Mangalore

ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ ➤ದಕ್ಷಿಣ ಕನ್ನಡ ಜಿಲ್ಲೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.17. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ನಡೆಯಲಿರುವ ವಿಶೇಷ ಆರೋಗ್ಯ ತಪಾಸಣಾ ಶಿಬಿರಗಳನ್ನು ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜ್‍ಗಳ ಸಹಯೋಗದೊಂದಿಗೆ ಇಂದು ನಡೆಸಲಾಗುವುದು. ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿ¯, ಉಪ್ಪಿನಂಗಡಿ, ಸುಳ್ಯ ತಾಲೂಕಿನ ಬೆಳ್ಳಾರೆ ಮತ್ತು ಸೆಪ್ಟೆಂಬರ್ 18 ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಹಾಗೂ ಸೆಪ್ಟೆಂಬರ್ 21 ರಂದು ಪುತ್ತೂರು ತಾಲೂಕಿನ ಪಾಣಾಜೆ ಆರೋಗ್ಯ ಕೇಂದ್ರಗಳಲ್ಲಿ ಏರ್ಪಡಿಸಲಾಗಿರುತ್ತದೆ. ಈ ಶಿಬಿರದ ಸದುಪಯೋಗವನ್ನು ಎಂಡೋಸಲ್ಫಾನ್ ಸಂತ್ರಸ್ತರು ಪಡೆದುಕೊಳ್ಳುವಂತೆ ಜಿಲ್ಲಾ […]

ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ ➤ದಕ್ಷಿಣ ಕನ್ನಡ ಜಿಲ್ಲೆ Read More »

ಕರಾವಳಿ

➤➤ಗಿರಿರಾಜ ಕೋಳಿಮರಿ ಮಾರಾಟ : ಕೊೈಲ

(ನ್ಯೂಸ್ ಕಡಬ) newskadaba.com ಕೊೈಲ,ಸಪ್ಟೆಂಬರ್.17. ಜಾನುವಾರು ಸಂವರ್ಧನಾ ಮತ್ತು ತರಬೇತಿ ಕೇಂದ್ರ ಕೊೈಲ ಕ್ಷೇತ್ರದ ಹ್ಯಾಚರಿ ಮತ್ತು ಕುಕ್ಕುಟ ವಿಸ್ತರಣಾ ಕೇಂದ್ರ ಕೊಯ್ಲಾದಲ್ಲಿ ಪ್ರತೀ ಶುಕ್ರವಾರ ಒಂದು ದಿನದ ಗಿರಿರಾಜ ಕೋಳಿಮರಿಗಳನ್ನು ಉತ್ಪಾದಿಸಿ ಲಭ್ಯತೆ ಮೇರೆಗೆ ಸರಕಾರ ನಿಗದಿ ಪಡಿಸಿದ ದರ ರೂ.20 (ಪ್ರತಿ ಕೋಳಿಮರಿಗೆ) ರಂತೆ ಮಾರಾಟ ಮಾಡಲಾಗುತ್ತಿದ್ದು, ಆಸಕ್ತ ರೈತರು ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಜಾನುವಾರು ಸಂವರ್ಧನಾ ಮತ್ತು ತರಬೇತಿ ಕೇಂದ್ರ, ಕೊೈಲಾ ದೂರವಾಣಿ ಸಂಖ್ಯೆ 08251-258273, 9448769997, 9448110736 ಗೆ ಕಚೇರಿ

➤➤ಗಿರಿರಾಜ ಕೋಳಿಮರಿ ಮಾರಾಟ : ಕೊೈಲ Read More »

