Mangalore

Crime

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬರೋಬ್ಬರಿ 62 ಮಕ್ಕಳು ನಾಪತ್ತೆ..!

(ನ್ಯೂಸ್ ಕಡಬ)newskadaba.com  ಮಂಗಳೂರು, ಜ.11. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತಿ ತಿಂಗಳು ಕನಿಷ್ಠ ಐದು ಮಕ್ಕಳು ನಾಪತ್ತೆಯಾಗುತ್ತಿರುವ ಪ್ರಕರಣಗಳು ವರದಿಯಾಗಿವೆ. ಮಕ್ಕಳ ಕಲ್ಯಾಣ ಸಮಿತಿಯ ಮಾಹಿತಿಯ ಪ್ರಕಾರ 2022ರಲ್ಲಿ 33 ಹುಡುಗಿಯರು ಸೇರಿದಂತೆ ಒಟ್ಟು 62 ಮಕ್ಕಳು ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ. ಅವರಲ್ಲಿ 60 ಮಂದಿಯನ್ನು ಪೊಲೀಸರು ಗುರುತಿಸಿದ್ದು, ಇನ್ನೂ ಇಬ್ಬರು ನಾಪತ್ತೆಯಾಗಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್‌ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರಿಂದ ಮಾಹಿತಿ ಸಂಗ್ರಹಿಸಲಾಗಿದೆ.   ಬಾಲಾಪರಾಧಿ ನ್ಯಾಯ ಮಂಡಳಿ ಮತ್ತು […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬರೋಬ್ಬರಿ 62 ಮಕ್ಕಳು ನಾಪತ್ತೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಜುಗಾರಿ ಅಡ್ಡೆ, ಜೂಜು ಕೇಂದ್ರಗಳಿಗೆ ಡಿವೈಎಫ್ಐ ಮುತ್ತಿಗೆ..!

(ನ್ಯೂಸ್ ಕಡಬ)newskadaba.com  ಮಂಗಳೂರು, ಜ.11. ಮಂಗಳೂರಿನ ಜುಗಾರಿ ಅಡ್ಡೆ, ಜೂಜು ಕೇಂದ್ರಗಳಿಗೆ ಡಿವೈಎಫ್ಐ ಸಂಘಟನೆ ಮುತ್ತಿಗೆ ಹಾಕಿದ್ದು, ರಿಕ್ರಿಯೇಶನ್ ಕ್ಲಬ್‌ನ ಹೆಸರಿನಲ್ಲಿ ಜೂಜು ಕೇಂದ್ರಗಳನ್ನು ನಡೆಸಿ ಮೋಸದಾಟ ಮಾಡಲಾಗುತ್ತಿದೆ ಎಂದು ಆರೋಪಿಸಿ ನಗರದಲ್ಲಿ ಕಾರ್ಯಾಚರಿಸುತ್ತಿದ್ದ ಜೂಜು ಕೇಂದ್ರಗಳಿಗೆ ಮುತ್ತಿಗೆ ಹಾಕಿ ಬೀಗ ಜಡಿದಿದ್ದಾರೆ. ಮಂಗಳೂರು ಪೊಲೀಸ್ ಕಮೀಷನರೇಟ್ ವ್ಯಾಪ್ತಿಯೊಳಗೆ ದಿನೇ ದಿನೇ ಸ್ಕಿಲ್ ಗೇಮ್, ವಿಡಿಯೋ ಗೇಮ್, ಜುಗಾರಿ ಅಡ್ಡೆಗಳು ರಾಜಾರೋಷವಾಗಿ ಕಾರ್ಯಾಚರಿಸುತ್ತಿವೆ. ರಿಕ್ರಿಯೇಶನ್ ಕ್ಲಬ್‌ನ ಹೆಸರಿನಲ್ಲಿ ಜೂಜು ಕೇಂದ್ರಗಳನ್ನು ನಡೆಸಿ ಮೋಸದಾಟಕ್ಕೆ ಜನರನ್ನು ಬಲಿಪಡೆಯುತ್ತಿದೆ. ನಗರದ ಸಣ್ಣ

ಮಂಗಳೂರು: ಜುಗಾರಿ ಅಡ್ಡೆ, ಜೂಜು ಕೇಂದ್ರಗಳಿಗೆ ಡಿವೈಎಫ್ಐ ಮುತ್ತಿಗೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಗಾಂಜಾ ದಂಧೆ ಬಯಲು.!  ➤ಮೆಡಿಕಲ್‌ ವಿದ್ಯಾರ್ಥಿನಿಯರ ಸಹಿತ ಹಲವರು ಅರೆಸ್ಟ್..!

