Mangalore

ಬಾಲಿವುಡ್ ನಟ ದಿಲೀಪ್ ಕುಮಾರ್​​​ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba, ಮುಂಬೈ ಜೂ.06: ಬಾಲಿವುಡ್ ಹಿರಿಯ ನಟ ದಿಲೀಪ್ ಕುಮಾರ್ ಉಸಿರಾಟದ ಸಮಸ್ಯೆಯಿಂದ ಭಾನುವಾರ ಬೆಳಗ್ಗೆ ಮುಂಬೈನ ಹಿಂದುಜಾ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.   ಈ ಕುರಿತು ದಿಲೀಪ್ ಕುಮಾರ್ ಅವರ ಅಧಿಕೃತ ಟ್ವಿಟ್ಟರ್ ಖಾತೆಯಿಂದ ಟ್ವೀಟ್ ಮಾಡಿ ಅವರ ಮ್ಯಾನೇಜರ್ ಮಾಹಿತಿ ನೀಡಿದ್ದು, ನಟನ ಆರೋಗ್ಯದ ಸ್ಥಿತಿಗತಿ ಕುರಿತು ತಿಳಿಸಿದ್ದಾರೆ. ದಿಲೀಪ್ ಅವರು ನಿಯಮಿತ ವೈದ್ಯಕೀಯ ಪರೀಕ್ಷೆಗೆಂದು ಖಾರ್‍ನ ನಾನ್ ಕೋವಿಡ್ ಪಿಡಿ ಹಿಂದುಜಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ವೇಳೆ ಅವರಿಗೆ […]

ಬಾಲಿವುಡ್ ನಟ ದಿಲೀಪ್ ಕುಮಾರ್​​​ ಆಸ್ಪತ್ರೆಗೆ ದಾಖಲು Read More »

ರಾಷ್ಟ್ರೀಯ ನ್ಯೂಸ್

ಕನ್ನಡದ ಹಿರಿಯ ನಟಿ ಸುರೇಖಾ ನಿಧನ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.06: ವರನಟ ಡಾ. ರಾಜ್‌ಕುಮಾರ್ ಜತೆ “ತ್ರಿಮೂರ್ತಿ”ಯಲ್ಲಿ ನಟಿಸಿದ್ದ ಕನ್ನಡದ ಹಿರಿಯ ನಟಿ ಸುರೇಖಾ (66) ಹೃದಯಾಘಾತದಿಂದ ನಿಧನರಾದರು.   160ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಸುರೇಖಾ ಬೆಂಗಳೂರು ನಗರದಲ್ಲಿ ನಿಧನರಾದರು. ಮಣ್ಣಿನ ಮಕ್ಕಳು, ಸಂಭ್ರಮ, ಕಿಂಗ್, ಶಂಕರ್ ಸುಂದರ್, ಆಲೆಮನೆ, ಬಿಳಿಗಿರಿಯ ಬನದಲ್ಲಿ ಚಿತ್ರಗಳಲ್ಲಿ ರಾಜ್‌ಕುಮಾರ್ ಜತೆ ನಟಿಸಿದ್ದಾರೆ.ಬನಶಂಕರಿ ಚಿತಾಗಾರದಲ್ಲಿ ಇಂದು ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.  

ಕನ್ನಡದ ಹಿರಿಯ ನಟಿ ಸುರೇಖಾ ನಿಧನ Read More »

