ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ- ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ ಆಯ್ಕೆ ಹಿನ್ನೆಲೆ; ಸಚಿವ ಮಧು ಬಂಗಾರಪ್ಪಗೆ ಅಭಿಪ್ರಾಯ ಸಂಗ್ರಹ ಹೊಣೆ
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 22. ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಸಂಭಾವ್ಯ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಸಚಿವ ಮಧು ಬಂಗಾರಪ್ಪ ಅವರಿಗೆ ಉಸ್ತುವಾರಿ ಹೊಣೆ ವಹಿಸಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ಆದೇಶದಲ್ಲಿ ‘ತಮ್ಮನ್ನು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವೀಕ್ಷಕರನ್ನಾಗಿ ನೇಮಿಸಲಾಗಿದೆ. ತಾವು ಆ ಕ್ಷೇತ್ರಕ್ಕೆ ಭೇಟಿ ನೀಡಿ ಉಸ್ತುವಾರಿ ಸಚಿವರ ಸಹಕಾರದೊಂದಿಗೆ ವಿಧಾನಸಭಾ ಕ್ಷೇತ್ರವಾರು ಮುಖಂಡರ ಕಾರ್ಯಕರ್ತರ ಸಭೆ […]


