Mangalore

ವಿಟ್ಲ: ಬಸ್ ನಿಲ್ಧಾಣದಲ್ಲಿ ವ್ಯಕ್ತಿಯೋರ್ವನ ಮೃತದೇಹ ಪತ್ತೆ !

(ನ್ಯೂಸ್ ಕಡಬ)newskadaba.com ವಿಟ್ಲ, ಜ.30. ಕನ್ಯಾನ ಬಸ್ ನಿಲ್ಧಾಣದಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾಗಿದೆ. ಕೇರಳ ಮೂಲದ ವಿನಯನ್ (58) ಮೃತರು ಎಂದು ಗುರುತಿಸಲಾಗಿದೆ. ವಿನಯನ್ ಮೃತದೇಹವು ಕನ್ಯಾನದ ಬಸ್ ನಿಲ್ದಾಣದಲ್ಲಿ ಪತ್ತೆಯಾಗಿದ್ದು, ಹೃದಯಾಘಾತದಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  

ವಿಟ್ಲ: ಬಸ್ ನಿಲ್ಧಾಣದಲ್ಲಿ ವ್ಯಕ್ತಿಯೋರ್ವನ ಮೃತದೇಹ ಪತ್ತೆ ! Read More »

ಕರಾವಳಿ, ಕ್ರೈಮ್ ನ್ಯೂಸ್

100 ರೂ.ನಲ್ಲಿ 15 ಪೈಸೆ ಮಾತ್ರ ಅಭಿವೃದ್ಧಿಗೆ ಬಳಕೆ ➤ ನ್ಯಾ| ಸಂತೋಷ್‌ ಹೆಗ್ಡೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.30. ಪ್ರಸ್ತುತ ದೇಶದಲ್ಲಿ ಸರಕಾರದಿಂದ ಮಂಜೂರಾಗುವ 100 ರೂ. ಅನುದಾನದಲ್ಲಿ 15 ಪೈಸೆ ಮಾತ್ರ ಅಭಿವೃದ್ಧಿಗೆ ಬಳಕೆಯಾಗುತ್ತಿದೆ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಹೇಳಿದ್ದಾರೆ. ಮಂಗಳೂರಿನಲ್ಲಿ ಆಯೋಜಿಸಿದ ಜಿಲ್ಲಾ ಸಮಾವೇಶ “ಪರಿಕಲ್ಪನೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 1985ರಲ್ಲಿ ರಾಜೀವ್‌ ಗಾಂಧಿಯವರು ಪ್ರಧಾನಿಯಾಗಿದ್ದಾಗ ಸರಕಾರದಿಂದ ಮಂಜೂರಾಗುವ ಪ್ರತೀ 1 ರೂ. ಅನುದಾನದಲ್ಲಿ 15 ಪೈಸೆ ಮಾತ್ರ ಅಭಿವೃದ್ಧಿಗಾಗಿ ಬಳಕೆಯಾಗುತ್ತದೆ ಎನ್ನುವ ಮಾತು ಚಾಲ್ತಿಯಲ್ಲಿತ್ತು. ಅಭಿವೃದ್ಧಿ ಹೆಸರಿನಲ್ಲಿ ಕೇಂದ್ರ, ರಾಜ್ಯ ಸರಕಾರಗಳು ಬೊಕ್ಕಸದಿಂದ

100 ರೂ.ನಲ್ಲಿ 15 ಪೈಸೆ ಮಾತ್ರ ಅಭಿವೃದ್ಧಿಗೆ ಬಳಕೆ ➤ ನ್ಯಾ| ಸಂತೋಷ್‌ ಹೆಗ್ಡೆ Read More »

ಕರಾವಳಿ

ಮಂಗಳೂರು: ನಾಪತ್ತೆಯಾಗಿದ್ದ ಯುವತಿ ವಿವಾಹವಾಗಿ ಪತ್ತೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.30. ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಯುವತಿ ತನ್ನ ಪ್ರಿಯಕರನೊಂದಿಗೆ ಮದುವೆಯಾಗಿ ಪತ್ತೆಯಾಗಿದ್ದಾಳೆ. ನಾಪತ್ತೆಯಾಗಿದ್ದ ಕಮಲಾಕ್ಷ ಎಂಬವರ ಪುತ್ರಿ, ನಗರದ ಫೈನಾನ್ಸ್‌ ಕಂಪನಿಯೊಂದರ ಉದ್ಯೋಗಿ ಶಿವಾನಿ (20)ತನ್ನ ಪ್ರಿಯಕರನೊಂದಿಗೆ ಮದುವೆಯಾಗಿದ್ದು, ಪೊಲೀಸರು ತಂತ್ರಜ್ಞಾನ ಮಾಹಿತಿ ಆಧಾರದಲ್ಲಿ ಪತ್ತೆ ಮಾಡಿ ಕರೆ ತಂದಿದ್ದಾರೆ. ಕಂಕನಾಡಿ ಠಾಣೆಯ ಪೊಲೀಸ್‌ ಆಧಿಕಾರಿಗಳ ಮುಂದೆ ಹಾಜರಾಗಿ ತಾನು ಪ್ರೀತಿಸಿದವನನ್ನು ಸ್ವಯೇಚ್ಚೆಯಿಂದ ಮದುವೆಯಾಗಿದ್ದಾಗಿ ಹೇಳಿಕೆ ನೀಡಿದ್ದು ಪತಿಯೊಂದಿಗೆ ಬಾಳುವುದಾಗಿ ಲಿಖಿತ ಹೇಳಿಕೆ ನೀಡಿದ್ದಾಳೆ. ಲವ್‌ ಜಿಹಾದ್‌ ಆತಂಕದ ನಡುವೆ ಒಂದು ವಾರ

