Mangalore

ಪುತ್ತೂರು: ಯುವಕನೋರ್ವ ಹೊಳೆಗೆ ಹಾರಿ ಆತ್ಮಹತ್ಯೆ ಶಂಕೆ ಮುಂದುವರಿದ ತನಿಖೆ

(ನ್ಯೂಸ್ ಕಡಬ)newskadaba.com ಪುತ್ತೂರು, ಜು.20. ಯುವಕನೋರ್ವ ಹೊಳೆಗೆ ಹಾರಿ ಆತ್ಮಹತ್ಯೆ  ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಈ ಘಟನೆ ಸರ್ವೆಯ ತುಂಬಿ ಹರಿಯುವ ಗೌರಿ ಹೊಳೆ ಬಳಿ ನಡೆದಿದೆ ಎನ್ನಲಾಗಿದೆ. ಯುವಕನನ್ನು ಮಹೀಂದ್ರ ಶೋರೂಂ ಉದ್ಯೋಗಿ ಸನ್ಮಿತ್ (21) ಎಂದು ತಿಳಿದುಬಂದಿದೆ. ಈತನ ಸ್ಕೂಟರ್  ಹೊಳೆಯ ಬದಿಯಿಂದ 150 ಮೀ ದೂರದಲ್ಲಿ ನಿಲ್ಲಿಸಿದ್ದ ಎನ್ನಲಾಗಿದೆ. ಅಗ್ನಿ ಶಾಮಕ ದಳದವರು ಸ್ಥಳಕ್ಕೆ ಧಾವಿಸಿದ್ದು, ಹೊಳೆಯಲ್ಲಿ ಸನ್ಮಿತ್‌ ಮೃತದೇಹಕ್ಕಾಗಿ ಹುಡುಕಾಟ ಆರಂಭಿಸಿದ್ದಾರೆ. ಸನ್ಮಿತ್‌ ನಿಜವಾಗಿಯೂ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆಯೇ ಎನ್ನುವ […]

ಪುತ್ತೂರು: ಯುವಕನೋರ್ವ ಹೊಳೆಗೆ ಹಾರಿ ಆತ್ಮಹತ್ಯೆ ಶಂಕೆ ಮುಂದುವರಿದ ತನಿಖೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಮೂವರು ಮನೆಗಳ್ಳರ ಬಂಧನ 4.64 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.20. ಮನೆಗಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿರುವ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ. ಆರೋಪಿಗಳನ್ನು ವೆಂಕಟೇಶ್ ಅಲಿಯಾಸ್ ವೆಂಕಿ(21), ಸಾಗರ್ (21), ರಂಜಿತ್(20) ಎಂದು ಗುರುತಿಸಲಾಗಿದೆ. ಉರ್ವ ಠಾಣಾ ವ್ಯಾಪ್ತಿಯ ಕೋಡಿಕಲ್ ವಿವೇಕಾನಂದ ನಗರ ಎಂಬಲ್ಲಿ ಮನೆಗೆ ನುಗ್ಗಿ ಕಳ್ಳರು 80 ಗ್ರಾಂನಷ್ಟು ಚಿನ್ನಾಭರಣ ಕಳವು ಮಾಡಿದ್ದು, ಸದ್ಯ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ಕಳವುಗೈದ ಸುಮಾರು 4,64,750 ರೂ. ಮೌಲ್ಯದ ಚಿನ್ನಾಭರಣಗಳನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಅಲ್ಲದೆ ಕೃತ್ಯಕ್ಕೆ ಬಳಸಿದ

ಮಂಗಳೂರು: ಮೂವರು ಮನೆಗಳ್ಳರ ಬಂಧನ 4.64 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಮಹಾನಗರ ಪಾಲಿಕೆ ಆಯುಕ್ತನ ಮನೆ ಮೇಲೆ ಲೋಕಾಯುಕ್ತ ದಾಳಿ…!

