Mangalore

ಮಂಗಳೂರು: ವಿಮಾನ ನಿಲ್ದಾಣದಲ್ಲಿ 2.60 ಕೋಟಿ ರೂ. ಮೌಲ್ಯದ ವಜ್ರ ವಶ

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.13. ಭಾರತದಿಂದ ದುಬೈಗೆ ಅಕ್ರಮವಾಗಿ ವಿಮಾನದಲ್ಲಿ 2.60 ಕೋಟಿ ರೂ. ಮೌಲ್ಯದ ವಜ್ರ ಸಾಗಿಸುತ್ತಿದ್ದ ಇಬ್ಬರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಭಾರತೀಯ ಕಂದಾಯ ಗುಪ್ತಚರ ನಿರ್ದೇಶನಾಲಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ದುಬೈಗೆ ಪ್ರಯಾಣ ಬೆಳೆಸಿದ್ದ ಭಟ್ಕಳದ ಅನಸ್ ಮತ್ತು ಅಮ್ಮರ್ ಎಂಬ ಪ್ರಯಾಣಿಕರು ತಮ್ಮ ಶೂ ಮತ್ತು ಬ್ಯಾಗ್ ಅಡಿಯಲ್ಲಿ ಅನುಮಾನ ಬಾರದಂತೆ ವಜ್ರವನ್ನು ಅಡಗಿಸಿಟ್ಟು ಸಾಗಾಟ ಮಾಡುತ್ತಿದ್ದರು. ಈ ವಜ್ರಗಳನ್ನು ಮುಂಬಯಿಯಿಂದ ತಂದಿದ್ದರು ಎನ್ನಲಾಗಿದೆ.    

ಮಂಗಳೂರು: ವಿಮಾನ ನಿಲ್ದಾಣದಲ್ಲಿ 2.60 ಕೋಟಿ ರೂ. ಮೌಲ್ಯದ ವಜ್ರ ವಶ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ಈಜಲು ನೀರಿಗಿಳಿದ ಯುವಕರಿಬ್ಬರು ಮೃತ್ಯು!     

(ನ್ಯೂಸ್ ಕಡಬ)newskadaba.com ಸುಳ್ಯ, ಫೆ.12. ಈಜಲು ನೀರಿಗಿಳಿದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಅಜ್ಜಾವರ ಪಯಸ್ವಿನಿ ನದಿಯಲ್ಲಿ ಸಂಭವಿಸಿದೆ. ಕಾರ್ಯಕ್ರಮವೊಂದಕ್ಕೆ ಆಗಮಿಸಿದ್ದ ಯುವಕರ ಗುಂಪು ಪಕ್ಕದಲ್ಲೇ ಇದ್ದ ಪಯಸ್ವಿನಿ ನದಿಗೆ ಈಜಲು ತೆರಳಿದ್ದು, ಈ ವೇಳೆ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಬಳಿಕ ಮೃತದೇಹವನ್ನು ಹೊರತೆಗೆದು ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ.

ಸುಳ್ಯ: ಈಜಲು ನೀರಿಗಿಳಿದ ಯುವಕರಿಬ್ಬರು ಮೃತ್ಯು!      Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಅಕ್ರಮ ಗಾಂಜಾ ಮಾರಾಟ  ➤  ಆರೋಪಿ ಬಂಧನ..!

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.07. ಗಾಂಜಾ ಮಾರಾಟಕ್ಕೆ ಯತ್ನಿಸಿದ ಆರೋಪದ ಮೇಲೆ ಆರೋಪಿಯೋರ್ವನನ್ನು ಪಾಂಡೇಶ್ವರ ಪೊಲೀಸರು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ. ಬಂಧಿತ ಆರೋಪಿಯನ್ನು ಫಾರೂಕ್ ಎಂದು ಗುರುತಿಸಲಾಗಿದೆ. ಪಾಂಡೇಶ್ವರ ಪೊಲೀಸರು ಗಸ್ತಿನಲ್ಲಿದ್ದಾಗ ಸೆಂಟ್ರಲ್ ರೈಲ್ವೇ ನಿಲ್ದಾಣದ ಮುತ್ತಪ್ಪ ಗುಡಿಯ ಜಂಕ್ಷನ್ ಬಳಿ ಫಾರೂಕ್ ಸುಮಾರು 1 ಕೆ.ಜಿ. ಗಿಂತಲೂ ಅಧಿಕ ಪ್ರಮಾಣದ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ತನ್ನ ವಶದಲ್ಲಿ ಇಟ್ಟುಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಮಂಗಳೂರು: ಅಕ್ರಮ ಗಾಂಜಾ ಮಾರಾಟ  ➤  ಆರೋಪಿ ಬಂಧನ..! Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ವಿಷ ಆಹಾರ ಸೇವನೆ..!      ➤  ನೂರಾರು ಮಕ್ಕಳು ಅಸ್ವಸ್ತ