(ನ್ಯೂಸ್ ಕಡಬ)newskadaba.com  ಮಂಗಳೂರು, ಜ.11. ಕಡಲ ತಡಿ ಮಂಗಳೂರಿನ ಸಿಸಿಬಿ ಪೊಲೀಸರು ಭಾರೀ ಗಾಂಜಾ ದಂಧೆಯನ್ನು ಬಯಲು ಮಾಡಿದ್ದಾರೆ. ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿನಿಯರು, ವೈದ್ಯರು ಸೇರಿ ಕೆಲ ಪೆಡ್ಲರ್ ಗಳು ಭಾಗಿಯಾಗಿದ್ದು, ಹಲವರನ್ನು ವಶಕ್ಕೆ ಪಡೆದಿದ್ದಾರೆ. ಮಂಗಳೂರಿನ ಪ್ರತಿಷ್ಠಿತ ಕೆ.ಎಂ.ಸಿ ಅತ್ತಾವರ, ಕೆ.ಎಂ.ಸಿ ಮಣಿಪಾಲ, ದೇರಳಕಟ್ಟೆಯ ಯೆನೇಪೋಯಾ  ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಮತ್ತು ವೈದ್ಯರು ಗಾಂಜಾ ದಂಧೆಯಲ್ಲಿ ಭಾಗಿಯಾಗಿರುವುದು ಪತ್ತೆಯಾಗಿದೆ. 4 ವೈದ್ಯಕೀಯ ವಿದ್ಯಾರ್ಥಿನಿಯರು, 2 ವೈದ್ಯರು, 2 ವಿದ್ಯಾರ್ಥಿಗಳು ಸೇರಿ ಒಟ್ಟು 10

ಮಂಗಳೂರು: ಗಾಂಜಾ ದಂಧೆ ಬಯಲು.!  ➤ಮೆಡಿಕಲ್‌ ವಿದ್ಯಾರ್ಥಿನಿಯರ ಸಹಿತ ಹಲವರು ಅರೆಸ್ಟ್..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ರಾಮಕುಂಜ: ಖ್ಯಾತ ಚಿಂತಕ ಚಕ್ರವರ್ತಿ ಸೂಲಿಬೆಲೆ ರಾಮಕುಂಜಕ್ಕೆ ಭೇಟಿ..!    

(ನ್ಯೂಸ್ ಕಡಬ)newskadaba.com  ರಾಮಕುಂಜ, ಜ.11. ಖ್ಯಾತ ಚಿಂತಕ, ವಾಗ್ಮಿಗಳೂ ಆಗಿರುವ ಚಕ್ರವರ್ತಿ ಸೂಲಿಬೆಲೆ  ಅವರು ಜ.13 ರಂದು ಶ್ರೀ ರಾಮಕುಂಜೇಶ್ವರ ವಿದ್ಯಾಸಂಸ್ಥೆಗೆ  ಆಗಮಿಸಲಿದ್ದಾರೆ ಎಂದು ವರದಿಯಾಗಿದೆ. ಅಪರಾಹ್ನ 2 ರಿಂದ 3.30ರ ತನಕ ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ‘ರಾಷ್ಟ್ರ ನಿರ್ಮಾಣದಲ್ಲಿ ಯುವ ಜನತೆಯ ಪಾತ್ರ’ ಎಂಬ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ ಎಂದು ಕೆ.ಎಸ್.ರಾಧಕೃಷ್ಣ ಅವರು ತಿಳಿಸಿದ್ದಾರೆ.      

