿಕ ಗಣತಿ ವರದಿಯನ್ನು ಇದೇ ವಾರದಲ್ಲಿ ಸಚಿವ ಸಂಪುಟದಲ್ಲಿ ಒಪ್ಪಿಗೆ ಪಡೆದು ನವೆಂಬರ್ 01ರಂದು ಅನುಷ್ಠಾನ ಮಾಡಲಿ ಎಂದು ಸಿಎಂ ಆರ್ಥಿಕ ಸಲಹೆಗಾರ ಮತ್ತು ಶಾಸಕ ಬಸವರಾಜ್ ರಾಯರೆಡ್ಡಿ ಆಗ್ರಹಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಅಭಿವೃದ್ಧಿ ಚರ್ಚೆ ಮಾಡಿರುವೆ, 2013-18ರಲ್ಲಿ ಸಿದ್ದರಾಮಯ್ಯ ಸರ್ಕಾರ ರಾಜ್ಯದ ಎಲ್ಲ ಧರ್ಮ, ಜಾತಿಗಳು ಒಳಗೊಂಡ ಸಮಾಜಿಕ, ಶೈಕ್ಷಣಿಕ, ಆರ್ಥಿಕ ಹಿಂದುಳಿದ ಸಮೀಕ್ಷೆ ಮಾಡಿಸಿತ್ತು.

ಸಾಮಾಜಿಕ, ಆರ್ಥಿಕ ವರದಿ ಬಿಡುಗಡೆ ಮಾಡಲಿ: ಬಸವರಾಜ್ ರಾಮರೆಡ್ಡಿ ಒತ್ತಾಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಫೋನ್ ಕಾಲ್ ರೆಕಾರ್ಡ್ ಬಹಿರಂಗ: ಪೋಲಿಸ್ ಕಾನ್ಸ್ ಟೇಬಲ್ ವಿರುದ್ಧ ಎಫ್ ಐಆರ್

(ನ್ಯೂಸ್ ಕಡಬ) newskadaba.com ಕೊಪ್ಪಳ, ಸೆ. 14.  ಹಣಕ್ಕಾಗಿ ಬೇರೆಯವರಿಗೆ ನೂರಾರು ಫೋನ್ ಕಾಲ್ ರೆಕಾರ್ಡ್ ಬಹಿರಂಗಪಡಿಸಿದ ಸೈಬರ್, ಆರ್ಥಿಕ ಮತ್ತು ನಾರ್ಕೋಟಿಕ್ಸ್ ಅಪರಾಧ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಕೊಪ್ಪಳ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ. ಹೆಡ್ ಕಾನ್ಸ್ ಟೇಬಲ್ ಸಿಹೆಚ್ ಕೊಟೆಪ್ಪ (44)ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಎಫ್‌ಐಆರ್ ವರದಿಯ ಪ್ರಕಾರ, ಆರೋಪಿ ಕಾನ್ಸ್ ಟೇಬಲ್ 145 ಜನರ ಮೊಬೈಲ್ ಕಾಲ್ ರೆಕಾರ್ಡ್ ಬಹಿರಂಗಪಡಿಸಿದ್ದಾರೆ. ಅಲ್ಲದೇ, ಒಂಬತ್ತು ಮೊಬೈಲ್

ಫೋನ್ ಕಾಲ್ ರೆಕಾರ್ಡ್ ಬಹಿರಂಗ: ಪೋಲಿಸ್ ಕಾನ್ಸ್ ಟೇಬಲ್ ವಿರುದ್ಧ ಎಫ್ ಐಆರ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಪಟಾಕಿ ಸಿಡಿದು ಯುವಕನ ಸ್ಥಿತಿ ಗಂಭೀರ..!

(ನ್ಯೂಸ್ ಕಡಬ) newskadaba.com ಕೊಪ್ಪಳ, ಸೆ. 12.  ಪಟ್ಟಣದಲ್ಲಿ ಬುಧವಾರ ರಾತ್ರಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಪಟಾಕಿ ಸಿಡಿದು ಮಾರುತಿ ನಗರದ ನಿವಾಸಿ ಕಲ್ಲೇಶ ಸುಲೇಕಿ (25) ಎಂಬ ಯುವಕ ತೀವ್ರವಾಗಿ ಗಾಯಗೊಂಡಿದ್ದಾನೆ. ಪಟಾಕಿ ಸಿಡಿದಿದ್ದರಿಂದ ಯುವಕನ ಒಂದು ಕಣ್ಣುಗೆ ತೀವ್ರ ಗಾಯವಾಗಿದ್ದು, ತಲೆಗೆ ಗಾಯವಾಗಿ ರಕ್ತಸ್ರಾವವಾಗಿದೆ. ತಕ್ಷಣ ಯುವಕನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಆದರೆ ವ್ಯಕ್ತಿಯ ಸ್ಥಿತಿ ಗಂಭೀರವಾಗಿದ್ದರಿಂದ ತುರ್ತು ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎಂದು ತಿಳಿದು

