Mangalore

ಪಂಜಾಬ್ ಚುನಾವಣಾ ರಾಯಭಾರಿಯಾಗಿ ಸೋನು ಸೂದ್ ನೇಮಕ

(ನ್ಯೂಸ್ ಕಡಬ) newskadaba.com ನವದೆಹಲಿ  ನ. 18: ಕೊರೊನಾ ಲಾಕ್​ಡೌನ್​ ಘೋಷಣೆಯ ನಂತರ ಸಾವಿರಾರು ಬಡ ಜನರಿಗೆ, ವಿದ್ಯಾರ್ಥಿಗಳಿಗೆ ನೆರವಾಗಿರುವ ಬಹುಭಾಷಾ ನಟ ಸೋನು ಸೂದ್​ ಅವರನ್ನು ಚುನಾವಣಾ ಆಯೋಗ ಪಂಜಾಬ್ ರಾಜ್ಯದ ಚುನಾವಣಾ ರಾಯಭಾರಿಯಾಗಿ ನೇಮಕ ಮಾಡಿದೆ.   ಸೋನು ಸೂದ್​ ಲಾಕ್​ಡೌನ್ ಸಮಯದಲ್ಲಿ ನಾನಾ ಸ್ಥಳಗಳಲ್ಲಿ ಸಿಲುಕಿದ್ದ ವಲಸೆ ಕಾರ್ಮಿಕರಿಗೆ ತಮ್ಮ ತವರಿಗೆ ಮರಳಲು ಸಾರಿಗೆ ಸೌಲಭ್ಯಗಳನ್ನು ಒದಗಿಸಿದ್ದರು. ಕೃಷಿಕರಿಗೆ, ವಿದ್ಯಾರ್ಥಿಗಳಿಗೆ ಸಹಾಯ ಮಾಡುವ ಮೂಲಕ ಸಮಾಜದ ಎಲ್ಲಾ ವರ್ಗದವರು ಅವರ ಕಾರ್ಯವನ್ನು ಮೆಚ್ಚುಗೆ […]

ಪಂಜಾಬ್ ಚುನಾವಣಾ ರಾಯಭಾರಿಯಾಗಿ ಸೋನು ಸೂದ್ ನೇಮಕ Read More »

ರಾಷ್ಟ್ರೀಯ ನ್ಯೂಸ್

ಪುತ್ತೂರು: ಆಸ್ಮಿಕವಾಗಿ ಬಾವಿಗೆ ಬಿದ್ದ ವೃದ್ಧೆ ➤ ಅಗ್ನಿಶಾಮಕ ದಳದಿಂದ ರಕ್ಷಣೆ

(ನ್ಯೂಸ್ ಕಡಬ) newskadaba.com ಪುತ್ತೂರು, ನ. 18:  ಕಳೆದ ದಿನ ಆರ್ಯಾಪು ಮರಿಕೆಯಲ್ಲಿ ಆಕಸ್ಮಿಕವಾಗಿ ಬಾವಿಗೆ ಬಿದ್ದ ವೃದ್ಧೆಯೋರ್ವರನ್ನು ಪುತ್ತೂರು ಅಗ್ನಿ ಶಾಮಕ ದಳದವರು ರಕ್ಷಣೆ ಮಾಡಿದ ಘಟನೆ ನಡೆದಿದೆ.     ಬಾವಿಗೆ ಬಿದ್ದ ವೃದ್ಧೆಯನ್ನು ಆರ್ಯಾಪು ಮರಿಕೆ ನಿವಾಸಿ 90 ವರ್ಷ ಪ್ರಾಯದ ಸರಸ್ವತಿ ಎಂದು ಗುರುತಿಸಲಾಗಿದೆ. ಇವರು ಮನೆಯಲ್ಲಿ ಒಬ್ಬಂಟಿಯಾಗಿ ವಾಸಿಸುತ್ತಿದ್ದು, ನೀರು ತರಲೆಂದು ಹೋದವರು ಆಕಸ್ಮಿಕವಾಗಿ ಬಾವಿಗೆ ಬಿದ್ದಿದ್ದಾರೆ. ವಿಷಯ ಕೇಳಿದ ಕೂಡಲೇ ಪಕ್ಕದ ಮನೆಯವರು ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಿದ್ದಾರೆ.

