ಮಾಂಸ ಸಾಗಾಟಕ್ಕೆ ಅಡ್ಡಿ ➤ ವಾಹನ ಚಾಲಕನಿಗೆ ಹಲ್ಲೆ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.21: ಕುದ್ರೋಳಿಯ ವಧಾಗೃಹದಿಂದ ಕಂಕನಾಡಿಯ ಮಾರುಕಟ್ಟೆಗೆ ಮಾಂಸ ಸಾಗಾಟಕ್ಕೆ ಅಡ್ಡಿಪಡಿಸಿ , ಚಾಲಕನಿಗೆ ಹಲ್ಲೆಗೈದ ಕೃತ್ಯ ರವಿವಾರ ಬೆಳಗ್ಗೆ ಕಂಕನಾಡಿ ಬಳಿ ನಡೆದಿದೆ. ಕುದ್ರೋಳಿಯ ರಶೀದ್ ಎಂಬವರು ತನ್ನ ರಿಕ್ಷಾ ಟೆಂಪೋದಲ್ಲಿ ಕಂಕನಾಡಿ ಮಾರುಕಟ್ಟೆಯಲ್ಲಿ ಬೀಫ್ ಸ್ಟಾಲ್ ಹೊಂದಿರುವ ಝಾಕಿರ್ ಎಂಬವರ ಅಂಗಡಿಗೆ ಸುಮಾರು 200 ಕೆಜಿಯಷ್ಟು ದನದ ಮಾಂಸವನ್ನು ಸಾಗಾಟ ಮಾಡುತ್ತಿದ್ದರು. ಸುಮಾರು ಐದಾರು ಮಂದಿಯನ್ನೊಳಗೊಂಡ ದುಷ್ಕರ್ಮಿಗಳ ತಂಡವು ಕಾರು ಮತ್ತು ದ್ವಿಚಕ್ರ ವಾಹನದಲ್ಲಿ ಹಿಂಬಾಲಿಸಿಕೊಂಡು ಬಂದು ಹೈಲ್ಯಾಂಡ್ ಆಸ್ಪತ್ರೆ-ಕಂಕನಾಡಿ […]
ಮಾಂಸ ಸಾಗಾಟಕ್ಕೆ ಅಡ್ಡಿ ➤ ವಾಹನ ಚಾಲಕನಿಗೆ ಹಲ್ಲೆ Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್









