Mangalore

ಸುಳ್ಯ :ಸೈಕಲ್ ಕಲಿಯಲು ತೆರಳಿದ್ದ ಬಾಲಕಿಗೆ ಶಾಲಾ ಆಡಳಿತಾಧಿಕಾರಿಯಿಂದ ಲೈಂಗಿಕ ಕಿರುಕುಳ

(ನ್ಯೂಸ್ ಕಡಬ) newskadaba.com ಸುಳ್ಯ, ಡಿ.14: ಸೈಕಲ್ ಕಲಿಯಲು ತೆರಳಿದ್ದ ಬಾಲಕಿಗೆ ಶಾಲಾ ಆಡಳಿತಾಧಿಕಾರಿ ಲೈಂಗಿಕ ಕಿರುಕುಳ ನೀಡಿದ ಘಟನೆ ಸುಳ್ಯದಲ್ಲಿ ನಡೆದಿದೆ. ದೇವಚಳ್ಳ ಗ್ರಾಮದ ಎಲಿಮಲೆ ಎಂಬಲ್ಲಿ ಸೈಕಲ್ ಕಲಿಯಲು ಹೋದ ಬಾಲಕಿಯೊಬ್ಬಳನ್ನು ಕೊಠಡಿಗೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಾಲಾ ಆಡಳಿತಾಧಿಕಾರಿಯನ್ನು ವಜಾಗೊಳಿಸಲಾಗಿದೆ. ಎಲಿಮಲೆಯ ಪ್ರತಿಷ್ಠಿತ ಖಾಸಗಿ ಶಾಲೆಯಲ್ಲಿ ಬಾಲಕಿಯೊಬ್ಬಲು ತನ್ನ ಗೆಳತಿ ಜತೆ ಸೈಕಲ್ ಕಲಿಯುತ್ತಿದ್ದ ವೇಳೆ ಶಾಲೆಯಲ್ಲಿದ್ದ ಆಡಳಿತಾಧಿಕಾರಿ ಬಾಲಕಿಯನ್ನು ಕರೆದು ಸೈಕಲ್ ಕೊಡಿಸುವುದಾಗಿ ತಿಳಿಸಿ, ಬಳಿಕ ಕೊಠಡಿಗೆ […]

ಸುಳ್ಯ :ಸೈಕಲ್ ಕಲಿಯಲು ತೆರಳಿದ್ದ ಬಾಲಕಿಗೆ ಶಾಲಾ ಆಡಳಿತಾಧಿಕಾರಿಯಿಂದ ಲೈಂಗಿಕ ಕಿರುಕುಳ Read More »

ಕರಾವಳಿ

ಮೃಗಾಲಯದಲ್ಲಿದ್ದ 6 ತಿಂಗಳ ಆನೆ ಮರಿ ಅನಾರೋಗ್ಯದಿಂದ ಸಾವು

(ನ್ಯೂಸ್ ಕಡಬ) newskadaba.com ಮೈಸೂರು, ಡಿ.14: ಜಯಚಾಮರಾಜೇಂದ್ರ ಮೃಗಾಲಯದಲ್ಲಿದ್ದ 6 ತಿಂಗಳ ಆನೆ ಮರಿ ವೇದಾವತಿ ಅನಾರೋಗ್ಯದಿಂದ ಭಾನುವಾರ ಮೃತಪಟ್ಟಿದೆ. ತಾಯಿಯಿಂದ ತಪ್ಪಿಸಿಕೊಂಡಿದ್ದ ಈ ಆನೆ ಮರಿಯನ್ನು ಬಿಳಿಗಿರಿರಂಗನ ಬೆಟ್ಟದಲ್ಲಿ ಆರು ತಿಂಗಳ ಹಿಂದೆಯಷ್ಟೆ ರಕ್ಷಣೆ ಮಾಡಲಾಗಿತ್ತು.ವೇದಾವತಿ ಆನೆಮರಿಯು ಅನಾರೋಗ್ಯದಿಂದ ಚೇತರಿಸಿಕೊಳ್ಳದೆ ಭಾನುವಾರ (ಡಿ.13) ಬೆಳಿಗ್ಗೆ 11 ಗಂಟೆ ಸಮಯದಲ್ಲಿ ತೀರಿಕೊಂಡಿದೆ. ಸಹಜವಾಗಿ ಯಾವುದೇ ಆನೆಮರಿಗಳು ಹುಟ್ಟಿದ ಒಂದು ವರ್ಷದೊಳಗೆ ಅವುಗಳ ಆರೈಕೆ ತುಂಬಾ ಸೂಕ್ಷ್ಮತೆಯಿಂದ ಕೂಡಿರುತ್ತದೆ.ಅದರಲ್ಲೂ ವೇದಾವತಿ ಆನೆಮರಿಗೆ ಸ್ವತಃ ಆಹಾರ ಸೇವಿಸುವ ಶಕ್ತಿ ಇರಲಿಲ್ಲ.