ಕರಾವಳಿ

ಮಾರ್ ಇವಾನಿಯೋಸ್ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

(ನ್ಯೂಸ್ ಕಡಬ) newskadaba.com ಕುಂತೂರು,ಸಪ್ಟೆಂಬರ್.14.ಇಲ್ಲಿನ ಮಾರ್ ಇವಾನಿಯೋಸ್ ಪದವಿ ವಿಭಾಗದ ವಿದ್ಯಾರ್ಥಿಗಳು ಮತ್ತು ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿಗಳ ನೇತೃತ್ವದಲ್ಲಿ ಶಿಕ್ಷಕರ ದಿನಾಚರಣೆಯನ್ನು ವಿಭಿನ್ನವಾಗಿ ಆಚರಿಸಲಾಯಿತು. ವಿದ್ಯಾರ್ಥಿಗಳು ಕಾಲೇಜಿನ ಶಿಕ್ಷಕ ವರ್ಗಕ್ಕೆ ವೈವಿದ್ಯಮಯವಾದ ಮನೋರಂಜನಾ ಸ್ಪರ್ಧೆಗಳನ್ನೂ ಆಯೋಜಿಸಿದರು. ಕಾಲೇಜಿನ ಸಂಚಾಲಕ ವಂ/ರೆ/ಫಾ/ಡಾ/ ಎಲ್ದೋ ಪುತ್ತನ್ ಕಂಡತ್ತಿಲ್ ಅವರು ವಿದ್ಯಾರ್ಥಿಗಳನ್ನು ಧನಾತ್ಮಕವಾಗಿ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಹಾಗೂ ಶಿಕ್ಷಕರು ಎಂದಿಗೂ ಸಮಾಜದಲ್ಲಿ ಗೌರವ ಹುದ್ದೆಯಲ್ಲಿರುವವರು ಎಂದು ಉಲ್ಲೇಖಿಸಿದರು, ಹಾಗೂ ಕಾರ್ಯಕ್ರಮದ ಅಂತ್ಯದಲ್ಲಿ ವಿಜೇತರಿಗೆ ಬಹುಮಾನಗಳನ್ನು ವಿತರಿಸಿದರು.ಕಾಲೇಜಿನ ಪ್ರಭಾರ ಪ್ರಾಂಶುಪಾಲೆ

ಮಾರ್ ಇವಾನಿಯೋಸ್ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ Read More »

ಕರಾವಳಿ

ಇನ್ಸ್‌ಪೆಕ್ಟರ್ ಆಗಿ ಭಡ್ತಿಗೊಂಡು ಮಂಗಳೂರಿಗೆ ವರ್ಗಾವಣೆಯಾದ ಕಡಬ ಎಸ್ಐ ➤ ಪ್ರಕಾಶ್ ದೇವಾಡಿಗರಿಗೆ ಸಂಘ ಸಂಸ್ಥೆಗಳಿಂದ ಬೀಳ್ಕೊಡುಗೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.14. ನೂಜಿಬಾಳ್ತಿಲದ ರೆಂಜಿಲಾಡಿ ಗ್ರಾಮದ ನೂಜಿಬೈಲ್ ನೂಜಿ ಶ್ರೀ ಉಳ್ಳಾಲ್ತಿ ಅಮ್ಮನವರ ದೈವಸ್ಥಾನಕ್ಕೆ ಕಡಬ ಪೊಲೀಸ್ ಠಾಣೆಯಲ್ಲಿ ಉಪನಿರೀಕ್ಷಕರಾಗಿದ್ದು, ಭಡ್ತಿಗೊಂಡು, ಮಂಗಳೂರಿಗೆ ವರ್ಗಾವಣೆಗೊಂಡ ಪ್ರಕಾಶ್ ದೇವಾಡಿಗ ಅವರು ಶುಕ್ರವಾರ ಬೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಪ್ರಕಾಶ್ ದೇವಾಡಿಗರನ್ನು ದೈವಸ್ಥಾನದ ಆಡಳಿತ ಸಮಿತಿ ವತಿಯಿಂದ ಶಾಲು ಹೊದಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಆಡಳಿತ ಸಮಿತಿ ಅಧ್ಯಕ್ಷ ರಾಮಚಂದ್ರ ಗೌಡ ಎಳುವಾಳೆ, ಅರ್ಚಕ ಕೃಷ್ಣ ಹೆಬ್ಬಾರ್, ನೂಜಿಬಾಳ್ತಿಲ ಬೀಟ್ ಪೊಲೀಸ್ ಚಿನ್ನಪ್ಪ

