Mangalore

ಮಂಗಳೂರು: ಪ್ರವೀಣ್ ‌ನೆಟ್ಟಾರು ಹತ್ಯೆ ಪ್ರಕರಣ ➤ ಮತ್ತಿಬ್ಬರ ಪತ್ತೆಗೆ NIA ಬಹುಮಾನ ಘೋಷಣೆ..!

(ನ್ಯೂಸ್ ಕಡಬ)newskadaba.com ಮಂಗಳೂರು, ಜ.20. ಬಿಜೆಪಿ ಯುವ ಮುಖಂಡ ಪ್ರವೀಣ್ ‌ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ತಲೆಮರೆಸಿಕೊಂಡಿರುವ ಮತ್ತಿಬ್ಬರು‌ ಆರೋಪಿಗಳ ಪತ್ತೆಗೆ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಮುಂದಾಗಿದ್ದು ಆರೋಪಿಗಳ ಕುರಿತು ಸುಳಿವು ನೀಡಿದವರಿಗೆ ಐದು ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಿಸಿದೆ. ನಿಷೇಧಿತ ಪಿಎಫ್ಐ ಸಂಘಟನೆ ಕಾರ್ಯಕಾರಿ ಸಮಿತಿ ಸದಸ್ಯ ಬಂಟ್ವಾಳ ತಾಲೂಕಿನ ಕೊಡಾಜೆಯ ಮಹಮ್ಮದ್ ಶರೀಪ್ (48) ಹಾಗೂ ನೆಕ್ಕಿಲಾಡಿಯ ಮಸೂದ್ ಪತ್ತೆಗೆ ಎನ್ಐಎ 5ಲಕ್ಷ ರೂ ಬಹುಮಾನ ಘೋಷಣೆ ಮಾಡಿದೆ. ಸುಳಿವು ನೀಡಿದವರ […]

ಮಂಗಳೂರು: ಪ್ರವೀಣ್ ‌ನೆಟ್ಟಾರು ಹತ್ಯೆ ಪ್ರಕರಣ ➤ ಮತ್ತಿಬ್ಬರ ಪತ್ತೆಗೆ NIA ಬಹುಮಾನ ಘೋಷಣೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಮದ್ಯ ಖರೀದಿ ವಯೋಮಿತಿ 21ರಿಂದ 18 ಕ್ಕಿಳಿಸಲು ಮುಂದಾದ ಸರ್ಕಾರ !! ➤   ಯು.ಟಿ.ಖಾದರ್ ಖಂಡನೆ

(ನ್ಯೂಸ್ ಕಡಬ)newskadab.com  ಮಂಗಳೂರು, ಜ.18. ರಾಜ್ಯ ಸರ್ಕಾರ 18 ವರ್ಷದವರಿಗೆ ಮದ್ಯ ಖರೀದಿಗೆ ಅನುಮತಿ ಕೊಡಲು ಚಿಂತಿಸುತ್ತಿದೆ. ಬಿಜೆಪಿ ಸರ್ಕಾರದ ಈ ಕ್ರಮವನ್ನು ನಾವು ಬಲವಾಗಿ ಖಂಡಿಸುತ್ತೇವೆ ಎಂದು ಮಂಗಳೂರಿನಲ್ಲಿ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಹೇಳಿದ್ದಾರೆ. ಇದು ಒಂದು ತಲೆಮಾರನ್ನು ನಾಶ ಮಾಡಲು ಹೊರಟಿರುವ ಕ್ರಮ. ಯುವ ಸಬಲೀಕರಣ, ಯುವಕರಿಗೆ ಉದ್ಯೋಗ ಕೊಡಲು ಇವರಿಗೆ ಆಗಿಲ್ಲ.ಈಗ ಯುವಕರನ್ನು ದುಷ್ಟಟಕ್ಕೆ ಪ್ರೇರೇಪಿಸುವ ಯೋಚನೆ ಸರ್ಕಾರ ಮಾಡ್ತಿದೆ. ಬಿಜೆಪಿ ಸರ್ಕಾರಕ್ಕೆ ಇದರ ಪರಿಣಾಮ ಗೊತ್ತಿಲ್ಲ, ಕೇವಲ ದುಡ್ಡು ಮಾಡಬೇಕು ಅಷ್ಟೇ.