ರಾಮಕುಂಜ: ಖ್ಯಾತ ಚಿಂತಕ ಚಕ್ರವರ್ತಿ ಸೂಲಿಬೆಲೆ ರಾಮಕುಂಜಕ್ಕೆ ಭೇಟಿ..!     Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಆಟೋ ರಿಕ್ಷಾ ಮತ್ತು ಲಾರಿ ನಡುವೆ ಢಿಕ್ಕಿ..!  

(ನ್ಯೂಸ್ ಕಡಬ)newskadaba.com  ಪುತ್ತೂರು, ಜ.11. ಆಟೋ ರಿಕ್ಷಾ ಮತ್ತು ಲಾರಿ ನಡುವೆ ಢಿಕ್ಕಿ ಸಂಭವಿಸಿದ ಘಟನೆ ಪುತ್ತೂರಿನಲ್ಲಿ ವರದಿಯಾಗಿದೆ. ಪುತ್ತೂರು ಕಡೆ ಬರುತ್ತಿದ್ದ ಆಟೋ ರಿಕ್ಷಾ ಮತ್ತು ಲಾರಿ ನಡುವೆ ಢಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ ರಿಕ್ಷಾ ಚಾಲಕ ನರಿಮೊಗರು ಬಜಪಾಳ ನಿವಾಸಿ ಸಂಜೀವ ನಾಯ್ಕ್ ಅವರು ಗಾಯಗೊಂಡಿದ್ದಾರೆ ಎನ್ನಲಾಗಿದೆ.      

ಪುತ್ತೂರು: ಆಟೋ ರಿಕ್ಷಾ ಮತ್ತು ಲಾರಿ ನಡುವೆ ಢಿಕ್ಕಿ..!   Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು ಸೇರಿದಂತೆ ಏಳು ನಗರಗಳಲ್ಲಿ ಜಿಯೊ ಟ್ರೂ 5ಜಿ ಸೇವೆ ಆರಂಭ..!                                       

(ನ್ಯೂಸ್ ಕಡಬ)newskadaba.com  ಮಂಗಳೂರು, ಜ.11. ಮಂಗಳೂರು ಮತ್ತು ಇತರ ಏಳು ನಗರಗಳಲ್ಲಿ ರಿಲಯನ್ಸ್ ಜಿಯೋ ಟ್ರೂ 5ಜಿ ಸೇವೆಗಳನ್ನು ಆರಂಭಿಸಿದ್ದು, ರಿಲಯನ್ಸ್ ಜಿಯೋ ಮಂಗಳೂರಿನಲ್ಲಿ 5ಜಿ ಸೇವೆಗಳನ್ನು ಆರಂಭಿಸಿದ ಮೊದಲ ಮತ್ತು ಏಕೈಕ ಆಪರೇಟರ್ ಆಗಿದೆ ಎಂದು ವರದಿ ಪ್ರಕಟಣೆ ತಿಳಿಸಿದೆ. ಜಿಯೊ ಗ್ರಾಹಕರು 5 ಜಿ ವೆಲ್‍ಕಮ್ ಆಫರ್ ನಡಿ ಯಾವುದೇ ಹೆಚ್ಚುವರಿ ವೆಚ್ಚವಿಲ್ಲದೆ 1 ಜಿಬಿಪಿಎಸ್+ ವೇಗದಲ್ಲಿ ಅನಿಯಮಿತ ಡೇಟಾವನ್ನು ಇಂದಿನಿಂದ ಪಡೆಯಬಹುದಾಗಿದೆ ಎಂದು ಜಿಯೋ ವಕ್ತಾರರು ಪ್ರಕಟಣೆಯಲ್ಲಿ ಹೇಳಿದ್ದಾರೆ ಎನ್ನಲಾಗಿದೆ. ಇನ್ನು ಮಂಗಳೂರು

ಮಂಗಳೂರು ಸೇರಿದಂತೆ ಏಳು ನಗರಗಳಲ್ಲಿ ಜಿಯೊ ಟ್ರೂ 5ಜಿ ಸೇವೆ ಆರಂಭ..!                                        Read More »