ಕರಾವಳಿ

MRPL ನೇಮಕಾತಿಯಲ್ಲಿ ಸ್ಥಳೀಯರಿಗೆ ಅನ್ಯಾಯ ➤ ಪ್ರತಿಭಟನೆ ನಡೆಸಿ ಆಕ್ರೋಶ

(ನ್ಯೂಸ್ ಕಡಬ) newskadaba,ಮಂಗಳೂರು ಜೂ.06: ಎಂಆರ್​ಪಿಎಲ್​ನ ಉದ್ಯೋಗ ನೇಮಕಾತಿಯಲ್ಲಿ ಸ್ಥಳೀಯರಿಗೆ ಆಗಿರುವ ಅನ್ಯಾಯ ಖಂಡಿಸಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮನೆ-ಮನೆ ಪ್ರತಿಭಟನೆ ನಡೆಸಲಾಯಿತು. ಡಿವೈಎಫ್ಐ ನೇತೃತ್ವದಲ್ಲಿ ಸಮಾನ ಮನಸ್ಕ ಸಂಘಟನೆಗಳ ಬೆಂಬಲದೊಂದಿಗೆ ಮನೆಮನೆ ಪ್ರತಿಭಟನೆ ನಡೆಯಿತು.   ತುಳುನಾಡ ಅಭಿವೃದ್ದಿಯಲ್ಲಿ ತುಳುವರಿಗೆ ದೊಡ್ಡ ಪಾಲು ಸಿಗಬೇಕು. ಸ್ಥಳೀಯರಿಗೆ ಉದ್ಯೋಗ ನಿರಾಕರಿಸುವ ಕಂಪನಿಗಳಿಗೆ ಬೀಗ ಜಡಿಯಿರಿ ಎಂಬ ಫಲಕಗಳೊಂದಿಗೆ ಡಿವೈಎಫ್ಐ, ಎಸ್​ಎಫ್ಐ ಕಾರ್ಯಕರ್ತರು, ಸಿಪಿಎಂ, ಕಾಂಗ್ರೆಸ್, ಜೆಡಿಎಸ್ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದರು.

MRPL ನೇಮಕಾತಿಯಲ್ಲಿ ಸ್ಥಳೀಯರಿಗೆ ಅನ್ಯಾಯ ➤ ಪ್ರತಿಭಟನೆ ನಡೆಸಿ ಆಕ್ರೋಶ Read More »

ಕರ್ನಾಟಕ

ನರಿಮೊಗರು: ಮಾನಸಿಕ ಅಸ್ವಸ್ಥೆಯಾಗಿದ್ದ ಯುವತಿ ನಾಪತ್ತೆ

(ನ್ಯೂಸ್ ಕಡಬ) newskadaba,ನರಿಮೊಗರು ಜೂ.05: ಮಾನಸಿಕ ಅಸ್ವಸ್ಥೆ ಯುವತಿಯೊಬ್ಬರು ನಾಪತ್ತೆಯಾದ ಘಟನೆ ಪುತ್ತೂರು ತಾಲೂಕಿನ ನರಿಮೊಗರು ಗ್ರಾಮದ ಕರ್ಗಲ್ಲು ಎಂಬಲ್ಲಿ ವರದಿಯಾಗಿದೆ. 23 ವರ್ಷದ ವಿಜೇತಾ ಎಂಬುವವರು ನಾಪತ್ತೆಯಾಗಿರುವ ಯುವತಿ.   ವಿಜೇತ ಅವರು ಮಾನಸಿಕ ಅಸ್ವಸ್ಥರಾಗಿದ್ದು, ಜೂ.4ರಂದು ಬೆಳಿಗ್ಗೆ ತನ್ನ ಮನೆಯಿಂದ ಹೊರಗೆ ಹೋದವರು ಬಳಿಕ ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ ಎಂದು ಯುವತಿ ತಂದೆ ಅಣ್ಣು ಪೂಜಾರಿ ಅವರು ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ನರಿಮೊಗರು: ಮಾನಸಿಕ ಅಸ್ವಸ್ಥೆಯಾಗಿದ್ದ ಯುವತಿ ನಾಪತ್ತೆ Read More »

ಕರಾವಳಿ

ರಾಜ್ಯದಲ್ಲಿ ಲಾಕ್‌ಡೌನ್ ಸಡಿಲಿಕೆ ಸುಳಿವು ನೀಡಿದ ಸಿಎಂ ಬಿಎಸ್‌ವೈ..!?

