Mangalore

ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಭೂ ಕುಸಿತದ ಭೀತಿ

(ನ್ಯೂಸ್ ಕಡಬ) newskadaba.com.ಬೆಳ್ತಂಗಡಿ,ಆ.4: ದ.ಕ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಚುರುಕುಗೊಂಡಿರುವ ಮಳೆರಾಯ ಅಲ್ಲಲ್ಲಿ ಅವಾಂತರಗಳನ್ನು ಸೃಷ್ಟಿಸುತ್ತಿದ್ದಾನೆ. ಬೆಳ್ತಂಗಡಿ ತಾಲೂಕಿನಾದ್ಯಂತ ನಿನ್ನೆ ರಾತ್ರಿ ಸುರಿದ ಬಾರಿ ಮಳೆಯಿಂದ ಚಾರ್ಮಾಡಿ ಘಾಟಿಯಲ್ಲಿ ಅಲ್ಲಲ್ಲಿ ಸಣ್ಣ ಪ್ರಮಾಣದ ಭೂ ಕುಸಿತ ಸಂಭವಿಸಿದೆ. ಮೂಡಿಗೆರೆ ತಾಲೂಕಿಗೆ ಸೇರಿದ ಕೆಲವೆಡೆ ಕೂಡ ಸಣ್ಣ ಪ್ರಮಾಣದಲ್ಲಿ ಮಣ್ಣು ಕುಸಿತ ಉಂಟಾಗಿದ್ದು . ತಕ್ಷಣ ಮಣ್ಣನ್ನು ತೆರವುಗೊಳಿಸಲಾಗಿದೆ.ಬೆಳ್ತಂಗಡಿ ತಾಲೂಕಿನಲ್ಲಿ ನದಿಗಳು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿವೆ ರಾಜ್ಯದ ಕರಾವಳಿ ಜಿಲ್ಲೆಯಲ್ಲಿ ಕಳೆದ ಕೆಲವು […]

ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಭೂ ಕುಸಿತದ ಭೀತಿ Read More »

ಕರಾವಳಿ

ಮಾತೃಭಾಷೆಯಾಗಿ ಒಂದನೇ ತರಗತಿಯಿಂದಲೇ ಕೊಂಕಣಿ ಕಲಿಕೆಗೆ ಅವಕಾಶ ಕೋರಿಕೆ

(ನ್ಯೂಸ್ ಕಡಬ) newskadaba.com.ಮಂಗಳೂರು,ಆ.4:  ದೇಶದ ಇಡೀ ಶಿಕ್ಷಣ ವ್ಯವಸ್ಥೆಯನ್ನೇ ಬದಲಿಸಿದ ರಾಷ್ಟ್ರೀಯ ಶಿಕ್ಷಣ ನೀತಿ 2020 ಕ್ಕೆ ಅನುಗುಣವಾಗಿ ಕೊಂಕಣಿಗರಿಗೆ ಒಂದನೇ ತರಗತಿಯಿಂದಲೇ ಮಾತೃಭಾಷೆ ಕಲಿಯಲು ಅನುವು ಮಾಡಿಕೊಡುವಂತೆ ಮುಖ್ಯಮಂತ್ರಿ ಮತ್ತು ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಲು ವಿಶ್ವ ಕೊಂಕಣಿ ಕೇಂದ್ರ ನಿರ್ಧರಿಸಿದೆ. ಈ ಬಗ್ಗೆ ನಗರದಲ್ಲಿ ನಡೆದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿದ್ದ ವಿಶ್ವ ಕೊಂಕಣಿ ಕೇಂದ್ರದ ಅಧ್ಯಕ್ಷ ಬಸ್ತಿ ವಾಮನ ಶೆಣೈ ಅವರು ಮಾತನಾಡಿ, ರಾಜ್ಯದಲ್ಲಿ ಅಲ್ಪಸಂಖ್ಯಾಕ ಭಾಷೆಯಾಗಿರುವ ಕೊಂಕಣಿಯನ್ನು ಶಾಲೆಗಳಲ್ಲಿ ತೃತೀಯ ಐಚ್ಛಿಕ ಭಾಷೆ