ಮದ್ಯ ಖರೀದಿ ವಯೋಮಿತಿ 21ರಿಂದ 18 ಕ್ಕಿಳಿಸಲು ಮುಂದಾದ ಸರ್ಕಾರ !! ➤   ಯು.ಟಿ.ಖಾದರ್ ಖಂಡನೆ Read More »

ಕರಾವಳಿ

ಮಂಗಳೂರು: ಮುಳುಗಿದ ಚೀನಾ ಹಡಗಿನಿಂದ ತೈಲ ತೆರವು ಕಾರ್ಯ ಶುರು !!                

(ನ್ಯೂಸ್ ಕಡಬ)newskadab.com  ಮಂಗಳೂರು, ಜ.18. ಮಂಗಳೂರಿನ ಉಚ್ಚಿಲ ಕಡಲ ತೀರದಲ್ಲಿ ಚೈನಾದ ಹಡಗು ಮುಳುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಬರೋಬ್ಬರಿ ಆರು ತಿಂಗಳ ಬಳಿಕ ಹಡಗಿನ ತೈಲ ತೆರವು ಕಾರ್ಯ ಆರಂಭವಾಗಿದೆ. ಸರಕು ಹಡಗಿನಲ್ಲಿದ್ದ ಸುಮಾರು 220 ಟನ್‌ ತೈಲ ತೆರವು ಕಾರ್ಯ ನಡೀತಾ ಇದ್ದು, ಚೀನಾದಿಂದ ಲೆಬನಾನ್‌ಗೆ 8 ಸಾವಿರ ಟನ್‌ ತೂಕದ ಸ್ಟೀಲ್‌ ಕಾಯಿಲ್‌ ಸಾಗಿಸುತ್ತಿದ್ದ ಹಡಗು ಇದಾಗಿತ್ತು‌. ಗುಜರಾತ್‌ ಮೂಲದ ಬನ್ಸಲ್‌ ಎಂಡೆವರ್ಸ್‌ ಸಂಸ್ಥೆಗೆ ತೈಲ ತೆರವು ಗುತ್ತಿಗೆ ನೀಡಲಾಗಿದೆ‌‌. 160 ಟನ್‌ ಫರ್ನೆಸ್‌

ಮಂಗಳೂರು: ಮುಳುಗಿದ ಚೀನಾ ಹಡಗಿನಿಂದ ತೈಲ ತೆರವು ಕಾರ್ಯ ಶುರು !!                 Read More »

ಕರಾವಳಿ

ಉಪ್ಪಿನಂಗಡಿ: ಏರ್‌ ಕಂಪ್ರೈಸರ್‌ ಸ್ಫೋಟಗೊಂಡು ಕಾರ್ಮಿಕ ಮೃತ್ಯು

(ನ್ಯೂಸ್ ಕಡಬ)newskadab.com  ಉಪ್ಪಿನಂಗಡಿ, ಜ.18. ಟಯರ್‌ ರಿಸೋಲ್‌ ಸಂಸ್ಥೆಯೊಂದರಲ್ಲಿ ಏರ್‌ ಕಂಪ್ರೈಸರ್‌ ಸ್ಫೋಟಗೊಂಡು ಕಾರ್ಮಿಕ ಮೃತಪಟ್ಟ ಘಟನೆ ಉಪ್ಪಿನಂಗಡಿಯ ಗಾಂಧಿಪಾರ್ಕ್‌ ಬಳಿಯಲ್ಲಿ  ನಡೆದಿದೆ. ಉಪ್ಪಿನಂಗಡಿ ಗಾಂಧಿ ಪಾರ್ಕ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಇಂಡಿಯನ್ ಟಯರ್ ಅಂಗಡಿಯಲ್ಲಿ ಏರ್ ಕಂಪ್ರೆಸರ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ ಆಲಂಕಾರು ಮೂಲದ ರಾಜೇಶ್ ಪೂಜಾರಿ (43) ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಏರ್ ಕಂಪ್ರೆಸರ್ ಸ್ಫೋಟಗೊಂಡು ಗಂಭೀರ ಗಾಯಗೊಂಡಿದ್ದ ರಾಜೇಶ್ ರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ಕರೆತರಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಉಪ್ಪಿನಂಗಡಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.  