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.07. ನರ್ಸಿಂಗ್ ಕಾಲೇಜಿನ ಹಾಸ್ಟೆಲೊಂದರಲ್ಲಿ ರಾತ್ರಿ ಆಹಾರ ಸೇವಿಸಿದ ಬಳಿಕ ನೂರಾರು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ. ವಿಷ ಆಹಾರ ಸೇವನೆಯಿಂದ ಅಸ್ವಸ್ಥಗೊಂಡಿದ್ದು ತಕ್ಷಣ ವಿದ್ಯಾರ್ಥಿಗಳನ್ನು ವಿವಿಧ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.  ಎಜೆ ಆಸ್ಪತ್ರೆ, ಸಿಟಿ ಆಸ್ಪತ್ರೆ, ಮಂಗಳ ಆಸ್ಪತ್ರೆ, ಫಾದರ್ ಮುಲ್ಲರ್ ಸೇರಿ ವಿವಿಧ ಆಸ್ಪತ್ರೆಗೆ ವಿದ್ಯಾರ್ಥಿಗಳನ್ನು ತುರ್ತು ಚಿಕಿತ್ಸೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಪೊಲೀಸ್ ಆಯುಕ್ತ ಶಶಿಕುಮಾರ್ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದು, ಈ ಕುರಿತು ಹೆಚ್ಚಿನ

ಮಂಗಳೂರು: ವಿಷ ಆಹಾರ ಸೇವನೆ..!      ➤  ನೂರಾರು ಮಕ್ಕಳು ಅಸ್ವಸ್ತ Read More »

ಕರಾವಳಿ

ಪುತ್ತೂರು: ತಲೆಮರೆಸಿಕೊಂಡಿದ್ದ ಗಾಂಜಾ ಪ್ರಕರಣದ ಆರೋಪಿಯ ಬಂಧನ

(ನ್ಯೂಸ್ ಕಡಬ)newskadaba.com ಪುತ್ತೂರು, ಫೆ.06. ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನರಿಂಗಾನ ನಿವಾಸಿ ಮೊಹಮ್ಮದ್ ಬಶೀರ್ ಎಂದು ಗುರುತಿಸಲಾಗಿದೆ. ಗಾಂಜಾ ಪ್ರಕರಣದಲ್ಲಿ ಬಶೀರ್ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಹೊರಗಿದ್ದು, ಕಳೆದ ಐದು ವರ್ಷಗಳಿಂದ ವಿಚಾರಣೆಗೆ ಒಳಗಾಗಲು ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಆರೋಪಿ ವಿರುದ್ಧ ವಾರೆಂಟ್ ಜಾರಿ ಮಾಡಲಾಗಿದ್ದು, ಇದೀಗ ಪುತ್ತೂರು ನಗರ ಪೊಲೀಸ್ ನಿರೀಕ್ಷಕರ ಮಾರ್ಗದರ್ಶನದಲ್ಲಿ ಮೊಹಮ್ಮದ್ ಬಶೀರ್ ನನ್ನು ಬಂಧಿಸಲಾಗಿದೆ.  

ಪುತ್ತೂರು: ತಲೆಮರೆಸಿಕೊಂಡಿದ್ದ ಗಾಂಜಾ ಪ್ರಕರಣದ ಆರೋಪಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಜ್ಯುವೆಲ್ಲರಿ ಅಂಗಡಿಗೆ ನುಗ್ಗಿ ಹತ್ಯೆ ಪ್ರಕರಣ     ➤ ಆಟೋ ಚಾಲಕನ ವಿಚಾರಣೆ..!

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.06. ಹಂಪನ ಕಟ್ಟೆಯ ಜುವೆಲ್ಯರಿಯೊಂದರಲ್ಲಿ ಸಿಬ್ಬಂದಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಅತ್ತಾವರ ನಿವಾಸಿ ರಾಘವೇಂದ್ರ ಆಚಾರ್ಯ (55) ಅವರಿಗೆ ಚೂರಿಯಿಂದ ಇರಿದು ಕೊಲೆ ಮಾಡಿ ಅಂಗಡಿಯಿಂದ ಚಿನ್ನಾಭರಣ ದರೋಡೆ ಮಾಡಿಕೊಂಡು ದುಷ್ಕರ್ಮಿ ಪರಾರಿಯಾಗಿದ್ದ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿ ಪೊಲೀಸ್ ತನಿಖೆಯ ವೇಳೆ ಸ್ಥಳೀಯ ಅಂಗಡಿಯ ಸಿಸಿಟಿವಿಯಲ್ಲಿ ದುಷ್ಕರ್ಮಿ ಆಟೋದಲ್ಲಿ ಪರಾರಿಯಾಗಿರುವುದು ಸೆರೆಯಾಗಿತ್ತು. ಇದೀಗ ಆರೋಪಿ ಪರಾರಿಯಾಗಿರುವ ಹಿನ್ನಲೆಯಲ್ಲಿ ಆಟೋ ರಿಕ್ಷಾ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ ಎನ್ನಲಾಗಿದೆ. ಆರೋಪಿ

