Mangalore

ಮಂಗಳೂರು: ಬಾಲಕನಿಗೆ ಲಾಠಿಯೇಟು ➤ ಸಾರ್ವಜನಿಕರಿಂದ ಆಕ್ರೋಶ

(ನ್ಯೂಸ್ ಕಡಬ) newskadaba.com ಮಂಗಳೂರು, ಜ 02. ನಗರದ ತಣ್ಣೀರಬಾವಿ ಬೀಚ್‌ ಬಳಿ ಬ್ಲಾಕ್ ಆಗಿದ್ದ ಕಾರಣಕ್ಕೆ, ಅಲ್ಲಿ ಸೇರಿದ್ದ ಯುವಕರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ ಘಟನೆ ನಡೆದಿದೆ. ಹೊಸ ವರ್ಷ ಹಾಗೂ ವೀಕೆಂಡ್ ಆದ ಕಾರಣ ತಣ್ಣೀರುಬಾವಿ ಬೀಚ್‌ಗೆ ಭೇಟಿ ನೀಡುವವರ ಸಂಖ್ಯೆ ಹೆಚ್ಚಿದ್ದರಿಂದ ಟ್ರಾಪಿಕ್ ಜಾಮ್ ಆಗಿತ್ತು. ಈ ವೇಳೆ ಕ್ರಿಕೆಟ್ ಆಡಿ ಬೈಕಿನಲ್ಲಿ ತೆರಳುತ್ತಿದ್ದ ಹುಡುಗರನ್ನು ಅಡ್ಡಗಟ್ಟಿದ ಪೊಲೀಸರು, ನಿಮ್ಮಿಂದಲೇ ಬ್ಲಾಕ್ ಆಗಿದೆಯೆಂದು ಲಾಠಿ ಪ್ರಹಾರ ನಡೆಸಿದ್ದು, ಈ ವೇಳೆ […]

ಮಂಗಳೂರು: ಬಾಲಕನಿಗೆ ಲಾಠಿಯೇಟು ➤ ಸಾರ್ವಜನಿಕರಿಂದ ಆಕ್ರೋಶ Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಬಂಟ್ವಾಳ: ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 01. ತೆಂಗಿನಕಾಯಿ ಕೀಳುವ ವೇಳೆ ವ್ಯಕ್ತಿಯೋರ್ವ ಆಯತಪ್ಪಿ ಮರದಿಂದ ಬಿದ್ದು ಮೃತಪಟ್ಟ ಘಟನೆ ನಾವೂರ ಎಂಬಲ್ಲಿ ನಡೆದಿದೆ. ನಾವೂರ ಸೂರ ನಿವಾಸಿ ಸುರೇಶ್ (40) ಎಂದು ಗುರುತಿಸಲಾಗಿದೆ. ಇವರು, ಕಳೆದ ಹಲವಾರು ವರ್ಷಗಳಿಂದ ತೆಂಗಿನಕಾಯಿ ಹಾಗೂ ಅಡಿಕೆ ಕೀಳುವ ಕಾಯಕ ಮಾಡುತ್ತಿದ್ದು, ಎಂದಿನಂತೆ ತೆಂಗಿನಕಾಯಿ ಕೀಳುವ ಕೆಲಸಕ್ಕೆಂದು ಹೋಗಿದ್ದರು. ಈ ಸಂದರ್ಭ ಆಕಸ್ಮಿಕವಾಗಿ ಮರದಿಂದ ಕೆಳಗೆ ಬಿದ್ದಿದ್ದು, ಗಂಭೀರ ಗಾಯಗೊಂಡ ಅವರನ್ನು ಕೂಡಲೇ ಬಂಟ್ವಾಳ ಆಸ್ಪತ್ರೆಗೆ ಕರೆದುಕೊಂಡು ಹೋಗಿ, ಅಲ್ಲಿಂದ

