krishna janmastami

Theft, crime, Robbery

ಮಗುವಿನ ಕತ್ತಿನಲ್ಲಿದ್ದ ಚಿನ್ನದ ಸರ ಕಳವು..!

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 31. ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಮಗುವಿನ ಚಿನ್ನದ ಸರ ಮತ್ತು ಪೆಂಡೆಂಟ್ ಕಳವಾದ ಘಟನೆ ನಗರದ ಉರ್ವದಲ್ಲಿ ನಡೆದಿದೆ. ಅಮೃತ್ ಎಂಬವರು ರಾತ್ರಿ 9:30ಕ್ಕೆ ತನ್ನ ಎರಡೂವರೆ ವರ್ಷ ಪ್ರಾಯದ ಮೊಮ್ಮಗಳೊಂದಿಗೆ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮಕ್ಕೆ ತೆರಳಿದ್ದು, ರಾತ್ರಿ 10:30ಕ್ಕೆ ವಾಪಸ್ ಮನೆಗೆ ಹಿಂತಿರುಗುವಾಗ ಮೊಮ್ಮಗಳು ಧರಿಸಿದ್ದ ಅಂದಾಜು 70,000 ರೂ. ಮೌಲ್ಯದ ಚಿನ್ನದ ಸರ ಮತ್ತು ಸಣ್ಣ ಪೆಂಡೆಂಟ್ ಕಳವಾಗಿರುವುದು ಗಮನಕ್ಕೆ ಬಂದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಮಗುವಿನ ಕತ್ತಿನಲ್ಲಿದ್ದ ಚಿನ್ನದ ಸರ ಕಳವು..! Read More »

ಕರಾವಳಿ, ಕರ್ನಾಟಕ

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ನೇತೃತ್ವ – ಕಡಬ ತಹಶೀಲ್ದಾರರ ಕಛೇರಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

(ನ್ಯೂಸ್ ಕಡಬ) newskadaba.com ಕಡಬ, ಆ. 26. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ನೇತೃತ್ವದಲ್ಲಿ ಕಡಬ ತಹಶೀಲ್ದಾರರ ಕಚೇರಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ನಡೆಯಿತು. ಕಡಬ ತಹಶಿಲ್ದಾರ್ ಪ್ರಭಾಕರ್ ಖಜೂರೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕೆ.ಪಿ ಮೋಹನ್, ರಾಯ್ ಅಬ್ರಹಾಂ, ಉಪ ತಹಶೀಲ್ದಾರ್ ಗೋಪಾಲ್ ಅತಿಥಿಗಳಾಗಿ ಭಾಗವಹಿಸಿದ್ದರು. ತಾಲೂಕು ಆಡಳಿತಾಧಿಕಾರಿಗಳು, ಪಟ್ಟಣ ಪಂಚಾಯತ್ ಅಧಿಕಾರಿಗಳು, ಸಿಬ್ಬಂದಿಗಳು, ಯಾದವ ಸಮುದಾಯದ ಪ್ರಮುಖರು ಉಪಸ್ಥಿತರಿದ್ದರು. ಸಿಬ್ಬಂದಿ ಕೌಶಿಕ್ ಸ್ವಾಗತಿಸಿ, ಉದಯಕುಮಾರ್ ಅವರು ವಂದಿಸಿದರು.

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ನೇತೃತ್ವ – ಕಡಬ ತಹಶೀಲ್ದಾರರ ಕಛೇರಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ Read More »

ಕರಾವಳಿ, ಕರ್ನಾಟಕ

ಆ. 26 ರಂದು ಶ್ರೀ ಕೃಷ್ಣ ಜನ್ಮಾಷ್ಟಮಿ ಜಯಂತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 24. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಆ. 26 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಹಂಪಕಟ್ಟೆ ನಂದಿನಿ ಸಭಾಭವನ ಸರಕಾರಿ ನೌಕರರ ಸಂಘದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಜಯಂತಿ ಹಮ್ಮಿಕೊಳ್ಳಲಾಗಿದೆ. ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರ ಘನ ಉಪಸ್ಥಿತಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಕಾರ್ಯಕ್ರಮ ಉದ್ಘಾಟಿಸುವರು. ಮಂಗಳೂರು ದಕ್ಷಿಣ

ಆ. 26 ರಂದು ಶ್ರೀ ಕೃಷ್ಣ ಜನ್ಮಾಷ್ಟಮಿ ಜಯಂತಿ Read More »

ಕರಾವಳಿ, ಕರ್ನಾಟಕ
Scroll to Top