Kunthoor

ಕುಂತೂರು: ಮಾರ್ ಇವಾನಿಯೋಸ್ ದಿನಾಚರಣೆ

(ನ್ಯೂಸ್ ಕಡಬ) newskadaba.com ಕುಂತೂರು, ಜು. 19. ಇಲ್ಲಿನ ಮಾರ್ ಇವಾನಿಯೋಸ್ ಶಿಕ್ಷಕ-ಶಿಕ್ಷಣ ಮಹಾವಿದ್ಯಾಲಯದಲ್ಲಿ ಸಂಸ್ಥೆಯ ಸ್ಥಾಪನೆಗೆ ಪ್ರೇರಕರಾಗಿ ಕಾರಣಕರ್ತರಾದ ಮಾರ್ ಇವಾನಿಯೋಸ್ ಅವರ 70ನೇ ಪುಣ್ಯದಿನವನ್ನು ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ನೆಲ್ಯಾಡಿಯ ಜ್ಞಾನೋದಯ ಬೆಥನಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ.ತೋಮಸ್ ಬಿಜಿಲಿ ಓ.ಐ.ಸಿ. ಅವರು ಮಾರ್ ಇವಾನಿಯೋಸ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡುವುದರೊಂದಿಗೆ ಮೊಂಬತ್ತಿಯನ್ನು ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಕೇರಳದ ತಿರುವನಂತಪುರದಲ್ಲಿ ಹುಟ್ಟಿ ಬೆಳೆದು ಮಲಂಕರ ಕೆಥೋಲಿಕ್ ಚರ್ಚ್‍ನ […]

ಕುಂತೂರು: ಮಾರ್ ಇವಾನಿಯೋಸ್ ದಿನಾಚರಣೆ Read More »

ಕರಾವಳಿ

ನಾಳೆ (ಫೆ.20) ಬೇಲ್ಪಾಡಿ ದರ್ಗಾ ಶರೀಫಿನಲ್ಲಿ ಮಜ್ಲಿಸುನ್ನೂರ್ ಆಧ್ಯಾತ್ಮಿಕ ಸಂಗಮ

(ನ್ಯೂಸ್ ಕಡಬ) newskadaba.com ಕಡಬ. ಫೆ.19, ಇತಿಹಾಸ ಪ್ರಸಿದ್ಧವಾದ ಕುಂತೂರು ಬೇಲ್ಪಾಡಿ ಮಖಾಂ ಶರೀಫಿನಲ್ಲಿ ಪ್ರತೀ ತಿಂಗಳು ನಡೆಸಿಕೊಂಡು ಬರುತ್ತಿರುವ ಮಜ್ಲಿಸುನ್ನೂರ್ ಆಧ್ಯಾತ್ಮಿಕ ಸಂಗಮವು ಫೆ.20ರಂದು ಮಗ್ರಿಬ್ ನಮಾಝಿನ ಬಳಿಕ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಯ್ಯದ್ ಅಬ್ದುಲ್ ರಶೀದಲಿ ಶಿಹಾಬ್ ತಂಙಳ್ ಪಾಣಕ್ಕಾಡ್ ರವರು ನೇತೃತ್ವ ನೀಡಲಿದ್ದು, ಸ್ಥಳೀಯ ಮಸೀದಿ ಖತೀಬರಾದ ಕೆ.ವಿ ಮಜೀದ್ ದಾರಿಮಿ ಪ್ರಾಸ್ತಾವಿಕ ಭಾಷಣ ಮಾಡಲಿದ್ದಾರೆ.