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.05: ಕೊರೋನಾ ನಿರೀಕ್ಷಿತ ಮಟ್ಟದಲ್ಲಿ ಕಡಿಮೆ ಆಗದ ಕಾರಣ ಜೂ. 3ರಂದು ಮತ್ತೆ ಒಂದು ವಾರಗಳ ಕಾಲ ಲಾಕ್‌ಡೌನ್ ವಿಸ್ತರಣೆ ಮಾಡಿ ಘೋಷಣೆ ಮಾಡಲಾಗಿತ್ತು.   ಇಂದು ಸಿಎಂ ಬಿಎಸ್ ಯಡಿಯೂರಪ್ಪ ಅವರು ಲಾಕ್‌ಡೌನ್ ಸಡಿಲಿಕೆ ಕುರಿತು ಸುಳಿವು ಕೊಟ್ಟಿದ್ದಾರೆ. ಸೋಮವಾರದಿಂದ ಲಾಕ್‌ಡೌನ್‌ ಸಡಿಲಿಕೆ ಮಾಡುವ ಕುರಿತು ಚಿಂತನೆ ನಡೆಸುವುದಾಗಿ ತಿಳಿಸಿದ್ದಾರೆ.ಇನ್ನು ಮೂರ್ನಾಲ್ಕು ದಿನ ರಾಜ್ಯದ ಪರಿಸ್ಥಿತಿಯನ್ನು ವಿಶ್ಲೇಷಿಸುತ್ತೇವೆ. ಯಾವ್ಯಾವ ಜಿಲ್ಲೆಗಳಲ್ಲಿ ಪರಿಸ್ಥಿತಿ ಹೇಗಿದೆ ಎಂಬುದನ್ನು ಗಮನಿಸುತ್ತೇವೆ. ನಂತರ ಕ್ರಮ ಕೈಗೊಳ್ಳುತ್ತೇವೆ ಎಂದು

ರಾಜ್ಯದಲ್ಲಿ ಲಾಕ್‌ಡೌನ್ ಸಡಿಲಿಕೆ ಸುಳಿವು ನೀಡಿದ ಸಿಎಂ ಬಿಎಸ್‌ವೈ..!? Read More »

ಕರ್ನಾಟಕ

ಇಂದು ಏರಿಕೆಯಾಗದ ಪೆಟ್ರೋಲ್, ಡೀಸೆಲ್ ಬೆಲೆ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.02: ಬೆಂಗಳೂರು, ದೆಹಲಿ ಸೇರಿದಂತೆ ಭಾರತದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಪ್ರತಿದಿನ ಏರಿಳಿತಗಳು ಉಂಟಾಗುತ್ತಲೇ ಇರುತ್ತವೆ. ಕಳೆದ 3 ತಿಂಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಭಾರೀ ಹೆಚ್ಚಳವಾಗುತ್ತಿದ್ದು, ಕಳೆದೆರಡು ದಿನಗಳಿಂದ ಪೆಟ್ರೋಲ್ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಕಳೆದ ಮೂರ್ನಾಲ್ಕು ದಿನಗಳಿಂದ ಮುಂಬೈನಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 100 ರೂ. ದಾಟಿದೆ. ಜೈಪುರದಲ್ಲೂ ಪೆಟ್ರೋಲ್ ದರ ಶತಕ ಬಾರಿಸಿದೆ.     ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್

ಇಂದು ಏರಿಕೆಯಾಗದ ಪೆಟ್ರೋಲ್, ಡೀಸೆಲ್ ಬೆಲೆ Read More »

ಕರ್ನಾಟಕ

ಕರ್ನಾಟಕದಲ್ಲಿ ಮತ್ತೆ ಲಾಕ್​ಡೌನ್ ಫಿಕ್ಸ್​ ಎಂದ ಸಿಎಂ..!

