Mangalore

ಚಾಲಕನ ನಿಯಂತ್ರಣ ತಪ್ಪಿ ಗೂಡಂಗಡಿಗೆ ನುಗ್ಗಿದ ಲಾರಿ ➤ ಓರ್ವನಿಗೆ ಗಂಭೀರ ಗಾಯ

(ನ್ಯೂಸ್ ಕಡಬ)newskadaba.com ಕಾಫು, ಜ.17. ಮಂಗಳೂರಿನಿಂದ ಉಡುಪಿ ಕಡೆಗೆ ಸಂಚರಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಗೂಡಂಗಡಿಯೊಳಗೆ ನುಗ್ಗಿದ ಘಟನೆ ಕಾಪುವಿನಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66ರ ಕಾಪು ಪೆಟ್ರೋಲ್ ಪಂಪ್ ಬಳಿಯ ಕೋಟೆ ಬಬ್ಬುಸ್ವಾಮಿ ದೈವಸ್ಥಾನದ ಬಳಿ ಘಟನೆ ಸಂಭವಿಸಿದ್ದು, ಗೂಡಂಗಡಿಯಲ್ಲಿ ಕುಳಿತಿದ್ದ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇಲ್ಲಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಫ್ಲೈ ಓವರ್‌ನಲ್ಲಿ ವಾಹನ ಓಡಾಟವನ್ನು ಸ್ಥಗಿತಗೊಳಿಸಲಾಗಿದೆ. ಹೀಗಾಗಿ ವಾಹನಗಳು ಸರ್ವೀಸ್ ರಸ್ತೆಯಲ್ಲೇ ಸಂಚಾರ ನಡೆಸುತ್ತಿವೆ. ಈ ವೇಳೆ ಲಾರಿಯ ಚಾಲಕನ ನಿಯಂತ್ರಣ […]

ಚಾಲಕನ ನಿಯಂತ್ರಣ ತಪ್ಪಿ ಗೂಡಂಗಡಿಗೆ ನುಗ್ಗಿದ ಲಾರಿ ➤ ಓರ್ವನಿಗೆ ಗಂಭೀರ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ..!

(ನ್ಯೂಸ್ ಕಡಬ)newskadaba.com  ಮಂಗಳೂರು,ಜ.17. ಜಿಲ್ಲೆಯ ಅತೀ ಸಣ್ಣ ಕುಶಲಕರ್ಮಿಗಳಿಗೆ ವೃತ್ತಿ ಚಟುವಟಿಕೆಗಳನ್ನು ಮುಂದುವರಿಸಲು ಸಾಲ ಸಹಾಯಧನ ಯೋಜನೆಯಡಿ ವಾಣಿಜ್ಯ, ಸಹಕಾರಿ ಹಾಗೂ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‍ಗಳಿಂದ 50 ಸಾವಿರ ರೂ.ಗಳ ವರೆಗೆ ಸಾಲ ಹಾಗೂ ಶೇ.30ರಷ್ಟು ಸಹಾಯಧನ ನೀಡಲು ಅರ್ಹ ಹಾಗೂ ಆಸಕ್ತ ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಕೈಗಾರಿಕಾ ಕೇಂದ್ರ, ದೂರವಾಣಿ 0824-2214021 ಅಥವಾ ಕೈಗಾರಿಕಾ ವಿಸ್ತರಣಾಧಿಕಾರಿ 9886332233 ಅವರನ್ನು ಸಂಪರ್ಕಿಸುವಂತೆ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ..! Read More »

