ಕುಂದಾಪುರ : ದ್ವಿಚಕ್ರ ವಾಹನ ಢಿಕ್ಕಿ – ಕಾಲ್ನಡಿಗೆಯಲ್ಲಿ ಸಾಗುತ್ತಿದ್ದ ಅಯ್ಯಪ್ಪ ಮಾಲೆ ಧರಿಸಿದ ವ್ಯಕ್ತಿ ಸಾವು
(ನ್ಯೂಸ್ ಕಡಬ) newskadaba.com, ಅ.04 ಕುಂದಾಪುರ: ಅಯ್ಯಪ್ಪ ಸ್ವಾಮಿ ಶಿಬಿರದಿಂದ ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಅಯ್ಯಪ್ಪ ವೃತಧಾರಿಗಳು ಕಾಲ್ನಡಿಗೆ (ಪಾದಯಾತ್ರೆ)ಯಲ್ಲಿ ಸಾಗುತ್ತಿದ್ದ ವೇಳೆ ಹಿಂಬದಿಯಿಂದ ವೇಗವಾಗಿ ಬಂದ ದ್ವಿಚಕ್ರ ವಾಹನವೊಂದು ಢಿಕ್ಕಿಯಾಗಿ ಓರ್ವ ಮಾಲಾಧಾರಿ ಗಂಭೀರ ಗಾಯಗೊಂಡು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದು, ಇನ್ನೋರ್ವ ಮಾಲಾಧಾರಿ ಗಾಯಗೊಂಡ ಘಟನೆ ಕುಂದಾಪುರ ತಾಲೂಕಿನ ತೆಕ್ಕಟ್ಟೆ ಸಮೀಪದ ಕಣ್ಣುಕೆರೆ ಎಂಬಲ್ಲಿ ನಡೆದಿದೆ. ಮೃತರನ್ನು ಕೋಟೇಶ್ವರ ಸಮೀಪದ ಕುಂಬ್ರಿ ನಿವಾಸಿ ಮಾಲಾಧಾರಿಯಾಗಿದ್ದ ಸುರೇಂದ್ರ ಮೊಗವೀರ (35) ಎಂದು ಗುರುತಿಸಲಾಗಿದೆ. ನ.2 ರಂದು […]