ಪುತ್ತೂರು: ಆಸ್ಮಿಕವಾಗಿ ಬಾವಿಗೆ ಬಿದ್ದ ವೃದ್ಧೆ ➤ ಅಗ್ನಿಶಾಮಕ ದಳದಿಂದ ರಕ್ಷಣೆ Read More »

ಕರಾವಳಿ

ಕಾಪು: ಆಕಸ್ಮಿಕವಾಗಿ ರೈಲಿನಿಂದ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಕಾಪು, ನ. 18:  ರೈಲಿನಿಂದ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆ ಕಾಪುವಿನ ಇನ್ನಂಜೆ ಬಳಿ ನಡೆದಿದೆ.     ಮೃತ ದುರ್ದೈವಿಯನ್ನು ಇಮ್ರಾನ್‌ ಎಂದು ಗುರುತಿಸಲಾಗಿದೆ. ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಇಮ್ರಾನ್ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದಾರೆ. ಪರಿಣಾಮ ಗಂಭೀರ ಗಾಯಗೊಂಡಿದ್ದ ಅವರನ್ನು ತಕ್ಷಣವೇ ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಸಾವನ್ನಪ್ಪಿದ್ದಾರೆ. ಈ ಸಂಬಂಧ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.        

ಕಾಪು: ಆಕಸ್ಮಿಕವಾಗಿ ರೈಲಿನಿಂದ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ

ಕರ್ನಾಟಕಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಕಡ್ಡಾಯ ಕ್ವಾರಂಟೈನ್ ಇಲ್ಲ

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 18: ಕರ್ನಾಟಕಕ್ಕೆ ಆಗಮಿಸುವ ಅಂತರಾಷ್ಟ್ರೀಯ ಪ್ರಯಾಣಿಕರು ಕಡ್ಡಾಯವಾಗಿ 14 ದಿನ ಕ್ವಾರಂಟೈನ್ ಆಗಬೇಕಿಲ್ಲ. ಕೋವಿಡ್ ನೆಗೆಟಿವ್ ವರದಿ ನೀಡಿದರೆ ಕ್ವಾರಂಟೈನ್‌ನಿಂದ ವಿನಾಯಿತಿ ಸಿಗಲಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಗಸ್ಟ್ 7ರಂದು ಹೊರಡಿಸಿದ್ದ ಮಾರ್ಗಸೂಚಿಯಲ್ಲಿ ಕೆಲವೊಂದು ಬದಲಾವಣೆಗಳನ್ನು ಮಾಡಿ ಆದೇಶ ಹೊರಡಿಸಿದೆ.   2ಕಡ್ಡಾಯ ಕ್ವಾರಂಟೈನ್‌ನಿಂದ ವಿನಾಯಿತಿ ನೀಡಲಾಗಿದೆ. ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರು 72 ಗಂಟೆಗಳ ಮೊದಲು ಮಾಡಿಸಿದ ಕೋವಿಡ್ ಪರೀಕ್ಷೆಯ ನೆಗೆಟಿವ್ ವರದಿ ತೋರಿಸಿದರೆ ಕಡ್ಡಾಯ ಕ್ವಾರಂಟೈನ್‌ನಿಂದ ವಿನಾಯಿತಿ

ಕರ್ನಾಟಕಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಕಡ್ಡಾಯ ಕ್ವಾರಂಟೈನ್ ಇಲ್ಲ Read More »

