ಸೆ. 25 ರಂದು ಮಂಗಳೂರು ದಸರಾ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 24. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ಸಹಯೋಗದಲ್ಲಿ ಮಂಗಳೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ನಾಳೆ (ಸೆ.25) ಬೆಳಿಗ್ಗೆ 9 ಗಂಟೆಗೆ ನಗರದ ಮಂಗಳ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಅವರು ಘನ ಉಪಸ್ಥಿತಿ ವಹಿಸುವರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಕಾರ್ಯಕ್ರಮ ಉದ್ಘಾಟಿಸುವರು. […]

ಸೆ. 25 ರಂದು ಮಂಗಳೂರು ದಸರಾ ಕ್ರೀಡಾಕೂಟ Read More »

ಕರಾವಳಿ