(ನ್ಯೂಸ್ ಕಡಬ) newskadaba.com ಮಂಗಳೂರು, ಜು.20. ಮಹಾನಗರ ಪಾಲಿಕೆ ಆಯುಕ್ತರ ಮನೆ ಮೇಲೆ ಇಂದು ಲೋಕಾಯುಕ್ತ ದಾಳಿ ನಡೆಸಿದ್ದು, ಅಧಿಕಾರಿಗಳಿಗೆ ಶಾಕ್ ನೀಡಿದೆ. ಪಾಲಿಕೆ ಆಯುಕ್ತ ಕೆಎ ಎಸ್ ಗ್ರೇಡ್ ಅಧಿಕಾರಿ ಆನಂದ್ ರವರ ನಿವಾಸದ ಮೇಲೆ ದಾಳಿ ನಡೆಸಿದ್ದು, ಕಮಿಷನರ್ ಕಚೇರಿ ಹಾಗೂ ಮನೆಗೂ ದಾಳಿ ನಡೆಸಿದ್ದಾರೆ ಎಂದು ವರದಿ ತಿಳಿಸಿದೆ. 52 ಕಡೆಗಳಲ್ಲಿ ಏಕಕಾಲಕ್ಕೆ ನೂರಕ್ಕೂ ಅಧಿಕ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದೆ ಎನ್ನಲಾಗಿದೆ.  

ಮಂಗಳೂರು: ಮಹಾನಗರ ಪಾಲಿಕೆ ಆಯುಕ್ತನ ಮನೆ ಮೇಲೆ ಲೋಕಾಯುಕ್ತ ದಾಳಿ…! Read More »

ಕರಾವಳಿ

ಮಂಗಳೂರು: ಗಾಂಜಾ ಸೇವನೆ…! ಆರೋಪಿಗಳು ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.20. ಗಾಂಜಾ ಸೇವನೆ ಮಾಡುತ್ತಿದ್ದ ಮೂವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ. ಆರೋಪಿಗಳನ್ನು ಮಂಗಳೂರು ಬಲ್ಮಠದ ಆರ್ಯ ಸಮಾಜ ರಸ್ತೆ, ಸನ್ಯಾಸಿಗುಡ್ಡೆಯ ನಿವಾಸಿ ನೌಫಾಲ್ (38), ಕುಪ್ಪೆಪದವಿನ ಕಿಲೆಂಜಾರು ಗ್ರಾಮದ ನಿವಾಸಿ ಹಂಝು(59) ಹಾಗೂ ಬಂಡಿಹೊಳೆ ಗ್ರಾಮದ ನಿವಾಸಿ ಸುದಾರ್ಶನ್ (25) ಎಂದು ಗುರುತಿಸಲಾಗಿದೆ. ಬಜಪೆ ಪೊಲೀಸ್ ನಿರೀಕ್ಷಕರಾದ ಸಂದೀಪ್ ಜಿ.ಎಸ್ ಅವರ ತಂಡ ಆರೋಪಿಗಳನ್ನು ಪತ್ತೆಹಚ್ಚಿದ್ದು, ಆರೋಪಿಗಳ ವಿರುದ್ದ ಕಾನೂನು ಕ್ರಮವನ್ನು ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಮಂಗಳೂರು: ಗಾಂಜಾ ಸೇವನೆ…! ಆರೋಪಿಗಳು ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಕಾರು ಅಪಾಯದಿಂದ ಪಾರು….!