ಇನ್ಸ್‌ಪೆಕ್ಟರ್ ಆಗಿ ಭಡ್ತಿಗೊಂಡು ಮಂಗಳೂರಿಗೆ ವರ್ಗಾವಣೆಯಾದ ಕಡಬ ಎಸ್ಐ ➤ ಪ್ರಕಾಶ್ ದೇವಾಡಿಗರಿಗೆ ಸಂಘ ಸಂಸ್ಥೆಗಳಿಂದ ಬೀಳ್ಕೊಡುಗೆ Read More »

ಕರಾವಳಿ

ಮುಜರಾಯಿ ಸಚಿವರ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.14.ಮುಜರಾಯಿ, ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರ ದ.ಕ.ಜಿಲ್ಲಾ ಪ್ರವಾಸ ಇಂತಿವೆ: ಸೆಪ್ಟೆಂಬರ್ 14ರಂದು ಸಂಜೆ 4 ಗಂಟೆಗೆ ಮಹಾಲಕ್ಷ್ಮಿ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್, ಉಡುಪಿ, ಸುರತ್ಕಲ್ ಶಾಖೆ ಉದ್ಘಾಟನೆಯಲ್ಲಿ ಭಾಗವಹಿಸಿ ನಂತರ ಕಟಪಾಡಿಗೆ ತೆರಳುವರು. ಸೆಪ್ಟೆಂಬರ್ 15 ರಂದು ಅಪರಾಹ್ನ 2 ಗಂಟೆಗೆ ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮುಜರಾಯಿ, ಮೀನುಗಾರಿಕೆ ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆಯ ಪ್ರಗತಿ

ಮುಜರಾಯಿ ಸಚಿವರ ಪ್ರವಾಸ Read More »

ಕರಾವಳಿ

ಬ್ರಹ್ಮ ಶ್ರೀ ನಾರಾಯಣ ಗುರು ನಿಗಮ ಸ್ಥಾಪನೆ ➤ ಶ್ರೀನಿವಾಸ ಪೂಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.14.ಹಿಂದುಳಿದ ವರ್ಗ ಮತ್ತು ಹಿಂದುಳಿದ ಜನಾಂಗದವರ ಧ್ವನಿಗೆ ಶಕ್ತಿ ಕೊಡುವ ಮೂಲಕ ಅವರ ಏಳಿಗೆಗಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಹೆಸರಿನಲ್ಲಿ ನಿಗಮವನ್ನು ಸ್ಥಾಪಿಸುವ ಕುರಿತು ಬೆಂಗಳೂರಿನಲ್ಲಿ ನಡೆಯುವ ನಾರಾಯಣ ಗುರು ಜಯಂತಿ ಕಾರ್ಯಕ್ರಮದಲ್ಲಿ ಮಾನ್ಯ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಗುವುದು ಎಂದು ರಾಜ್ಯ ಮುಜರಾಯಿ, ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಸೆಪ್ಟೆಂಬರ್ 13 ರಂದು ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ

ಬ್ರಹ್ಮ ಶ್ರೀ ನಾರಾಯಣ ಗುರು ನಿಗಮ ಸ್ಥಾಪನೆ ➤ ಶ್ರೀನಿವಾಸ ಪೂಜಾರಿ Read More »

