maani

ಮಾಣಿ: ಅಗ್ನಿ ಅವಘಡ ➤ ಮನೆ ಸಂಪೂರ್ಣ ಬೆಂಕಿಗಾಹುತಿ

(ನ್ಯೂಸ್ ಕಡಬ) newskadaba.com ವಿಟ್ಲ, ಜ. 19. ಮನೆಯೊಂದಕ್ಕೆ ಬೆಂಕಿ ತಗುಲಿದ ಪರಿಣಾಮ ಮನೆ ಸಂಪೂರ್ಣ ಸುಟ್ಟುಹೋದ ಘಟನೆ ಮಾಣಿಯಲ್ಲಿ ನಡೆದಿದೆ. ಮಾಣಿ ಗ್ರಾಮದ ಕಾಪಿಕಾಡು ಸಮೀಪದ ಜನತಾ ಕಾಲೊನಿ ನಿವಾಸಿ ರಮಾ ಅಶೋಕ ಪೂಜಾರಿ ಎಂಬವರ ಮನೆ ಬೆಂಕಿಗಾಹುತಿಯಾಗಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ದುರ್ಘಟನೆ ಸಂಭವಿಸಿದೆ. ಬೆಂಕಿಯನ್ನು ಗಮನಿಸಿದ ಪಕ್ಕದ ಮನೆಯವರು ನೀಡಿದ ಮಾಹಿತಿಯಂತೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಅಷ್ಟರಲ್ಲೇ ಮನೆ ಸಂಪೂರ್ಣ ಸುಟ್ಟುಕರಕಲಾಗಿತ್ತು. ಸ್ಥಳಕ್ಕೆ […]

ಮಾಣಿ: ಅಗ್ನಿ ಅವಘಡ ➤ ಮನೆ ಸಂಪೂರ್ಣ ಬೆಂಕಿಗಾಹುತಿ Read More »

ಕರ್ನಾಟಕ

ಮಾಣಿ: ಖಾಸಗಿ ಬಸ್ ಪಲ್ಟಿ ► ಪ್ರಯಾಣಿಕರು ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ.26. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಬುಡೋಳಿ ಎಂಬಲ್ಲಿ ಖಾಸಗಿ ಬಸ್ಸೊಂದು ಪಟ್ಟಿಯಾದ ಘಟನೆ ಗುರುವಾರ ಮುಂಜಾನೆ ನಡೆದಿದೆ. ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಸುಗಮ ಸಂಸ್ಥೆಯ ಖಾಸಗಿ ಬಸ್ಸು ಬುಡೋಳಿ ಸಮೀಪ ನಿದ್ದೆಯ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಗೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ಮಾಣಿ: ಖಾಸಗಿ ಬಸ್ ಪಲ್ಟಿ ► ಪ್ರಯಾಣಿಕರು ಅಪಾಯದಿಂದ ಪಾರು Read More »

ಕರಾವಳಿ

ಮಾಣಿ ಅಪಘಾತದ ಗಾಯಾಳು ಬೈಕ್ ಸವಾರ ಮೃತ್ಯು ► ಸಹ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ವಿಟ್ಲ, ಜು.30. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಶಾಲಾ ಬಳಿ ಕಾರು ಮತ್ತು ಬೈಕ್ ಮಧ್ಯೆ ಢಿಕ್ಕಿ ಸಂಭವಿಸಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಭಾನುವಾರ ರಾತ್ರಿ ನಡೆದಿದೆ. ಮಾಣಿಯಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಬೈಕಿಗೆ ಎದುರಿನಿಂದ ಬಂದ ಕೇರಳ ನೋದಣಿಯ ಕಾರು ಡಿಕ್ಕಿ ಹೊಡೆದುದರ ಪರಿಣಾಮ ಬೈಕ್ ಸವಾರ ಬೆಳ್ತಂಗಡಿ ತಾಲೂಕಿನ ಕರಾಯ ಬದಿಯಾರು ನಿವಾಸಿ ಜಾಫರ್

ಮಾಣಿ ಅಪಘಾತದ ಗಾಯಾಳು ಬೈಕ್ ಸವಾರ ಮೃತ್ಯು ► ಸಹ ಸವಾರ ಗಂಭೀರ Read More »

ಕರಾವಳಿ

ಮಾಣಿ: ಕಾರು – ಬೈಕ್ ಢಿಕ್ಕಿ ► ಬೈಕ್ ಸವಾರರಿಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ವಿಟ್ಲ, ಜು.30. ಠಾಣಾ ವ್ಯಾಪ್ತಿಯ ಮಾಣಿ ಶಾಲಾ ಬಳಿ ಕಾರು ಮತ್ತು ಬೈಕ್ ಮಧ್ಯೆ ಢಿಕ್ಕಿ ಸಂಭವಿಸಿ ಬೈಕ್ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ಭಾನುವಾರ ಅಪರಾಹ್ನ ನಡೆದಿದೆ. ಮಾಣಿಯಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಬೈಕಿಗೆ ಎದುರಿನಿಂದ ಬಂದ ಕೇರಳ ನೋದಣಿಯ ಕಾರು ಡಿಕ್ಕಿ ಹೊಡೆದುದರ ಪರಿಣಾಮ ಬೈಕ್ ಸವಾರ ಬೆಳ್ತಂಗಡಿ ತಾಲೂಕಿನ ಕರಾಯ ಬದಿಯಾರು ನಿವಾಸಿ ಜಾಫರ್ ಶರೀಫ್ ಹಾಗೂ ಸಹ ಸವಾರ ಕಕ್ಕೆಪದವು ನಿವಾಸಿ ಮಹಮ್ಮದ್ ಇರ್ಷಾದ್ ಗಂಭೀರ ಗಾಯಗೊಂಡಿದ್ದು, ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಾಣಿ: ಕಾರು – ಬೈಕ್ ಢಿಕ್ಕಿ ► ಬೈಕ್ ಸವಾರರಿಬ್ಬರು ಗಂಭೀರ Read More »

ಕರಾವಳಿ
Scroll to Top