ಉಪ್ಪಿನಂಗಡಿ: ಏರ್‌ ಕಂಪ್ರೈಸರ್‌ ಸ್ಫೋಟಗೊಂಡು ಕಾರ್ಮಿಕ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

’ಮಿಸ್‌ ಮಂಗಳೂರು’ ಪಟ್ಟ ಕಾಫಿನಾಡಿನ ಚೆಲುವೆ ಸುಶ್ಮಾ ಎಸ್‌. ಶೆಟ್ಟಿ ಪಾಲು !!

(ನ್ಯೂಸ್ ಕಡಬ)newskadab.com  ಮಂಗಳೂರು, ಜ.18. ಕಾಫಿನಾಡಿನ ದಿಟ್ಟ ಪ್ರತಿಭೆ ಸುಷ್ಮಾ ಎಸ್. ಶೆಟ್ಟಿ ‘ಮಿಸ್ ಮಂಗಳೂರು’ ಪಟ್ಟ ಧರಿಸುವ ಮೂಲಕ ಪ್ರತಿಭಾವಂತೆಯಾಗಿ ಹೊರ ಹೊಮ್ಮಿದ್ದಾರೆ. ಮಂಗಳೂರಿನ ಶ್ರೀದೇವಿ ಕಾಲೇಜಿನಲ್ಲಿ ಹೆವೆನ್ ರೋಜ್ ಆಂಡ್ ಸಿಜ್ಲಿಂಗ್ ಗೈಸ್ ಪ್ರಾಯೋಜಕತ್ವದಲ್ಲಿ ಏರ್ಪಡಿಸಿದ್ದ ಮಿಸ್ ಸ್ಪರ್ದೆಯಲ್ಲಿ ನೂರು ಸ್ಪರ್ಧಾಳುಗಳು ಭಾಗವಹಿಸಿದ್ದರು. ಅದರಲ್ಲಿ ಅಂತಿಮ ಆಯ್ಕೆ ಸುತ್ತಿಗೆ 36 ಸ್ಪರ್ಧಿಗಳು ಆಯ್ಕೆಯಾದರು. ಅದರಲ್ಲಿ ಕೊನೆಯ ಸುತ್ತಿನ 10 ಮಂದಿಯಲ್ಲಿ ಸುಷ್ಮಾ ಎಸ್. ಶೆಟ್ಟಿ ಅವರು ಆಯ್ಕೆಯಾಗಿ ‘ಮಿಸ್ ಮಂಗಳೂರು’ ಪಟ್ಟವನ್ನು ತೊಟ್ಟರು. ಸುಶ್ಮಾ

’ಮಿಸ್‌ ಮಂಗಳೂರು’ ಪಟ್ಟ ಕಾಫಿನಾಡಿನ ಚೆಲುವೆ ಸುಶ್ಮಾ ಎಸ್‌. ಶೆಟ್ಟಿ ಪಾಲು !! Read More »