ಕರಾವಳಿ

ಈ ಸಲದ ದೀಪಾವಳಿಗೆ ಪಟಾಕಿ ಅಂಗಡಿ ಮಾಡಬೇಕೆಂದಿರುವಿರಾ..? ➤ ಸುಡುಮದ್ದು ಮಾರಾಟದ ತಾತ್ಕಾಲಿಕ ಪರವಾನಿಗೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.14.ಸ್ಪೋಟಕ ಕಾಯಿದೆ ಮತ್ತು ನಿಯಮದಡಿಯಲ್ಲಿ ಹಾಗೂ ಮೈದಾನದಲ್ಲಿ/ತೆರೆದ ಪ್ರದೇಶದಲ್ಲಿ ಹಬ್ಬಗಳ ನಿಮಿತ್ತ ಸುಡುಮದ್ದು ಮಾರಾಟದ ತಾತ್ಕಾಲಿಕ ಪರಾವಾಣಿಗೆ ನೀಡುವ ಬಗ್ಗೆ ಅರ್ಜಿಗಳನ್ನು ಈಗಾಗಲೇ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಸ್ವೀಕರಿಸಲಾಗುತ್ತಿದ್ದು, ಪೊಲೀಸ್ ಆಯುಕ್ತರ ವ್ಯಾಪ್ತಿಯನ್ನು ಹೊರತು ಪಡಿಸಿ ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ(ನಾಲ್ಕು) ಬ್ಲೂ ಪ್ರಿಂಟ್ ಮತ್ತು (ಎರಡು) ಫೋಟೋ, (ನಾಲ್ಕು) ಪ್ರಸ್ತಾವಿಕ ಜಮೀನಿನ ಪಹಣಿ, (ನಾಲ್ಕು) ಸರ್ಕಾರಿ ಜಮೀನು ಅಲ್ಲದೇ ಇದ್ದಲ್ಲಿ ಜಮೀನಿನ ಮಾಲಕರ ಒಪ್ಪಿಗೆ ಪತ್ರ (ರೂ.20) ಸ್ಟಾಂಪ್ ಪೇಪರ್‍ನೊಂದಿಗೆ

ಈ ಸಲದ ದೀಪಾವಳಿಗೆ ಪಟಾಕಿ ಅಂಗಡಿ ಮಾಡಬೇಕೆಂದಿರುವಿರಾ..? ➤ ಸುಡುಮದ್ದು ಮಾರಾಟದ ತಾತ್ಕಾಲಿಕ ಪರವಾನಿಗೆಗೆ ಅರ್ಜಿ ಆಹ್ವಾನ Read More »

ಕರ್ನಾಟಕ

ಮಾನವ ಸಂಪನ್ಮೂಲ ಒದಗಿಸಲು ಟೆಂಡರ್ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.14.2019-20ನೇ ಸಾಲಿಗೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತೋಟಗಾರಿಕೆ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸಲು ಹೊರಗುತ್ತಿಗೆ ಆಧಾರದ ಮೇಲೆ ತೋಟಗಾರರನ್ನು ಒದಗಿಸುವ ಮಾನವ ಸಂಪನ್ಮೂಲ ಸಂಸ್ಥೆಗಳನ್ನು ಆಯ್ಕೆ ಮಾಡಲು ಇ-ಪ್ರೊಕ್ಯುರ್‍ಮೆಂಟ್ ಪೋರ್ಟರ್ ಮೂಲಕ ಟೆಂಡರನ್ನು ಆಹ್ವಾನಿಸಲಾಗಿದೆ. ಟೆಂಡರ್ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನ ಅಕ್ಟೋಬರ್ 9 ರಂದು ಸಂಜೆ 4 ಗಂಟೆ.ಹೆಚ್ಚಿನ ವಿವರವನ್ನು www.eproc.karnataka.gov.in ರಲ್ಲಿ ಪಡೆಯಬಹುದು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ರಾಜ್ಯವಲಯ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

ಮಾನವ ಸಂಪನ್ಮೂಲ ಒದಗಿಸಲು ಟೆಂಡರ್ ಆಹ್ವಾನ Read More »