(ನ್ಯೂಸ್ ಕಡಬ)Newskadaba.com ಮಂಗಳೂರು, ಜು.20. ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ. ನಿಯಂತ್ರಣ ತಪ್ಪಿ ಸ್ಕಿಡ್ಡಾಗಿ ರಸ್ತೆ ವಿಭಜಕದ ಮಧ್ಯೆ ಬಿದ್ದಿದ್ದು, ಕಾರು ಚಲಾಯಿಸುತ್ತಿದ್ದ ವ್ಯಕ್ಕಿ ಮತ್ತು ಆತನ ಪುತ್ರಿಗೆ ಸಣ್ಣ ಪ್ರಮಾಣದ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಕಾರು ಅಪಾಯದಿಂದ ಪಾರು….! Read More »

ಕರಾವಳಿ

‘ದೆಹಲಿ ಚಲೋ’: ಇಂಟರ್​​ನೆಟ್​ ಸ್ಥಗಿತ, 15 ಜಿಲ್ಲೆಗಳಲ್ಲಿ 144 ಸೆಕ್ಷನ್ ಜಾರಿ

(ನ್ಯೂಸ್ ಕಡಬ) newskadaba.com ದೆಹಲಿ ಫೆ. 24: ಎರಡು ದಿನಗಳಿಂದ ತಣ್ಣಗಾಗಿದ್ದ ದೆಹಲಿ ಚಲೋ ಇಂದಿನಿಂದ ಮತ್ತೆ ವೇಗ ಪಡೆದುಕೊಳ್ಳಲಿದೆ. ಅನ್ನದಾತರ ಆಕ್ರೋಶದ ಕಿಡಿ, ಜ್ವಾಲೆಯಾಗಿ ರಾಷ್ಟ್ರ ರಾಜಧಾನಿಗೆ ಸಂಕಷ್ಟ ಉಂಟುಮಾಡದಂತೆ ಪೊಲೀಸರು ಅಲರ್ಟ್​ ಆಗಿದ್ದಾರೆ.. ಈ ಮಧ್ಯೆ ಹರಿಯಾಣದಲ್ಲಿ ನಡೆದ ಸಂಘರ್ಷ ಪ್ರತಿಭಟನೆಯ ಸ್ವರೂಪವನ್ನೇ ಬದಲಿಸಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅನ್ನದಾತರು ಹೊತ್ತಿಸಿದ್ದ ಪ್ರತಿಭಟನೆ ಆಕ್ರೋಶ ತೀವ್ರ ಸ್ವರೂಪ ಪಡೆದುಕೊಳ್ತಿದೆ. ಕಳೆದ ಫೆಬ್ರವರಿ 21 ರಂದು ನಡೆದ ಸಂಘರ್ಷದಲ್ಲಿ ಯುವ ರೈತ ಸಾವನ್ನಪ್ಪಿದ ಘಟನೆಯೂ ನಡೆದು

‘ದೆಹಲಿ ಚಲೋ’: ಇಂಟರ್​​ನೆಟ್​ ಸ್ಥಗಿತ, 15 ಜಿಲ್ಲೆಗಳಲ್ಲಿ 144 ಸೆಕ್ಷನ್ ಜಾರಿ Read More »