ಬಂಟ್ವಾಳ: ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಹೃದಯಾಘಾತ- ಯೋಧ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 01. ರಜೆಯಲ್ಲಿ ಊರಿಗೆ ಬಂದಿದ್ದ ಬಿಎಸ್‌ಎಫ್ ಯೋಧರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮೃತರನ್ನು ಕುಲಶೇಖರ ಉಮಿಕಾನ ನಿವಾಸಿ, ಬಿಎಸ್‌ಎಫ್ ಯೋಧ ಹರೀಶ್ ಕುಮಾರ್ (43) ಎಂದು ಗುರುತಿಸಲಾಗಿದೆ. ಕಳೆದ 21 ವರ್ಷಗಳಿಂದ ಗಡಿ ಭದ್ರತಾ ಪಡೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಇವರು, ರಜೆಯ ಮೇಲೆ ಊರಿಗೆ ಬಂದಿದ್ದರು. ಶನಿವಾರದಂದು ಇವರಿಗೆ ಹೃದಯಾಘಾತವಾಗಿದ್ದು, ಆಸ್ಪತ್ರೆ ದಾಖಲಿಸಲಾಗಿತ್ತು. ಆದರೆ ಜ.1ರಂದು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.

ಮಂಗಳೂರು: ಹೃದಯಾಘಾತ- ಯೋಧ ನಿಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಹೊಸ ವರ್ಷಾಚರಣೆಗೆ ಕಟ್ಟುನಿಟ್ಟಿನ ಕ್ರಮ ಜಾರಿ   ➤ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 31. ಹೊಸ ವರ್ಷಾಚರಣೆಗೆ ಮಂಗಳೂರು ನಗರದಾದ್ಯಂತ ಕಟ್ಟುನಿಟ್ಟಿನ ನಿಯಮ ಜಾರಿಗೊಳಿಸಲಾಗಿದೆ. ಈ ಕುರಿತು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಮಾತನಾಡಿ, ಜಿಲ್ಲಾಧಿಕಾರಿಯ ಸಭೆಯಂತೆ ನಿಯಾಮಾವಳಿ ರೂಪಿಸಲಾಗಿದೆ. ನ್ಯೂ ಈಯರ್ ಪಾರ್ಟಿ ಆಯೋಜಿಸುವವರು ಡಿ.31 ರಂದು 12.30ಕ್ಕೆ ಕಾರ್ಯಕ್ರಮ ಮುಗಿಸಬೇಕು. ಅನುಮತಿ ಪಡೆದಿದ್ದರೂ ರಾತ್ರಿ 10 ಗಂಟೆಗೆ ಧ್ವನಿವರ್ಧಕಗಳನ್ನು ಬಂದ್ ಮಾಡಬೇಕು ಎಂದು ತಿಳಿಸಿದರು. ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 32 ಚೆಕ್ ಪೋಸ್ಟ್ ಗಳನ್ನು ಹಾಕಲಾಗಿದೆ. ಈ ಪೈಕಿ 16

ಮಂಗಳೂರು: ಹೊಸ ವರ್ಷಾಚರಣೆಗೆ ಕಟ್ಟುನಿಟ್ಟಿನ ಕ್ರಮ ಜಾರಿ   ➤ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ Read More »