ಮೃಗಾಲಯದಲ್ಲಿದ್ದ 6 ತಿಂಗಳ ಆನೆ ಮರಿ ಅನಾರೋಗ್ಯದಿಂದ ಸಾವು Read More »

ಕರಾವಳಿ

ಕಾರ್ಕಳ: ಪೊಲೀಸರ ಅತಿಥಿಯಾದ ಗೋಕಳ್ಳರಿಗೆ ನೆರವಾಗುತ್ತಿದ್ದ ಅನಿಲ್ ಪ್ರಭು

(ನ್ಯೂಸ್ ಕಡಬ) newskadaba.com ಕಾರ್ಕಳ, ಡಿ.14: ಕಳವುಗೈದ ಹಸುಗಳನ್ನು ಕೊಂದು ಅದರ ಮಾಂಸ ಮಾರಾಟ ಮಾಡುತ್ತಿದ್ದ ಬಜರಂಗದಳ ಕಾರ್ಕಳ ನಗರ ಘಟಕದ ಮಾಜಿ ಸಂಚಾಲಕ, ತೆಳ್ಳಾರು ರಸಯ ನಿವಾಸಿ ಅನಿಲ್ ಪ್ರಭುನನ್ನು ಪೊಲೀಸರು ಬಂಧಿಸಿದ್ದಾರೆ.   ನವಂಬರ್ 6ರಂದು ಬಂಗ್ಲೆಗುಡ್ಡೆ ಜಂಕ್ಷನ್ ಬಳಿಯಲ್ಲಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದಾಗ, ಹೆಲ್ಮೆಟ್ ಇಲ್ಲದೇ ಸಂಚರಿಸುತ್ತಿದ್ದ ಹುಡ್ಕೋ ಕಾಲನಿಯ ಮುಹಮ್ಮದ್ ಯಾಸೀನ್ ಎಂಬಾತನನ್ನು ತಡೆದಿದ್ದರು. ಆದರೆ, ಅರ್ಧದಲ್ಲಿಯೇ ಪರಾರಿಯಾಗಿದ್ದ ಆತನ ವಾಹನ ಪರಿಶೀಲನೆ ನಡೆಸಿದ ಪೊಲೀಸರಿಗೆ ಪ್ಲಾಸ್ಟಿಕ್ ಚೀಲದೊಳಗೆ ದನದ

ಕಾರ್ಕಳ: ಪೊಲೀಸರ ಅತಿಥಿಯಾದ ಗೋಕಳ್ಳರಿಗೆ ನೆರವಾಗುತ್ತಿದ್ದ ಅನಿಲ್ ಪ್ರಭು Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ :ಟೆಂಪೋ ಟ್ರಾವೆಲರ್ ಗುದ್ದಿ ವಿದ್ಯುತ್ ಕಂಬ ತುಂಡು ➤ ಪಾನಮತ್ತ ಚಾಲಕ ಎಸ್ಕೇಪ್

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ.14 :ಕುಡಿದ ಮತ್ತಿನಲ್ಲಿ ಟೆಂಪೋ ಟ್ರಾವೆಲರ್ ಚಲಾಯಿಸಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಉಜಿರೆ- ಧರ್ಮಸ್ಥಳ ಮಧ್ಯೆ ಕನ್ಯಾಡಿ ಸಮೀಪದ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ವಿದ್ಯುತ್ ಕಂಬ ತುಂಡಾಗಿ ರಸ್ತೆ ಮಧ್ಯೆ ಬಿದ್ದು ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿದೆ.ಟೆಂಪೋ ಟ್ರಾವೆಲರ್ ನಲ್ಲಿದ್ದ ಚಾಲಕ ಹಾಗೂ ಆತನ ಸ್ನೇಹಿತ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತ ನಡೆಸಿ ಸ್ಥಳದಿಂದ ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕಾಗಮಿಸಿದ ಮೆಸ್ಕಾಂ ಸಿಬ್ಬಂದಿ, ರಸ್ತೆ