ಮಂಗಳೂರು: ನಾಪತ್ತೆಯಾಗಿದ್ದ ಯುವತಿ ವಿವಾಹವಾಗಿ ಪತ್ತೆ Read More »

ಕರಾವಳಿ

ಮಂಗಳೂರು: ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.30. ಕಲ್ಲಾಪು ಸನಿಹ ನೇತ್ರಾವತಿ ನದಿಯ ತಂತ್ರಿ ರಸ್ತೆ ಬಳಿ ಅಪರಿಚಿತ ಮೃತದೇಹ ಪತ್ತೆಯಾದ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ. ಮೂರು ದಿನಗಳ ಹಿಂದೆ ನದಿಗೆ ಬಿದ್ದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಲುಂಗಿ, ಟೀಶರ್ಟ್ ಧರಿಸಿದ್ದು ಕೈಯಲ್ಲಿ ವಾಚ್, ಪತ್ತೆಯಾಗಿದೆ. ಮೃತದೇಹ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿದ್ದು, ಉಳ್ಳಾಲ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ. ಬಜಾಲ್ ಅಥವಾ ಬಂಟ್ವಾಳ ಭಾಗದಲ್ಲಿ ನದಿಗೆ ಬಿದ್ದಿರುವ ಶಂಕೆವ್ಯಕ್ತವಾಗಿದ್ದು , ನದಿ ಮಧ್ಯದಲ್ಲಿ ತೇಲುತ್ತಿದ್ದ ಮೃತದೇಹವನ್ನು ಸಮಾಜ ಸೇವಕ

ಮಂಗಳೂರು: ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಹಾಸಿಗೆ ಹಿಡಿದಿದ್ದ ಪತ್ನಿಯನ್ನು ಕೊಲೆಗೈದು ಪತಿ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com  ಮಂಗಳೂರು, ಜ.28. ಕಾಪಿಕಾಡ್‌ನ ಅಪಾರ್ಟ್‌ಮೆಂಟ್‌ ಒಂದರಲ್ಲಿ ಪತಿಯೊಬ್ಬ ಹಾಸಿಗೆ ಹಿಡಿದಿದ್ದ ತನ್ನ ಪತ್ನಿಯನ್ನು ಹತ್ಯೆಗೈದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತರನ್ನು ಶೈಲಜಾ (64) ಮತ್ತು ನಿವೃತ್ತ ಕೆನರಾ ಬ್ಯಾಂಕ್ ಮ್ಯಾನೇಜರ್ ದಿನೇಶ್ ರಾವ್ (65) ಎಂದು ಗುರುತಿಸಲಾಗಿದೆ. ಶೈಲಜಾ ಅವರು ಅನಾರೋಗ್ಯ ಹಿನ್ನೆಲೆಯಲ್ಲಿ ಹಾಸಿಗೆ ಹಿಡಿದಿದ್ದು, ಇವರನ್ನು ನೋಡಿಕೊಳ್ಳಲು ಹೋಮ್ ನರ್ಸ್ ಬಂದು ಹೋಗುತ್ತಿದ್ದರು. ದಿನೇಶ್ ಪತ್ನಿಯನ್ನು ಕೊಂದು ಹೆಂಡತಿ ಮೃತಪಟ್ಟಿರುವ ಪಕ್ಕದ ಕೋಣೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಮಂಗಳೂರು: ಹಾಸಿಗೆ ಹಿಡಿದಿದ್ದ ಪತ್ನಿಯನ್ನು ಕೊಲೆಗೈದು ಪತಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಡ್ರಗ್ ಪ್ರಕರಣ     ➤ 13 ಮಂದಿಗೆ ಜಾಮೀನು