ಮಾತೃಭಾಷೆಯಾಗಿ ಒಂದನೇ ತರಗತಿಯಿಂದಲೇ ಕೊಂಕಣಿ ಕಲಿಕೆಗೆ ಅವಕಾಶ ಕೋರಿಕೆ Read More »

ಕರಾವಳಿ

ನಾಳೆ ಬಿಳಿನೆಲೆಯಲ್ಲಿ ಉಚಿತ ಕೊರೋನಾ ಟೆಸ್ಟ್

(ನ್ಯೂಸ್ ಕಡಬ) newskadaba.com ಬಿಳಿನೆಲೆ, ಆ.04: ನಾಳೆ ದಿನಾಂಕ 05/08/2020 ನೆ ಬುಧವಾರ ದಂದು ದ. ಕ. ಜಿ.ಪ.ಹಿ. ಪ್ರ ಶಾಲೆ ಬೈಲು ಬಿಳಿನೆಲೆ ಬಳಿ ಉಚಿತವಾಗಿ ಉಚಿತ ಕೊವೀಡ್ ಪರೀಕ್ಷೆ  (CORONA RAPID TEST CAMP)  ನಡೆಯಲಿದೆ.   ಬೆಳಿಗ್ಗೆ ಗಂಟೆ 10.30 ರಿಂದ 1.00 ಗಂಟೆ ವರೆಗೆ  ಕೊರೋನಾ ಹರಡದಂತೆ ಮಾಡಲು ಪರೀಕ್ಷೆ ಮಾಡಿಸಿಕೊಳ್ಳುವುದು ಸುಲಭ ಮತ್ತು ಉಚಿತ ವಿಧಾನ ಇದಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮದ ಜನರು ಸ್ವಯಂ ಪ್ರೇರಿತರಾಗಿ ಬಂದು ಪರೀಕ್ಷೆ ಮಾಡಿಸಿಕೊಳ್ಳಲು

ನಾಳೆ ಬಿಳಿನೆಲೆಯಲ್ಲಿ ಉಚಿತ ಕೊರೋನಾ ಟೆಸ್ಟ್ Read More »

ಕರಾವಳಿ, ಕರ್ನಾಟಕ

ಬಳ್ಪ : ಮೂರು ಪ್ರಗತಿ ಬಂಧು ಸಂಘಗಳ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕಡಬ, ಆ.04:  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಳ್ಪ ಒಕ್ಕೂಟದಲ್ಲಿ ಶ್ರೀ ಧವ್ವಂತರಿ , ತ್ರಿಶೂಲಿನಿ, ಶ್ರೀ ದುರ್ಗಾ, ಎಂಬ ಮೂರು ಪ್ರಗತಿ ಬಂಧು ಸಂಘಗಳ ಉದ್ಘಾಟನಾ ಕಾರ್ಯಕ್ರಮ ನಡೆದಿದೆ.   ಹಿರಿಯರಾದ ಪಠೇಲ್ ಪುಟ್ಟಣ್ಣ ಗೌಡ ಎಣ್ಣೆಮಜಲು ರವರು ಈ ಕಾರ್ಯಕ್ರಮಗಳನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ಶುಭ ಹಾರೈಸಿದರು. ವಲಯ ಮೇಲ್ವಿಚಾರಕ ಸೀತಾರಾಮ, ಸೇವಾಪ್ರತಿನಿಧಿ ಭವ್ಯ ಕಾಯರ ಸೇರಿದಂತೆ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.  

ಬಳ್ಪ : ಮೂರು ಪ್ರಗತಿ ಬಂಧು ಸಂಘಗಳ ಉದ್ಘಾಟನೆ Read More »