ಬೆಳ್ತಂಗಡಿ :ಟೆಂಪೋ ಟ್ರಾವೆಲರ್ ಗುದ್ದಿ ವಿದ್ಯುತ್ ಕಂಬ ತುಂಡು ➤ ಪಾನಮತ್ತ ಚಾಲಕ ಎಸ್ಕೇಪ್ Read More »

ಕರಾವಳಿ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 88ನೇ ಸರ್ವ ಧರ್ಮ ಸಮ್ಮೇಳನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ.14: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವ ಸಂಭ್ರಮ‌ ನಡೆಯುತ್ತಿದ್ದು, ಮೂರನೇ ದಿನದ ಅಂಗವಾಗಿ ಡಿ.13ರಂದು  88ನೇ ಸರ್ವ ಧರ್ಮ ಸಮ್ಮೇಳನ ಜರುಗಿತು. ವಸತಿ ಸಚಿವ ವಿ. ಸೋಮಣ್ಣ ಸಮ್ಮೇಳನ ಉದ್ಘಾಟಿಸಿ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ವಿಶ್ವದಲ್ಲೇ ಅತಿ ಶ್ರೇಷ್ಠ ಧಾರ್ಮಿಕ ಕೇಂದ್ರವಾಗಿದೆ. ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಎಲ್ಲರಿಗೂ ಆದರ್ಶಪ್ರಾಯರು. ಪ್ರಧಾನಿ ನರೇಂದ್ರ ಮೋದಿಯವರಿಗೂ ಡಾ.ಹೆಗ್ಗಡೆ ಯವರು ಅಚ್ಚುಮೆಚ್ಚಿನವರಾಗಿದ್ದಾರೆ.ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಗೆ ಭಾರತ ರತ್ನ ಪುರಸ್ಕಾರ ಸಿಗಬೇಕೆಂಬುದು ಕೋಟ್ಯಂತರ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 88ನೇ ಸರ್ವ ಧರ್ಮ ಸಮ್ಮೇಳನ Read More »

ಕರಾವಳಿ, ಕರ್ನಾಟಕ

ಹರಿಹರ ಪಲ್ಲತಡ್ಕದಲ್ಲಿ ಭೀಕರ ಶಬ್ದ ➤ ಬೆಚ್ಚಿ ಬಿದ್ದ ಸ್ಥಳೀಯರು

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ.14: ಡಿ.13 ರ ಕಳೆದ  ರಾತ್ರಿ ಸಮಯದಲ್ಲಿ ಹರಿಹರ ಪಲ್ಲತಡ್ಕದಲ್ಲಿ ಭೀಕರ ಶಬ್ದವೊಂದು ಕೇಳಿ ಬಂದಿದ್ದು ಜನರೆಲ್ಲ ಭಯಬೀತರಾಗಿ ಮನೆಯಿಂದ ಹೊರ ಓಡಿ ಬಂದಿದ್ದಾರೆ. ಇನ್ನು ಕೆಲವರು ಶಬ್ದದ ಮೂಲ ಹುಡುಕಲು ಮುಂದಾಗಿದ್ದಾರೆ. ರಾತ್ರಿ ಸುಮಾರು ಹತ್ತು ಗಂಟೆ ವೇಳೆಗೆ ಭೂಮಿ ಬಾಯಿ ಬಿಟ್ಟಂತೆ ಭಾರೀ ಶಬ್ದವೊಂದು ಕೇಳಿ, ಹರಿಹರ ಪಲ್ಲತಡ್ಕದ ಮಂದಿಯೆಲ್ಲ ಮನೆಯಿಂದ ಹೊರ ಬಂದಿದ್ದಾರೆ.ನೆಲ ಅದುರಿದಂತೆ ಭಾಸವಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.  