ಕರಾವಳಿ, ಕರ್ನಾಟಕ

ಕೊಡಗು: ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com  ಕೊಡಗು, ಜ.11. ಪಾರಾಮೆಡಿಕಲ್ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ಪಟ್ಟಣದ ನೇತಾಜಿ ಬಡಾವಣೆಯಲ್ಲಿ ವರದಿಯಾಗಿದೆ. ಬಡಾವಣೆ ನಿವಾಸಿ ಸಂತೋಷ್ ಎಂಬುವವರ ಪುತ್ರಿ ಜಸ್ಮಿತಾ(19) ಆತ್ಮಹತ್ಯೆ ಮಾಡಿಕೊಂಡವರು ಎನ್ನಲಾಗಿದೆ. ಈಕೆ ಮಡಿಕೇರಿ ವೈದ್ಯಕೀಯ ಕಾಲೇಜಿನಲ್ಲಿ ಪಾರಾ ಮೆಡಿಕಲ್ ಕೋರ್ಸ್ ವ್ಯಾಸಂಗ ಮಾಡುತ್ತಿದ್ದಳು. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸ್ಥಳಕ್ಕೆ ಕುಶಾಲನಗರ ಟೌನ್‌ ಪೊಲೀಸರು ಭೇಟಿ ನೀಡಿ‌ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.  

ಕೊಡಗು: ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಶತಮಾನೋತ್ಸವ ಹೊಸ್ತಿಲಲ್ಲಿ ಕರ್ಣಾಟಕ ಬ್ಯಾಂಕ್‌

(ನ್ಯೂಸ್ ಕಡಬ)newskadaba.com  ಮಂಗಳೂರು, ಜ.10. ಪ್ರತಿಷ್ಠಿತ ಕರ್ಣಾಟಕ ಬ್ಯಾಂಕಿನ ಪ್ರಧಾನ ಕಚೇರಿ ಮಂಗಳೂರಿನಲ್ಲಿ ಬ್ಯಾಂಕಿನ ಎಲ್ಲ ಪ್ರಾದೇಶಿಕ ಮುಖ್ಯಸ್ಥರು, ವಿವಿಧ ಇಲಾಖೆಯ ಮುಖ್ಯಸ್ಥರು, ಉನ್ನತ ಅಧಿಕಾರಿಗಳನ್ನು ಒಳಗೊಂಡು ಬ್ಯಾಂಕಿನ ಪ್ರಾದೇಶಿಕ ಕಚೇರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಈ ಸಂದರ್ಭ ಬ್ಯಾಂಕಿನ ಪ್ರಾದೇಶಿಕ ಮುಖ್ಯಸ್ಥರನ್ನು ಉದ್ದೇಶಿಸಿ ಮಾತನಾಡಿದ ಬ್ಯಾಂಕ್‌ನ ಎಂಡಿ ಮತ್ತು ಸಿಇಒ ಮಹಾಬಲೇಶ್ವರ ಎಂ.ಎಸ್‌., ಸತತವಾಗಿ ಉತ್ತಮ ಫಲಿತಾಂಶಗಳನ್ನು ಸಾಧಿಸುತ್ತಿರುವ ಕರ್ಣಾಟಕ ಬ್ಯಾಂಕ್‌ ಶತಮಾನೋತ್ಸವದ ಸಂಭ್ರಮಕ್ಕೆ ಸಜ್ಜಾಗಿ ನಿಂತಿದೆ. ಸಾಮಾಜಿಕ ಕಳಕಳಿಗೆ ಬದ್ಧವಾಗಿ ಸುದೃಢ ಆರ್ಥಿಕ ವ್ಯವಹಾರ

ಮಂಗಳೂರು: ಶತಮಾನೋತ್ಸವ ಹೊಸ್ತಿಲಲ್ಲಿ ಕರ್ಣಾಟಕ ಬ್ಯಾಂಕ್‌ Read More »