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಪಟಾಕಿ ಸಿಡಿದು ಯುವಕನ ಸ್ಥಿತಿ ಗಂಭೀರ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಸ್ ನಿಲ್ಲಿಸದ ಕಾರಣ ಕೋಪದಿಂದ ಕಲ್ಲು ಎಸೆದ ಮಹಿಳೆ ➤ 5000 ರೂ. ದಂಡ

(ನ್ಯೂಸ್ ಕಡಬ) newskadaba.com ಕೊಪ್ಪಳ, ಜೂ. 26. ಮಹಿಳೆಯೊಬ್ಬರು ಬಸ್ ನಿಲ್ಲಿಸದ ಕಾರಣ ಸಿಟ್ಟಿಗೆದ್ದು ಸರ್ಕಾರಿ ಬಸ್ ಗೆ ಕಲ್ಲು ಎಸೆದ ಘಟನೆ ಕೊಪ್ಪಳ ತಾಲೂಕಿನ ಹೊಸಲಿಂಗಾಪುರ ಬಳಿ ನಡೆದಿದೆ. ಇಳಕಲ್ ಬಳಿಯ ಪಾಪನಳ್ಳಿ ನಿವಾಸಿ ಲಕ್ಷ್ಮಿ ಎಂಬವರು ಹುಲಿಗಿಯ ಹುಲಿಗೆಮ್ಮ ದೇವಿ ದರ್ಶನ ಪಡೆಯಲು ಹೊಗಿದ್ದ ವೇಳೆ ಹುಲಿಗೆ ಕ್ರಾಸ್ ಬಳಿ ತುಂಬಾ ಹೊತ್ತಿನಿಂದ ಕಾದರೂ ಯಾವುದೇ ಬಸ್ ನಿಲ್ಲಿಸಿರಲಿಲ್ಲ. ಇದರಿಂದ ಕೋಪಗೊಂಡ ಅವರು ಕಲ್ಯಾಣ ಕರ್ನಾಟಕ ಸಾರಿಗೆ ವಿಭಾಗದ ಕೊಪ್ಪಳದಿಂದ-ಹೊಸಪೇಟೆಗೆ ಹೋಗುವ  ಬಸ್ ಗೆ

ಬಸ್ ನಿಲ್ಲಿಸದ ಕಾರಣ ಕೋಪದಿಂದ ಕಲ್ಲು ಎಸೆದ ಮಹಿಳೆ ➤ 5000 ರೂ. ದಂಡ Read More »

ಕರ್ನಾಟಕ, ಕ್ರೈಮ್ ನ್ಯೂಸ್

   ಸಮವಸ್ತ್ರ ಬಟ್ಟೆ ಮರಳಿಸುತ್ತಿರುವ ವಿದ್ಯಾರ್ಥಿಗಳು!

(ನ್ಯೂಸ್ ಕಡಬ)newskadaba.com ಕೊಪ್ಪಳ,ಫೆ.07.  ಸರ್ಕಾರದ ಸುತ್ತೋಲೆಯಂತೆ ಶಾಲಾ ಸಮವಸ್ತ್ರಗಳನ್ನು ಸಿದ್ಧ(ಹೊಲಿಸಿ) ಉಡುಪು ಕೊಡಬೇಕೆಂಬ ನಿಯಮವಿದ್ದರೂ ಬಟ್ಟೆನೀಡುತ್ತಿರುವುದನ್ನು ವಿರೋಧಿಸಿ ವಿದ್ಯಾರ್ಥಿಗಳು ಸಮವಸ್ತ್ರದ ಬಟ್ಟೆಯನ್ನು ಶಾಲೆಗೆ ಮರಳಿಸಿದ್ದಾರೆ ಎಂದು ವರದಿಯಾಗಿದೆ. ತಾಲೂಕಿನ ಕಿನ್ನಾಳ ಸರ್ಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿ ಮಂಜುನಾಥ ಪೂಜಾರ ಸೇರಿದಂತೆ ಅನೇಕ ವಿದ್ಯಾರ್ಥಿಗಳು ತಮ್ಮ ಸಮವಸ್ತ್ರದ ಬಟ್ಟೆಯನ್ನು ಶಾಲೆಗೆ ಮರಳಿಸಿದ್ದಾರೆ. ನಿಯಮಾನುಸಾರ ಸಮವಸ್ತ್ರಗಳನ್ನು ಸಿದ್ಧ ಮಾಡಿ ಕೊಡಬೇಕು. ಆದರೂ ಕೊಡುತ್ತಿಲ್ಲ. ಹೀಗಾಗಿ ಬಟ್ಟೆಯನ್ನು ಮರಳಿಸುತ್ತಿದ್ದೇವೆ ಎಂದು ವಿದ್ಯಾರ್ಥಿಗಳು ಲಿಖಿತವಾಗಿ ಮುಖ್ಯಶಿಕ್ಷಕರಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ ತಿಳಿಸಿದ್ದಾನೆ