ಹರಿಹರ ಪಲ್ಲತಡ್ಕದಲ್ಲಿ ಭೀಕರ ಶಬ್ದ ➤ ಬೆಚ್ಚಿ ಬಿದ್ದ ಸ್ಥಳೀಯರು Read More »

ಕರಾವಳಿ

ಶ್ರೀ ಕ್ಷೇತ್ರ ಧರ್ಮಸ್ಥಳ ಕ್ಕೆ ವಸತಿ ಸಚಿವ ವಿ.ಸೋಮಣ್ಣ ಭೇಟಿ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಡಿ.13 :ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ವಸತಿ ಸಚಿವ ವಿ. ಸೋಮಣ್ಣ ಇಂದು ಭೇಟಿ ನೀಡಿ ದೇವರ ದರ್ಶನ ಪಡೆದರು. ಬಳಿಕ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.   ಧರ್ಮಸ್ಥಳದಲ್ಲಿ ನಡೆಯುತ್ತಿರುವ ಲಕ್ಷ ದೀಪೋತ್ಸವದ ಪ್ರಯುಕ್ತ ಇಂದು ಸಂಜೆ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯುವ ಸರ್ವಧರ್ಮ ಸಮ್ಮೇಳನದ ಉದ್ಘಾಟನೆಯನ್ನು ಸಚಿವರು ನೆರವೇರಿಸಲಿದ್ದಾರೆ.    

ಶ್ರೀ ಕ್ಷೇತ್ರ ಧರ್ಮಸ್ಥಳ ಕ್ಕೆ ವಸತಿ ಸಚಿವ ವಿ.ಸೋಮಣ್ಣ ಭೇಟಿ Read More »

ಕರಾವಳಿ

ಸಾಹಸಸಿಂಹ ವಿಷ್ಣುವರ್ಧನ್ ಬಗ್ಗೆ ಅವಹೇಳನ ➤ ಮಂಡಿಯೂರಿ, ಅತ್ತು ಕನ್ನಡಿಗರಲ್ಲಿ ಕ್ಷಮೆಯಾಚಿಸಿದ ತೆಲುಗು ನಟ ವಿಜಯ್ ರಂಗರಾಜು

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.13: ಸ್ಯಾಂಡಲ್​ವುಡ್​ ಕಂಡ ದಿಗ್ಗಜ ನಟ, ದಾದಾ, ಸಾಹಸಸಿಂಹ ವಿಷ್ಣುವರ್ಧನ್ ಅವರ ಬಗ್ಗೆ ಸಂದರ್ಶನವೊಂದರಲ್ಲಿ ಅವಹೇಳನಕಾರಿಯಾಗಿ ಮಾತನಾಡಿದ್ದ ತೆಲುಗು ನಟ ವಿಜಯ್ ರಂಗರಾಜು ಈಗ ಮಂಡಿಯೂರಿ, ಅತ್ತು ಕನ್ನಡಿಗರಲ್ಲಿ ಕ್ಷಮೆಯಾಚಿಸಿದ್ದಾರೆ. ನನ್ನದು ತಪ್ಪಾಯಿತು. ಬಾಯಿತಪ್ಪಿ ಆರೀತಿ ಮಾತನಾಡಿದ್ದೆ. ನನ್ನನ್ನು ಕ್ಷಮಿಸಿಬಿಡಿ ಎಂದು ಕೈ ಮುಗಿದು ಕನ್ನಡಿಗರಲ್ಲಿ ಕ್ಷಮೆ ಕೇಳಿದ್ದಾರೆ. ವಿಜಯ್ ರಂಗರಾಜು ವಿಷ್ಟುದಾದ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ಬೆನ್ನಲ್ಲೇ ಅವರ ವಿರುದ್ಧ ಇಡೀ ಸ್ಯಾಂಡಲ್​ವುಡ್ ತಿರುಗಿಬಿದ್ದಿತ್ತು. ಕನ್ನಡದ ಕಿರಿಯ ಸ್ಟಾರ್ ನಟರಿಂದ

ಸಾಹಸಸಿಂಹ ವಿಷ್ಣುವರ್ಧನ್ ಬಗ್ಗೆ ಅವಹೇಳನ ➤ ಮಂಡಿಯೂರಿ, ಅತ್ತು ಕನ್ನಡಿಗರಲ್ಲಿ ಕ್ಷಮೆಯಾಚಿಸಿದ ತೆಲುಗು ನಟ ವಿಜಯ್ ರಂಗರಾಜು Read More »