ಕರಾವಳಿ

ಪುತ್ತೂರು: ಯುವತಿಗೆ ಚೂರಿಯಿಂದ ಇರಿತ ಪ್ರಕರಣ !!   ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadab.com  ಪುತ್ತೂರು, ಜ.18. ಮುಂಡೂರು ಕಂಪದಲ್ಲಿ ಯುವತಿಯನ್ನು ಚೂರಿಯಿಂದ ಇರಿದು ಕೊಲೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಜಯಶ್ರಿ(23)ನ್ನು ಕನಕಮಜಲು ನಿವಾಸಿ ಉಮೇಶ್ ನಿನ್ನೆ ಮನೆಗೆ ನುಗ್ಗಿ ಚೂರಿಯಿಂದ ಇರಿದು ಕೊಲೆ ಮಾಡಿದ್ದ. ಉಮೇಶ್, ಜಯಶ್ರಿಯ ಸಂಬಂಧಿಕನಾಗಿದ್ದು ಆಗಾಗ ಮನೆಗೆ ಬಂದು ಹೋಗುತ್ತಿದ್ದ ಎನ್ನಲಾಗಿದೆ. ಆತನ ನಡವಳಿಕೆಯಿಂದ ಬೇಸತ್ತು ಜಯಶ್ರೀ ಇತ್ತೀಚೆಗೆ ಆತನಿಂದ ದೂರ ಸರಿದಿದ್ದಳು, ಇದೇ ಸಿಟ್ಟಿನಲ್ಲಿ ಆರೋಪಿ ಕೃತ್ಯ ಎಸಗಿದ್ದಾನೆ ಎನ್ನುವುದು ತಿಳಿದು ಬಂದಿದೆ.

ಪುತ್ತೂರು: ಯುವತಿಗೆ ಚೂರಿಯಿಂದ ಇರಿತ ಪ್ರಕರಣ !!   ➤ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಕೆಲಸಕ್ಕೆಂದು ಹೋದ ಯುವತಿ ನಾಪತ್ತೆ

(ನ್ಯೂಸ್ ಕಡಬ)newskadab.com  ಮಂಗಳೂರು, ಜ.18. ನಗರದ ಮಣಪ್ಪುರಂ ಫೈನಾನ್ಸ್‌ನ ಉದ್ಯೋಗಿಯಾಗಿದ್ದ ಯುವತಿಯೊಬ್ಬಳು ನಾಪತ್ತೆಯಾದ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಮಲಾಕ್ಷ ಎಂಬವರ ಪುತ್ರಿ ಶಿವಾನಿ (20) ಕಾಣೆಯಾದ ಯುವತಿ. ಈಕೆ ಜ.16ರಂದು ಬೆಳಗ್ಗೆ 7ಕ್ಕೆ ಕೆಲಸಕ್ಕೆ ತೆರಳಿದ್ದು, ಸಂಜೆ 6 ಗಂಟೆಯಾದರೂ ಮರಳಿ ಬಂದಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ. 5.6 ಅಡಿ ಎತ್ತರದ, ಬಿಳಿ ಮೈಬಣ್ಣದ, ದಪ್ಪಮುಖದ, ಸಾಧಾರಣ ಮೈಕಟ್ಟಿನ ಈಕೆ ತುಳು ಮತ್ತು ಕನ್ನಡ ಭಾಷೆ ಮಾತನಾಡುತ್ತಾರೆ. ಮನೆಯಿಂದ ಹೊರಟು ಹೋದಾಗ ಹಸಿರು ಬಣ್ಣದ

ಮಂಗಳೂರು: ಕೆಲಸಕ್ಕೆಂದು ಹೋದ ಯುವತಿ ನಾಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಯುವತಿಗೆ ಚೂರಿಯಿಂದ ಇರಿದು ಬರ್ಬರ ಕೊಲೆ

(ನ್ಯೂಸ್ ಕಡಬ)newskadaba.com  ಪುತ್ತೂರು, ಜ.17. ಮನೆಗೆ ನುಗ್ಗಿ ಯುವತಿಯನ್ನು‌ ಚೂರಿಯಿಂದ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಪುತ್ತೂರಿ‌ನ ಮಂಡೂರು ಬಳಿ ನಡೆದಿದೆ. ಕಂಪದ ಎಂಬಲ್ಲಿನ 23 ವರ್ಷದ ಜಯಶ್ರೀಗೆ ಚೂರಿಯಿಂದ ಇರಿಯಲಾಗಿದೆ. ಆಕೆಯನ್ನು ಆಸ್ಪತ್ರೆಗೆ ಸಾಗಿಸುವ ದಾರಿ‌ ಮಧ್ಯೆ ಮೃತಪಟ್ಟಿದ್ದಾಳೆ. ಯುವತಿಯ ಮೃತದೇಹ ಪುತ್ತೂರಿನ ಆಸ್ಪತ್ರೆಯಲ್ಲಿದೆ. ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.  

