Crime

KSRTC ವಿಭಾಗೀಯ ನಿಯಂತ್ರಣಾಧಿಕಾರಿಗೆ ಚಾಕು ಇರಿತ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಸೆ. 13. ಕೆಎಸ್ಸಾರ್ಟಿಸಿ ನೌಕರನೋರ್ವ ಕೆಎಸ್ಸಾರ್ಟಿಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗೆ ಚಾಕುವಿನಿಂದ ಇರಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವಿಭಾಗೀಯ ನಿಯಂತ್ರಣಾಧಿಕಾರಿ ಜಗದೀಶ್ ಕುಮಾರ್ ಮೇಲೆ ಚಾಕುವಿನಿಂದ ಇರಿದಿದ್ದರಿಂದ ಅವರ ಕೈ ಬೆರಳುಗಳಿಗೆ ಗಾಯಗಳಾಗಿದ್ದು ಸರ್ಕಾರಿ ಮಲ್ಲೆಗೌಡ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಜ್ಯೂನಿಯರ್ ಅಸಿಸ್ಟೆಂಟ್ ರಿತೇಶ್ ಚಾಕುವಿನಿಂದ ಚುಚ್ಚಿದ್ದು, ಆತನನ್ನು ಬಂಧಿಸಲಾಗಿದೆ. ವರ್ಗಾವಣೆ ಸಂಬಂಧ ತಮ್ಮ ಕುಟುಂಬಸ್ಥರನ್ನು ಕರೆಸಿ ಬುದ್ದಿ ಹೇಳಿದ್ದಕ್ಕೆ ಕುಪಿತನಾದ ರಿತೇಶ್ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. […]

KSRTC ವಿಭಾಗೀಯ ನಿಯಂತ್ರಣಾಧಿಕಾರಿಗೆ ಚಾಕು ಇರಿತ Read More »

ಕರ್ನಾಟಕ, ಕ್ರೈಮ್ ನ್ಯೂಸ್