kukke subrahmanya

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಚಿವ ರಾಮಲಿಂಗಾರೆಡ್ಡಿ ಭೇಟಿ

ನ್ಯೂಸ್‌ ಕಡಬ) newskadaba.com ಜು.01: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ಸೋಮವಾರ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. ಬೆಂಗಳೂರಿನ ಉದ್ಯಮಿ ಜೈಪುನೀತ್ ಅವರು ನಿರ್ಮಿಸಿಕೊಡುತ್ತಿರುವ ಆಶ್ಲೇಷ ಬಲಿಪೂಜಾ ಮಂದಿರದ ಗುದ್ದಲಿ ಪೂಜೆ ನೆರವೇರಿಸಿದರು. ಬಳಿಕ ದೇವಳದ ವತಿಯಿಂದ ನಿರ್ಮಾಣಗೊಳ್ಳಲಿರುವ ದಾಸೋಹ ಭವನ, ದೇವಳದ ಸುತ್ತು ಪೌಳಿ, 800 ಕೊಠಡಿಗಳ ವಸತಿ ಗೃಹ, ನೂತನ ಪಾರಂಪರಿಕ ರಥ ಬೀದಿ ಯೋಜನೆಗಳ ಅಂತಿಮ ಹಂತದ ಮಂಜೂರಾತಿಗಳ ಸಭೆಯಲ್ಲಿ ಭಾಗವಹಿಸಿದರು. ಸಭೆಯ […]

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಚಿವ ರಾಮಲಿಂಗಾರೆಡ್ಡಿ ಭೇಟಿ Read More »

ಕರಾವಳಿ

ಕುಕ್ಕೆ ಸುಬ್ರಹ್ಮಣ್ಯ: ವ್ಯಾಪಕ ಮಳೆಗೆ ಕುಮಾರಧಾರ ಸ್ನಾನಘಟ್ಟ ಮುಳುಗಡೆ

(ನ್ಯೂಸ್ ಕಡಬ) newskadaba.com , ಮೇ.26. ಮಂಗಳೂರು: ಕರಾವಳಿ ಮತ್ತು ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನ ಘಟ್ಟ ಮುಳುಗಡೆಯಾಗಿದೆ. ಕುಮಾರಧಾರಾ ನದಿ ತುಂಬಿ ಹರಿಯುತ್ತಿದ್ದು ಭಕ್ತಾಧಿಗಳಿಗೆ ಸ್ನಾನಘಟ್ಟದ ಬಳಿ ಇಳಿಯದಂತೆ ಸೂಚಿಸಲಾಗಿದ್ದು, ಭಕ್ತಾಧಿಗಳು ಕೇವಲ ನದಿ ನೀರನ್ನು ತಲೆಗೆ ಚಿಮುಕಿಸಲು ಮಾತ್ರ ಅನುಮತಿ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಸ್ನಾನಘಟ್ಟದ ಸುತ್ತ ಹಗ್ಗವನ್ನು ಕಟ್ಟಿ ಹೆಚ್ಚುವರಿ ದೇವಸ್ಥಾನದ ಸಿಬ್ಬಂದಿಗಳನ್ನು ನೇಮಕ ಮಾಡಿದೆ. ಪ್ರಕೃತಿ ವಿಕೋಪ ತಡೆ ಸಿಬ್ಬಂದಿ ನೇಮಕ ಮಾಡುವಂತೆ ಸ್ಥಳೀಯರು

ಕುಕ್ಕೆ ಸುಬ್ರಹ್ಮಣ್ಯ: ವ್ಯಾಪಕ ಮಳೆಗೆ ಕುಮಾರಧಾರ ಸ್ನಾನಘಟ್ಟ ಮುಳುಗಡೆ Read More »

ಕರಾವಳಿ, ಕರ್ನಾಟಕ

ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ ಕತ್ರೀನಾ ಕೈಫ್‌

(ನ್ಯೂಸ್ ಕಡಬ) newskadaba.com ಮಾ. 11: ಬಾಲಿವುಡ್ ಖ್ಯಾತ ನಟಿ  ಕತ್ರೀನಾ ಕೈಫ್ ರಾಜ್ಯದ ಪ್ರಸಿದ್ಧ ತೀರ್ಥಕ್ಷೇತ್ರ  ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಆಗಮಿಸಿದ್ದು ,ಇಂದು ಮತ್ತು ನಾಳೆ  ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕತ್ರೀನಾ ಸರ್ಪಸಂಸ್ಕಾರ ಪೂಜೆಯಲ್ಲಿ ಭಾಗಿಯಾಗಲಿದ್ದಾರೆ. ಇಂದು ಕುಕ್ಕೆ ಸುಬ್ರಹ್ಮಣ್ಯದಲ್ಲೆ ಉಳಿದುಕೊಳ್ಳಲಿರುವ ಬಾಲಿವುಡ್  ನಟಿ ನಾಳೆ ಸರ್ಪ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ. ಮಾಸ್ಕ್ ಹಾಕಿ, ತಲೆಗೆ ದುಪ್ಪಟ್ಟ ಹಾಕಿ ದೇವರ ದರ್ಶನದಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ವರದಿಯಾಗಿದೆ.

ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ ಕತ್ರೀನಾ ಕೈಫ್‌ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕುಕ್ಕೇ ಸುಬ್ರಹ್ಮಣ್ಯ: ಸೆಪ್ಟೆಂಬರ್ 12ರಂದು ಶ್ರೀ ದೇವಳದಲ್ಲಿ ಹೊಸ್ತಾರೋಗಣೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಸೆ. 10. ನಾಗಾರಾಧನೆಯ ಪುಣ್ಯ ತಾಣವಾದ ಸುಬ್ರಹ್ಮಣ್ಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೆ. 12ರಂದು ಹೊಸ್ತಾರೋಗಣೆ (ನವಾನ್ನ ಪ್ರಸಾದ) ನೆರವೇರಲಿದೆ. ಈ ನಿಮಿತ್ತ ಪ್ರಾತ:ಕಾಲ 5:15 ಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಮಹಾಭಿಷೇಕ, 7:30 ಕ್ಕೆ ತೆನೆ ತರುವುದು ಹಾಗೂ ಕದಿರು ಪೂಜೆ ನಡೆಯಲಿರುವುದು. ಬೆಳಗ್ಗೆ 8ರ ಬಳಿಕ ದೇವಳದ ನೌಕರರಿಗೆ ಮತ್ತು ಸ್ಥಳೀಯ ಭಕ್ತರಿಗೆ ಕದಿರು ವಿತರಣೆ ನಡೆಯಲಿದೆ. ದರುಶನದಲ್ಲಿ ವ್ಯತ್ಯಯ: ಈ ದಿನ ಬೆಳಗ್ಗೆ 10

ಕುಕ್ಕೇ ಸುಬ್ರಹ್ಮಣ್ಯ: ಸೆಪ್ಟೆಂಬರ್ 12ರಂದು ಶ್ರೀ ದೇವಳದಲ್ಲಿ ಹೊಸ್ತಾರೋಗಣೆ Read More »

ಕರಾವಳಿ

ಸರ್ಪ ಸಂಸ್ಕಾರಕ್ಕೆ ಹೆಚ್ಚಿನ ದಕ್ಷಿಣೆಗೆ ಬೇಡಿಕೆ – ಅರ್ಚಕ ಅಮಾನತು

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ. 17. ಇಲ್ಲಿನ ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ ನೆರವೇರಿಸಿ ಭಕ್ತರಿಂದ ಹೆಚ್ಚಿನ ದಕ್ಷಿಣೆಗೆ ಬೇಡಿಕೆ ಇಟ್ಟ ಆರೋಪಕ್ಕೆ ಸಂಬಂಧಿಸಿ ದೇವಳದ ಅರ್ಚಕ ಶಿವ ಪ್ರಕಾಶ್ ಪಾಂಡೇಲು ಎಂಬವರನ್ನು ಅಮಾನತುಗೊಳಿಸಿದ ಕುರಿತು ವರದಿಯಾಗಿದೆ. ಇತ್ತೀಚಿಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ ಆಂಧ್ರಪ್ರದೇಶದ ಭಕ್ತರ ತಂಡವೊಂದು ಸರ್ಪ ಸಂಸ್ಕಾರ ಸೇವೆ ಮಾಡಿಸಿಕೊಂಡು ತಮ್ಮ ಇಷ್ಟಾರ್ಥ ದಕ್ಷಿಣೆಯನ್ನೂ ಅರ್ಚಕರಿಗೆ ನೀಡಿದ್ದಾರೆ. ಆದರೆ ಭಕ್ತರು ನೀಡಿರುವ ದಕ್ಷಿಣೆ ಕಡಿಮೆಯಾಯಿತೆಂದು ಸಿಟ್ಟಿಗೆದ್ದ ಅರ್ಚಕ ಭಕ್ತರು

ಸರ್ಪ ಸಂಸ್ಕಾರಕ್ಕೆ ಹೆಚ್ಚಿನ ದಕ್ಷಿಣೆಗೆ ಬೇಡಿಕೆ – ಅರ್ಚಕ ಅಮಾನತು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಸುಬ್ರಹ್ಮಣ್ಯ: ಮಗುವನ್ನು ಹಾವಿನಿಂದ ರಕ್ಷಿಸಿದ ಬೀದಿ ನಾಯಿ..!