ನಾಳೆ (ಫೆ.20) ಬೇಲ್ಪಾಡಿ ದರ್ಗಾ ಶರೀಫಿನಲ್ಲಿ ಮಜ್ಲಿಸುನ್ನೂರ್ ಆಧ್ಯಾತ್ಮಿಕ ಸಂಗಮ Read More »

ಕರಾವಳಿ

ಮಾರ್ ಇವಾನಿಯೋಸ್ ಕಾಲೇಜಿನಲ್ಲಿ ವಿಶ್ವ ಮಾನವ ಹಕ್ಕುಗಳ ದಿನಾಚರಣೆ

(ನ್ಯೂಸ್ ಕಡಬ) newskadaba.com, ಕಡಬ, ಡಿ.12  ಕುಂತೂರು ಇಲ್ಲಿನ ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದಲ್ಲಿ ವಿಶ್ವ ಮಾನವ ಹಕ್ಕುಗಳ ದಿನವನ್ನು ಮಾನವ ಹಕ್ಕುಗಳ ಸಂಘದ ವತಿಯಿಂದ ಕಾಲೇಜಿನ ಸಭಾಂಗಣದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದ ಅಧಕ್ಷತೆಯನ್ನು ವಹಿಸಿದ್ದ ಕಾಲೇಜಿನ ಸಂಚಾಲಕರಾದ ವಂ/ಫಾ/ಡಾ/ ಎಲ್ದೋ ಪುತ್ತನ್‍ಕಂಡತ್ತಿಲ್ ಅವರು ಮಾನವ ಹಕ್ಕುಗಳ ಮಹತ್ವ ಮತ್ತು ಪ್ರಸ್ತುತತೆಯನ್ನು ಪ್ರಶಿಕ್ಷಣಾರ್ಥಿಗಳಿಗೆ ವಿವರಿಸಿದರು. ಮಾನವ ಹಕ್ಕುಗಳ ಸಂಘದ ಸಂಯೋಜಕ ಉಪನ್ಯಾಸರಾದ ಶ್ರೀ ಅಜಿತ್ ಕಾಮತ್‍ರವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪ್ರಶಿಕ್ಷಣಾರ್ಥಿಗಳಾದ ಸಂಧ್ಯಾ ಕೆ.ಕೆ ಮತ್ತು ಸಿರಜುನ್ನಿಶ ಅವರು ಮಾನವ

ಮಾರ್ ಇವಾನಿಯೋಸ್ ಕಾಲೇಜಿನಲ್ಲಿ ವಿಶ್ವ ಮಾನವ ಹಕ್ಕುಗಳ ದಿನಾಚರಣೆ Read More »

ಕರಾವಳಿ

ಕುಂತೂರು: ಮಾರ್ ಇವಾನಿಯೋಸ್ ಕಾಲೇಜಿನಲ್ಲಿ ಪ್ರೆಶರ್ಸ್ ಡೇ

(ನ್ಯೂಸ್ ಕಡಬ) newskadaba.com, ಕಡಬ. ನ.05. ಇಲ್ಲಿನ ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದಲ್ಲಿ 2019-20 ನೇ ಸಾಲಿನ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿ ಶಿಕ್ಷಕರನ್ನು ಸ್ವಾಗತಿಸುವ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಹಿರಿಯ ವಿದ್ಯಾರ್ಥಿ ಶಕ್ಷಕರು ಬಹಳ ವೈಶಿಷ್ಟ್ಯ ಪೂರ್ಣವಾಗಿ ನೂತನ ವಿದ್ಯಾರ್ಥಿಗಳನ್ನು ಸ್ವಾಗತಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಸಂಚಾಲಕರಾದ ವಂ|ಫಾ|ಡಾ| ಎಲ್ದೋ ಪುತ್ತನ್ ಕಂಡತ್ತಿಲ್ ವಿದ್ಯಾರ್ಥಿ ಶಿಕ್ಷಕರ ಸರ್ವತೋಮುಖ ಅಭಿವೃದ್ಧಿಗೆ ಸಹಾಯಕವಾಗುವ ಅಂಶಗಳ ಬಗ್ಗೆ ಮಾತನಾಡಿದರು. ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಶ್ರೀಮತಿ ಉಷಾ ಎಂ. ಎಲ್, ಕಾರ್ಯಕ್ರಮದ