ಕರಾವಳಿ, ಕರ್ನಾಟಕ

ಲವ್ ಜಿಹಾದ್ ತಡೆಗೆ ಸಹಾಯವಾಣಿ ಆರಂಭಿಸಿದ ಭಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಸಂಘಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 31. ಲವ್ ಜಿಹಾದ್ ಪ್ರಕರಣಗಳನ್ನು ತಡೆಗಟ್ಟಲು ಭಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಮಂಗಳೂರಿನಲ್ಲಿ ಸಹಾಯವಾಣಿ ಆರಂಭಿಸಿದೆ ಎಂದು ವರದಿ ತಿಳಿಸಿದೆ. ತಮ್ಮ ಮನೆಯಲ್ಲಿ, ನೆರೆಹೊರೆಗಳಲ್ಲಿ, ಊರು ಹಳ್ಳಿಗಳಲ್ಲಿ ಲವ್ ಜಿಹಾದ್ ಪ್ರಕರಣ ಕಂಡುಬಂದರೆ ಅಥವಾ ಲವ್ ಜಿಹಾದ್ ಗೆ ಬಲಿಯಾದ್ರೆ ತುರ್ತಾಗಿ ಸಂಪರ್ಕಿಸಲು ಎರಡು ವಾಟ್ಸ್ ಆ್ಯಪ್ ಸಂಖ್ಯೆಗಳನ್ನು ನೀಡಲಾಗಿದೆ. ಜೊತೆಗೆ ಇಮೇಲ್ ಐಡಿಯನ್ನು ನೀಡಲಾಗಿದೆ. ಕರೆ ಮಾಡಿದವರ ಮಾಹಿತಿ ಗೌಪ್ಯವಾಗಿ ಇಡಲಾಗುತ್ತದೆ ಎಂದು ಸಂಘಟನೆಗಳ ಪ್ರಮುಖರು ಹೇಳಿದ್ದಾರೆ.

ಲವ್ ಜಿಹಾದ್ ತಡೆಗೆ ಸಹಾಯವಾಣಿ ಆರಂಭಿಸಿದ ಭಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಸಂಘಟನೆ Read More »

ಕರಾವಳಿ, ಕರ್ನಾಟಕ
Crime

ಬಂಟ್ವಾಳ: ವ್ಯಕ್ತಿಗೆ ಪರಿಚಿತ ಗ್ಯಾಂಗ್ ನಿಂದ ಹಲ್ಲೆ ➤ ವ್ಯಕ್ತಿ ಗಂಭೀರ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 30. ವ್ಯಕ್ತಿಯೊಬ್ಬರಿಗೆ ಪರಿಚಿತ ತಂಡವೊಂದು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಇಲ್ಲಿನ ಕುಮ್ದೇಲು ಎಂಬಲ್ಲಿ ನಡೆದಿದೆ. ಹಲ್ಲೆಗೊಳಗಾದವರನ್ನು ನಿತೇಶ್ ಮಡಿವಾಳ ಎಂದು ಗುರುತಿಸಲಾಗಿದೆ. ಅವರಿಗೆ ಲೋಕೇಶ್, ರೋಷನ್, ಸುಜಿತ್ ಹಾಗೂ ಸುಮಂತ್ ಎಂಬವರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಗಾಯಾಳುವನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಗಳೆಲ್ಲ ನಿತೇಶ್ ಅವರಿಗೆ ಪರಿಚಿತರಾಗಿದ್ದು, ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಕುರಿತು ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಂಟ್ವಾಳ: ವ್ಯಕ್ತಿಗೆ ಪರಿಚಿತ ಗ್ಯಾಂಗ್ ನಿಂದ ಹಲ್ಲೆ ➤ ವ್ಯಕ್ತಿ ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಕಾರಿನ ಸಹಪ್ರಯಾಣಿಕ ಹೆಲ್ಮೆಟ್ ಧರಿಸಿಲ್ಲವೆಂದು ದಂಡ…!