   ಸಮವಸ್ತ್ರ ಬಟ್ಟೆ ಮರಳಿಸುತ್ತಿರುವ ವಿದ್ಯಾರ್ಥಿಗಳು! Read More »

ಕರ್ನಾಟಕ

ಕೆಆರ್‌ಎಸ್‌ ಕಾರ್ಯಕರ್ತರ ವಿರುದ್ಧ ಎಫ್‌ಐಆರ್‌

(ನ್ಯೂಸ್ ಕಡಬ)newskadaba.com  ಕೊಪ್ಪಳ, ಜ.21. ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್‌.ಎಸ್‌) ಪಕ್ಷದ ಹತ್ತು ಜನ ಕಾರ್ಯಕರ್ತರು ಇಲ್ಲಿನ ಜಿಲ್ಲಾಸ್ಪತ್ರೆಯ ಸಿಬ್ಬಂದಿ ಹಾಗೂ ವೈದ್ಯರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಬಳಿಕ ಅವರಿಗೆ ಮಧ್ಯಂತರ ಜಾಮೀನು ಲಭಿಸಿದೆ. ಕೆಆರ್‌ಎಸ್‌ ಪದಾಧಿಕಾರಿಯೊಬ್ಬರ ಸಂಬಂಧಿಕರ ಹೆರಿಗೆ ಜಿಲ್ಲಾಸ್ಪತ್ರೆಯಲ್ಲಿ ಆಗಿದ್ದು, ಮಾತ್ರೆ ತೆಗೆದುಕೊಳ್ಳುವ ವಿಷಯಕ್ಕೆ ಸಂಬಂಧಿಸಿ ಕಾರ್ಯಕರ್ತ ಹಾಗೂ ಆಸ್ಪತ್ರೆ ಸಿಬ್ಬಂದಿ ನಡುವೆ ಜಟಾಪಟಿಯಾಗಿದೆ ಎಂದು ತಿಳಿದುಬಂದಿದೆ. ಬಳಿಕ ಕೆಲ ಕಾರ್ಯಕರ್ತರು ಜಿಲ್ಲಾಸ್ಪತ್ರೆಯಲ್ಲಿನ ಅವ್ಯವಸ್ಥೆ ಬಗ್ಗೆ

ಕೆಆರ್‌ಎಸ್‌ ಕಾರ್ಯಕರ್ತರ ವಿರುದ್ಧ ಎಫ್‌ಐಆರ್‌ Read More »

ಕರ್ನಾಟಕ

ಮನೆಯಲ್ಲಿ ಪ್ರೀತಿಗೆ ವಿರೋಧ ಹಿನ್ನೆಲೆ ➤ ಪ್ರೇಮಿಗಳಿಬ್ಬರು ಕತ್ತು ಕೊಯ್ದುಕೊಂಡು ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com   ಕೊಪ್ಪಳ, ಜ.14. ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಬಳಗೇರಿ ಗ್ರಾಮದಲ್ಲಿ ಪ್ರೀತಿ ನಿರಾಕರಿಸಿದ್ದಕ್ಕೆ  ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಪ್ರೇಮಿಗಳಿಬ್ಬರು ಚಾಕುವಿನಿಂದ  ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪಿಯುಸಿ ಓದುತ್ತಿರುವ 17ರ ಹರೆಯದ ಸುಮಾ ಮತ್ತು ಪಿಯುಸಿ ಮುಗಿಸಿ ಐಟಿಐ ಓದುತ್ತಿದ್ದ  ಪ್ರಕಾಶ್ (20) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು.  ಕಳೆದ ಹಲವು ದಿನಗಳಿಂದ ಪ್ರೇಮಿಗಳು ಪ್ರೀತಿಸುತ್ತಿದ್ದರು.  ಇವರಿಬ್ಬರ ಪ್ರೀತಿಗೆ ಹುಡುಗಿ ಮನೆಯಲ್ಲಿ ವಿರೋಧ ಇತ್ತು. ಈ ಹಿನ್ನಲೆಯಲ್ಲಿ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮನೆಯಲ್ಲಿ ಪ್ರೀತಿಗೆ ವಿರೋಧ ಹಿನ್ನೆಲೆ ➤ ಪ್ರೇಮಿಗಳಿಬ್ಬರು ಕತ್ತು ಕೊಯ್ದುಕೊಂಡು ಆತ್ಮಹತ್ಯೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top