ಕರ್ನಾಟಕ

ಉಡುಪಿ :ಆಕಸ್ಮಿಕವಾಗಿ ಕೆರೆಗೆ ಬಿದ್ದು ಯಕ್ಷಗಾನ ಕಲಾವಿದ ಮೃತ್ಯು

(ನ್ಯೂಸ್ ಕಡಬ) newskadaba.com ಉಡುಪಿ ನ. 18: ಉಡುಪಿಯ ಅಮಾಸೆಬೈಲು ಗ್ರಾಮದ ಕೆಲ ಸುಗ್ಗಿಗದ್ದೆ ಸುದೀಪ ಶೆಟ್ಟಿ(24) ಅವರು ಮನೆಯ ಪಕ್ಕದ ಕೆರೆಗೆ ಆಕಸ್ಮಿಕವಾಗಿ ಬಿದ್ದು ಸಾವನ್ನಪಿದ್ದ ಘಟನೆ ನಡೆದಿದೆ.     ಯಕ್ಷಗಾನ ಕಲಾವಿದರಾಗಿದ್ದ ಸುದೀಪ ಶೆಟ್ಟಿ ಎರಡು ವರುಷದ ಹಿಂದೆ ರಸ್ತೆ  ಅಪಘಾತಕ್ಕೊಳಗಾಗಿ ಆಗಾಗ್ಗೆ ತಲೆಸುತ್ತು ಬಂದು ಬೀಳುತ್ತಿದ್ದರು. ಮನೆಯಿಂದ ಹೊರಗೆ ಹೋದವರು ಮರಳಿ ಬಾರದೆ ಇದ್ದಾಗ ಮನೆಯವರು ಹುಡುಕಾಡಿದ್ದಾರೆ. ಈ ವೇಳೆ ಸುದೀಪ ಶೆಟ್ಟಿ ಅವರ ಮೃತದೇಹ ಸಮೀಪದ ನೀರಿನ ತೋಡಿನಲ್ಲಿ ಪತ್ತೆಯಾಗಿದೆ. ಮೇಗರವಳ್ಳಿ,

ಉಡುಪಿ :ಆಕಸ್ಮಿಕವಾಗಿ ಕೆರೆಗೆ ಬಿದ್ದು ಯಕ್ಷಗಾನ ಕಲಾವಿದ ಮೃತ್ಯು Read More »

ಕರಾವಳಿ

ಮಂಗಳೂರು :ಲಾಕ್ ಡೌನ್ ನಂತರ ಕಾಲೇಜು ಆರಂಭ ➤ ಹೆಚ್ಚಿನ ವಿದ್ಯಾರ್ಥಿಗಳು ಗೈರು

(ನ್ಯೂಸ್ ಕಡಬ) newskadaba.com ಮಂಗಳೂರು ನ. 17: ಮಂಗಳೂರು ವಿವಿ ವ್ಯಾಪ್ತಿಯ ಎಲ್ಲ ಕಾಲೇಜುಗಳು ಇಂದು ಆರಂಭಗೊಂಡಿದೆ. ಕೊರೊನಾ ಲಾಕ್ ಡೌನ್ ನ 8 ತಿಂಗಳ ನಂತರ ಕಾಲೇಜು ಬಾಗಿಲು ತೆರೆದಿದ್ದು, ವಿದ್ಯಾರ್ಥಿಗಳು ಕೋವಿಡ್ ಪ್ರಮಾಣ ಪತ್ರ ಹಾಗೂ ಪೋಷಕರ ಮುಚ್ಚಳಿಕೆ ಪತ್ರದ ಜೊತೆಗೆ ಆಗಮಿಸಿದ್ದಾರೆ. ಇನ್ನೂ ಹಲವು ವಿದ್ಯಾರ್ಥಿಗಳಿಗೆ ಕೋವಿಡ್ ಪ್ರಮಾಣ ಪತ್ರ ಸಿಗದ ಹಿನ್ನೆಲೆಯಲ್ಲಿ ತರಗತಿಗೆ ಹಾಜರಾಗಲು ಸಾಧ್ಯವಾಗಿಲ್ಲ. ನೆಗೆಟಿವ್ ವರದಿ ಜೊತೆ ಹಾಜರಾದ ವಿದ್ಯಾರ್ಥಿಗಳು ಸಾಮಾಜಿಕ ಅಂತರ ಕಾಯ್ದುಕೊಂಡು, ಮಾಸ್ಕ್ ಧರಿಸಿ ತರಗತಿಗೆ ಹಾಜರಾಗಿದ್ದಾರೆ.

ಮಂಗಳೂರು :ಲಾಕ್ ಡೌನ್ ನಂತರ ಕಾಲೇಜು ಆರಂಭ ➤ ಹೆಚ್ಚಿನ ವಿದ್ಯಾರ್ಥಿಗಳು ಗೈರು Read More »