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 30. ಕಾರಿನಲ್ಲಿ ಸಹಪ್ರಯಾಣಿಕ ಹೆಲ್ಮೆಟ್‌ ಧರಿಸಿಲ್ಲವೆಂದು ಪೊಲೀಸರು ದಂಡ ವಿಧಿಸಿರುವ ವಿಲಕ್ಷಣ ಘಟನೆ ಮಂಗಳೂರಿನಲ್ಲಿ ನಡೆದಿದೆ.   ಕಳೆದ ನವೆಂಬರ್‌ 29ರಂದು ಮಂಗಳಾದೇವಿಯಲ್ಲಿ ಟ್ರಾಫಿಕ್‌ ಉಲ್ಲಂಘಿಸಿದಕ್ಕಾಗಿ ಈ ನೋಟಿಸ್‌ ಜಾರಿಯಾಗಿದ್ದು, ಡಿ. 22ರಂದು ಚಾಲಕನ ಕೈಸೇರಿದೆ. ಇದರಲ್ಲಿ “ಕಾರು’ ಎಂದು ನಮೂದಿಸಲಾಗಿದ್ದು, ಉಲ್ಲಂಘನೆ ರೀತಿ ಕಾಲಂನಲ್ಲಿ “ಸಹಸವಾರ ಹೆಲ್ಮೆಟ್‌ ಧರಿಸಿಲ್ಲ’ ಎಂದಿದೆ. ನೋಟಿಸ್‌ನಲ್ಲಿ ಉಲ್ಲಂಘನೆ ನಡೆದ ಸ್ಥಳದ ಚಿತ್ರವಿದೆ. ಅದರಲ್ಲಿ ದ್ವಿಚಕ್ರ ವಾಹನವೊಂದರಲ್ಲಿ ಸಹ ಸವಾರ ಹೆಲ್ಮೆಟ್‌ ಇಲ್ಲದೆ ಸಂಚರಿಸುತ್ತಿರುವುದು

ಮಂಗಳೂರು: ಕಾರಿನ ಸಹಪ್ರಯಾಣಿಕ ಹೆಲ್ಮೆಟ್ ಧರಿಸಿಲ್ಲವೆಂದು ದಂಡ…! Read More »

ಕರಾವಳಿ, ಕರ್ನಾಟಕ

ಚರ್ಮಗಂಟು ರೋಗ ➤ ಜಾನುವಾರುಗಳ ಸಾಗಾಟಕ್ಕೆ ನಿಷೇಧ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 30. ಕ್ಯಾಪ್ರಿಪಾಕ್ಸ್ ಎಂಬ ವೈರಾಣುವಿನಿಂದ ಹರಡುವ ಚರ್ಮಗಂಟು (ಲುಂಪಿ ಸ್ಕಿನ್ ಡಿಸೀಸ್) ರೋಗ ದನ ಮತ್ತು ಎಮ್ಮೆಗಳಲ್ಲಿ ಕಂಡುಬರುವ ವೈರಸ್ ಖಾಯಿಲೆಯಾಗಿದ್ದು, ರೋಗಗ್ರಸ್ಥ ಜಾನುವಾರುವಿನಿಂದ ಆರೋಗ್ಯವಂತ ಜಾನುವಾರುಗಳಿಗೆ ಹರಡುತ್ತಿದೆ. ಜಿಲ್ಲೆಯಲ್ಲಿ 289 ಗ್ರಾಮಗಳಲ್ಲಿ ಜಾನುವಾರುಗಳಲ್ಲಿ ಚರ್ಮಗಂಟು ರೋಗ ಕಂಡು ಬಂದಿರುತ್ತದೆ. ಈವರೆಗೆ 3,414 ಜಾನುವಾರುಗಳು ರೋಗಕ್ಕೆ ತುತ್ತಾಗಿದ್ದು, 64 ಜಾನುವಾರುಗಳು ಮರಣ ಹೊಂದಿರುತ್ತದೆ. ಜಾನುವಾರುಗಳನ್ನು ಒಂದೆಡೆಯಿಂದ ಇನ್ನೊಂದೆಡೆ ಸಾಗಾಣಿಕೆ ಮಾಡುವ ಮೂಲಕ ರೋಗ ಹರಡುವ ಸಾಧ್ಯತೆ ಇರುವುದರಿಂದ ಈ ರೋಗದ

ಚರ್ಮಗಂಟು ರೋಗ ➤ ಜಾನುವಾರುಗಳ ಸಾಗಾಟಕ್ಕೆ ನಿಷೇಧ Read More »

