Lakno

ಡ್ರೈವಿಂಗ್‌ ನಲ್ಲೇ ನಿದ್ದೆಗೆ ಜಾರಿದ ಚಾಲಕ; ಲಾರಿಗೆ ಕಾರು ಡಿಕ್ಕಿ- ಐವರು ವೈದ್ಯರ ದುರ್ಮರಣ

(ನ್ಯೂಸ್ ಕಡಬ) newskadaba.com ಲಕ್ನೋ, ನ. 27.  ಡ್ರೈವಿಂಗ್‌ ವೇಳೆ ಚಾಲಕ ನಿದ್ದೆಗೆ ಜಾರಿದ ಪರಿಣಾಮವಾಗಿ ಲಾರಿಗೆ ಕಾರು ಡಿಕ್ಕಿ ಹೊಡೆದಿದ್ದು, ಐವರು ವೈದ್ಯರು ದುರ್ಮರಣಕ್ಕೀಡಾಗಿದ್ದಾರೆ. ಇಂದು ಮುಂಜಾನೆ ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಒಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಅಪಘಾತಕ್ಕೀಡಾದವರು ಉತ್ತರ ಪ್ರದೇಶದ ವೈದ್ಯಕೀಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ವಿಭಾಗದಲ್ಲಿನ ವಿದ್ಯಾರ್ಥಿಗಳು ಎಂದು ಹೇಳಲಾಗಿದೆ. ಲಕ್ನೋದಲ್ಲಿ ನಡೆದ ಮದುವೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದಾಗ ಲಾರಿಗೆ […]

ಡ್ರೈವಿಂಗ್‌ ನಲ್ಲೇ ನಿದ್ದೆಗೆ ಜಾರಿದ ಚಾಲಕ; ಲಾರಿಗೆ ಕಾರು ಡಿಕ್ಕಿ- ಐವರು ವೈದ್ಯರ ದುರ್ಮರಣ Read More »

ಬ್ರೇಕಿಂಗ್ ನ್ಯೂಸ್

ಮಾಜಿ ಸಚಿವ ವಿಕೆ ಸಿಂಗ್ ವಿರುದ್ಧ ಮಾನಹಾನಿ ಪೋಸ್ಟ್ – ಯೂಟ್ಯೂಬರ್ ಅರೆಸ್ಟ್

(ನ್ಯೂಸ್ ಕಡಬ)newskadaba.com, ಲಕ್ನೋ(ಅ.01) : ಮಾಜಿ ಸೇನಾ ಮುಖ್ಯಸ್ಥ ಮತ್ತು ಮಾಜಿ ಕೇಂದ್ರ ಸಚಿವ ವಿಕೆ ಸಿಂಗ್ ವಿರುದ್ಧ ಮಾನಹಾನಿಕರ ವಿಷಯವನ್ನು ಯೂಟ್ಯೂಬ್ ಸುದ್ದಿ ಪೋರ್ಟಲ್‍ನಲ್ಲಿ ಪ್ರಸಾರ ಮಾಡಿದ ಆರೋಪದ ಮೇಲೆ ಅದರ ಮಾಲೀಕನನ್ನು ಗಾಜಿಯಾಬಾದ್ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ರಾನ್ ಸಿಂಗ್ ಎಂದು ಗುರುತಿಸಲಾಗಿದೆ. ಆತನನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಸೆಪ್ಟೆಂಬರ್ 29 ರಂದು ರಾನ್ ವಿರುದ್ಧ ಎಫ್‍ಐಆರ್ ದಾಖಲಾಗಿತ್ತು.

ಮಾಜಿ ಸಚಿವ ವಿಕೆ ಸಿಂಗ್ ವಿರುದ್ಧ ಮಾನಹಾನಿ ಪೋಸ್ಟ್ – ಯೂಟ್ಯೂಬರ್ ಅರೆಸ್ಟ್ Read More »

ಕರಾವಳಿ

ವೈದ್ಯನಿಗೆ 63 ಲಕ್ಷ ರೂ ವಂಚನೆ:ಐಎಫ್ಎಸ್ ಅಧಿಕಾರಿ ವಿರುದ್ದ ಪ್ರಕರಣ

(ನ್ಯೂಸ್ ಕಡಬ) newskadaba.com ಸೆ. 27. ಲಕ್ನೋ: ಹೂಡಿಕೆ ನೆಪದಲ್ಲಿ ವೈದ್ಯರೊಬ್ಬರಿಗೆ 64 ಲಕ್ಷ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ವಿದೇಶಾಂಗ ಸೇವೆ (ಐಎಫ್ಎಸ್) ಅಧಿಕಾರಿ ನಿಹಾರಿಕಾ ಸಿಂಗ್ ಹಾಗೂ ಆಕೆಯ ಪತಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ನ್ಯಾಯಾಲಯದ ಆದೇಶದ ಮೇರೆಗೆ ಗೋಮತಿನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಠಾಣಾಧಿಕಾರಿ ರಾಜೇಶ್ ಕುಮಾರ್ ತ್ರಿಪಾಠಿ ಹೇಳಿದ್ದಾರೆ. ಐಎಫ್ಎಸ್ ಅಧಿಕಾರಿ ನಿಹಾರಿಕಾ ಸಿಂಗ್ ಹಾಗೂ ಪಿ ಅಜಿತ್ ಗುಪ್ತಾ ಹಾಗೂ ಅವರ ಸಹ ಕಂಪನಿಗಳು

ವೈದ್ಯನಿಗೆ 63 ಲಕ್ಷ ರೂ ವಂಚನೆ:ಐಎಫ್ಎಸ್ ಅಧಿಕಾರಿ ವಿರುದ್ದ ಪ್ರಕರಣ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಿಸಿಗಾಳಿಗೆ ತತ್ತರ – 98 ಮಂದಿ ಮೃತ್ಯು

(ನ್ಯೂಸ್ ಕಡಬ)newskadaba  ಲಕ್ನೋ, ಜೂ .19 . ಉತ್ತರ ಭಾರತ ಬಿಸಿಲಿನ ತಾಪ ಏರುತ್ತಿದ್ದು ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ಕೇವಲ 72 ಗಂಟೆಗಳ ಅವಧಿಯಲ್ಲಿ 98 ಮಂದಿ ಮೃತಪಟ್ಟ ಘಟನೆ ನಡೆದಿದೆ. ತಾಪಮಾನ 44 ಡಿಗ್ರಿ ಸೆಲ್ಸಿಯಸ್ ಗಿಂತ ಹೆಚ್ಚಾದ ಕಾರಣ ನಾಲ್ಕು ದಿನಗಳಲ್ಲಿ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕನಿಷ್ಠ 57 ಜನರು ಮೃತಪಟ್ಟಿದ್ದಾರೆ.ಇನ್ನೂ 400ಕ್ಕೂ ಹೆಚ್ಚು ಮಂದಿ ಆಸ್ಪತ್ರೆಯಲ್ಲೇ ಇದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.        

ಬಿಸಿಗಾಳಿಗೆ ತತ್ತರ – 98 ಮಂದಿ ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್
Scroll to Top