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಫೆ. 27. ಆದಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಂದಿದ್ದ ಮಹಿಳೆಯೊಬ್ಬರ ಮಗುವನ್ನು ಬೀದಿ ನಾಯಿಯೊಂದು ಹಾವಿನಿಂದ ರಕ್ಷಿಸಿದ ಘಟನೆ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನಡೆದಿದೆ. ದೇವಸ್ಥಾನಕ್ಕೆ ಬಂದಿದ್ದ ಮಹಿಳೆಯೊಬ್ಬರು ತಮ್ಮ ಮಗುವನ್ನು ಬಿಟ್ಟು ಪಕ್ಕದ ಅಂಗಡಿಗೆ ಹಣ್ಣುಕಾಯಿ ಖರೀದಿಗೆ ತೆರಳಿದ್ದ ವೇಳೆ ಮಗುವು ರಸ್ತೆ ಬದಿಗೆ ಬಂದಿದೆ. ಇದೇ ಸಂದರ್ಭ ನಾಗರಹಾವೊಂದು ರಸ್ತೆಗೆ ಬಂದಿದ್ದು, ಮಗು ಹಾವನ್ನು ತುಳಿಯುವಷ್ಟರಲ್ಲಿ ಅಲ್ಲಿಯೇ ಮಲಗಿದ್ದ ಬೀದಿ ನಾಯಿ ಓಡಿ ಹೋಗಿ ಮಗುವಿಗೆ ಅಡ್ಡ ನಿಂತು, ಮಗುವು

ಸುಬ್ರಹ್ಮಣ್ಯ: ಮಗುವನ್ನು ಹಾವಿನಿಂದ ರಕ್ಷಿಸಿದ ಬೀದಿ ನಾಯಿ..! Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಸುಬ್ರಹ್ಮಣ್ಯ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ದಂಪತಿ ಕುಕ್ಕೆಶ್ರೀ ದೇವಳಕ್ಕೆ ಭೇಟಿ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಅ. 09. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಮತ್ತು ಪತ್ನಿ ಚಿನ್ನಮ್ಮ ಅವರು ಇಂದು ಬೆಳ್ಳಗ್ಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆದರು. ಭಾನುವಾರದಂದು ರಾತ್ರಿ ಸುಬ್ರಹ್ಮಣ್ಯಕ್ಕೆ ಆಗಮಿಸಿರುವ ದೇವೇಗೌಡ ಕುಟುಂಬ ಸೋಮವಾರ ಬೆಳಗ್ಗೆ ಶ್ರೀ ದೇವರ ದರ್ಶನ ಪಡೆದು, ಕ್ಷೇತ್ರದಲ್ಲಿ ವಿವಿಧ ಸೇವೆಗಳನ್ನು ನೆರವೇರಿಸಲಿದ್ದಾರೆ. ಇನ್ನು ದೇವೇಗೌಡರು ಭಾನುವಾರ ಮಧ್ಯಾಹ್ನ ಬೆಂಗಳೂರಿನ ಹೆಚ್.ಎ.ಎಲ್. ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುವ ನಿರೀಕ್ಷೆ ಇತ್ತು. ಆದರೆ

ಸುಬ್ರಹ್ಮಣ್ಯ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ದಂಪತಿ ಕುಕ್ಕೆಶ್ರೀ ದೇವಳಕ್ಕೆ ಭೇಟಿ Read More »

ಕರಾವಳಿ
Theft, crime, Robbery

ಸುಬ್ರಹ್ಮಣ್ಯ: ಮನೆಗೆ ನುಗ್ಗಿ ಚಿನ್ನಾಭರಣ ಕಳ್ಳತನ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜು. 31. ಸುಬ್ರಹ್ಮಣ್ಯದ ಸದಾನಂದ ಆಸ್ಪತ್ರೆ ಬಳಿ ಮನೆಗೆ ನುಗ್ಗಿದ ಕಳ್ಳರು ಚಿನ್ನಾಭರಣ ಕಳವುಗೈದ ಘಟನೆ ವರದಿಯಾಗಿದೆ. ಕೃಷ್ಣರಾಜ್ ಭಟ್ ಎಂಬವರು ಕಳೆದ 4 ದಿನಗಳ ಹಿಂದೆ ಮನೆಗೆ ಬೀಗ ಹಾಕಿ ತೆರಳಿದ್ದರು. ಆದಿತ್ಯವಾರದಂದು ಸಂಜೆ ಮನೆಗೆ ಹಿಂತಿರುಗಿದಾಗ ಮನೆಯಲ್ಲಿದ್ದ ಚಿನ್ನ, ಬೆಳ್ಳಿ, ನಗದು ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಈ ಕುರಿತು ಸುಬ್ರಹ್ಮಣ್ಯ ಠಾಣೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಸುಬ್ರಹ್ಮಣ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸುಬ್ರಹ್ಮಣ್ಯ: ಮನೆಗೆ ನುಗ್ಗಿ ಚಿನ್ನಾಭರಣ ಕಳ್ಳತನ Read More »