ಕರಾವಳಿ, ಕರ್ನಾಟಕ

ಕಡಬ ತಾಲೂಕಿನ ಪ್ರಸಿದ್ದ ನಾಟಿವೈದ್ಯೆ ರಾಮಕ್ಕ ಇನ್ನಿಲ್ಲ

(ನ್ಯೂಸ್ ಕಡಬ) newskadaba.com. ಕಡಬ,ಆ.3: ಹಲವು ವರ್ಷಗಳಿಂದ ನಾಟಿ ವೈದ್ಯೆಯಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚಿರಪರಿಚಿತರಾಗಿದ್ದ ಕಡಬ ತಾಲೂಕಿನ ನೆಲ್ಯಾಡಿ ಸಮೀಪದ ಗೋಳಿತ್ತೊಟ್ಟು ಗ್ರಾಮದ ಪ್ರಸಿದ್ಧ ನಾಟಿ ವೈದ್ಯೆ ರಾಮಕ್ಕ ಅಲ್ಪಕಾಲದ ಅಸೌಖ್ಯದಿಂದ ಇಂದು ಮುಂಜಾನೆ ನಿಧನರಾದರು. ಸುಮಾರು 75 ವರ್ಷ ವಯಸ್ಸಿನ ರಾಮಕ್ಕ ಕಳೆದ ಒಂದು ತಿಂಗಳಿಂದ ಅನಾರೋಗ್ಯದಿಂದ ಮನೆಯಲ್ಲೇ ಇದ್ದು ಚಿಕಿತ್ಸೆ ಪಡೆಯುತ್ತಿದ್ದರು. ಸಂತಾನ ಭ್ಯಾಗ್ಯ ಇಲ್ಲದವರಿಗೆ ಔಷಧ ನೀಡುವ ಮೂಲಕ ಹಲವಾರು ದಂಪತಿಗಳ ಬಾಳಿಗೆ ಬೆಳಕಾಗಿದ್ದ ಈ ನಾಟಿ ವೈದ್ಯೆ. ತನ್ನ ತಂದೆಯಿಂದ

ಕಡಬ ತಾಲೂಕಿನ ಪ್ರಸಿದ್ದ ನಾಟಿವೈದ್ಯೆ ರಾಮಕ್ಕ ಇನ್ನಿಲ್ಲ Read More »

ಕರಾವಳಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಭೇಟಿ

(ನ್ಯೂಸ್ ಕಡಬ) newskadaba.com ಕಡಬ, ಆ.03:  ಪವಿತ್ರ ಕ್ಷೇತ್ರವಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಸ್ಥಾನಕ್ಕೆ ಇಂದು ಬೆಳಗ್ಗೆ ವಿಧಾನ ಪರಿಷತ್ ಸದಸ್ಯಪ್ರತಾಪ್ ಸಿಂಹ ನಾಯಕ್ ಭೇಟಿ ನೀಡಿದ್ದರು.   ದೇವರ ದರ್ಶನ ಪಡೆದು ಬಳಿಕ ಅಲ್ಲಿಂದ ತೆರಳಿದರು. ಈ ವೇಳೆ ಅತಿಥಿಗಳೊಂದಿಗೆ ದೇವಾಸ್ಥಾನದ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಎಂ. ಎಚ್, ಉದಯ್ ಕುಮಾರ್, ಬಿಜೆಪಿಯ ಪ್ರಶಾಂತ್ ಮಾಣಿಲ, ದೀನೆಶ್ ಸಂಪ್ಯಾಡಿ, ಅಚ್ಚುತ್ ಗೌಡ, ಚಿದಾನಂದ ಕಂದಡ್ಕ ಮತ್ತಿತರರು ಉಪಸ್ಥಿತರಿದ್ದರು.    

ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಭೇಟಿ Read More »