ಕರ್ನಾಟಕ

ಉಡುಪಿ: ವಿದ್ಯಾವಾಚಸ್ಪತಿ ಬನ್ನಂಜೆ ಗೋವಿಂದಾಚಾರ್ಯರು ನಿಧನ

(ನ್ಯೂಸ್ ಕಡಬ) newskadaba.com ಉಡುಪಿ, ಡಿ.13: ವಿದ್ಯಾವಾಚಸ್ಪತಿ ಬನ್ನಂಜೆ ಗೋವಿಂದಾಚಾರ್ಯರು ವಯೋಸಹಜ ಅನಾರೋಗ್ಯದಿಂದ (85) ನಿಧನರಾಗಿದ್ದಾರೆ. .ಪದ್ಮಶ್ರೀ ಪುರಸ್ಕೃತ ಬನ್ನಂಜೆ ಗೋವಿಂದಾಚಾರ್ಯರು ಉಡುಪಿಯ ಅಂಬಲಪಾಡಿ ನಿವಾಸದಲ್ಲಿಂದು ಕೊನೆಯುಸಿರೆಳೆದಿದ್ದಾರೆ. ಪ್ರವಚನಕಾರ, ಮಧ್ವ ಸಿದ್ಧಾಂತದ ಪ್ರತಿಪಾದಕ ಹಾಗೂ ಪತ್ರಕರ್ತರಾಗಿಯೂ ಗುರುತಿಸಿಕೊಂಡಿದ್ದ ಅವರು ನಟ ಡಾ.ವಿಷ್ಣುವರ್ಧನ್ ಗೆ ಆಧ್ಯಾತ್ಮಿಕ ಗುರುಗಳಾಗಿದ್ದರು. ಹಲವಾರು ಕೃತಿಗಳನ್ನು ಸಂಸ್ಕೃತದಿಂದ ಕನ್ನಡಕ್ಕೆ ಅನುವಾದಿಸಿದ್ದು, ಕನ್ನಡದ ಪ್ರಮುಖ ಮೂರು ಚಲನಚಿತ್ರಗಳಾದ ಮಧ್ವಾಚಾರ್ಯ, ಶಂಕರಾಚಾರ್ಯ, ರಾಮಾನುಜಾಚಾರ್ಯಕ್ಕೆ ಸಂಭಾಷಣೆಯನ್ನು ಬರೆದಿದ್ದರು.1936ರಲ್ಲಿ ಉಡುಪಿ ಜಿಲ್ಲೆಯ ಅಂಬಲಪಾಡಿಯಲ್ಲಿ ಜನಿಸಿದ್ದ ಗೋವಿಂದಾಚಾರ್ಯರು ಅಪಾರ ವಿದ್ವತ್ ಉಳ್ಳವರಾಗಿದ್ದರು.ಬನ್ನಂಜೆ

ಉಡುಪಿ: ವಿದ್ಯಾವಾಚಸ್ಪತಿ ಬನ್ನಂಜೆ ಗೋವಿಂದಾಚಾರ್ಯರು ನಿಧನ Read More »

ಕರಾವಳಿ, ಕರ್ನಾಟಕ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವ ಆರಂಭ ➤ ಡಿ.14ರಂದು ಶ್ರೀ ದೇವರ ಲಕ್ಷದೀಪೋತ್ಸವ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ.13: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಅಂಗವಾಗಿ ಡಿ.14ರಂದು ಶ್ರೀ ದೇವರ ಲಕ್ಷದೀಪೋತ್ಸವ ನೆರವೇರಲಿದೆ. ಇದಕ್ಕೆ ಸರ್ವ ಭಕ್ತರ ಸಹಕಾರ ಅಗತ್ಯ. ಲಕ್ಷ ದೀಪೋತ್ಸವದಂದು ಲಕ್ಷ ದೀಪಗಳು ಉರಿದು ಕ್ಷೇತ್ರವು ಹಣತೆ ಬೆಳಕಿನಿಂದ ಪ್ರಜ್ವಲಿಸಬೇಕು ಎಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಎಸ್‌.ಅಂಗಾರ ಹೇಳಿದರು. ಶ್ರೀ ದೇವಳದ ಆಡಳಿತ ಕಚೇರಿ ಮೇಲ್ಮಹಡಿಯಲ್ಲಿ ಶನಿವಾರ ನಡೆದ ಸಾರ್ವಜನಿಕರ ಮತ್ತು ವರ್ತಕರ ಸಭೆಯಲ್ಲಿಅಧ್ಯಕ್ಷತೆ ವಹಿಸಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವ ಆರಂಭ ➤ ಡಿ.14ರಂದು ಶ್ರೀ ದೇವರ ಲಕ್ಷದೀಪೋತ್ಸವ Read More »

ಕರಾವಳಿ
Scroll to Top