ಕರಾವಳಿ

ಕೃಷಿಗೆ ಸಂಬಂಧಿಸಿದ ಸರ್ಕಾರಿ ಯೋಜನೆಗಳ ಸದ್ಬಳಕೆಯಾಗಲಿ ➤ ಕೃಷ್ಣ ಕುಮಾರ್

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.14.ಗಂಗಾಕಲ್ಯಾಣ ಯೋಜನೆಯು ಸಾಕಷ್ಟು ರೈತಾಪಿ ಜನಗಳ ಆರ್ಥಿಕ ಅಭಿವೃದ್ದಿಗೆ ಮತ್ತು ಕೃಷಿ ಉತ್ಪನ್ನಗಳನ್ನು ಹೆಚ್ಚಾಗುವುದಕ್ಕೆ ಸಹಾಯಕಾರಿಯಾಗಿದೆ, ಆದ್ದರಿಂದ ಇಂತಹ ಯೋಜನೆಗಳನ್ನು ಸರಿಯಾಗಿ ಸದ್ಬಳಿಕೆ ಮಾಡಿಕೊಳ್ಳಬೇಕು ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಕುಮಾರ್ ಹೇಳಿದರು. ಶುಕ್ರವಾರ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಹಾಗೂ ಭಾರತೀಯ ಕೃಷಿ ಅನುಸಂದಾನ ಪರಿಷತ್‍ನ ಕೃಷಿ ವಿಜ್ಞಾನ ಕೇಂದ್ರ ಕಂಕನಾಡಿ

ಕೃಷಿಗೆ ಸಂಬಂಧಿಸಿದ ಸರ್ಕಾರಿ ಯೋಜನೆಗಳ ಸದ್ಬಳಕೆಯಾಗಲಿ ➤ ಕೃಷ್ಣ ಕುಮಾರ್ Read More »

ಕರಾವಳಿ

ದಾಸ್ತಾನು ಇರಿಸಿದ್ದ 29.51 ಕ್ವಿಂಟಾಲ್ ಅಕ್ಕಿ ಹರಾಜು

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.14.ಮಂಗಳೂರು ತಾಲೂಕು ಕಚೇರಿಯ ಆಹಾರ ನಿರೀಕ್ಷಕರು 2014ನೇ ಸಾಲಿನ ನವೆಂಬರ್ 5ರಂದು ಹಳೆಯಂಗಡಿ ಗ್ರಾಮದಲ್ಲಿರುವ ಬದ್ರುದಿನ್ ಎಂಬವರ ದಿನಸಿ ಅಂಗಡಿಯಲ್ಲಿ ಅಕ್ರಮವಾಗಿ ದಾಸ್ತಾನಿರಿಸಿದ್ದ 29.51 ಕ್ವಿಂಟಾಲ್ ಅಕ್ಕಿಯನ್ನು ಅಗತ್ಯ ವಸ್ತುಗಳ ಪರವಾನಿಗೆ ಆದೇಶ 1986ರ ನಿಯಮ 3,4,9 ಮತ್ತು 10ನ್ನು ಉಲ್ಲಂಘನೆ ಮಾಡಿದ ಹಿನ್ನಲೆಯಲ್ಲಿ ಸರಕಾರದ ಪರ ವಶಪಡಿಸಿಕೊಂಡು ಸಹಾಯಕ ಆಯುಕ್ತರ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿರುತ್ತಾರೆ. ಅಕ್ಕಿಯನ್ನು ಟಿ.ಎ.ಪಿ.ಸಿ.ಎಂ. ಗೋದಾಮಿನಲ್ಲಿ ದಾಸ್ತಾನಿರಿಸಲಾಗಿದೆ. ಪ್ರಕರಣವು ಸಹಾಯಕ ಆಯುಕ್ತರ ನ್ಯಾಯಾಲಯದಲ್ಲಿ ಬಾಕಿ ಇದ್ದು ಇದುವರೆಗೂ ಕ್ರಮ

ದಾಸ್ತಾನು ಇರಿಸಿದ್ದ 29.51 ಕ್ವಿಂಟಾಲ್ ಅಕ್ಕಿ ಹರಾಜು Read More »

ಕರಾವಳಿ
Scroll to Top