ಕರಾವಳಿ, ಕ್ರೈಮ್ ನ್ಯೂಸ್

ಗುಡ್ಡ ಕುಸಿತ- ಕುಕ್ಕೇ ಸುಬ್ರಹ್ಮಣ್ಯ ರಸ್ತೆ ಬಂದ್..!

(ನ್ಯೂಸ್ ಕಡಬ) newskadaba.com ಹಾಸನ, ಜು. 24. ಕರಾವಳಿ ಹಾಗೂ ಮಲೆನಾಡು ಪ್ರದೇಶದಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಭಾರೀ ಮಳೆಗೆ ಸಕಲೇಶಪುರ ತಾಲೂಕಿನ ಬಿಸಿಲೆ‌ ಸಮೀಪದ ರಸ್ತೆಯೊಂದಕ್ಕೆ ಗುಡ್ಡದ ಮಣ್ಣು ಕುಸಿದು ಬಿದ್ದ ಪರಿಣಾಮ ಸುಬ್ರಹ್ಮಣ್ಯ ರಸ್ತೆಯಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್ ಆಗಿದೆ. ಕಳೆದೆರಡು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ತಾಲೂಕಿನ ಬಿಸಿಲೆ‌ ಸಮೀಪ ರಸ್ತೆಗೆ ಗುಡ್ಡ ಕುಸಿದು ಸಂಪರ್ಕ ಸ್ಥಗಿತವಾಗಿದೆ. ಇದರಿಂದ ಸುಬ್ರಹ್ಮಣ್ಯಕ್ಕೆ ತೆರಳುವ ಪ್ರವಾಸಿಗರು ಸಂಕಷ್ಟಕ್ಕೀಡಾಗಿದ್ದಾರೆ. ಅಲ್ಲದೇ ಈ ಮಾರ್ಗದಲ್ಲಿ ಮರ ಬಿದ್ದು

ಗುಡ್ಡ ಕುಸಿತ- ಕುಕ್ಕೇ ಸುಬ್ರಹ್ಮಣ್ಯ ರಸ್ತೆ ಬಂದ್..! Read More »

ಕರ್ನಾಟಕ

ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ ಕ್ರಿಕೆಟಿಗ ಕೆ.ಎಲ್.ರಾಹುಲ್

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜೂ. 26. ಕರಾವಳಿಯ ತೀರ್ಥ ಕ್ಷೇತ್ರಗಳಿಗೆ ಯಾತ್ರೆ ಕೈಗೊಂಡಿರುವ ಕ್ರಿಕೆಟಿಗ ಕೆ.ಎಲ್. ರಾಹುಲ್ ರವರು ಧರ್ಮಸ್ಥಳ ಕ್ಷೇತ್ರದಿಂದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇವರ ದರ್ಶನ ಪಡೆದು ಸೇವೆ ನೆರವೇರಿಸಿ ಬಳಿಕ ಪ್ರಸಾದ ಸ್ವೀಕರಿಸಿದರು. ದೇವಳದ ಅರ್ಚಕರು ರಾಹುಲ್ ಅವರಿಗೆ ಶಾಲು ಹೊದಿಸಿ ಮಹಾಪ್ರಸಾದ ನೀಡಿದರು. ಬಳಿಕ ಹೊಸಳಿಗಮ್ಮನ ದರುಶನ ಪಡೆದ ಅವರು ಪ್ರಸಾದ ಸ್ವೀಕರಿಸಿ, ನಂತರ ದೇವಳದಲ್ಲಿ ಪ್ರಸಾದ ಬೋಜನ ಸ್ವೀಕರಿಸಿದರು. ಬಳಿಕ ಆಡಳಿತ

ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ ಕ್ರಿಕೆಟಿಗ ಕೆ.ಎಲ್.ರಾಹುಲ್ Read More »

ಕರಾವಳಿ, ಕ್ರೀಡಾ ನ್ಯೂಸ್
Scroll to Top