ಕುಂತೂರು: ಮಾರ್ ಇವಾನಿಯೋಸ್ ಕಾಲೇಜಿನಲ್ಲಿ ಪ್ರೆಶರ್ಸ್ ಡೇ Read More »

ಕರಾವಳಿ

ಕಡಬ: ಇಬ್ಬರು ಮಕ್ಕಳೊಂದಿಗೆ ತಾಯಿ ನಾಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಜೂ.01. ಮಹಿಳೆಯೋರ್ವರು ತನ್ನ ಇಬ್ಬರು ಮಕ್ಕಳೊಂದಿಗೆ ನಾಪತ್ತೆಯಾಗಿರುವ ಘಟನೆ ಗುರುವಾರದಂದು ಕುಂತೂರಿನಿಂದ ವರದಿಯಾಗಿದೆ. ಐತ್ತೂರು ಗ್ರಾಮದ ಮಾಯಿಪತ್ತೆಪಾಲು ನಿವಾಸಿ ಹುಕ್ರಪ್ಪ ಗೌಡ ಎಂಬವರ ಪುತ್ರಿ ಯಶೋಧಾ(37) ಎಂಬಾಕೆಯನ್ನು ಕುಂತೂರು ಗ್ರಾಮದ ಬಾಚಡ್ಕ‌ ಎಂಬಲ್ಲಿಗೆ ಸುಮಾರು ಹದಿನೈದು ವರ್ಷಗಳ ಹಿಂದೆ ಮದುವೆ ಮಾಡಿಕೊಡಲಾಗಿತ್ತು. ಗುರುವಾರದಂದು ಆಕೆಯ ಮನೆಯವರು ಕರೆ ಮಾಡಿದಾಗ ಕರೆಯನ್ನು ಸ್ವೀಕರಿಸದ ಹಿನ್ನೆಲೆಯಲ್ಲಿ ಅನುಮಾನಗೊಂಡು ಕುಂತೂರಿನ ಮನೆಗೆ ತೆರಳಿದ ಆಕೆಯ ಹೆತ್ತವರಿಗೆ ಬೀಗ ಹಾಕಿರುವುದು ಕಂಡುಬಂದಿದ್ದು, ಬಳಿಕ ಆಕೆ ಕೆಲಸ ನಿರ್ವಹಿಸುತ್ತಿದ್ದ

ಕಡಬ: ಇಬ್ಬರು ಮಕ್ಕಳೊಂದಿಗೆ ತಾಯಿ ನಾಪತ್ತೆ Read More »

ಕರಾವಳಿ

ಕುಂತೂರು: ಶಾಲೆಗೆಂದು ತೆರಳಿದ ಬಾಲಕ ನಾಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಮೇ.24. ಶಾಲೆಗೆಂದು ತೆರಳಿದ ಬಾಲಕನೋರ್ವ ಮನೆಗೆ ಬಾರದೆ ನಾಪತ್ತೆಯಾಗಿರುವ ಘಟನೆ ಕಡಬ ಠಾಣಾ ವ್ಯಾಪ್ತಿಯ ಕುಂತೂರಿನಲ್ಲಿ ಬುಧವಾರದಂದು ನಡೆದಿದೆ. ನಾಪತ್ತೆಯಾಗಿರುವ ಬಾಲಕನನ್ನು ಕುಂತೂರು ಗ್ರಾಮದ ಕಂಡತ್ತಡ್ಕ ನಿವಾಸಿ ಜಯಂತಿ ಎಂಬವರ ಪುತ್ರ, ಪದವು ಸೈಂಟ್ ಜಾರ್ಜ್ ಪ್ರೌಢಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ ಶರತ್ ಕುಮಾರ್ ಎಂದು‌ ಗುರುತಿಸಲಾಗಿದೆ. ಈತ ಬುಧವಾರದಂದು ಶಾಲೆಗೆಂದು ಮನೆಯಿಂದ ತೆರಳಿದ್ದು, ಆ ಬಳಿಕ ಮನೆಗೆ ಬಾರದೆ ನಾಪತ್ತೆಯಾಗಿದ್ದಾನೆ. ಸಂಬಂಧಿಕರ ಮನೆಯಲ್ಲೆಲ್ಲಾ ಹುಡುಕಾಡಿದ್ದು, ಪತ್ತೆಯಾಗದ ಕಾರಣ ಆತನ ತಾಯಿ

