Mangalore

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಂಗಳೂರು, ➤ ರಾಷ್ಟ್ರೀಯ ಸೇವಾ ಯೋಜನೆಯ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.30.ಡಾ.ಪಿ ದಯಾನಂದ ಪೈ-ಪಿ.ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಂಗಳೂರು, ರಥಬೀದಿ ಇಲ್ಲಿ ಆಗಸ್ಟ್ 27 ರಂದು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಉದ್ಘಾಟನೆ ಮತ್ತು ಮಾಹಿತಿ ಮತ್ತು ಅಭಿವಿನ್ಯಾಸ ಕಾರ್ಯಾಗಾರವನ್ನು ಮಂಗಳೂರು ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ.ದಯಾನಂದ ನಾಯ್ಕ್ ಇವರು ನೆರೆವೇರಿಸಿದರು. ಅವರು ತಮ್ಮ ಉದ್ಘಾಟನಾ ಭಾಷಣದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವ ವಿಕಸನಕ್ಕೆ ಮತ್ತು ಸಮಾಜ ಮುಖಿ ಕಾರ್ಯದಲ್ಲಿ ತಮ್ಮನ್ನು ಹೇಗೆ ತೊಡಗಿಸಿಕೊಳ್ಳಬೇಕೆಂದು […]

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಂಗಳೂರು, ➤ ರಾಷ್ಟ್ರೀಯ ಸೇವಾ ಯೋಜನೆಯ ಉದ್ಘಾಟನೆ Read More »

ಕರಾವಳಿ

2019-20ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯ ➤ ಸಪ್ಟೆಂಬರ್ ಮಾಹೆಯಲ್ಲಿ ಜಿಲ್ಲಾದ್ಯಂತ ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.30.2019-20ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯ ಸಪ್ಟೆಂಬರ್ ಮಾಹೆಯಲ್ಲಿ ಜಿಲ್ಲಾದ್ಯಂತ ಆರಂಭವಾಗುತ್ತಿದೆ. ಸಮೀಕ್ಷೆ ನಡೆಸುವವರಲ್ಲಿ ಕಂದಾಯ, ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆ ಸಿಬ್ಬಂದಿಗಳು ಹಾಗೂ ಆಯಾ ಗ್ರಾಮದವರೇ ಆದ ಯುವಕರು ಬೆಳೆ ಸಮೀಕ್ಷೆಯನ್ನು ಮೊಬೈಲ್ ತಂತ್ರಾಂಶದ ಮೂಲಕ ಕೈಗೊಳ್ಳುತ್ತಾರೆ.ಮೊಬೈಲ್ ತಂತ್ರಾಂಶದ ಮೂಲಕ ನಡೆಸುವ ಬೆಳೆ ಸಮೀಕ್ಷೆ ಆಧಾರದ ಮೇಲೆಯೇ ಕನಿಷ್ಠ ಬೆಂಬಲ ಬೆಲೆಯಡಿ ಖರೀದಿ, ಬೆಳೆ ಪರಿಹಾರ ಹಾಗೂ ಬೆಳೆ ವಿಮೆ ಇತ್ಯಾದಿಗಳು ನಿರ್ಧಾರವಾಗುವುದರಿಂದ ರೈತರು ತಾವು ಬೆಳೆದ

2019-20ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯ ➤ ಸಪ್ಟೆಂಬರ್ ಮಾಹೆಯಲ್ಲಿ ಜಿಲ್ಲಾದ್ಯಂತ ಆರಂಭ Read More »

ಕರಾವಳಿ

ಅಡಿಕೆ ಕೊಳೆರೋಗ ಹಾಗೂ ಕಾಳುಮೆಣಸು ಸೊರಗು ರೋಗ ಹತೋಟಿಗೆ ತರಲು ಇಲ್ಲಿದೆ ಸೂಕ್ತ ಪರಿಹಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.30.ಹವಾಮಾನ ವೈಪರಿತ್ಯದಿಂದಾಗಿ ಅಡಿಕೆ ಬೆಳೆಗೆ ಕೊಳೆರೋಗವು ಬಾಧಿಸಿ ಹೆಚ್ಚಿನ ನಷ್ಟವನ್ನುಂಟು ಮಾಡುವ ಸಾಧ್ಯತೆ ಇರುತ್ತದೆ. ಕಳೆದ ವರ್ಷ ಕೊಳೆರೋಗ ಬಂದ ತೋಟಗಳಲ್ಲಿ ರೋಗಾಣು ಸುಪ್ತಾವಸ್ಥೆಯಲ್ಲಿದ್ದು, ಈಗ ಪೂರಕ ವಾತಾವರಣ ಇರುವುದರಿಂದ ಒಮ್ಮೆಲೆ ತೀವ್ರವಾಗುತ್ತದೆ. ಮುಂದೆ ಇದು ಗಾಳಿ ಮುಖಾಂತರ ಹರಡುತ್ತಾ ಹೋಗುತ್ತದೆ. ಆದ್ದರಿಂದ ರೈತರು ಮಳೆ ಬಿಡುವಿದ್ದಾಗ ರೋಗ ಬಂದಿರುವ ತೋಟಗಳಲ್ಲಿ ಶೇ. 1 ರ ಬೋರ್ಡೋ ದ್ರಾವಣವನ್ನು ತಯಾರಿಸಿ ಸಿಂಪಡಿಸಬೇಕು. ಕಾಳುಮೆಣಸು ಸೊರಗು ರೋಗ ನಿಯಂತ್ರಿಸಲು ಶೇ. 1 ರ

