ಸಿಸಿಬಿ ತನಿಖೆಗೆ ಸಹಕರಿಸುತ್ತೇನೆ : ನಟ ದಿಗಂತ್
(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 23: ಸ್ಯಾಂಡಲ್ ವುಡ್ ನಲ್ಲಿ ಮಾದಕ ನಶೆಯ ನಂಟು ಪ್ರಕರಣಕ್ಕೆ ಸಂಬಂಧಿಸಿ, ನಟ ದಿಗಂತ್ ಎರಡನೇ ಬಾರಿ ಸಿಸಿಬಿ ವಿಚಾರಣೆ ಎದುರಿಸಿದ್ದಾರೆ. ನಗರದ ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಯಲ್ಲಿ ವಿಚಾರಣೆ ಮುಗಿಸಿ ಹೊರಬಂದ ಬಳಿಕ ಸುದ್ದಿಗಾರರೊಡನೆ ಮಾತನಾಡಿ, ಸಿಸಿಬಿಗೆ ನನ್ನ ಬಳಿಯಿದ್ದ ಅಗತ್ಯ ಮಾಹಿತಿ ನೀಡಿರುವೆ. ಅಗತ್ಯಬಿದ್ದರೆ ಮತ್ತೆ ವಿಚಾರಣೆಗೆ ಹಾಜರಾಗಿ ತನಿಖೆಗೆ ಸಹಕರಿಸುತ್ತೇನೆ. ತನಿಖೆ ಪ್ರಗತಿಯಲ್ಲಿರುವ ಕಾರಣ ಯಾವುದೇ ಮಾಹಿತಿಯನ್ನು ಹಂಚಿಕೊಳ್ಳುವಂತಿಲ್ಲ ಎಂದರು.
ಸಿಸಿಬಿ ತನಿಖೆಗೆ ಸಹಕರಿಸುತ್ತೇನೆ : ನಟ ದಿಗಂತ್ Read More »
ಕರ್ನಾಟಕ