ಕರ್ನಾಟಕ

ಇಂದಿನಿಂದ (ಡಿ.29) ಸುಪ್ರೀಂ ಕೋರ್ಟ್ ನ್ಯಾಯಾಧೀಶರ ದ.ಕ ಜಿಲ್ಲಾ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 29. ಸುಪ್ರೀಂ ಕೋರ್ಟ್‍ನ ನ್ಯಾಯಾಧೀಶರಾದ ಎಸ್. ಅಬ್ದುಲ್ ನಜೀರ್ ಅವರು ಡಿ.29ರಿಂದ 31ರವರೆಗೆ ದ.ಕ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಡಿ.29ರ ಗುರುವಾರ ಸಂಜೆ 5.25ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ನಂತರ ಮೂಡಬಿದಿರೆಯ ಬೆಳುವಾಯಿ ಗ್ರಾಮಕ್ಕೆ ತೆರಳಿ ವಾಸ್ತವ್ಯ ಹೂಡಲಿದ್ದಾರೆ. ಡಿ.30ರ ಶುಕ್ರವಾರ ಬೆಳಿಗ್ಗೆ 9.20ಕ್ಕೆ ಮೂಡಬಿದ್ರೆಯಿಂದ ಉಡುಪಿಗೆ ತೆರಳುವರು. ಸಂಜೆ 4.30ಕ್ಕೆ ಮೂಡಬಿದಿರೆಗೆ ಆಗಮಿಸಿ, ನೂತನವಾಗಿ ನಿರ್ಮಿಸಲಾದ ಬಾರ್ ಅಸೋಸಿಯೇಷನ್ ಕಟ್ಟಡವನ್ನು ಉದ್ಘಾಟಿಸುವರು. ರಾತ್ರಿ 7 ಗಂಟೆಗೆ

ಇಂದಿನಿಂದ (ಡಿ.29) ಸುಪ್ರೀಂ ಕೋರ್ಟ್ ನ್ಯಾಯಾಧೀಶರ ದ.ಕ ಜಿಲ್ಲಾ ಪ್ರವಾಸ Read More »

ಕರಾವಳಿ

ಸೌದಿ ಅರೇಬಿಯಾದಲ್ಲಿ ಭೀಕರ ಅಪಘಾತ ➤ ಮಂಗಳೂರಿನ ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಸೌದಿ ಅರೇಬಿಯಾ, ಡಿ. 29. ಕಾರು ಮತ್ತು ಲಾರಿ‌ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಮಂಗಳೂರಿನ ಸುರತ್ಕಲ್‌ ನ ಯುವಕ ಮೃತಪಟ್ಟ ಘಟನೆ ಸೌದಿ ಅರೇಬಿಯಾದಿಂದ ವರದಿಯಾಗಿದೆ. ಮೃತ ಯುವಕನನ್ನು ತಡಂಬೈಲ್‌ ನಿವಾಸಿ ಫಾಝಿಲ್ ಎಂದು ಗುರುತಿಸಲಾಗಿದೆ. ಫಾಝಿಲ್ ಗೆ ಕಳೆದ ವರ್ಷ ವಿವಾಹವಾಗಿತ್ತು. ಸೌದಿ ಅರೆಬಿಯಾದ ಅಲ್ ಅಸ ಎಂಬಲ್ಲಿ ಕಾರು ಮತ್ತು ಲಾರಿಯ ನಡುವೆ ಭೀಕರ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ಜಖಂಗೊಂಡಿದ್ದು, ಫಾಝಿಲ್ ಸ್ಥಳದಲ್ಲೇ

ಸೌದಿ ಅರೇಬಿಯಾದಲ್ಲಿ ಭೀಕರ ಅಪಘಾತ ➤ ಮಂಗಳೂರಿನ ಯುವಕ ಮೃತ್ಯು..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್
Scroll to Top