ಅಡಿಕೆ ಕೊಳೆರೋಗ ಹಾಗೂ ಕಾಳುಮೆಣಸು ಸೊರಗು ರೋಗ ಹತೋಟಿಗೆ ತರಲು ಇಲ್ಲಿದೆ ಸೂಕ್ತ ಪರಿಹಾರ Read More »

ಕರಾವಳಿ

‘ಇತಿಹಾಸ ಅರಿತು ಇತಿಹಾಸ ನಿರ್ಮಿಸುವಂತವರಾಗಿ’ ➤ ಶಾಸಕ ಯು.ಟಿ ಖಾದರ್

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.30.ಇಡೀ ವಿಶ್ವದಲ್ಲೇ ನಮ್ಮ ದೇಶದ ಹಾಕಿ ಕ್ರೀಡೆಗೆ ಮತ್ತು ದೇಶಕ್ಕೆ ಗೌರವಯುತ ಸ್ಥಾನಮಾನ ಇದೆ. ಅಂದರೆ ಅದು ಹಾಕಿ ಮಾಂತ್ರಿಕ ಮೇಜರ್ ಧ್ಯಾನ್‍ಚಂದ್ ಪ್ರಮುಖ ಕಾರಣ ಎಂದು ಶಾಸಕ ಯು.ಟಿ ಖಾದರ್ ಹೇಳಿದರು. ಗುರುವಾರ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಮಂಗಳೂರು ಮತ್ತು ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಹಾಕಿಮಾಂತ್ರಿಕ ಮೇಜರ್ ಧ್ಯಾನ್‍ಚಂದ್‍ರವರ ಹುಟ್ಟುಹಬ್ಬದ ಪ್ರಯುಕ್ತ “ರಾಷ್ಟ್ರೀಯ ಕ್ರೀಡಾ ದಿನಾಚರಣೆ-2019” ಉದ್ಘಾಟಿಸಿ

‘ಇತಿಹಾಸ ಅರಿತು ಇತಿಹಾಸ ನಿರ್ಮಿಸುವಂತವರಾಗಿ’ ➤ ಶಾಸಕ ಯು.ಟಿ ಖಾದರ್ Read More »

ಕರಾವಳಿ

ಗೌರಿ ಗಣೇಶ ಹಬ್ಬ ➤ ಜಲಮೂಲಗಳಲ್ಲಿ ಪಿಒಪಿ ವಿಗ್ರಹಗಳ ವಿಸರ್ಜನೆ ನಿರ್ಬಂಧ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.30.ಮುಂಬರುವ ಗೌರಿ ಗಣೇಶ ಹಬ್ಬದ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಜಲಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಪಿ.ಒ.ಪಿ ಯಿಂದ ಮಾಡುವ ವಿಗ್ರಹಗಳನ್ನು ಯಾವುದೇ ಜಲಮೂಲಗಳಲ್ಲಿ ವಿಸರ್ಜನೆ ಮಾಡುವುದನ್ನು ನಿಬ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಸೂಚನೆಯನ್ನು ಹೊರಡಿಸಿದೆ. ನಿರ್ದಿಷ್ಟ ಪ್ರದೇಶದಲ್ಲಿ ಸ್ಥಾಪಿಸಲಾಗುವ ಸಾರ್ವಜನಿಕ ಗಣಪತಿಗಳನ್ನು ವಿಲೇವಾರಿ ಮಾಡಲು ಹಾಗೂ ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರು ಬಣ್ಣರಹಿತ ಮಣ್ಣಿನ ಗಣೇಶ ಮೂರ್ತಿಗಳೊಂದಿಗೆ ಹಬ್ಬ ಆಚರಿಸಿ ತದನಂತರ ಸ್ಥಳೀಯ ಸಂಸ್ಥೆಗಳು ನಿಗಧಿಪಡಿಸಿರುವ ನಿರ್ದಿಷ್ಟ ಜಲಮೂಲಗಳ ಸ್ಥಳಗಳಲ್ಲಿಯೇ ಮೂರ್ತಿಗಳನ್ನು ವಿಸರ್ಜಿಸುವುದು.