ಕರಾವಳಿ, ಕರ್ನಾಟಕ

ಸಸಿಹಿತ್ಲು ವರುಣನ ಅವಾಂತರಕ್ಕೆ ಧರೆಗುರುಳಿದ ವಿದ್ಯುತ್ ಕಂಬಗಳು

(ನ್ಯೂಸ್ ಕಡಬ) newskadaba.com.ಸಸಿಹಿತ್ಲು,ಆ.3: ವರುಣನ ಅವಾಂತರಕ್ಕೆ ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನದ ಕೆರೆಯ ಬಳಿಯ ಖಾಸಗಿ ಜಮೀನಿನ ತೆಂಗಿನ ಮರವೊಂದು ತುಂಡಾಗಿ ಬಿದ್ದು ಮೂರು ವಿದ್ಯುತ್ ಕಂಬಗಳು ಧರೆಗುರುಳಿದ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ. ದೇವಳದ ಗೋಪಾಲ ಪಾತ್ರಿ ಹಾಗೂ ಸ್ಥಳೀಯ ಸಾಮಾಜಿಕ ಕಾರ್ಯಕರ್ತ ನಾರಾಯಣ ಕರ್ಕೇರ ಇವರು ಕೂಡಲೇ ಮುಕ್ಕ ಶಾಖೆಯ ಮೆಸ್ಕಾಂ ಇಲಾಖೆಗೆ ದೂರವಾಣಿ ಮೂಲಕ ದೂರು ನೀಡಿದ್ದರಿಂದ ಇಲಾಖೆಯ ಸಿಬ್ಬಂದಿಗಳು ಕೂಡಲೇ ಆಗಮಿಸಿ ತುರ್ತು ಕಾಮಗಾರಿಯನ್ನು ನಡೆಸಿದ್ದಾರೆ.ಈ ಘಟನೆಯಲ್ಲಿ ಯಾವುದೇ ಜೀವಹಾನಿ ಸಂಭವಿಸಿಲ್ಲ.

ಸಸಿಹಿತ್ಲು ವರುಣನ ಅವಾಂತರಕ್ಕೆ ಧರೆಗುರುಳಿದ ವಿದ್ಯುತ್ ಕಂಬಗಳು Read More »

ಕರಾವಳಿ

ಐವನ್ ಡಿ ಸೋಜ ಜೊತೆ ಕಾರ್ಯಕ್ರಮದಲ್ಲಿ ಇದ್ದ, ಬಿ. ರಮಾನಾಥ ರೈ ಸ್ವಯಂ ಕ್ವಾರಂಟೈನ್​.!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ.03:  ವಿಧಾನಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ ಅವರಿಗೆ ಕೊರೊನಾ ಸೋಂಕು ದೃಢಪಟ್ಟ ಬೆನ್ನಲೇ ಅವರ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಮಾಜಿ ಸಚಿವ ಬಿ. ರಮಾನಾಥ ರೈ ಸ್ವಯಂ ಕ್ವಾರಂಟೈನ್ಗೆ ಒಳಗಾಗಿದ್ದಾರೆ.   ಡಿಕೆ ಶಿವಕುಮಾರ್ ಕಾರ್ಯಕ್ರಮದಲ್ಲಿ ಐವನ್ ಡಿ ಸೋಜ ಜೊತೆ ನಾನು ಇದ್ದೆ ಹಾಗಾಗಿ ನಾನು ಕೆಲವು ದಿನಗಳ ಕಾಲ ಸ್ವಯಂ ಕ್ವಾರಂಟೈನ್ಗೆ ಒಳಗಾಗಿದ್ದೇನೆ. ಆದ್ದರಿಂದ ಈಗಾಗಲೇ ನಿಗದಿಯಾಗಿರುವ ಜನ ಸಾಮಾನ್ಯರ ಭೇಟಿ, ಕ್ಷೇತ್ರದಲ್ಲಿ ನಿಗದಿಯಾಗಿದ್ದ ವಿವಿಧ ಕಾರ್ಯಕ್ರಮಗಳನ್ನು

ಐವನ್ ಡಿ ಸೋಜ ಜೊತೆ ಕಾರ್ಯಕ್ರಮದಲ್ಲಿ ಇದ್ದ, ಬಿ. ರಮಾನಾಥ ರೈ ಸ್ವಯಂ ಕ್ವಾರಂಟೈನ್​.! Read More »

ಕರಾವಳಿ, ಕರ್ನಾಟಕ

ವಿವಾಹಿತ ಮಹಿಳೆಯ ಮನೆಗೆ ನುಗ್ಗಿ ಮಾನಭಂಗಕ್ಕೆ ಯತ್ನ ➤ ವಿಚಾರ ತಿಳಿಸಿದ್ದಲ್ಲಿ ಜೀವ ತೆಗೆಯುವ ಬೆದರಿಕೆ