ಮಂಗಳೂರು: ಜ್ಯುವೆಲ್ಲರಿ ಅಂಗಡಿಗೆ ನುಗ್ಗಿ ಹತ್ಯೆ ಪ್ರಕರಣ     ➤ ಆಟೋ ಚಾಲಕನ ವಿಚಾರಣೆ..! Read More »

ಕರಾವಳಿ, ಕ್ರೈಮ್ ನ್ಯೂಸ್
Death, deadbody, Waterfall

ಮಂಗಳೂರು: ಬಾಲಕಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ..!

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.06. ಬಾಲಕಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುದ್ರೋಳಿಯ ಟಿಪ್ಪು ಸುಲ್ತಾನ್ ನಗರದಲ್ಲಿ ನಡೆದಿದೆ. ಕುದ್ರೋಳಿ ನಿವಾಸಿ ರಿಯಾಝ್‌ ಎಂಬವರ ಪುತ್ರಿ ಖತೀಜಾ ರೀನಾ(16)ಆತ್ಮಹತ್ಯೆ ಮಾಡಿಕೊಂಡ ಬಾಲಕಿ ಎಂದು ಗುರುತಿಸಲಾಗಿದೆ. ಬಾಲಕಿ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಬಾಲಕಿಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಬಂದರ್ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ವರದಿ ತಿಳಿಸಿದೆ.    

ಮಂಗಳೂರು: ಬಾಲಕಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಮುಖ್ಯ ಶಿಕ್ಷಕರ ಗಮನಕ್ಕೆ ತಾರದೆ ಮಕ್ಕಳನ್ನು ಪ್ರವಾಸಕ್ಕೆ ಕರೆದೊಯ್ದ ಶಿಕ್ಷಕಿ

(ನ್ಯೂಸ್ ಕಡಬ)newskadaba.com  ಪುತ್ತೂರು, ಫೆ.05. ಶಿಕ್ಷಕಿಯೋರ್ವರು ಶಾಲಾ ಮುಖ್ಯ ಶಿಕ್ಷಕರು ಹಾಗೂ ಎಸ್‌ಡಿಎಂಸಿಯವರಿಗೆ ತಿಳಿಸದೆ ಶಾಲಾ ಮಕ್ಕಳನ್ನು ಪ್ರವಾಸಕ್ಕೆ ಕರೆದೊಯ್ದ ಘಟನೆ ಚಿಕ್ಕಮುಡ್ನೂರು ಗ್ರಾಮದ ಬೀರ್ನಹಿತ್ಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಚಿಕ್ಕಮುಡ್ನೂರು ಬೀರ್ನಹಿತ್ಲು ಶಾಲೆಯ ಮೂರನೇ ಹಾಗೂ ಒಂದನೇ ತರಗತಿ ಮಕ್ಕಳನ್ನು ಶಿಕ್ಷಕಿಯೋರ್ವರು ಶಾಲಾ ಮುಖ್ಯ ಶಿಕ್ಷಕರು ಹಾಗೂ ಎಸ್‌ಡಿಎಂಸಿಯವರಿಗೆ ತಿಳಿಸಿದೆ ಕರೆದುಕೊಂಡು ಹೋಗಿದ್ದು, ಈ ಕುರಿತು ಪೋಷಕರು ಮತ್ತು ಸಾರ್ವಜನಿಕರು ಆರೋಪಿಸಿದ್ದಾರೆ. ಶಾಲೆಯಲ್ಲಿ ಪತ್ರವೊಂದು ದೊರೆತಿದ್ದು, ಅದರಲ್ಲಿ ಪ್ರವಾಸಕ್ಕೆ ಹೋಗುವ ಸ್ಥಳಗಳನ್ನು ಉಲ್ಲೇಖಿಸಲಾಗಿದೆ.