ಕರಾವಳಿ

ಮುಲ್ಕಿಯಲ್ಲಿ ಶೆಡ್ ಗೆ ಸಿಡಿಲು ಬಡಿದು ಹಾನಿ ➤ ಲಕ್ಷಾಂತರ ರೂ. ನಷ್ಟ

(ನ್ಯೂಸ್ ಕಡಬ) newskadaba.com ಮುಲ್ಕಿ ನ. 17 :ಮುಲ್ಕಿ ಹೋಬಳಿಯಲ್ಲಿ ಸೋಮವಾರ ರಾತ್ರಿ ಸುರಿದ ಭಾರಿ ಗಾಳಿ, ಮಳೆಯಿಂದಾಗಿ ಅಪಾರ ಹಾನಿ ಸಂಭವಿಸಿದ್ದು ವಿದ್ಯುತ್ ವ್ಯವಸ್ಥೆ ಅಸ್ತವ್ಯಸ್ತಗೊಂಡಿದೆ. ಮುಲ್ಕಿ ಹೋಬಳಿಯ ಕಿನ್ನಿಗೋಳಿ-ಹಳೆಯಂಗಡಿ ಪಕ್ಷಿಕೆರೆ ಕಟೀಲು ಪರಿಸರದಲ್ಲಿ ಭಾರಿ ಮಳೆಯಾಗಿದೆ. ಬಿರು ಮಳೆ, ಸಿಡಿಲಿಗೆ ಸೋಮವಾರ ರಾತ್ರಿ 11.30ಕ್ಕೆ ಕಿನ್ನಿಗೋಳಿ ಬಳಿಯ ಮೂರುಕಾವೇರಿ ಜಂಕ್ಷನ್ ಸಮೀಪ ಲಿಯೋ ಮಾರ್ಸೆಲ್ ಪಿಂಟೋ ಎಂಬವರ ಮನೆ ಬಳಿಯ ಶೆಡ್ ಗೆ ಆಕಸ್ಮಿಕ ಬೆಂಕಿ ತಗುಲಿ ಒಳಗಿದ್ದ ಬೈಹುಲ್ಲು, ಮರಮಟ್ಟು, ತೆಂಗಿನಕಾಯಿ, ಸಿಂಟೆಕ್ಸ್ ಟ್ಯಾಂಕ್

ಮುಲ್ಕಿಯಲ್ಲಿ ಶೆಡ್ ಗೆ ಸಿಡಿಲು ಬಡಿದು ಹಾನಿ ➤ ಲಕ್ಷಾಂತರ ರೂ. ನಷ್ಟ Read More »

ಕರಾವಳಿ

ಆ್ಯಂಕರ್ ಅನುಶ್ರೀ ವಿಚಾರಣೆ ನಡೆಸಿದ್ದ ಸಿಸಿಬಿ ಇನ್ಸ್‍ಪೆಕ್ಟರ್ ವರ್ಗಾವಣೆ

(ನ್ಯೂಸ್ ಕಡಬ) newskadaba.com ಮಂಗಳೂರು ನ. 17: ಮಾದಕ ದ್ರವ್ಯ ಜಾಳದ ನಂಟಿನ ಆರೋಪದ ಹಿನ್ನಲೆಯಲ್ಲಿ ಖ್ಯಾತ ಆ್ಯಂಕರ್ ಅನುಶ್ರೀ ವಿಚಾರಣೆ ನಡೆಸಿದ್ದ ಸಿಸಿಬಿ ಇನ್ಸ್‍ಪೆಕ್ಟರ್ ಶಿವಪ್ರಕಾಶ್ ಅವರನ್ನು ವರ್ಗಾವಣೆ ಮಾಡಲಾಗಿದೆ.   ಈ ಹಿಂದೆ ಅವರನನ್ನು ವರ್ಗಾವಣೆ ಮಾಡಿದ್ದಾಗ ವಿವಾದ ಸೃಷ್ಟಿಯಾಗಿತ್ತು. ಬಳಿಕ ಅದನ್ನು ರದ್ದು ಪಡಿಸಲಾಗಿತ್ತು. ಕಾಪು ಠಾಣೆಯ ಇನ್ಸ್‍ಪೆಕ್ಟರ್ ಮಹೇಶ್ ಪ್ರಸಾದ್ ಅವರನ್ನು ಸಿಸಿಬಿಯ ನೂತನ ಇನ್ಸ್‍ಪೆಕ್ಟರ್ ಆಗಿ ನಿಯೋಜಿಸಲಾಗಿದೆ. ಸಿಸಿಬಿ ಇನ್ಸ್‍ಪೆಕ್ಟರ್ ಕಬ್ಬಾಳ ರಾಜ್ ರವರನ್ನು ಚಿಕ್ಕಮಗಳೂರಿಗೆ ವರ್ಗಾವಣೆ ಮಾಡಲಾಘಿದೆ ಎಂದು ಮೂಲಗಳು