(ನ್ಯೂಸ್ ಕಡಬ)newskadaba.com ಮಂಗಳೂರು, ಜ.28. ನಗರದಲ್ಲಿ ಇತ್ತೀಚೆಗೆ ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ವೈದ್ಯರ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂ ಬಂಧಿಸಲ್ಪಟ್ಟಿದ್ದ 13 ಮಂದಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ವಿವಿಧ ಮೆಡಿಕಲ್‌ ಕಾಲೇಜು ಮತ್ತು ಆಸ್ಪತ್ರೆಗಳ ವೈದ್ಯರು, ವೈದ್ಯ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 24 ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಉಳಿದ 11 ಮಂದಿ ಕೂಡ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಇನ್ನು ಈ ಪ್ರಕರಣದ ಕುರಿತು ಇತ್ತೀಚೆಗೆ ಮಾತನಾಡಿದ್ದ ಮಂಗಳೂರು ವಕೀಲರ ಸಂಘದ ಉಪಾಧ್ಯಕ್ಷ

ಮಂಗಳೂರು: ಡ್ರಗ್ ಪ್ರಕರಣ     ➤ 13 ಮಂದಿಗೆ ಜಾಮೀನು Read More »

ಕರಾವಳಿ

ಮಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಪ್ರಕರಣ ➤ ಅಧಿಕಾರಿಗೆ 5 ವರ್ಷ ಜೈಲು, 1.50 ಕೋ.ರೂ. ದಂಡ..!

(ನ್ಯೂಸ್ ಕಡಬ)newskadaba.com ಮಂಗಳೂರು, ಜ.28. ಆದಾಯಕ್ಕಿಂತ ಹೆಚ್ಚಿನ ಪ್ರಮಾಣದ ಆಸ್ತಿ ಹೊಂದಿದ ಪ್ರಕರಣದಲ್ಲಿ ನ್ಯಾಯಾಲಯವು ವಲಯ ಅರಣ್ಯಾಧಿಕಾರಿಗೆ 5 ವರ್ಷಗಳ ಸಾದಾ ಸಜೆ ಮತ್ತು 1.50 ಲ.ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಬೆಳ್ತಂಗಡಿ ಸಹ್ಯಾದ್ರಿ ವಲಯದ ವಲಯ ಅರಣ್ಯಾಧಿಕಾರಿಯಾಗಿದ್ದು ಪ್ರಸ್ತುತ ನಿವೃತ್ತರಾಗಿರುವ ಮಂಗಳೂರು ದೇರೆಬೈಲ್‌ ಕೊಂಚಾಡಿ ನಿವಾಸಿ ಎಸ್‌.ರಾಘವ ಪಾಟಾಳಿ ಶಿಕ್ಷೆಗೊಳಗಾದ ಅಪರಾಧಿ. ಈತನ ವಿರುದ್ಧ ಮಂಗಳೂರು ಲೋಕಾಯುಕ್ತ ಪೊಲೀಸ್‌ ಠಾಣೆಯಲ್ಲಿ 2011ರ ಜು.21ರಂದು ಭ್ರಷ್ಟಾಚಾರ ತಡೆ ಕಾಯಿದೆ 1988ರಡಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ

ಮಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಪ್ರಕರಣ ➤ ಅಧಿಕಾರಿಗೆ 5 ವರ್ಷ ಜೈಲು, 1.50 ಕೋ.ರೂ. ದಂಡ..! Read More »

ಕರಾವಳಿ

ಮಂಗಳೂರು: ಕೆಲಸದ ವೇಳೆ ಆಕಸ್ಮಿಕವಾಗಿ ಕುಸಿದ ಮೇಲ್ಛಾವಣಿ ➤ ಯುವಕನೋರ್ವ ಮೃತ್ಯು..!

(ನ್ಯೂಸ್ ಕಡಬ)newskadaba.com ಮಂಗಳೂರು, ಜ.28. ಕೆಲಸದಲ್ಲಿ ನಿರತನಾಗಿದ್ದ ವೇಳೆ ಆಕಸ್ಮಿಕವಾಗಿ ವರ್ಕ್‌ಶಾಪ್‌ ವೊಂದರ ಮೇಲ್ಛಾವಣಿಯಿಂದ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಸಂಭವಿಸಿದೆ. ನಗರದ ಎಕ್ಕೂರುಗುಡ್ಡೆ ನಿವಾಸಿ ವರುಣ್‌(25) ಮೃತಪಟ್ಟವರು ಎನ್ನಲಾಗಿದೆ. ವರುಣ್‌ ಅವರು ವರ್ಕ್‌ಶಾಪ್‌ನ ಮೇಲ್ಛಾವಣಿಯ ಶೀಟ್‌ ಮೇಲೆ ಸೋಲಾರ್‌ ಪ್ಯಾನಲ್‌ಗೆ ವಯರಿಂಗ್‌ ಮತ್ತು ಪ್ಲಂಬಿಂಗ್‌ ಕೆಲಸ ಮಾಡುತ್ತಿದ್ದರು. ಈ ವೇಳೆ ಶೀಟ್‌ ತುಂಡಾಗಿ ವರುಣ್‌ ಅವರು ಕೆಳಗೆ ಬಿದ್ದು ತಲೆಗೆ ಗಂಭೀರ ಗಾಯವಾಗಿತ್ತು. ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಮೃತಪಟ್ಟಿದ್ದಾರೆ ಎಂದು