ಗೌರಿ ಗಣೇಶ ಹಬ್ಬ ➤ ಜಲಮೂಲಗಳಲ್ಲಿ ಪಿಒಪಿ ವಿಗ್ರಹಗಳ ವಿಸರ್ಜನೆ ನಿರ್ಬಂಧ Read More »

ಕರಾವಳಿ

ಅರಣ್ಯ ಕೃಷಿ ಪದ್ಧತಿ ಸಂವಾದದಲ್ಲಿ ಭಾಗಿ

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಆಗಸ್ಟ್.29.ಬೆಂಗಳೂರಿನ ಸುತ್ತೂರು ಮಠದಲ್ಲಿ ಮಂಗಳವಾರ ನಡೆದ ಅರಣ್ಯ ಕೃಷಿ ಪದ್ಧತಿ ಸಂವಾದ ಕಾರ್ಯಕ್ರಮದಲ್ಲಿ ಕಡಬ ತಾಲೂಕಿನಿಂದ ಪುತ್ತೂರು ಎ.ಪಿ.ಎಂ.ಸಿ. ಸದಸ್ಯೆ ಪುಲಸ್ತ್ಯಾ ರೈ ಹಾಗೂ ಸಾಮಾಜಿಕ ಕಾರ್ಯಕರ್ತ ಉಮೇಶ್ ಶೆಟ್ಟಿ ಪಾಲ್ಗೊಂಡು ಚರ್ಚಿಸಿದರು. ಕಾವೇರಿ ನದಿ ಪುನಶ್ಚೇತನಕ್ಕಾಗಿ ‘ಕಾವೇರಿ ಕೂಗು’ ಅಭಿಯಾನ ಮೂಲಕ ಅಚ್ಚುಕಟ್ಟು ಪಾತ್ರದಲ್ಲಿ 242ಕೋಟಿ ಸಸಿಗಳನ್ನು ನೆಡುವ ಮಹತ್ತರ ಗುರಿಯೊಂದಿಗೆ ಹೆಜ್ಜೆ ಇಡುತ್ತಿರುವ ಈಶ ಪ್ರತಿಷ್ಠಾನದ ಸ್ಥಾಪಕ ಸದ್ಗುರು, ಆಧ್ಯಾತ್ಮಿಕ ಚಿಂತಕ ಜಗ್ಗಿ ವಾಸುದೇವ ಅವರು ಸಂವಾದವನ್ನು ರಾಜ್ಯದ

ಅರಣ್ಯ ಕೃಷಿ ಪದ್ಧತಿ ಸಂವಾದದಲ್ಲಿ ಭಾಗಿ Read More »

ಕರಾವಳಿ

ಬಾರಕೂರು ಕಚ್ಚೂರು ಶ್ರೀ ಮಾಲ್ತೀದೇವಿ ಹಾಗೂ ಬಬ್ಬು ಸ್ವಾಮಿ ಮೂಲ ಕ್ಷೇತ್ರ ➤ ಪೂರ್ವಭಾವಿ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.29. ಬಾರಕೂರು ಕಚ್ಚೂರು ಶ್ರೀ ಮಾಲ್ತೀದೇವಿ ಹಾಗೂ ಬಬ್ಬು ಸ್ವಾಮಿ ಮೂಲ ಕ್ಷೇತ್ರದಲ್ಲಿ 2020 ನೇ ಜನವರಿ ತಿಂಗಳಲ್ಲಿ ಜರುಗುವ ಬ್ರಹ್ಮಕಲಶೋತ್ಸವ ಹಾಗೂ ಪ್ರಥಮ ರಥೋತ್ಸವ ಪ್ರಯುಕ್ತ ಬೃಹತ್ ಹಸಿರು ಹೊರೆಕಾಣಿಕೆ ಮೆರವಣಿಗೆ ಆಯೋಜಿಸುವ ಕುರಿತು ಸಭೆ ನಡೆಸಲಾಯಿತು. ಮಂಗಳೂರು ಕರ್ನಾಟಕ ಸರಕಾರಿ ನೌಕರರ ಸಭಾ ಭವನದಲ್ಲಿ ಪೂರ್ವಭಾವಿ ಸಭೆ ನಡೆದಿದ್ದು, ಈ ಸಭೆಯನ್ನು ಉಡುಪಿ ಜಿ.ಪಂ ಅಧ್ಯಕ್ಷ ದಿನಕರ ಬಾಬು ಕಾರ್ಯಕ್ರಮ ಉದ್ಘಾಟಿಸಿದರು. ಕಚ್ಚೂರು ದೇವಸ್ಥಾನದ ಅಧ್ಯಕ್ಷ ಗೋಕುಲ್‍ದಾಸ್ ಬಾರಕೂರು,