ರಾಷ್ಟ್ರೀಯ ನ್ಯೂಸ್

ಹಲ್ಲಿನ ಚಿಕಿತ್ಸೆಗೆಂದು ಬಂದ ಮಹಿಳೆಯ ತುಟಿಯನ್ನೇ ಕತ್ತರಿಸಿದ ವೈದ್ಯ

(ನ್ಯೂಸ್ ಕಡಬ) newskadaba.com ಹೈದರಾಬಾದ್‌ ಫೆ. 23: ಕೆಲ ದಿನಗಳ ಹಿಂದೆಯಷ್ಟೇ ಜುಬಿಲಿ ಹಿಲ್ಸ್‌ನಲ್ಲಿರುವ ಎಫ್‌ಎಂಎಸ್ ಇಂಟರ್ನ್ಯಾಷನಲ್ ಡೆಂಟಲ್ ಕ್ಲಿನಿಕ್‌ನಲ್ಲಿ ಸ್ಮೈಲ್ ಡಿಸೈನಿಂಗ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ವ್ಯಕ್ತಿಯೊರ್ವನಿಗೆ ಶಸ್ತ್ರಚಿಕಿತ್ಸೆಯ ಸಂದರ್ಭದಲ್ಲಿ ನೀಡಲಾಗಿದ್ದ ಅನಸ್ತೇಶಿಯ ಒವರ್​​ ಡೋಸ್​​ನಿಂದಾಗಿ ಸಾವನ್ನಪ್ಪಿರುವ ಸುದ್ದಿ ಎಲ್ಲೆಡೆ ವೈರಲ್​​ ಆಗಿತ್ತು. ಇದೀಗಾ ಇದಕ್ಕೆ ಪೂರಕ ಎಂಬಂತೆ ಇದೇ ಡೆಂಟಲ್​​​ ಆಸ್ಪತ್ರೆಯಲ್ಲಿ ನಡೆದಿದ್ದ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. ಇಲ್ಲಿನ ವೈದ್ಯರೊಬ್ಬರು ಹಲ್ಲಿನ ಚಿಕಿತ್ಸೆಗೆಂದು ಬಂದ ಮಹಿಳೆಯ ತುಟಿಯನ್ನೇ ಕತ್ತರಿಸಿ ಕಳುಹಿಸಿದ್ದಾರೆ. ಸದ್ಯ ಈ ಸುದ್ದಿ

ಹಲ್ಲಿನ ಚಿಕಿತ್ಸೆಗೆಂದು ಬಂದ ಮಹಿಳೆಯ ತುಟಿಯನ್ನೇ ಕತ್ತರಿಸಿದ ವೈದ್ಯ Read More »

ರಾಷ್ಟ್ರೀಯ ನ್ಯೂಸ್

25ನೇ ವಯಸ್ಸಿನಲ್ಲಿ ನ್ಯಾಯಾಧೀಶರಾದ ಬಂಟ್ವಾಳದ ಅನಿಲ್ ಜಾನ್ ಸಿಕ್ವೇರಾ

(ನ್ಯೂಸ್ ಕಡಬ) newskadaba.com ಬಂಟ್ವಾಳ ಫೆ. 23: ಬಂಟ್ವಾಳ ತಾಲೂಕಿನ ಬೋರಿಮಾ‌ರ್ ಮೂಲದ ಅನಿಲ್‌ ಜಾನ್ ಸಿಕ್ವೇರಾ ರವರು 2023 ರ ಕರ್ನಾಟಕ ಸಿವಿಲ್ ನ್ಯಾಯಾಧೀಶರ ಪರೀಕ್ಷೆಯಲ್ಲಿ ಯಶಸ್ಸನ್ನು ಗಳಿಸಿದ್ದಾರೆ, ಪ್ರಿಲಿಮ್ಸ್, ಮೇನ್ಸ್ ಮತ್ತು ಸಂದರ್ಶನದಲ್ಲಿ 25 ನೇ ವಯಸ್ಸಿನಲ್ಲಿ ಉತ್ತೀರ್ಣರಾಗಿದ್ದಾರೆ. ಇದು ಅವರನ್ನು ಕಿರಿಯ ಸಿವಿಲ್ ನ್ಯಾಯಾಧೀಶರನ್ನಾಗಿ ಮಾಡಿದೆ.ಇವರ ತಂದೆ ಎವರೆಸ್ಟ್ ಸಿಕ್ವೇರಾ ಮತ್ತು ತಾಯಿ ಐವಿ ಸಿಕ್ಕ್ವೇರಾ ಬಂಟ್ವಾಳ ತಾಲೂಕಿನ ಬರಿಮಾರು ಎಂಬಲ್ಲಿ ವಾಸಿಸುತ್ತಿದ್ದು ಕೃಷಿಯನ್ನು ತಮ್ಮ ಜೀವನಕ್ಕೆ ಆಧಾರವಾಗಿ ಇದ್ದ ಇವರು ಇವರ