ಕರಾವಳಿ, ಕರ್ನಾಟಕ

ಮಂಗಳೂರು: ಸಾಮಥ್ರ್ಯ ಅಭಿವೃದ್ಧಿ ತರಬೇತಿ ಕಾರ್ಯಗಾರ ಸಂಪನ್ನ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.17. ಡೇ- ನಲ್ಮ್, ದೀನ್ ದಯಾಳ್ ಅಂತ್ಯೋದಯ ಯೋಜನೆ, ರಾಷ್ಟೀಯ ನಗರ ಜೀವನೋಪಾಯ ಅಭಿಯಾನದಡಿ ಪ್ರದೇಶ ಮಟ್ಟದ ಒಕ್ಕೂಟದ ಸದಸ್ಯರಿಗೆ ಸಾಮಥ್ರ್ಯ ಅಭಿವೃದ್ಧಿ ತರಬೇತಿ ಕಾರ್ಯಗಾರವನ್ನು ನಗರದ ಉರ್ವಾ ಮಾರ್ಕೆಟ್‍ನ ಸಮುದಾಯ ಭವನದಲ್ಲಿ ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು. ಮಹಾನಗರ ಪಾಲಿಕೆಯ ಸಾಮಾಜಿಕ ಆರೋಗ್ಯ ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ ಹೇಮಲತಾ ರಘು ಸಾಲಿಯಾನ್ ಕಾರ್ಯಕ್ರಮ  ಉದ್ಘಾಟಿಸಿ, ಸ್ವಸಹಾಯ ಗುಂಪಿನ ಸದಸ್ಯರು ತರಬೇತಿಯ ಪ್ರಯೋಜ ಪಡೆದು ಜೀವನದಲ್ಲಿ ಯಶಸ್ವಿಯಾಗುವಂತೆ ಚಾಲನೆ ನೀಡಿದರು.

ಮಂಗಳೂರು: ಸಾಮಥ್ರ್ಯ ಅಭಿವೃದ್ಧಿ ತರಬೇತಿ ಕಾರ್ಯಗಾರ ಸಂಪನ್ನ Read More »

ಕರಾವಳಿ, ಕರ್ನಾಟಕ

ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಲಾರಿ ..! ➤ ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರು

(ನ್ಯೂಸ್ ಕಡಬ)newskadaba.com ಮಂಗಳೂರು, ಜ.17. ಚಾಲಕನ ನಿಯಂತ್ರಣ ಕಳೆದುಕೊಂಡ ಲಾರಿಯೊಂದು ಪ್ರಪಾತಕ್ಕೆ ಉರುಳಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಜಪ್ಪಿನ ಮೊಗರಿನಲ್ಲಿ ವರದಿಯಾಗಿದೆ. ಘಟನೆಯಲ್ಲಿ ಚಾಲಕ ಹಾಗೂ ಕ್ಲೀನರ್ ಪವಾಡ ಸದೃಶ್ಯವಾಗಿ ಪಾರಾಗಿದ್ದಾರೆ ಎನ್ನಲಾಗಿದೆ. ಟ್ರಕ್ ಉರುಳಿ ಬಿದ್ದು ಇಬ್ಬರು ಗಾಯಗೊಂಡಿದ್ದಾರೆ. ಕ್ಲೀನರ್ ನ್ನು ರಕ್ಷಿಸಲಾಗಿದೆ. ಚಾಲಕ ಸ್ಟಿಯರಿಂಗ್ ವೀಲ್ ನಲ್ಲಿ ಸಿಲುಕಿಕೊಂಡಿದ್ದು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಹೆದ್ದಾರಿಯಲ್ಲಿ ಸಂಚಾರ ವ್ಯತ್ಯಯವಾಗಿದೆ. ಲಾರಿ ತಮಿಳುನಾಡಿನದ್ದೆಂದು ತಿಳಿದುಬಂದಿದೆ ಎಂದು ವರದಿ ತಿಳಿಸಿದೆ.    

ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಲಾರಿ ..! ➤ ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ನಾಪತ್ತೆಯಾಗಿದ್ದ ಯುವಕ ಕಾಸರಗೋಡಿನಲ್ಲಿ ಪತ್ತೆ