ಕರ್ನಾಟಕ

ಮಂಗಳೂರು: ಕರಾವಳಿಯಲ್ಲಿ ಹೆಚ್ಚಿದ ಚಳಿ…!!!  ➤ ಸಾಂಕ್ರಾಮಿಕ ರೋಗದ ಭೀತಿ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.10. ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಚಳಿಯ ತೀವ್ರತೆ ಹೆಚ್ಚಾಗಿದ್ದು, ಸಾಂಕ್ರಾಮಿಕ ರೋಗದ ಭೀತಿ ಎದುರಾಗಿದೆ.ಕಳೆದ ಡಿಸಂಬರ್ ನಲ್ಲಿ ಕಾಣಿಸಿಕೊಂಡಿದ್ದ ಕಡಿಮೆ ಉಷ್ಣಾಂಶ ಇದೀಗ ಮತ್ತೆ ಕಂಡು ಬರುತ್ತಿದೆ. ಚಳಿಯಿಂದಾಗಿ ರಕ್ತ ಹೆಪ್ಪುಗಟ್ಟುವ ಜೊತೆಗೆ ಹೃದಯಾಘಾತಗಳು ದೇಶದ ಹಲವೆಡೆ ಹೆಚ್ಚಳವಾಗುತ್ತಿದೆ ಎಂದು ವರದಿ ತಿಳಿಸಿದೆ. ಅತಿಯಾದ ಚಳಿಯಿಂದ ಜ್ವರ, ಶೀತ- ಕೆಮ್ಮು, ಗಂಟಲು ನೋವು ಉಂಟಾಗಬಹುದು. ಅಲರ್ಜಿ, ಅಸ್ತಮಾ ರೋಗಿಗಳು ಎಚ್ಚರ ವಹಿಸಬೇಕಾದ ಆವಶ್ಯಕತೆ ಎದುರಾಗಿದೆ. ಚಳಿಗಾಲದಲ್ಲಿ ರೋಗನಿರೋಧಕ ಶಕ್ತಿ ಕುಂದುವ ಅಪಾಯವಿರುತ್ತದೆ.ಆದ್ದರಿಂದ ಈ

ಮಂಗಳೂರು: ಕರಾವಳಿಯಲ್ಲಿ ಹೆಚ್ಚಿದ ಚಳಿ…!!!  ➤ ಸಾಂಕ್ರಾಮಿಕ ರೋಗದ ಭೀತಿ Read More »

ಕರಾವಳಿ, ಕರ್ನಾಟಕ

ಮಂಗಳೂರು: ಬಾಲಕನೋರ್ವ ಹೃದಯಾಘಾತದಿಂದ ಮೃತ್ಯು…!!!                   

(ನ್ಯೂಸ್ ಕಡಬ)newskadaba.com ಮಂಗಳೂರು, ಜ.10. ಶಾಲೆಗೆ ಹೊರಟಿದ್ದ 9ನೇ ತರಗತಿಯ ವಿದ್ಯಾರ್ಥಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ. ಮೃತ ಬಾಲಕನನ್ನು ಕೃಷ್ಣಾಪುರ 7ನೇ ಬ್ಲಾಕ್‌ ನಿವಾಸಿ ಮೊಹಮ್ಮದ್‌ ಹಸೀಮ್‌ (17) ಎಂದು ಗುರುತಿಸಲಾಗಿದೆ. ಶಾಲೆಗೆ ಹೋಗಲು ಬೆಳಗ್ಗೆ ಸಿದ್ದನಾಗಿದ್ದ ಹಸೀಮ್‌ಗೆ ಏಕಾಏಕಿ ತಲೆ ಸುತ್ತಿ ಬಿದ್ದಿದ್ದಾನೆ ಮನೆಯವರು ತಕ್ಷಣ ಸಮೀಪದ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ವೈದ್ಯರು‌ ಪರೀಕ್ಷಿಸಿ ಮೃತಪಟ್ಟಿರುವ ಬಗ್ಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಆದರೂ ಬದುಕಿಸುವ ಆಸೆಯಿಂದ ಪೋಷಕರು ಮುಕ್ಕದ ಖಾಸಗಿ ಆಸ್ಪತ್ರೆಗೆ ಕರೆತಂದಿದ್ದರು.ಅಲ್ಲಿ

ಮಂಗಳೂರು: ಬಾಲಕನೋರ್ವ ಹೃದಯಾಘಾತದಿಂದ ಮೃತ್ಯು…!!!                    Read More »

ಕರಾವಳಿ
Scroll to Top