ಮಂಗಳೂರು: ಕೆಲಸದ ವೇಳೆ ಆಕಸ್ಮಿಕವಾಗಿ ಕುಸಿದ ಮೇಲ್ಛಾವಣಿ ➤ ಯುವಕನೋರ್ವ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ವಿಮಾನ ನಿಲ್ದಾಣ ಭದ್ರತೆಗೆ ಮ್ಯಾಕ್ಸ್‌ ಮತ್ತು ರೇಂಜರ್‌ ಶ್ವಾನಗಳ ಸೇರ್ಪಡೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.27. ಗಣ ರಾಜ್ಯೋತ್ಸವ ಸಂಭ್ರಮದ ಸಂದರ್ಭದಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಭದ್ರತಾ ಪಡೆ ಸಿಐಎಸ್‌ಎಫ್ ಶ್ವಾನದಳಕ್ಕೆ ಬೆಲ್ಜಿಯನ್‌ ಮೆಲಿನೊಯ್ಸ ತಳಿಯ ಮ್ಯಾಕ್ಸ್‌ ಮತ್ತು ರೇಂಜರ್‌ ಹೆಸರಿನ ಎರಡು ಶ್ವಾನಗಳು ಸೇರ್ಪಡೆಗೊಂಡಿವೆ. ಬೆಂಗಳೂರಿನ ತರಳುವಿನಲ್ಲಿ ಸಿಐಎಸ್‌ಎಫ್‌ನ ಶ್ವಾನ ಸಂತಾನೋತ್ಪತ್ತಿ ಮತ್ತು ತರಬೇತಿ ಕೇಂದ್ರದಲ್ಲಿ ನಡೆದ ತರಬೇತಿಯಲ್ಲಿ ಮ್ಯಾಕ್ಸ್ ಪ್ರಥಮ ಮತ್ತು ರೇಂಜರ್ ದ್ವಿತೀಯ ಸ್ಥಾನ ಪಡೆದಿದೆ. ಗಣರಾಜ್ಯೋತ್ಸವ ಸಮಾರಂಭದ ಸಂದರ್ಭ ಸಿಐಎಸ್‌ಎಫ್‌ನ ಏರ್‌ಪೋರ್ಟ್ ಸೆಕ್ಯುರಿಟಿ ಗಾರ್ಡ್ಸ್ (ಎಎಸ್‌ಜಿ) ವಿಭಾಗದಿಂದ ನಾಯಿಗಳನ್ನು ಭವ್ಯವಾಗಿ ಸ್ವಾಗತಿಸಲಾಯಿತು.

ಮಂಗಳೂರು: ವಿಮಾನ ನಿಲ್ದಾಣ ಭದ್ರತೆಗೆ ಮ್ಯಾಕ್ಸ್‌ ಮತ್ತು ರೇಂಜರ್‌ ಶ್ವಾನಗಳ ಸೇರ್ಪಡೆ Read More »

ಕರಾವಳಿ

ಸುಳ್ಯ: ನೇಣು ಬಿಗಿದು ಮಹಿಳೆ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಸುಳ್ಯ, ಜ.27. ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯದ ಅಜ್ಜಾವರ ಗ್ರಾಮದ ಪಡ್ಡಂಬೈಲು ಸಮೀಪದ ನಾಂಗುಳಿ ಎಂಬಲ್ಲಿ ಸಂಭವಿಸಿದೆ. ಶರತ್ ಎಂಬವರ ಪತ್ನಿ ಮಲ್ಲಿಕಾ(26) ನೇಣು ಬಿಗಿದು ಅತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ ಎನ್ನಲಾಗಿದೆ. ಮೃತ ಮಹಿಳೆ ಮಲ್ಲಿಕಾ ಅವರು ಕೆ.ವಿ.ಜಿ. ಆಯುರ್ವೇದಿಕ್ ನಲ್ಲಿ ಉದ್ಯೋಗಿಯಾಗಿದ್ದರು. ರಜೆ ಹಿನ್ನಲೆ ಮಲ್ಲಿಕಾ ಮನೆಯಲ್ಲಿದ್ದರು. ಸಂಜೆ ವೇಳೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆಂದು ತಿಳಿದು ಬಂದಿದೆ. ಶವವನ್ನು ಸುಳ್ಯ ಸರಕಾರಿ

ಸುಳ್ಯ: ನೇಣು ಬಿಗಿದು ಮಹಿಳೆ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top