ಜ. 29ರಂದು ವಿಷ್ಣುವರ್ಧನ್ ಸ್ಮಾರಕ ಉದ್ಘಾಟಿಸಲಿರುವ ಸಿಎಂ ಬೊಮ್ಮಾಯಿ
(ನ್ಯೂಸ್ ಕಡಬ) newskadaba.com ಮೈಸೂರು, ಜ. 13. ಡಾ.ವಿಷ್ಣುವರ್ಧನ್ ಅವರ ಹುಟ್ಟೂರಾದ ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ ಮಾಡಬೇಕೆಂಬ ಅವರ ಅಭಿಮಾನಿಗಳು ಮತ್ತು ಅನುಯಾಯಿಗಳ ಬಹುದಿನಗಳ ಬೇಡಿಕೆ ಸದ್ಯದಲ್ಲೇ ನನಸಾಗಲಿದೆ ಎಂದು ವರದಿಯಾಗಿದೆ. ಜನವರಿ 29ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ವಿಷ್ಣುವರ್ಧನ್ ಅವರ ಸ್ಮಾರಕವನ್ನು ಉದ್ಘಾಟನೆ ಮಾಡಲಿದ್ದು, ಇದಕ್ಕಾಗಿ ಭರದ ಸಿದ್ಧತೆ ನಡೆದಿದೆ ಎಂದು ತಿಳಿದುಬಂದಿದೆ. ಈ ಬೆಳವಣಿಗೆಯ ಬಗ್ಗೆ ವಿಷ್ಣುವರ್ಧನ್ ಅವರ ಅಳಿಯ ಅನಿರುದ್ಧ್ ಅವರು ಮಾತನಾಡಿದ್ದು, ಖಚಿತಪಡಿಸಿದ್ದಾರೆ. ಕಾಮಗಾರಿ ಪೂರ್ಣಗೊಂಡ ಬಗ್ಗೆ ಸಂತೋಷ ವ್ಯಕ್ತಪಡಿಸಿದ್ದಾರೆ. […]
ಜ. 29ರಂದು ವಿಷ್ಣುವರ್ಧನ್ ಸ್ಮಾರಕ ಉದ್ಘಾಟಿಸಲಿರುವ ಸಿಎಂ ಬೊಮ್ಮಾಯಿ Read More »
ಕರ್ನಾಟಕ