(ನ್ಯೂಸ್ ಕಡಬ)newskadaba.com  ಸುಳ್ಯ, ಜ.16. ಸುಳ್ಯದಿಂದ ನಾಪತ್ತೆಯಾಗಿದ್ದ ಯುವಕನನ್ನು ಸುಳ್ಯ ಪೊಲೀಸರು ಕಾಸರಗೋಡಿನಲ್ಲಿ ಪತ್ತೆ ಹಚ್ಚಿ ಠಾಣೆಗೆ ಹಾಜರು ಪಡಿಸಿ ಬಳಿಕ ಮನೆಯವರೊಂದಿಗೆ ಕಳುಹಿಸಿದ ಘಟನೆ ಸುಳ್ಯದಲ್ಲಿ ವರದಿಯಾಗಿದೆ. ಸುಳ್ಯ ಕೆವಿಜಿ ಬಳಿ ಫುಡ್ ಪಾಯಿಂಟ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಬಂಟ್ವಾಳ ತಾಲೂಕಿನ ವಾಮಪದವು ನಿವಾಸಿ ನಾಗೇಶ್ (33) ಕ್ಯಾಂಟೀನ್ ನಲ್ಲಿ ಊಟ ಮುಗಿಸಿ ರೂಮಿಗೆ ಹೋಗುತ್ತೇನೆ ಎಂದು ಹೇಳಿ ಹೋದವರು ಮತ್ತೆ ಮರಳಿ ಬಾರದೆ ನಾಪತ್ತೆಯಾಗಿರುವುದಾಗಿ ಕಳೆದ ಒಂದು ತಿಂಗಳ ಹಿಂದೆ ಆತನ ಪತ್ನಿ ಗೀತಾ

ಸುಳ್ಯ: ನಾಪತ್ತೆಯಾಗಿದ್ದ ಯುವಕ ಕಾಸರಗೋಡಿನಲ್ಲಿ ಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣ ➤ ನನ್ನ ಪರಿಸ್ಥಿತಿ ಯಾರಿಗೂ ಬರಬಾರದು ರಿಕ್ಷಾ ಚಾಲಕನ ಸಂಕಟ..!

(ನ್ಯೂಸ್ ಕಡಬ)newskadaba.com  ಮಂಗಳೂರು, ಜ.16. ನನ್ನ ಗ್ರಹಚಾರವೊ, ಏನೋ, ಕುಕ್ಕರ್‌ ಬಾಂಬ್‌ ಸ್ಫೋಟವನ್ನು ನನ್ನ ಜೀವನದಲ್ಲಿ ನಾನೆಂದೂ ನೋಡಿಲ್ಲ. ನನ್ನ ಪರಿಸ್ಥಿತಿ ಬೇರೆ ಯಾರಿಗೂ ಬರಬಾರದು. ಘಟನೆ ಬಳಿಕ ಸರ್ಕಾರದಿಂದ ನನ್ನ ಕುಟುಂಬಕ್ಕೆ ಪರಿಹಾರ ತೆಗೆಸಿಕೊಡುವುದಾಗಿ ಜನಪ್ರತಿನಿಧಿಗಳು, ಸಚಿವರು ಭರವಸೆ ನೀಡಿ ಹೋಗಿದ್ದಾರೆ.  ಹೊಸ ರಿಕ್ಷಾ ತೆಗೆಸಿಕೊಡುವುದಾಗಿಯೂ ಹೇಳಿದ್ದಾರೆ. ಆದರೆ, ಇದುವರೆಗೂ ಯಾವ ಪರಿಹಾರವೂ ಸಿಕ್ಕಿಲ್ಲ. ತುಂಬ ಕಷ್ಟದಿಂದ ಬದುಕು ಸಾಗಿಸುತ್ತಿದ್ದೇವೆ ಇದು ಮಂಗಳೂರಿನ ನಾಗುರಿಯಲ್ಲಿ  ಚಲಿಸುತ್ತಿದ್ದ ರಿಕ್ಷಾದಲ್ಲಿ ನಡೆದ ಕುಕ್ಕರ್‌ ಬಾಂಬ್‌ ಸ್ಫೋಟದ ಸಂತ್ರಸ್ತ ಆಟೋ

ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣ ➤ ನನ್ನ ಪರಿಸ್ಥಿತಿ ಯಾರಿಗೂ ಬರಬಾರದು ರಿಕ್ಷಾ ಚಾಲಕನ ಸಂಕಟ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಮಂಗಳೂರು: ಕದ್ದ ಹಣ ಮಣ್ಣಿನಡಿ ಹೂತಿಟ್ಟ ಖದೀಮ..! ➤  ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com  ಮಂಗಳೂರು, ಜ.16. ಕಳೆದ ವರ್ಷದ ನವೆಂಬರ್ ನಲ್ಲಿ ನಗರದ ಕೆ.ಎಸ್ ರಾವ್ ರಸ್ತೆಯ ಬಳಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಗೂ ರಾಜ್ಯ ಹಾಗೂ ಹೊರ ರಾಜ್ಯಗಳಲ್ಲಿ 35ಕ್ಕೂ ಅಧಿಕ ಕಳ್ಳತನ‌ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ. ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕು ಪಡಂಗಡಿ-ಮದ್ದಡ್ಕ ನಿವಾಸಿ ಕುಂಞಿಮೋನು ಯಾನೆ ಜಾಫರ್‌ ಯಾನೆ ಹಮೀದ್ (48) ಎಂದು ಗುರುತಿಸಲಾಗಿದೆ. ನಲಪಾಡ್ ಅಪ್ಸರಾ ಛೇಂಬರ್ಸ್ ಕಟ್ಟಡದ ನೆಲಮಹಡಿಯಲ್ಲಿನ ಹೂವು ವ್ಯಾಪಾರದ ಹೋಲ್ ಸೇಲ್ ಅಂಗಡಿಯಲ್ಲಿ

ಮಂಗಳೂರು: ಕದ್ದ ಹಣ ಮಣ್ಣಿನಡಿ ಹೂತಿಟ್ಟ ಖದೀಮ..! ➤  ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಕಾರು ಮತ್ತು ಬೈಕ್ ನಡುವೆ ರಸ್ತೆ ಅಪಘಾತ…!! ➤ ಗಾಯಾಳುವಿಗೆ ನೆರವಾಗಿ ಮಾನವೀಯತೆ ಮೆರೆದ ಶಾಸಕ ಖಾದರ್

(ನ್ಯೂಸ್ ಕಡಬ)newskadaba.com ಮಂಗಳೂರು, ಜ.16. ಕಾರು-ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ನೇತ್ರಾವತಿ ಸೇತುವೆಯಲ್ಲಿ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರ ಗಾಯಗೊಂಡಿದ್ದು, ಗಾಯಗೊಂಡ ಬೈಕ್ ಸವಾರನನ್ನು ಆಸ್ಪತ್ರೆಗೆ ರವಾನಿಸುವ ಮೂಲಕ ಶಾಸಕ ಖಾದರ್ ಮಾನವೀಯತೆ ಮೆರೆದಿದ್ದಾರೆ. ಸಂಜೆ ವೇಳೆ ಅಪಘಾತ ಸಂಭವಿಸಿದ್ದು, ಈ ಸಂದರ್ಭದಲ್ಲಿ ವಿಧಾನಸಭೆ ವಿಪಕ್ಷ ಉಪನಾಯಕ ಹಾಗೂ ಶಾಸಕ ಯು.ಟಿ. ಖಾದರ್ ಅದೇ ರಸ್ತೆ ಮೂಲಕ ಸಂಚರಿಸುತ್ತಿದ್ದರು. ತಕ್ಷಣ ಗಾಯಾಳುವನ್ನು ತನ್ನ ಕಾರಿನಲ್ಲೇ ಆಸ್ಪತ್ರೆಗೆ ರವಾನಿಸುವ ಮೂಲಕ ಖಾದರ್ ಮಾನವೀಯತೆ ಮೆರೆಯುವ ಜೊತೆಗೆ ತಮ್ಮ

ಮಂಗಳೂರು: ಕಾರು ಮತ್ತು ಬೈಕ್ ನಡುವೆ ರಸ್ತೆ ಅಪಘಾತ…!! ➤ ಗಾಯಾಳುವಿಗೆ ನೆರವಾಗಿ ಮಾನವೀಯತೆ ಮೆರೆದ ಶಾಸಕ ಖಾದರ್ Read More »