ಪುತ್ತೂರು: ಯುವತಿಗೆ ಚೂರಿಯಿಂದ ಇರಿದು ಬರ್ಬರ ಕೊಲೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ರಿಯಾಯಿತಿ ದರದಲ್ಲಿ ಉಚಿತ ವಸತಿ ಗೃಹ ಪ್ರಾರಂಭ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.17. ನಗರದ ಕೊಂಚಾಡಿ ಹಾಗೂ ಕಂಕನಾಡಿಯಲ್ಲಿನ ಮಹಿಳಾ ವಸತಿ ಗೃಹಗಳಲ್ಲಿ ಉದ್ಯೋಗನಿರತ ಮಹಿಳೆಯರಿಗೆ ರಿಯಾಯಿತಿ ದರದಲ್ಲಿ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತರ ಮತ್ತು ಹಿಂದುಳಿದ ವರ್ಗದ ಮಹಿಳೆಯರಿಗೆ ಉಚಿತವಾಗಿ ವಸತಿ ಗೃಹಗಳಲ್ಲಿ ಪ್ರವೇಶ ಪ್ರಾರಂಭಿಸಲಾಗಿದೆ. ಹೆಚ್ಚಿನ ಮಾಹಿತಿಗೆ ದೂ.ಸಂಖ್ಯೆ:0824-2959809 ಸಂಪರ್ಕಿಸುವಂತೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.    

ಮಂಗಳೂರು: ರಿಯಾಯಿತಿ ದರದಲ್ಲಿ ಉಚಿತ ವಸತಿ ಗೃಹ ಪ್ರಾರಂಭ Read More »

ಕರಾವಳಿ, ಕರ್ನಾಟಕ

ಮಂಗಳೂರು: ವಿಜಯ ಕುಮಾರ್ ರವರು ನೋಡಲ್ ಅಧಿಕಾರಿಯಾಗಿ ನೇಮಕ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.17. ಇಲ್ಲಿನ ಕಂದಾಯ ಅಧಿಕಾರಿ ವಿಜಯ ಕುಮಾರ್ ಅವರನ್ನು ಬೀದಿ ಬದಿ ವ್ಯಾಪಾರಸ್ಥರಿಗೆ ಮತ್ತು ಅವರ ಕುಟುಂಬದವರಿಗೆ ಪಿಎಂ ಸ್ವನಿಧಿ ಮಹೋತ್ಸವ ಆಚರಣೆ ಕಾರ್ಯಕ್ರಮದ ನೋಡಲ್ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಜನಪ್ರತಿನಿಧಿಗಳು, ಮಂಗಳೂರು ಮಹಾನಗರಪಾಲಿಕೆ ನಗರ ಬಡತನ ನಿರ್ಮೂಲನಾ ಕೋಶ, ಜಿಲ್ಲಾ ಕೌಶಲ್ಯಾಭಿವೃದ್ಧಿ ಮತ್ತು ಜಿಲ್ಲಾ ಮಟ್ಟದ ಮೇಲ್ವಿಚಾರಣಾ ಸಮಿತಿಯ ಸದಸ್ಯ ಅಧಿಕಾರಿಗಳನ್ನು ಸಮನ್ವಯಗೊಳಿಸಿಕೊಂಡು ಸ್ವನಿಧಿ ಮಹೋತ್ಸವವನ್ನು ಯಶಸ್ವಿಯಾಗಿ ಆಯೋಜಿಸುವಂತೆ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಅಕ್ಷಯ್ ಶ್ರೀಧರ್ ಅವರು ಸೂಚಿಸಿದ್ದಾರೆ.  

ಮಂಗಳೂರು: ವಿಜಯ ಕುಮಾರ್ ರವರು ನೋಡಲ್ ಅಧಿಕಾರಿಯಾಗಿ ನೇಮಕ Read More »

ಕರಾವಳಿ, ಕರ್ನಾಟಕ
Scroll to Top