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.02: ಕರ್ನಾಟಕದಲ್ಲಿ ಇನ್ನೂ ಕೊರೋನಾ ಕೇಸುಗಳು ನಿಯಂತ್ರಣಕ್ಕೆ ಬಂದಿಲ್ಲ. ಹೀಗಾಗಿ, ಲಾಕ್​ಡೌನ್ ಮುಂದುವರಿಸಲಾಗುವುದು ಎಂದು ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಅಲ್ಲದೆ, ಲಾಕ್​ಡೌನ್​ನಿಂದಾಗಿ ಅನೇಕ ಸಮುದಾಯಗಳು, ಕೂಲಿ-ಕಾರ್ಮಿಕರಿಗೆ ತೊಂದರೆ ಉಂಟಾಗಿದ್ದು, ಮುಂದಿನ 2-3 ದಿನಗಳಲ್ಲಿ ಮತ್ತೊಂದು ಪ್ಯಾಕೇಜ್ ಘೋಷಣೆ ಮಾಡುವುದಾಗಿ ಅವರು ತಿಳಿಸಿದ್ದಾರೆ.   ಕರ್ನಾಟಕದಲ್ಲಿ ಇನ್ನೂ ಕೊರೋನಾ ನಿಯಂತ್ರಣಕ್ಕೆ ಬಂದಿಲ್ಲ. ಹೀಗಾಗಿ, ಲಾಕ್​ಡೌನ್ ವಿಸ್ತರಣೆ ಮಾಡಿ ಬಿಗಿ ಕ್ರಮಗಳನ್ನು ಕೈಗೊಳ್ಳಲು ನಿರ್ಧರಿಸಲಾಗಿದೆ. ಈ ಸಂಬಂಧ ಇಂದು ಸಂಜೆ ಸಚಿವರ ಜೊತೆ ಉನ್ನತ ಮಟ್ಟದ

ಕರ್ನಾಟಕದಲ್ಲಿ ಮತ್ತೆ ಲಾಕ್​ಡೌನ್ ಫಿಕ್ಸ್​ ಎಂದ ಸಿಎಂ..! Read More »

ಕರ್ನಾಟಕ

ಉಡುಪಿ: ಜಿಲ್ಲಾಧಿಕಾರಿ ಹೆಸರಿನಲ್ಲಿ ನಕಲಿ ಫೇಸ್ ಬುಕ್ ತೆರದ ಕಿಡಿಗೇಡಿಗಳು

(ನ್ಯೂಸ್ ಕಡಬ) newskadaba,ಉಡುಪಿ ಜೂ.02:ಜಿಲ್ಲಾಧಿಕಾರಿ ಜಿ.ಜಗದೀಶ ಅವರ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದಿರುವ ಕುರಿತು ಉಡುಪಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮೇ 31 ರಂದು ಕಿಡಿಗೇಡಿಗಳು ‘DC Udupi’ ಎಂಬ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆಯನ್ನು ಸೃಷ್ಟಿಸಿ, ಪ್ರೊಫೈಲಿಗೆ ಜಿಲ್ಲಾಧಿಕಾರಿಗಳ ಫೋಟೋವನ್ನು ಹಾಕಿ ದುರ್ಬಳಕೆ ಮಾಡಿಕೊಂಡಿದ್ದಾರೆ.     ಈ ಕುರಿತು ಕಿಡಿಗೇಡಿಗಳ ವಿರುದ್ದ ಉಡುಪಿ ಸೆನ್‌ ಅಪರಾಧ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 66(c), 66(d) ಐ.ಟಿ. ಆಕ್ಟ್ ರಂತೆ ಪ್ರಕರಣ ದಾಖಲಾಗಿದೆ.

ಉಡುಪಿ: ಜಿಲ್ಲಾಧಿಕಾರಿ ಹೆಸರಿನಲ್ಲಿ ನಕಲಿ ಫೇಸ್ ಬುಕ್ ತೆರದ ಕಿಡಿಗೇಡಿಗಳು Read More »

ಕರಾವಳಿ, ಕರ್ನಾಟಕ

ಕರ್ನಾಟದಲ್ಲಿ ಸಿಬಿಎಸ್‍ಇ ಪರೀಕ್ಷೆ ನಡೆಯುತ್ತಾ..?!