ಕರಾವಳಿ, ಕರ್ನಾಟಕ

ಮಂಗಳೂರು: ಚಳಿಯ ವಾತಾವರಣ ಇನ್ನಷ್ಟು ಹೆಚ್ಚಳ ಸಾಧ್ಯತೆ.!! ➤  ಹವಾಮಾನ ಇಲಾಖೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.16. ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಚಳಿಯ ವಾತಾವರಣ ತೀವ್ರಗೊಂಡಿದೆ. ಭಾರೀ ಚಳಿ ಹಾಗೂ ಮಂಜುನಿಂದ ಕೂಡಿದ ವಾತಾವರಣವಿತ್ತು ಎಂದು ವರದಿಯಾಗಿದೆ. ಗ್ರಾಮಾಂತರ ಭಾಗಗಳಲ್ಲಿ ಚಳಿ ಹೆಚ್ಚಿದ್ದು, ಬಿಸಿಲು ಆವರಿಸುವವರೆಗೂ ಮೈ ಕೊರೆಯುವ ಚಳಿ ಇತ್ತೀಚೆಗೆ ಜಾಸ್ತಿ ಇದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಕಡಬ,  ಪುತ್ತೂರು, ಬೆಳ್ತಂಗಡಿ, ಬಂಟ್ವಾಳ ಮುಂತಾದ ಕಡೆಗಳಲ್ಲಿ ಬೆಳಗ್ಗೆ ಬಿಸಿಲು ಆವರಿಸಿದರೂ ಚಳಿ ಕಡಿಮೆಯಾಗುತ್ತಿಲ್ಲ ಎಂದು ಸ್ಥಳೀಯರು ಹೇಳುತ್ತಾರೆ. ನಗರಗಳಲ್ಲಿಯೂ ಬೆಳಗ್ಗಿನ ಹೊತ್ತು ಭಾರೀ

ಮಂಗಳೂರು: ಚಳಿಯ ವಾತಾವರಣ ಇನ್ನಷ್ಟು ಹೆಚ್ಚಳ ಸಾಧ್ಯತೆ.!! ➤  ಹವಾಮಾನ ಇಲಾಖೆ Read More »

ಕರಾವಳಿ, ಕರ್ನಾಟಕ

ಮಂಗಳೂರು: ವಿಮಾನ ಪ್ರಯಾಣಿಕರಿಗೆ ಶಾಕ್ ..!! ➤ ಎಪ್ರಿಲ್ ತಿಂಗಳಿನಿಂದ ಪಾವತಿಸಬೇಕು ಹೆಚ್ಚುವರಿ ಶುಲ್ಕ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.15. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಪ್ರಯಾಣಿಸುವವರು ಎಪ್ರಿಲ್‌ ತಿಂಗಳಿನಿಂದ ಹೆಚ್ಚಿನ ಬೆಲೆ ತೆರಬೇಕಾಗಿದೆ.  ಮಾರ್ಚ್‌ 2026ರ ತನಕ ಅದಾನಿ ಏರ್‌ಪೋರ್ಟ್ಸ್‌ ಒಡೆತನದ ಈ ವಿಮಾನ ನಿಲ್ದಾಣದಲ್ಲಿ ಯೂಸರ್‌ ಡೆವಲೆಪ್ಮೆಂಟ್‌ ಫೀ (ಯುಡಿಎಫ್)‌ ಅಥವಾ ಬಳಕೆದಾರರ ಶುಲ್ಕವನ್ನು ಏರಿಸಲು ನಿರ್ಣಯಿಸಲಾಗಿದೆ. ವಿಮಾನ ನಿಲ್ದಾಣಗಳ ಆರ್ಥಿಕ ನಿಯಂತ್ರಣ ಪ್ರಾಧಿಕಾರವು ಈ ನಿಟ್ಟಿನಲ್ಲಿ ಅನುಮತಿಯನ್ನು ನೀಡಿದೆ ಎಂದು ವರದಿ ಮಾಡಿದೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಇದೀಗ ಇರುವ ನಿಯಮದ ಪ್ರಕಾರ ಯುಡಿಎಫ್‌ ಅನ್ನು ನಿರ್ಗಮನ

ಮಂಗಳೂರು: ವಿಮಾನ ಪ್ರಯಾಣಿಕರಿಗೆ ಶಾಕ್ ..!! ➤ ಎಪ್ರಿಲ್ ತಿಂಗಳಿನಿಂದ ಪಾವತಿಸಬೇಕು ಹೆಚ್ಚುವರಿ ಶುಲ್ಕ Read More »

ಕರಾವಳಿ, ಕರ್ನಾಟಕ
Scroll to Top