ಕುಂತೂರು: ಶಾಲೆಗೆಂದು ತೆರಳಿದ ಬಾಲಕ ನಾಪತ್ತೆ Read More »

ಕರಾವಳಿ

ಬೀರಂತಡ್ಕ ಬಲಮುರಿ ಶ್ರೀ ಮಹಾಗಣಪತಿ ದೇವಸ್ಥಾನ ಮತ್ತು ರಾಜನ್ ದೈವಸ್ಥಾನದಲ್ಲಿ ಪ್ರತಿಷ್ಠೆ ಹಾಗೂ ಕಲಶಾಭಿಷೇಕ

(ನ್ಯೂಸ್ ಕಡಬ) newskadaba.com ಕಡಬ,ಮಾ.31. ಕುಂತೂರು ಗ್ರಾಮದ ಪೆರಾಬೆ ಬೀರಂತಡ್ಕ ಬಲಮುರಿ ಶ್ರೀ ಮಹಾಗಣಪತಿ ದೇವಸ್ಥಾನ ಮತ್ತು ರಾಜನ್ ದೈವಸ್ಥಾನದಲ್ಲಿ ಎ.24ರಿಂದ ಎ.27ರವರೆಗೆ ಶ್ರೀ ಮಹಾಗಣಪತಿ ದೇವರ ಪ್ರತಿಷ್ಠೆ ಹಾಗೂ ರಾಜನ್ ದೈವ(ಶಿರಾಡಿ ದೈವ)ಪರಿವಾರ ದೈವಗಳ ಪ್ರತಿಷ್ಠೆ ಹಾಗೂ ಕಲಶಾಭಿಷೇಕ ಕಾರ್ಯಕ್ರಮಗಳು ವೇದಮೂರ್ತಿ ಶ್ರೀ ಸುಬ್ರಹ್ಮಣ್ಯ ಬೈಪಡಿತ್ತಾಯ ಮತ್ತು ಶ್ರೀ ಕೃಷ್ಣಪ್ರಸಾದ್ ಉಪಾಧ್ಯಾಯ ಅರ್ಬಿ ರವರ ನೇತೃತ್ವದಲ್ಲಿ ನವೀಕರಣ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ ನಡೆಯಲಿದ್ದು ಜೀಣೋದ್ಧಾರ ಕೆಲಸ ಕಾರ್ಯಗಳು ಭರದಿಂದ ನಡೆಯುತ್ತಿದೆ. ಶ್ರೀಕ್ಷೇತ್ರದ ಪರಿಚಯ ‘ಬೀರಂತಡ್ಕ’ ಹೆಸರೇ ಸೂಚಿಸುವಂತೆ ವೀರರ ಬಯಲು

ಬೀರಂತಡ್ಕ ಬಲಮುರಿ ಶ್ರೀ ಮಹಾಗಣಪತಿ ದೇವಸ್ಥಾನ ಮತ್ತು ರಾಜನ್ ದೈವಸ್ಥಾನದಲ್ಲಿ ಪ್ರತಿಷ್ಠೆ ಹಾಗೂ ಕಲಶಾಭಿಷೇಕ Read More »