ಆ್ಯಂಕರ್ ಅನುಶ್ರೀ ವಿಚಾರಣೆ ನಡೆಸಿದ್ದ ಸಿಸಿಬಿ ಇನ್ಸ್‍ಪೆಕ್ಟರ್ ವರ್ಗಾವಣೆ Read More »

ಕರಾವಳಿ

ಮಂಗಳೂರು: ಬಿ.ಸಿ.ಶ್ರಾವ್ಯಾ ಅವರು ‘ಅರಳು ಮಲ್ಲಿಗೆ’ ರಾಜ್ಯ ಪ್ರಶಸ್ತಿಗೆ ಆಯ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 17:  ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆಯಂಡ್ ಇಂಜಿನಿಯರಿಂಗ್ (ಮೈಟ್) ಮೂಡುಬಿದಿರೆಯ ಮಂಗಳೂರು ಕಾಲೇಜಿನ ಅಂತಿಮ ವರ್ಷದ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ಬಿ.ಸಿ.ಶ್ರಾವ್ಯಾ ಅವರು ‘ಅರಳು ಮಲ್ಲಿಗೆ’ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.     ಇದನ್ನು ಜ್ಞಾನ ಮಂದಾರ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಅಕಾಡಮಿ, ಬೆಂಗಳೂರು ಇವರು ಭರತನಾಟ್ಯ, ಜಾನಪದ ನೃತ್ಯ, ಸಂಗೀತ, ಯಕ್ಷಗಾನ ಮತ್ತು ವಿವಿಧ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ನೀಡಲಾಗುತ್ತದೆ

ಮಂಗಳೂರು: ಬಿ.ಸಿ.ಶ್ರಾವ್ಯಾ ಅವರು ‘ಅರಳು ಮಲ್ಲಿಗೆ’ ರಾಜ್ಯ ಪ್ರಶಸ್ತಿಗೆ ಆಯ್ಕೆ Read More »

ಕರಾವಳಿ, ಕರ್ನಾಟಕ

ಕಾಸರಗೋಡು: ನೀರುಪಾಲಾಗಿದ್ದ ವಿದ್ಯಾರ್ಥಿಯ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ನ. 17:  ಮೂವರು ಸಹಪಾಠಿಗಳ ಜೊತೆ ಸ್ನಾನಕ್ಕಿಳಿದ ಸಂದರ್ಭದಲ್ಲಿ ನೀರುಪಾಲಾಗಿದ್ದ ವಿದ್ಯಾರ್ಥಿಯ ಮೃತದೇಹ ಇಂದು ಪತ್ತೆಯಾಗಿದೆ. ಮೃತಪಟ್ಟ ಬಾಲಕನನ್ನು ಚೆಮ್ನಾಡ್ ಕೊಂಬನಡ್ಕದ ಮಿಸ್ಭಾಹ್ (15) ಎಂದು ಗುರುತಿಸಲಾಗಿದೆ.     ಮಿಸ್ಭಾಹ್ ಚೆಮ್ನಾಡ್ ಜಮಾ ಅತ್ ಹಯರ್ ಸೆಕಂಡರಿ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿಯಾಗಿದ್ದು, ಮೂವರು ಸ್ನೇಹಿತರ ಜೊತೆ ಚಂದ್ರಗಿರಿ ಹೊಳೆಯಲ್ಲಿ ಸ್ನಾನಕ್ಕಿಳಿದ ಸಂದರ್ಭದಲ್ಲಿ ನೀರುಪಾಲಾಗಿದ್ದನು. ಸ್ಥಳೀಯರು, ಅಗ್ನಿಶಾಮಕ ದಳದ ಸಿಬಂದಿಗಳು ಶೋಧ ಕಾರ್ಯಚರಣೆ ನಡೆಸಿದರೂ ಪತ್ತೆಹಚ್ಚಲಾಗಲಿಲ್ಲ. ಬಳಿಕ ಇಂದು ಸ್ಥಳೀಯರು

ಕಾಸರಗೋಡು: ನೀರುಪಾಲಾಗಿದ್ದ ವಿದ್ಯಾರ್ಥಿಯ ಮೃತದೇಹ ಪತ್ತೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top