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.02:ಕೊರೊನಾ ಎರಡನೇ ಅಲೆಗೆ ಸಿಬಿಎಸ್‍ಇ  12ನೇ ತರಗತಿಯ ಪರೀಕ್ಷೆ ರದ್ದಾದ ಬೆನ್ನಲ್ಲೇ ಕರ್ನಾಟಕದಲ್ಲಿ ಪರೀಕ್ಷೆ ರದ್ದಾಗುತ್ತಾ ಎಂಬ ಪ್ರಶ್ನೆ ಎದ್ದಿದೆ. ರಾಜ್ಯದಲ್ಲಿ ಪರೀಕ್ಷೆ ನಡೆಸುವುದು, ರದ್ದಾಗುವುದು ತಜ್ಞರು ನೀಡುವ ವರದಿಯ ಮೇಲೆ ನಿಂತಿದೆ. ತಜ್ಞರ ವರದಿ ಆಧಾರಿಸಿ ಸರ್ಕಾರ ಅಂತಿಮ ನಿರ್ಧಾರ ಪ್ರಕಟಿಸಲಿದೆ.2 ದಿನಗಳಲ್ಲಿ ತಜ್ಞರು, ಅಧಿಕಾರಿಗಳ ಜೊತೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸಭೆ ನಡೆಸಲಿದ್ದಾರೆ. ಕಳೆದ ವರ್ಷ ತಜ್ಞರು ನೀಡಿದ ಸಲಹೆಯ ಆಧಾರದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆದಿತ್ತು.ಕೊರೊನಾ ಸಮಯದಲ್ಲಿ ಪರೀಕ್ಷೆ

ಕರ್ನಾಟದಲ್ಲಿ ಸಿಬಿಎಸ್‍ಇ ಪರೀಕ್ಷೆ ನಡೆಯುತ್ತಾ..?! Read More »

ಕರ್ನಾಟಕ

ಒಂದೇ ದಿನ 210 ಮಂದಿಗೆ ಕೋವಿಡ್ ➤ ಬೆಳ್ತಂಗಡಿಯ ಕ್ರೈಸ್ತ ಆಶ್ರಮಕ್ಕೆ ವಿಎಚ್‍ಪಿ ನೆರವು

(ನ್ಯೂಸ್ ಕಡಬ) newskadaba,ಬೆಳ್ತಂಗಡಿ ಜೂ.01: ಒಂದೇ ದಿನ 210 ಮಂದಿಗೆ ಕೊರೊನಾ ಸೋಂಕು ತಗುಲುವ ಮೂಲಕ ಕೊರೊನಾ ಅಬ್ಬರದಿಂದ ನಲುಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ನೆರಿಯಾ ಸಿಯೋನ್ ಆಶ್ರಮಕ್ಕೆ ನೆರಿಯ ವಿಶ್ವ ಹಿಂದೂ ಪರಿಷತ್ ಘಟಕ ನೆರವಾಗಿದೆ. ಸುಮಾರು 270 ಜನ ನಿರ್ಗತಿಕರು ಹಾಗೂ ವೃದ್ಧರಿರುವ ಈ ಆಶ್ರಮದಲ್ಲಿ ನಿನ್ನೆ ಬರೋಬ್ಬರಿ 210 ಮಂದಿಗೆಪಾಸಿಟಿವ್ ಆಗಿತ್ತು. ಹೀಗಾಗಿ ಇಂದು ವಿಎಚ್‍ಪಿ ಕಾರ್ಯಕರ್ತರು ಆಶ್ರಮವನ್ನು ಸಂಪೂರ್ಣ ಸ್ಯಾನಿಟೈಸೇಷನ್ ಮಾಡಿದ್ದಾರೆ. ಪಿಪಿಇ ಕಿಟ್ ಧರಿಸಿದ ಕಾರ್ಯಕರ್ತರು ತಮ್ಮ ಸ್ವಂತ ಖರ್ಚಿನಿಂದಲೇ

ಒಂದೇ ದಿನ 210 ಮಂದಿಗೆ ಕೋವಿಡ್ ➤ ಬೆಳ್ತಂಗಡಿಯ ಕ್ರೈಸ್ತ ಆಶ್ರಮಕ್ಕೆ ವಿಎಚ್‍ಪಿ ನೆರವು Read More »

ಕರಾವಳಿ, ಕರ್ನಾಟಕ
Scroll to Top