(ನ್ಯೂಸ್ ಕಡಬ) newskadaba.com ವಿಟ್ಲ, ಆ.03:  ವಿವಾಹಿತ ಮಹಿಳೆಯ ಮನೆಗೆ ನುಗ್ಗಿ ಯುವಕನೊಬ್ಬ ಮಾನಭಂಗಕ್ಕೆ ಯತ್ನಿಸಿರುವ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಬೋಳಂತೂರು ಗ್ರಾಮದಲ್ಲಿ ನಡೆದಿದೆ. ಮದಕ ನಿವಾಸಿ ಸಾಧಿಕ್ ಎಂಬಾತ ಪ್ರಕರಣದ ಆರೋಪಿಯಾಗಿದ್ದಾನೆ. ಆರೋಪಿ ಸಾಧಿಕ್ ಮಹಿಳೆಯ ಮೊಬೈಲ್ ಗೆ ಮೆಸೇಜ್ ಹಾಗೂ ಕರೆ ಮಾಡಿ ತೊಂದರೆ ನೀಡುತ್ತಿದ್ದ ಶನಿವಾರ ಆರೋಪಿ ರಾತ್ರಿ ಸಮಯದಲ್ಲಿ ಮಹಿಳೆಯ ಮನೆಗೆ ಬಂದು ಮಾನಭಂಗಕ್ಕೆ ಯತ್ನಿಸಿದ್ದಾನೆ ಎಂಡು ತಿಳಿದುಬಂದಿದೆ.     ಅವರ ಮಕ್ಕಳು ಮನೆಯಲ್ಲಿ ಮಲಗಿದ್ದ ಸಮಯ ರಾತ್ರಿ

ವಿವಾಹಿತ ಮಹಿಳೆಯ ಮನೆಗೆ ನುಗ್ಗಿ ಮಾನಭಂಗಕ್ಕೆ ಯತ್ನ ➤ ವಿಚಾರ ತಿಳಿಸಿದ್ದಲ್ಲಿ ಜೀವ ತೆಗೆಯುವ ಬೆದರಿಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ರಾಮಮಂದಿರ ಭೂಮಿ ಪೂಜೆಗೆ ರಾಜ್ಯದಿಂದ ಐದು ಮಂದಿಗೆ ಅವಕಾಶ

(ನ್ಯೂಸ್ ಕಡಬ) newskadaba.com.ಮಂಗಳೂರು,ಆ .3: ಅಯೋಧ್ಯೆಯಲ್ಲಿ ಪವಿತ್ರ ರಾಮಮಂದಿರದ ಶಿಲಾನ್ಯಾಸ ಆಗಷ್ಟು 5ರಂದು ನಡೆಯಲಿದೆ ಈ ಕಾರ್ಯಕ್ರಮಕ್ಕೆ ನಿಗದಿತ ಜನರಿಗೆ ಮಾತ್ರ ಅವಕಾಶ ಕೊಡಲಾಗಿದೆ. ಭೂಮಿ ಪೂಜೆಗೆ ರಾಜ್ಯದಿಂದ ಕೇವಲ ಐವರನ್ನು ಆಹ್ವಾನಿಸಲಾಗಿದೆ. ಕಾರ್ಯಕ್ರಮಕ್ಕೆ ಒಟ್ಟು 200 ಜನರಿಗೆ ಮಾತ್ರ ಅವಕಾಶ ನೀಡಲಾಗಿದ್ದು ರಾಜ್ಯದಿಂದ ರಾಮ ಮಂದಿರ ನಿರ್ಮಾಣ ಟ್ರಸ್ಟಿ ಗಳಲ್ಲಿ ಓರ್ವರಾದ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹಾಗೂ ಧರ್ಮಸ್ಥಳದ ಡಾ| ವೀರೇಂದ್ರ ಹೆಗ್ಗಡೆಯವರಿಗೆ , ಶೃಂಗೇರಿ ಮಠ, ಆದಿಚುಂಚನಗಿರಿ ಶ್ರೀಗಳಿಗೆ ಹಾಗೂ ಸುತ್ತೂರು

ರಾಮಮಂದಿರ ಭೂಮಿ ಪೂಜೆಗೆ ರಾಜ್ಯದಿಂದ ಐದು ಮಂದಿಗೆ ಅವಕಾಶ Read More »

ಕರಾವಳಿ, ಕರ್ನಾಟಕ
Scroll to Top