25ನೇ ವಯಸ್ಸಿನಲ್ಲಿ ನ್ಯಾಯಾಧೀಶರಾದ ಬಂಟ್ವಾಳದ ಅನಿಲ್ ಜಾನ್ ಸಿಕ್ವೇರಾ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ದುಬೈ: ರಸ್ತೆ ಅಪಘಾತ- ಮಂಗಳೂರಿನ ಯುವತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಉಳ್ಳಾಲ, ಫೆ. 23. ದುಬೈಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮಂಗಳೂರಿನ ಯುವತಿ ಮೃತಪಟ್ಟ ಘಟನೆ ನಡೆದಿದೆ. ಮೃತ ಯುವತಿಯನ್ನು ಕೋಟೆಕಾರು ಬೀರಿ ಕೆಂಪುಮಣ್ಣು ನಿವಾಸಿ ವಿದಿಶಾ (28) ಎಂದು ಗುರುತಿಸಲಾಗಿದೆ. ಮಂಗಳೂರು ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷೆ ರಾಜೀವಿ ಕೆಂಪುಮಣ್ಣು ಮತ್ತು ವಿಠಲ್ ಕುಲಾಲ್ ಕೆಂಪುಮಣ್ಣು ಅವರ ಏಕೈಕ ಪುತ್ರಿ ವಿದಿಶಾ ಸಹ್ಯಾದ್ರಿ ಕಾಲೇಜಿನಲ್ಲಿ ವ್ಯವಹಾರ ಆಡಳಿತ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದು ಒಂದು ವರ್ಷ ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಕಾರ್ಯ ನಿರ್ವಹಿಸಿದ್ದರು.

ದುಬೈ: ರಸ್ತೆ ಅಪಘಾತ- ಮಂಗಳೂರಿನ ಯುವತಿ ಮೃತ್ಯು..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಂಬಳವನ್ನು ರಾಜ್ಯಕ್ರೀಡೆಯಾಗಿ ಘೋಷಿಸಲು ಮಂಜುನಾಥ ಭಂಡಾರಿ ಆಗ್ರಹ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 21. ಮಂಗಳೂರಿನಲ್ಲಿ ಜಿಲ್ಲಾಧಿಕಾರಿಗಳು, ಕಂಬಳ ಸಮಿತಿಯ ಸದಸ್ಯರು ಹಾಗೂ ಕಂಬಳ ಆಯೋಜಕರ ಸಭೆ ನಡೆಸಿ ಕಂಬಳ ಸಮಿತಿ ರಚಿಸುವಂತೆ ಸಭಾಪತಿಗಳ ನೇತೃತ್ವದ ಸಭೆಯಲ್ಲಿ ತೀರ್ಮಾನಿಸಲಾಗಿತ್ತು. ಆದರೆ, ಈವರೆಗೆ ಸಮಿತಿ ರಚನೆಯಾಗದೇ ಇರುವುದನ್ನು ಸರಕಾರದ ಗಮನಕ್ಕೆ ತಂದು ಶೀಘ್ರವೇ ಸಮಿತಿ ರಚಿಸುವಂತೆ ವಿಧಾನಮಂಡಲದ 2024ರ ಬಜೆಟ್ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಡಾ.ಎಂ. ಮಂಜುನಾಥ್ ಭಂಡಾರಿ ಅವರು ಸರಕಾರವನ್ನು ಆಗ್ರಹಿಸಿದರು. ಕಳೆದ ವರ್ಷ ಪುತ್ತೂರು ಶಾಸಕ ಅಶೋಕ ಕುಮಾರ್‌ ರೈ ನೇತೃತ್ವದಲ್ಲಿ

ಕಂಬಳವನ್ನು ರಾಜ್ಯಕ್ರೀಡೆಯಾಗಿ ಘೋಷಿಸಲು ಮಂಜುನಾಥ ಭಂಡಾರಿ ಆಗ್ರಹ Read More »

ಕರಾವಳಿ, ಕರ್ನಾಟಕ
Scroll to Top