ಕರಾವಳಿ

ಕುಂತೂರು ಮಾರ್ ಇವಾನಿಯೋಸ್ ಕಾಲೇಜಿನಲ್ಲಿ ಶಿಕ್ಷಕ- ರಕ್ಷಕ ಸಂಘದ ಸಭೆ

(ನ್ಯೂಸ್ ಕಡಬ) newskadaba.com ಕಡಬ, ಜು.30. ವಿದ್ಯಾರ್ಥಿಗಳ ಉತ್ತಮ ಶೈಕ್ಷಣಿಕ ಸಾಧನೆಗೆ ಹೆತ್ತವರು ಮತ್ತು ಶಿಕ್ಷಕರ ನಿರಂತರ ಪ್ರೊತ್ಸಾಹ ಅಗತ್ಯ. ವಿದ್ಯಾರ್ಥಿಗಳು ಪ್ರಸಕ್ತ ಸ್ಪರ್ಧಾತ್ಮಕ ಯುಗದಲ್ಲಿ ಸವಾಲುಗಳನ್ನು ಸಮರ್ಥವಾಗಿ ಎದುರಿಸುವಲ್ಲಿ ಶಿಕ್ಷಣ ಸಂಸ್ಥೆಯ ತರಬೇತಿಯೊಂದಿಗೆ ಹೆತ್ತವರ ಸೂಕ್ತ ಮಾರ್ಗದರ್ಶನವೂ ಬೇಕು ಎಂದು ಸಾಮಾಜಿಕ ಕಾರ್ಯಕರ್ತೆ ಜೋಹಾರಾ ನಿಸಾರ್ ಅಹ್ಮದ್ ಹೇಳಿದರು. ಅವರು ಕುಂತೂರು ಮಾರ್ ಇವಾನಿಯೋಸ್ ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಸಭೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು. ವಿದ್ಯಾರ್ಥಿಗಳು ಗುರುಹಿರಿಯರಿಗೆ ಗೌರವ ಕೊಡುವುದರೊಂದಿಗೆ ಸಚ್ಚಾರಿತ್ರ್ಯವಂತರಾಗಿ ಉತ್ತಮ ನಡೆ-ನುಡಿಯನ್ನು ಅಳವಡಿಸಿಕೊಳ್ಳಬೇಕು.

ಕುಂತೂರು ಮಾರ್ ಇವಾನಿಯೋಸ್ ಕಾಲೇಜಿನಲ್ಲಿ ಶಿಕ್ಷಕ- ರಕ್ಷಕ ಸಂಘದ ಸಭೆ Read More »

ಕರಾವಳಿ

ಕುಂತೂರು ರಕ್ಷಿತಾರಣ್ಯದಲ್ಲಿ ಬೀಜದ ಹುಂಡೆಗಳ ಬಿತ್ತೋತ್ಸವ

(ನ್ಯೂಸ್ ಕಡಬ) newskadaba.com ಕಡಬ, ಜೂ.07. ಕುಂತೂರು ವಲಯರಕ್ಷಿತಾರಣ್ಯದಲ್ಲಿ ಬೀಜದ ಹುಂಡೆಗಳ ಬಿತ್ತೋತ್ಸವವು ಕುಂತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಬಲ್ಯ-ಪಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಸಹಕಾರದೊಂದಿಗೆ ನಡೆಯಿತು. ಈ ಸಂದರ್ಭ ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ಶಿವಪ್ರಸಾದ್ ಪುತ್ತಿಲ, ಕುಂತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯಗುರು ಸುಮಿತ್ರಾ, ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷ ನೇಮಿರಾಜ, ಬಲ್ಯ-ಪಟ್ಟೆ ಶಾಲಾ ಮುಖ್ಯಗುರು ಪುಷ್ಪಾ, ಕುಂತೂರು ಶಾಖೆಯ ಉಪ ಅರಣ್ಯಾಧಿಕಾರಿಅಶೋಕ್, ಅರಣ್ಯರಕ್ಷಕ ಭರತೇಶ್ ಮೊದಲಾದವರು ಉಪಸ್ಥಿತರಿದ್ದರು.

ಕುಂತೂರು ರಕ್ಷಿತಾರಣ್ಯದಲ್ಲಿ ಬೀಜದ ಹುಂಡೆಗಳ ಬಿತ್ತೋತ್ಸವ Read More »

ಕರಾವಳಿ
Scroll to Top