ಬಾರಕೂರು ಕಚ್ಚೂರು ಶ್ರೀ ಮಾಲ್ತೀದೇವಿ ಹಾಗೂ ಬಬ್ಬು ಸ್ವಾಮಿ ಮೂಲ ಕ್ಷೇತ್ರ ➤ ಪೂರ್ವಭಾವಿ ಸಭೆ Read More »

ಕರಾವಳಿ

ಜಿಲ್ಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳ ಪ್ರವಾಸ ➤ ಅಹವಾಲು ಸ್ವೀಕಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.29. ಮಂಗಳೂರು ಲೋಕಾಯುಕ್ತ ವಿಭಾಗದ ಅಧಿಕಾರಿಗಳು ಜಿಲ್ಲೆಯ ವಿವಿಧ ಸ್ಥಳಗಳಿಗೆ ವಿವಿಧ ದಿನ ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆ ಅಡಿ ಸಾರ್ವಜನಿಕ ಕುಂದು ಕೊರತೆಗಳ ಅಹವಾಲು ಸ್ವೀಕಾರ ಮತ್ತು ವಿಚಾರಣೆಯನ್ನು ನಡೆಸಲಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ಸಲ್ಲಿಸಬಹುದಾಗಿದೆ.ಸಾರ್ವಜನಿಕರು ತಮ್ಮ ಅಹವಾಲನ್ನು ಅರ್ಜಿ ರೂಪದಲ್ಲಿ ಸಂಬಂಧಪಟ್ಟ ದಾಖಲಾತಿಗಳ ಪ್ರತಿಯೊಂದಿಗೆ ತ್ರಿಪ್ರತಿಯಲ್ಲಿ ತರಬೇಕು. ಸಾರ್ವಜನಿಕರು ಈ ಅವಕಾಶವನ್ನು

ಜಿಲ್ಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳ ಪ್ರವಾಸ ➤ ಅಹವಾಲು ಸ್ವೀಕಾರ Read More »

ಕರಾವಳಿ

ಬಂಟ್ವಾಳ: ಸೆ.5 ಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.29. ಸೆಪ್ಟೆಂಬರ್ 5 ರಂದು ಬೆಳಿಗ್ಗೆ 10.30ಕ್ಕೆ ಬಂಟ್ವಾಳ ತಾಲೂಕು ಪಂಚಾಯತ್ ಎಸ್‍ಜಿಎಸ್‍ವೈ ಸಭಾಂಗಣದಲ್ಲಿ ಮಾಸಿಕ ಕೆಡಿಪಿ ಪ್ರಗತಿ ಪರಿಶೀಲನೆ ಸಭೆಯು ಆಯೋಜಿಸಲಾಗಿದೆ. ಕಾರ್ಯನಿರ್ವಾಹಕ ಅಧಿಕಾರಿ ತಾಲೂಕು ಪಂಚಾಯತ್ ಬಂಟ್ವಾಳ ಇವರ ಪ್ರಕಟಣೆ ತಿಳಿಸಿದೆ. 

ಬಂಟ್ವಾಳ: ಸೆ.5 ಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ Read More »

ಕರಾವಳಿ

ಮೀನುಗಾರಿಕಾ ಸಚಿವರ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.29.ಮುಜರಾಯಿ, ಮೀನುಗಾರಿಕೆ ಹಾಗೂ ಬಂದರುಗಳು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಪ್ರವಾಸ ತೆರಳಿದ್ದಾರೆ. ಆಗಸ್ಟ್ 29 ರಂದು ಬೆಳಿಗ್ಗೆ 11 ಗಂಟೆಗೆ ಉಡುಪಿಯಿಂದ ಮಂಗಳೂರಿಗೆ ಆಗಮಿಸಿ ಪಕ್ಷದ ಸಮಾರಂಭ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 12.30 ಗಂಟೆಗೆ ಉಡುಪಿಗೆ ತೆರಳಲಿದ್ದಾರೆ.

ಮೀನುಗಾರಿಕಾ ಸಚಿವರ ಪ್ರವಾಸ Read More »

ಕರಾವಳಿ
Scroll to Top