ಪುತ್ತೂರು: ಮುಖ್ಯ ಶಿಕ್ಷಕರ ಗಮನಕ್ಕೆ ತಾರದೆ ಮಕ್ಕಳನ್ನು ಪ್ರವಾಸಕ್ಕೆ ಕರೆದೊಯ್ದ ಶಿಕ್ಷಕಿ Read More »

ಕರಾವಳಿ

ಮಂಗಳೂರು: ಜ್ಯುವೆಲ್ಲರಿ ಅಂಗಡಿಯ ಸಿಬ್ಬಂದಿ ಹತ್ಯೆ ಕೇಸ್ ➤ಆರೋಪಿಗಾಗಿ ಮುಂದುವರಿದ ಶೋಧ

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.05. ನಗರದ ಜ್ಯುವೆಲ್ಲರಿ ಅಂಗಡಿಯೊಂದರಲ್ಲಿ ಹಾಡಹಗಲೇ ಸಿಬ್ಬಂದಿ ರಾಘವೇಂದ್ರ ಆಚಾರ್ಯರನ್ನು ಚೂರಿಯಿಂದ ಇರಿದು ಕೊಲೆಗೈದು ತಲೆಮರೆಸಿಕೊಂಡಿರುವ ಆರೋಪಿಗಾಗಿ ಬಂದರು ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ ಎನ್ನಲಾಗಿದೆ. ಘಟನೆ ವೇಳೆ ಅಂಗಡಿಯಲ್ಲಿದ್ದ ಒಟ್ಟು 12 ಗ್ರಾಂ ತೂಕದ 60,000 ರೂ. ಮೌಲ್ಯದ 3 ಚಿನ್ನದ ಸರಗಳನ್ನು ದರೋಡೆ ಮಾಡಲಾಗಿದೆ. ಆರೋಪಿಯ ಪತ್ತೆಗಾಗಿ ಅಕ್ಕಪಕ್ಕದ ಅಂಗಡಿಗಳು ಸೇರಿದಂತೆ ಹಲವಾರು ಕಟ್ಟಡಗಳ ಸಿಸಿ ಕೆಮರಾ ದೃಶ್ಯಗಳನ್ನು ಪೊಲೀಸರು ಪರಿಶೀಲನೆ ನಡೆಸಿದ್ದು, ದುಷ್ಕರ್ಮಿ ಕೃತ್ಯ ನಡೆಸಿದ ಬಳಿಕ ತುಂಬಾ

ಮಂಗಳೂರು: ಜ್ಯುವೆಲ್ಲರಿ ಅಂಗಡಿಯ ಸಿಬ್ಬಂದಿ ಹತ್ಯೆ ಕೇಸ್ ➤ಆರೋಪಿಗಾಗಿ ಮುಂದುವರಿದ ಶೋಧ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಪತ್ರಕರ್ತರ ಮೇಲೆ ಹಲ್ಲೆ; ರಕ್ಷಣೆಗೆ ಮನವಿ

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.04. ಪೊಲೀಸ್‌ ಕಮಿಷನರೇಟ್‌ ವ್ಯಾಪ್ತಿಯಲ್ಲಿ ಪತ್ರಕರ್ತರು ಮತ್ತು ಜನಸಾಮಾನ್ಯರ ಮೇಲೆ ಹಲ್ಲೆ, ದೌರ್ಜನ್ಯ ನಡೆಯುತ್ತಿರುವುದನ್ನು ಖಂಡಿಸಿ, ಪತ್ರಕರ್ತರಿಗೆ ನಿರ್ಭೀತಿಯಿಂದ ಕರ್ತವ್ಯ ನಿರ್ವಹಿಸಲು ಸೂಕ್ತ ರಕ್ಷಣೆ ನೀಡುವಂತೆ ಆಗ್ರಹಿಸಿ ಪೊಲೀಸ್‌ ಕಮಿಷನರ್‌ ಎನ್.ಶಶಿಕುಮಾರ್ ಅವರಿಗೆ ಶುಕ್ರವಾರ ಪತ್ರಕರ್ತರ ನಿಯೋಗ ಮನವಿ ಸಲ್ಲಿಸಿತು. ಟೋಲ್‌ಗೇಟ್‌ಗಳಲ್ಲಿ ಸಿಬ್ಬಂದಿಗಳು ಪತ್ರಕರ್ತರು ಸಹಿತ ಸಾರ್ವಜನಿಕರ ಮೇಲೆ ಹಲ್ಲೆ ನಡೆಸುತ್ತಿರುವ ಕೃತ್ಯಗಳು ಹೆಚ್ಚಿವೆ. ಪೊಲೀಸ್‌ ಇಲಾಖೆ ಈ ಕುರಿತು ಸೂಕ್ತ ಕ್ರಮ ಜರುಗಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ

ಮಂಗಳೂರು: ಪತ್ರಕರ್ತರ ಮೇಲೆ ಹಲ್ಲೆ; ರಕ್ಷಣೆಗೆ ಮನವಿ Read More »

ಕರಾವಳಿ
Scroll to Top